Breaking News

Breaking News

ಕೊಪ್ಪಳ ಜಿಲ್ಲೆಯ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅಧಿಕಾರ ಸ್ವೀಕಾರ

ಕೊಪ್ಪಳ: ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಹೊಸಮನಿ ಅವರು ರಾಯಚೂರು ಜಿಲ್ಲೆಗೆ ವರ್ಗಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಸಹಾಯಕ ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಡಾ.ಸುರೇಶ್ ಜಿ ಅವರು ವಹಿಸಿಕೊಂಡರು ನಿರ್ಗಮಿತ ಅಧಿಕಾರಿಗಳು ನೂತನ ಜಿಲ್ಲಾ ವಾರ್ತಾಧಿಕಾರಿಗಳಿಗೆ ಹೂಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದರು. ಡಾ.ಸುರೇಶ್ ಜಿ ಅವರು ಬೀದರ್ ಜಿಲ್ಲಾ …

Read More »

ಬೆಂಗಳೂರಲ್ಲಿ ಮಳೆ ನೀರು ನಿಲ್ಲುವ ಪ್ರದೇಶಗಳ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಮಿತಿ ರಚನೆ: ಡಿಸಿಎಂ ಡಿಕೆಶಿ

ಬೆಂಗಳೂರು: ನಗರದಲ್ಲಿ ಮಳೆ ನೀರು ನಿಲ್ಲುವ ಪ್ರದೇಶಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸುವುದಾಗಿ ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಳೆ ಬಂದು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸರಿಪಡಿಸಲು ಒಂದು ಸಮಿತಿಯನ್ನು ರಚಿಸಲಾಗುತ್ತಿದೆ. ಭವಿಷ್ಯದಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಹೆಚ್ಚು ಮಳೆ ಬಂದು ಸಮಸ್ಯೆ ಎದುರಾಗುವ ಸ್ಥಳಗಳನ್ನು ನಾಗರಿಕರು ಅಧಿಕೃತವಾಗಿಯೇ ನಮಗೆ ತಿಳಿಸಲು ಅವಕಾಶ …

Read More »

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ನೂರಕ್ಕೆ ನೂರರಷ್ಟು ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಚಿತ್ರದುರ್ಗ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಳ್ಳಕೆರೆ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ …

Read More »

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ. ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ 50,000 ರೂ.ಇದ್ದು, ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ 20000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ 25000 …

Read More »

545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ, 545 ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಇಂದು ಬಿಡುಗಡೆ ಮಾಡಿದೆ. ದಿನಾಂಕ: 06.06.2020 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. …

Read More »

ರೈತರು ಬೆಳೆ ಹಾನಿ : ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ಘೋಷಣೆ ಮಾಡುವಂತೆ ಪ್ರತಿಭಟನೆ

ಧಾರವಾಡ: ಕಳೆದ ಕೆಲ ತಿಂಗಳಿನಿಂದ ಅತಿಯಾದ ಮಳೆಯಾಗಿ ರೈತರು ಬೆಳೆದ ಬೆಳೆ ಹಾಳಾಗಿವೆ. ರಾಜ್ಯ ಸರ್ಕಾರ ಕೂಡಲೇ ಪ್ರತಿ ಎಕರೆಗೆ 20 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಸಂಘಟನೆಯ ನೇತೃತ್ವದಲ್ಲಿ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲೆಯ ಅಂದಾಜು 40 ಸಾವಿರ ಹೆಕ್ಟೇ‌ರ್ ಪ್ರದೇಶದಲ್ಲಿದ್ದ ಬೆಳೆ ಮಳೆಯಿಂದಾಗಿ ಹಾನಿಗೀಡಾಗಿದೆ. ಇದರಿಂದಾಗಿ ರೈತರು ಆತ್ಮಹತ್ಯೆಯ ದಾರಿ …

Read More »

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಇಂದು ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. ರಾಜೀನಾಮೆ ಪತ್ರ ಸ್ವೀಕರಿಸಿ ಬಳಿಕ ಮಾತನಾಡಿದ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸಿ.ಪಿ.ಯೋಗೇಶ್ವರ ಅವರು ರಾಜೀನಾಮೆ …

Read More »

ರಾಜೀನಾಮೆ ನೀಡಲು ಹುಬ್ಬಳ್ಳಿಗೆ ಆಗಮಿಸಿದ ಸಿಪಿ ಯೋಗೇಶ್ವರ

ಹುಬ್ಬಳ್ಳಿ: ಚನ್ನಪಟ್ಟಣ ಎನ್ ಡಿಎ ಟಿಕೆಟ್ ಗೊಂದಲ ತೀವ್ರಗೊಂಡಿದೆ. ಈ ನಡುವೆ ವಿಧಾನ ಪರಿಷತ್‌ ಸದಸ್ಯ ಸಿಪಿ ಯೋಗೇಶ್ವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೀಗಾಗಿ ಸಿಪಿ ಯೋಗೇಶ್ವರ ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

Read More »

ಮನೆ ಕುಸಿತ: ಮಹಿಳೆ ಸಾವು

ನವಲಗುಂದ: ನಿರಂತರವಾಗಿ ಸುರಿದ ಮಳೆಯಿಂದ ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಿಸದೇ ಕಿಮ್ನಲ್ಲಿ ನಿನ್ನೆ ರಾತ್ರಿ ಸಾವಿಗೀಡಾಗಿದ್ದಾರೆ. ತಾಲೂಕಿನ ಹನಸಿ ಗ್ರಾಮದಲ್ಲಿ ಮನೆ ಬಿದ್ದ ತಕ್ಷಣವೇ ಗ್ರಾಮಸ್ಥರು ಮಣ್ಣಿನಡಿ ಸಿಲುಕಿದ್ದ ಅತ್ತೆ-ಸೊಸೆಯನ್ನ ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ, ಅತ್ತೆ ಮಂಗಳಾ ಪಾಟೀಲ ಅವರಿಗೆ ಎಡಗಾಲಿಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Read More »

ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಚಾಲಕ ಸಾವು

ಚಿತ್ತಾಪುರ : ಚಿತ್ತಾಪುರ ತಾಲ್ಲೂಕಿನ ದಂಡೋತಿ ಸಮೀಪದಲ್ಲಿ ಭಾನುವಾರ ತಡ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿ ಸೇತುವೆಯ ಕೆಳಗೆ ಬಿದ್ದು ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಚಿತ್ತಾಪುರ ಪಟ್ಟಣದ ನಿವಾಸಿ, ಚಾಲಕ ನಿಂಗಪ್ಪ ಪೂಜಾರಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಮೇಶ ಮತ್ತ ಕೃಷ್ಣ ಅವರು ಗಾಯಗೊಂಡಿದ್ದಾರೆ. ಹಳೆಯ ಕಾರು ಖರೀದಿಗಾಗಿ ಚಿಂಚೋಳಿ ತಾಲ್ಲೂಕಿನ ಕೊಂಚಾವರಂಕ್ಕೆ ಹೋಗಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಶಹಾಬಾದ್ …

Read More »