Shaikh BigTv
October 22, 2024
Breaking News, ಧಾರವಾಡ
ಕುಂದಗೋಳ : ದೀಪಾವಳಿ ಹಬ್ಬಕ್ಕೆ ಪ್ರತಿ ಬಿಪಿಎಲ್ ಕಾರ್ಡ್ ಹೊಂದಿರುವ ಕಡು ಬಡವರಿಗೆ ಉಚಿತ ಕಲರ್ ಟಿವಿಯನ್ನು ವಿತರಣೆ ಮಾಡುವಂತೆ ಕಾಂಗ್ರೆಸ್ ಮುಖಂಡ ಮಂಜುನಾಥ ಎಂಟೂವಿ ಅವರು ಗ್ರೇಡ್-2 ತಹಶೀಲ್ದಾರ್ ಹೆಚ್.ಭಜಂತ್ರಿಯವರ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಹಳ್ಳಿಗಳಲ್ಲಿ ಇಂದಿಗೂ ಕಡು ಬಡವರು ತಮ್ಮ ಮನೆಗಳಲ್ಲಿ ಟಿವಿಯನ್ನು ಹೊಂದಿಲ್ಲದೆ ಎಷ್ಟೋ ಕುಟುಂಬಗಳು ಇವೆ, ಇಂತಹ ಕುಟುಂಬಗಳ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಇಂತಹ ಬಿಪಿಎಲ್ ಕುಟುಂಬಗಳಿಗೆ …
Read More »
BigTv News
October 22, 2024
Breaking News, ವಿಜಯಪುರ
ವಿಜಯಪುರ: ಇಂದು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ, ಅಲ್ಲದೇ ಇದರೊಟ್ಟಿಗೆ ಜೋರು ಶಬ್ದ ಕೂಡ ಕೇಳಿ ಬಂದಿದೆ. ಈ ಶಬ್ದಕ್ಕೆ ಬೆಚ್ಚಿ ಬಿದ್ದಂತ ಜನರು ಮನೆಯಿಂದ ಹೊರ ಓಡಿ ಬಂದು ಆತಂಕದಲ್ಲಿ ಕೆಲ ಕಾಲ ಕಳೆಯುವಂತೆ ಆಗಿದೆ ಎನ್ನಲಾಗುತ್ತಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಅಲ್ಲದೇ ಗಡಿ ಭಾಗದ …
Read More »
BigTv News
October 22, 2024
Breaking News, ಕೊಪ್ಪಳ
ಕೊಪ್ಪಳ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಕೃತಿಕ ದುರಂತ ಮತ್ತು ಹವಾಮಾನ ವೈಪರಿತ್ಯಗಳಿಂದ ರೈತರು ಬೆಳೆದ ಬೆಳೆಗಳಿಗೆ …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಹಿಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಮಳೆಗೆ ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ 2-3 ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಸುಮಾರು 36 ಸಾವಿರ ಹೆಕ್ಟೇರ್ ಪ್ರದೇಶವ್ಯಾಪ್ತಿಯ ಬೆಳೆ ಹಾನಿಗೊಳಗಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 25 ಸಾವಿರ ಹೆಕ್ಟೇರ್ ಅಡಕೆ ಬೆಳೆಗೆ ಕೊಳೆ ರೋಗ ತಗುಲಿದೆ 3,000 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ …
Read More »
BigTv News
October 22, 2024
Breaking News, ಬೀದರ್
ಬೀದರ್: ನವೆಂಬರ್ 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಕನ್ನಡ ರಾಜ್ಯೋತ್ಸವದ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ರಾಜ್ಯೋತ್ಸವದ ಹಿಂದಿನ ದಿನ ಎಲ್ಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆ ಕೈಗೊಂಡು, ವಿದ್ಯುತ್ ದೀಪಾಲಂಕಾರ ಮಾಡಬೇಕು …
Read More »
BigTv News
October 22, 2024
Breaking News
ನವದೆಹಲಿ: ದೇಶದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಜನತೆ ಕೃಷಿ ಚಟುವಟಿಕೆ ಮೇಲೆ ಅವಲಂಬಿತರಾಗುವ ಪ್ರಮಾಣ ಹೆಚ್ಚುತ್ತಿದೆ, ಅದಕ್ಕೆ ವ್ಯತಿರಿಕ್ತವಾಗಿ ಕರ್ನಾಟಕದಲ್ಲಿ ಕೃಷಿ ಅವಲಂಬಿತರ ಪ್ರಮಾಣ ಕುಸಿದಿದೆ ಎಂದು ರಾಷ್ಟ್ರೀಯ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ (ನಬಾರ್ಡ್) ಬಿಡುಗಡೆ ಮಾಡಿರುವ ಗ್ರಾಮೀಣ ಹಣಕಾಸು ಒಳಗೊಳ್ಳುವಿಕೆ ಸಮೀಕ್ಷೆ ವರದಿಯಲ್ಲಿ ತಿಳಿದುಬಂದಿದೆ. ಭಾರತದಲ್ಲಿ ಈ ಹಿಂದೆ ಕೃಷಿ ಕಳೆಗುಂದಲು ಆರಂಭವಾದರೂ 2016-17ರಲ್ಲಿ ಗ್ರಾಮೀಣ ಪ್ರದೇಶಗಳು ಮತ್ತು 50000ಕ್ಕಿಂತ ಕಡಿಮೆ ಜನಸಂಖ್ಯೆ …
