Shaikh BigTv
October 22, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅವಳಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ ಕಳ್ಳನನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಎಸಿಪಿ ಶಿವಪ್ರಕಾಶ ಮಾರ್ಗದರ್ಶನದಲ್ಲಿ ಇನ್ಸೆಕ್ಟರ್ ಹೂಗಾರ ನೇತೃತ್ವದ ತಂಡ ಹುಬ್ಬಳ್ಳಿ ಮೂಲದ ಮಹಾಂತೇಶ ಎಂಬಾತನನ್ನು ಬಂಧಿಸಿದ್ದಾರೆ. ಮಹಾಂತೇಶ ಕಲಾಲ ಈತ ಆನಂದ ನಗರದ ನಿವಾಸಿಯಾಗಿದ್ದು, ಈತ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಸದ್ಯ ಬಂಧಿತ ಆರೋಪಿಯಿಂದ …
Read More »
BigTv News
October 22, 2024
Breaking News, ಮೈಸೂರು
ಮೈಸೂರು : ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ ಎದುರಾದ ಅನಾಹುತಗಳ ಪರಿಹಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡಾ ನಡೆಯುತ್ತಿದೆ ಅನಾಹುತಗಳಿಗೆ ಪರಿಹಾರ ಕೂಡಾ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Read More »
BigTv News
October 22, 2024
Breaking News
ನವದೆಹಲಿ: ಮಹಾರಾಷ್ಟ್ರದ ರೈತರ ದೊಡ್ಡ ಶತ್ರು ಬಿಜೆಪಿ, ಡಬಲ್ ಎಂಜಿನ್ ಸರ್ಕಾರವನ್ನು ಅಧಿಕಾರದಿಂದ ಕಿತ್ತುಹಾಕುವುದರಿಂದ ಮಾತ್ರ ರೈತರಿಗೆ ಲಾಭವಾಗಲಿದೆ ಮಹಾಪರಿವರ್ತನೆಯೇ ರಾಜ್ಯದ ಬೇಡಿಕೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಗೆ ಬಿಜೆಪಿ ಕಾರಣವೆಂದು ಕಿಡಿಕಾರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯವನ್ನು ಬರದಿಂದ ಮುಕ್ತಗೊಳಿಸುವುದಾಗಿ ಬಿಜೆಪಿ ಸುಳ್ಳು ಭರವಸೆ ನೀಡಿದೆ ಎಂದು ಟೀಕಿಸಿದ್ದಾರೆ. ಬಿಜೆಪಿಯು ಮಹಾರಾಷ್ಟ್ರದ ರೈತರ ಅತ್ಯಂತ ದೊಡ್ಡ ಶತ್ರು …
Read More »
BigTv News
October 22, 2024
Breaking News
ನವದೆಹಲಿ: ಫಿನ್ಟೆಕ್ ದೈತ್ಯ ಫೋನ್ಪೇ ಭಾರತದ ವಿವಿಧ ಸ್ಥಳಗಳಲ್ಲಿ ಸರ್ವರ್ ಗಳು ಮತ್ತು ಡೇಟಾ ಕೇಂದ್ರಗಳನ್ನು ಕೇಂದ್ರೀಕರಿಸಿ ಮೂಲಸೌಕರ್ಯ ಬಂಡವಾಳ ವೆಚ್ಚದಲ್ಲಿ 2,800 ಕೋಟಿ ರೂ.ಗಿಂತ ಹೆಚ್ಚು ಹೂಡಿಕೆ ಮಾಡಿದೆ. ಅಕ್ಟೋಬರ್ 21 ರಂದು ಸಲ್ಲಿಸಿದ ತನ್ನ ವಾರ್ಷಿಕ ವರದಿಯಲ್ಲಿ, ಫೋನ್ಪೇ ತನ್ನ ಬೆಳೆಯುತ್ತಿರುವ ಕಾರ್ಯಾಚರಣೆಗಳನ್ನು ಬೆಂಬಲಿಸಲು ಹಾರ್ಡ್ವೇರ್ ಮೂಲಸೌಕರ್ಯವನ್ನು ದ್ವಿಗುಣಗೊಳಿಸುತ್ತಿದೆ ಎಂದು ಕಂಪನಿ ಹೇಳಿದೆ. ವರದಿಯ ಪ್ರಕಾರ, ಫೋನ್ಪೇ ಹೂಡಿಕೆಯು ಹಣಕಾಸು ನಿಯಂತ್ರಕರು ವಿಧಿಸಿದ ಕಠಿಣ ಡೇಟಾ ಸ್ಥಳೀಕರಣ …
Read More »
BigTv News
October 22, 2024
Breaking News
ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅ.24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ …
Read More »
BigTv News
October 22, 2024
Breaking News, ಬೆಳಗಾವಿ
ಬೆಳಗಾವಿ: ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಆಫ್ರಿನ್ ಜಾಮದಾರ್ (17) ಮೃತ ವಿದ್ಯಾರ್ಥಿನಿ. ವಸತಿ ಕಾಲೇಜಿನ ಮೊದಲ ಮಹಡಿಯಲ್ಲಿ ಮಧ್ಯರಾತ್ರಿವರೆಗೂ ವಿದ್ಯಾರ್ಥಿನಿ ಓದುತ್ತಾ ಇದ್ದಳು. ಇಂದು ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ನಿನ್ನೆ ಮಧ್ಯರಾತ್ರಿವರೆಗೂ ಓದುತ್ತಿದ್ದಳು ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಗೋಕಾಕ್ ತಾಲೂಕಿನ ಶಿಂದಿ …
