Breaking News

Breaking News

ಜಿಲ್ಲಾ ಮಟ್ಟದ 7ನೇ ಜನತಾ ದರ್ಶನ 213 ಅಹವಾಲು ಸ್ವೀಕಾರ; ಕಾಲಮಿತಿಯಲ್ಲಿ ಅಹವಾಲು ಪರಿಹರಿಸುವ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಧಾರವಾಡ : ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 7 ನೇ ಜಿಲ್ಲಾ ಮಟ್ಟದ ಜನ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಂಘ, ಸಂಸ್ಥೆ ಹಾಗೂ ಸಾರ್ವಜನಿಕರಿಂದ ಸುಮಾರು 213 ಅಹವಾಲುಗಳನ್ನು ಸ್ವೀಕರಿಸಲಾಯಿತು. ಸಾರ್ವಜನಿಕರಿಂದ ಅಹವಾಲು, ಮನವಿಗಳನ್ನು ಸ್ವೀಕರಿಸಿ ಮಾತನಾಡಿದ ಸಚಿವ ಸಂತೋಷ ಲಾಡ ಅವರು, ಸಲ್ಲಿಕೆ …

Read More »

ವಯನಾಡು ಉಪ ಚುನಾವಣೆ: ಅ.23 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆ

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದು, ಬುಧವಾರ (ಅಕ್ಟೋಬರ್‌ 23) ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಕಾಂಗ್ರೆಸ್‌ ಮುಖಂಡವಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತಿತರರು ಭಾಗವಹಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆಶೀರ್ವಾದ …

Read More »

ಸಂಡೂರು ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಎನ್.ವೆಂಕಣ್ಣ ನಾಮಪತ್ರ ಸಲ್ಲಿಕೆ

ಸಂಡೂರು: ಉಪಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಎನ್.ವೆಂಕಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು 2008ರಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದೇನೆ ಇ.ತುಕರಾಂ ಅವರ ಪ್ರತಿ ಚುನಾವಣೆಯಲ್ಲೂ ಬೆಂಬಲಿಸಿ ಕೆಲಸ ಮಾಡಿದ್ದೇನೆ. ಎಸ್ಟಿ ಮೀಸಲು ಕ್ಷೇತ್ರವಾದ್ದರಿಂದ ಇದೀಗ ನಮಗೂ ಒಂದು ಅವಕಾಶ ಕೊಡಿ ಎಂದು ಎಐಸಿಸಿ, ಕೆಪಿಸಿಸಿ ವೀಕ್ಷಕರಿಗೆ ಮನವಿ ಸಲ್ಲಿಸಿದ್ದರೂ ವರಿಷ್ಠರಾಗಲೀ, ಸಂಸದ ತುಕರಾಂ ಅಥವಾ ಕಾರ್ಮಿಕ ಸಚಿವ ಸಂತೋಷ್ ಲಾಡ್ ಈವರೆಗೆ …

Read More »

ಕಠಿಣ ಪರಿಶ್ರಮಿ ನಾಯಕ ಬಿಜೆಪಿ ಚಾಣಕ್ಯ ಅಮಿತ್ ಶಾ ಗೆ ಹುಟ್ಟುಹಬ್ಬದ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಕೇದ್ರ ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದರು ಮತ್ತು ಅವರನ್ನು ಕಠಿಣ ಪರಿಶ್ರಮಿ ನಾಯಕ ಎಂದು ಕರೆದರು. ಶ್ರೀ ಅಮಿತ್ ಶಾ ಜಿ ಅವರಿಗೆ ಜನ್ಮದಿನದ ಶುಭಾಶಯಗಳು, ಅವರು ಕಠಿಣ ಪರಿಶ್ರಮಿ ನಾಯಕ, ಬಿಜೆಪಿಯನ್ನು ಬಲಪಡಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಅಸಾಧಾರಣ ಆಡಳಿತಗಾರರಾಗಿ ಛಾಪು ಮೂಡಿಸಿದ್ದಾರೆ ಮತ್ತು ವಿಕ್ಷಿತ್ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. …

Read More »

ರಾಜ್ಯದ 8,9,10ನೇ ತರಗತಿ ಬೋರ್ಡ್ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಹಾಗೂ 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆಸಲಾಗಿದ್ದ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿತು. ವಿದ್ಯಾರ್ಥಿಗಳನ್ನು ಏಕೆ ಶೋಷಿಸುತ್ತೀರಿ, ಈ ರೀತಿ ವರ್ತಿಸಬೇಡಿ ಸ್ವಪ್ರತಿಷ್ಠೆ ಬೇಡ ವಿದ್ಯಾರ್ಥಿಗಳ ಏಳಿಗೆ ಕುರಿತು ಕಾಳಜಿ …