Read More »
Shaikh BigTv
October 22, 2024
Breaking News, ಧಾರವಾಡ
ಅಳ್ಳಾವರ: ಭಾರಿ ಮಳೆಗೆ ಸುಮಾರು ಇಪ್ಪತ್ತು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಅಳ್ಳಾವರ ತಾಲೂಕಿನ ಶಿವನಗರ ಗ್ರಾಮದಲ್ಲಿ ನಡೆದಿದೆ. ಶಿವನಗರ ಗ್ರಾಮದ ಗೌಳಿಗರು ದನಗಳನ್ನ ಮೇಯಿಸಲು ಪ್ರತಿದಿನದಂತೆ ಕಾಡಿಗೆ ತೆರಳಿದ್ದರು.ಸಂಜೆ ಏಕಾಏಕಿ ಸುರಿದ ರಕ್ಕಸ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಪ್ರವಾಹದ ಭೀತಿ ಎದುರಾಗಿದೆ. ನೋಡ ನೋಡುತ್ತಿದ್ದಂತೆ ಹಳ್ಳದ ನೀರು ಸಾವಿನ ಕೂಪವಾಗಿ, ಗೌಳಿಗರ ಸುಮಾರು ಇಪ್ಪತ್ತು ಎಮ್ಮೆಗಳು ತೇಲಿಕೊಂಡು ಹೋಗಿ ಪ್ರಾಣ ಕಳೆದುಕೊಂಡಿವೆ. ಸಿದ್ದು ಎಮಕರ ಎಂಬುವವರ …
Read More »
Shaikh BigTv
October 22, 2024
Breaking News, ಧಾರವಾಡ
ಹುಬ್ಬಳ್ಳಿ: ಅಕ್ಟೋಬರ ಆರಂಭದಿಂದ ನಿರಂತರವಾಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಹಾನಿ ಆಗಿದೆ. ಈ ಕುರಿತು ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಭೇಟಿ ನೀಡಿ, ಪರಿಶೀಲಿಸಿದರು. ಪ್ರವಾಸ ಸಂದರ್ಭದಲ್ಲಿ ವಿವಿಧ ಗ್ರಾಮಗಳ ರೈತರನ್ನು, ಜನಪ್ರತಿನಿಧಿಗಳನ್ನು ಮತ್ತು ಸಾರ್ವಜನಿಕರನ್ನು ಭೇಟಿ ಆಗಿ ಅಹವಾಲು ಕೇಳಿದರು. ಮನವಿ ಸ್ವೀಕರಿಸಿದರು. ಬೆಳೆಹಾನಿ ಬಗ್ಗೆ ತುರ್ತಾಗಿ ಜಂಟಿ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಮನೆ ಹಾನಿ ಮತ್ತು ಮನೆಗಳಿಗೆ …
Read More »
Shaikh BigTv
October 22, 2024
Breaking News, ಧಾರವಾಡ
ಧಾರವಾಡ : 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9 ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದ್ದು, ಪ್ರಸಕ್ತ ವರ್ಷ (2024-25) 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು 10ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 30, 2024 ರೊಳಗಾಗಿ www.navodaya.gov.in ಹಾಗೂ https://cbseitms.nic.in/2024/nvsix?AspxAutoDetectCookieSupport=1, https://cbseitms.nic.in/2024/nvsxi_11?AspxAutoDetectCookieSupport=1 ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ …
Read More »
Shaikh BigTv
October 22, 2024
Breaking News, ಧಾರವಾಡ
ಧಾರವಾಡ : ಕರ್ನಾಟಕ ಸಾಹಿತ್ಯ ಅಕಾಡೆಮಿ ಕರ್ನಾಟಕ ಸಂಭ್ರಮ-50 ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು ಯುವಕವಿ ಗೋಷ್ಠಿಗಳನ್ನು ಆಯೋಜಿಸುತ್ತಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾಸಲಾಗಿದೆ. ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahityaacademy.org ಗೆ ಭೇಟಿ ನೀಡಬಹುದು ಎಂದು …
Read More »