Read More »
BigTv News
October 22, 2024
Breaking News, ಬೆಂಗಳೂರು
ಬೆಂಗಳೂರು: ಡಿಬಿಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ, ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದ್ದು ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ ಪ್ರಸ್ತುತ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ಡಿಬಿಟಿ ನೀಡುತ್ತಿರುವುದನ್ನು ಮುಂದುವರೆಸಲಾಗುತ್ತದೆ. ಪಡಿತರ ಚೀಟಿ …
Read More »
BigTv News
October 22, 2024
Breaking News
ನವದೆಹಲಿ: 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾಕ್ಕೆ ತೆರಳಿದ್ದಾರೆ. ರಷ್ಯಾದ ಕಜಾನ ನಗರದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನೇತೃತ್ವದಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ಈ ಸಮಾವೇಶದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್, ಇರಾನ್‌ನ ಅಧ್ಯಕ್ಷ ಡಾ.ಮಸೂದ್ ಪೆಜೆಶ್ಕಿಯಾನ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. ನಾನು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ …
Read More »
BigTv News
October 21, 2024
Breaking News, ಬೆಂಗಳೂರು
ಬೆಂಗಳೂರು: ಕೆಎಂಎಫ್ ವತಿಯಿಂದ ಪ್ರತಿದಿನ 2.5 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದು ಕೆಎಂಎಫ್ ಇತಿಹಾಸದಲ್ಲಿಯೇ ಬಹುದೊಡ್ಡ ಮೈಲಿಗಲ್ಲು ಎನ್ನಲಾಗಿದೆ. ಇದರಲ್ಲಿ ಒಂದು ಕೋಟಿ ಲೀಟರ್ ಹಾಲನ್ನು ಸ್ಥಳೀಯವಾಗಿ ಮಾರಾಟವಾಗುತ್ತಿದ್ದರೆ, ಇನ್ನೊಂದು ಕೋಟಿ ಲೀಟರ್ ಹಾಲನ್ನು ಕೆಎಂಎಫ್ ಉತ್ಪಾದಿಸುತ್ತದೆ. ಇನ್ನುಳಿದ 50ಸಾವಿರ ಲೀಟರ್ ಹಾಲನ್ನು ಖಾಸಗಿ ಡೈರಿಗಳು ಉತ್ಪಾದಿಸುತ್ತದೆ. ರಾಜ್ಯದಲ್ಲಿ ಶೇ.80ರಷ್ಟು ಕೆಎಂಎಫ್ ಬ್ರ್ಯಾಂಡ್ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳೇ ಮಾರಾಟವಾಗುತ್ತಿದೆ. ಇನ್ನುಳಿದಂತೆ ದೊಡ್ಡ ದೊಡ್ಡ ಡೈರಿಗಳನ್ನು ನಡೆಸುತ್ತಿರುವ …
Read More »
BigTv News
October 21, 2024
Breaking News, ಬೆಂಗಳೂರು
ಬೊಮ್ಮನಹಳ್ಳಿ: ಬೆಂಗಳೂರು ನಗರದಲ್ಲಿ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ನೆರೆಯಿಂದ ತತ್ತರಿಸಿವೆ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ₹1 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದರು. ನಗರದ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಚ್.ಎಸ್. ಆರ್ ಬಡಾವಣೆಯಲ್ಲಿನ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ನಂತರ ಅವರು ಮಾತನಾಡಿದರು. ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಪದೇಪದೇ ನೆರೆಯಿಂದ ಸಮಸ್ಯೆ …
Read More »