Read More »

ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ಕೃಷಿ ಸಚಿವರ ನೇತೃತ್ವದಲ್ಲಿ ತಂಡ ರಚನೆ

ನವದೆಹಲಿ: ಕೇಂದ್ರ ಸರ್ಕಾರದ ಚಾಲ್ತಿಯಲ್ಲಿರುವ ಯೋಜನೆಗಳ ಅನುಷ್ಟಾನ ಕುರಿತು ಪರಿಶೀಲನೆ ಮತ್ತು ಹೊಸ ಯೋಜನೆಗಳನ್ನು ರೂಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಮೇಲ್ವಿಚಾರಣಾ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ರಚಿಸಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ತಂಡವು ದೇಶದಾದ್ಯಂತ ಸರ್ಕಾರದ ಹೊಸ ಮತ್ತು ಚಾಲ್ತಿಯಲ್ಲಿರುವ ಕೇಂದ್ರ ಯೋಜನೆಗಳನ್ನು ಪರಿಶೀಲಿಸುತ್ತದೆ. ಈ ತಂಡವು ಕೇಂದ್ರ ಬಜೆಟ್, ಅಧೀನ ಕಾನೂನು ಮತ್ತು ಇತರ ಮೂಲಸೌಕರ್ಯ ಯೋಜನೆಗಳ …

Read More »

ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಛಲವಾದಿ ಸಮುದಾಯ ವಕೀಲರಿಂದ ಪ್ರತಿಭಟನೆ

ದಾವಣಗೆರೆ: ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಮತ್ತು ಛಲವಾದಿ ವಕೀಲರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಒಳಮೀಸಲಾತಿಗೆ ಸುಪ್ರೀಂ ಅಸ್ತು ಎಂದಿದೆ ಆದರೆ, ಆದೇಶ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಅಹಿಂದ ಹೆಸರು ಹೇಳಿಕೊಂಡು ಬಂದಿರುವ ಸರ್ಕಾರ ದಲಿತರಿಗೆ ಒಳಿತು ಮಾಡುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು. ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ …

Read More »

ವಿಕಲಚೇತನ ಸಮಸ್ಯೆ ಆಲಿಸಿದ ಸಂತೋಷ ಲಾಡ್

ಧಾರವಾಡ: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ಅವರು, ವಿಕಲಚೇತನ ವ್ಯಕ್ತಿಯೊಬ್ಬರ ಸಮಸ್ಯೆ ತಿಳಿಯಲು ತಾವೂ ಕೂಡ ನೆಲದ ಮೇಲೆಯೇ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದ ಪ್ರಸಂಗ ನಡೆಯಿತು. ತಮ್ಮ ಸಂತೋಷ್ ಲಾಡ್ ಫೌಂಡೇಶನ್ ಮೂಲಕವೂ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ಲಾಡ್ ಅವರು ಭರವಸೆ ನೀಡಿದರು.

Read More »

ಸಂಡೂರು ಉಪಚುನಾವಣೆಗೆ ತುಕಾರಾಂ ಪತ್ನಿ ಅನ್ನಪೂರ್ಣ ರಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ. ಆದರೆ ಈವರೆಗೂ ಕಾಂಗ್ರೆಸ್ ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಸಂಸದ ತುಕಾರಾಂ ಕುಟುಂಬಕ್ಕೆ ಟಿಕೆಟ್ …

Read More »

ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಎಂ.ಆರ್.ಪಾಟೀಲ್‌

ಕುಂದಗೋಳ : ಧಾರಾಕಾರ ಮಳೆಯ ರಭಸಕ್ಕೆ ಮನೆ ಕಳೆದುಕೊಂಡು ನಿರಾಶ್ರಿತರ ಕೇಂದ್ರ ಸೇರಿದ ಹಂಚಿನಾಳ ಗ್ರಾಮದ ಜನರನ್ನೂ ಶಾಸಕ ಎಂ.ಆರ್.ಪಾಟೀಲ್‌ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಬೆಣ್ಣೆ ಹಳ್ಳದ ಪ್ರವಾಹಕ್ಕೆ ಸಿಲುಕಿ ಹಲವು ಜನರು ಮನೆ ಕಳೆದುಕೊಂಡಿದ್ದರು.ಇನ್ನೂ ಬಹುತೇಕ ಕೃಷಿ ಭೂಮಿಯಲ್ಲಿನ ಬೆಳೆಗಳು ಸಹ ಹಾಳಾಗಿದ್ದನ್ನೂ ಸ್ವತಃ ಶಾಸಕರೇ ರೈತಾಪಿ ಜನರ ಜಮೀನುಗಳಿಗೆ ತಹಶೀಲ್ದಾರ್ ರಾಜು ಮಾವರಕರ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ …

Read More »