Breaking News

Breaking News

ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದಂದು ವಿಶೇಷ ಬಸ್ ಗಳ ವ್ಯವಸ್ಥೆ

ಹುಬ್ಬಳ್ಳಿ : ಶೀಗಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯಿಂದ ಮಾಡಲಾಗಿದ್ದ ಯಲ್ಲಮ್ಮನಗುಡ್ಡ ವಿಶೇಷ ಬಸ್‌ ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಪ್ರಯಾಣಿಕರ ಬೇಡಿಕೆಯ ಮೇರೆಗೆ ದೀಪಾವಳಿಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದಂದು ವಿಶೇಷ ಬಸ್ ಗಳ ವ್ಯವಸ್ಥೆ ಮುಂದುವರೆಸಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ತಿಳಿಸಿದ್ದಾರೆ. ಶೀಗಿ ಹುಣ್ಣಿಮೆಯ ಪ್ರಯುಕ್ತ ಸೌದತ್ತಿ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಅಕ್ಟೋಬರ್ 17ರಂದು ಗುರುವಾರ, …

Read More »

ಷೇರುಪೇಟೆ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ಸೆನ್ಸೆಕ್ಸ್, ನಿಫ್ಟಿ ಕುಸಿತ

ಮುಂಬೈ: ವಾರದ ಆರಂಭಿಕ ವಹಿವಾಟಿನಲ್ಲೇ ಷೇರುಪೇಟೆಯಲ್ಲಿ ಹಾವುಏಣಿಯಾಟ ಶುರುವಾಗಿದೆ. ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬಳಿಕ ಕುಸಿದಿವೆ. ನಿಫ್ಟಿ 124 ಅಂಶಗಳ ಏರಿಕೆಯೊಂದಿಗೆ 24,978ರಲ್ಲಿ ವಹಿವಾಟು ಆರಂಭಿಸಿದರೆ, ಬಿಎಸ್‌ಇ ಸೆನ್ಸೆಕ್ಸ್ 545 ಅಂಶಗಳ ಏರಿಕೆಯೊಂದಿಗೆ 81,770ರಲ್ಲಿ ವಹಿವಾಟು ಆರಂಭಿಸಿತ್ತು. ಬಳಿಕ ಸೆನ್ಸೆಕ್ಸ್ 136 ಮತ್ತು ನಿಫ್ಟಿ 100 ಅಂಶಗಳಷ್ಟು ಕುಸಿದವು. ಇಂದು ಸೆನ್ಸೆಕ್ಸ್‌ನ ಟೈಟಾನ್, ಎಚ್‌ಡಿಎಫ್‌ಸಿ ಬ್ಯಾಂಕ್, ಏಷಿಯನ್ ಪೇಟ್ಸ್, ಆಕ್ಸಿಸ್ …

Read More »

ದಸರಾ ರಜೆ ಅಂತ್ಯ: ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ

ಬೆಂಗಳೂರು : ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ ದಸರಾ ರಜೆ ಅಂತ್ಯಗೊಂಡಿದ್ದು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆಯನ್ನು ನೀಡಲಾಗಿತ್ತು. ಅಕ್ಟೋಬರ್ 21 ರ ಇಂದಿನಿಂದ ಶಾಲೆಗಳು ಮತ್ತೆ ಆರಂಭವಾಗಲಿವೆ. 2024-25ನೇ ಶೈಕ್ಷಣಿಕ ಸಾಲಿನ …

Read More »

2 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಚುನಾವಣೆಗಳಲ್ಲಿ ಸ್ಪರ್ಧೆಗೆ ಅವಕಾಶ: ಆಂಧ್ರ ಸಿಎಂ ನಾಯ್ಡು

ಅಮರಾವತಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುವಜನರ ಪ್ರಮಾಣ ಕುಸಿಯುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೇಶದ ಹಿತಕ್ಕಾಗಿ ಹೆಚ್ಚು ಮಕ್ಕಳಿಗೆ ಜನ್ಮ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆ ಚುನಾ ವಣೆಗಳಲ್ಲಿ ಸ್ಪರ್ಧೆ ಅವಕಾಶ ಒದಗಿಸುವ ಕಾನೂನು ಜಾರಿ ಮಾಡಲಾಗುತ್ತದೆ ಎಂದಿದ್ದಾರೆ. 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಈಗ ಇದೆ ಈ ಕಾನೂನನ್ನು ರದ್ದು ಮಾಡಲಾಗುತ್ತದೆ. ಚುನಾವಣೆಗಳಲ್ಲಿ …

Read More »

ಜೂಜಾಟದಲ್ಲಿ ಅಬಕಾರಿ, ಬ್ಯಾಂಕ್ ಇಲಾಖೆಯ ಅಧಿಕಾರಿಗಳು ಭಾಗಿ: 9 ಮಂದಿಯ ಬಂಧನ

ಕೋಲಾರ: ಜಿಲ್ಲೆಯಲ್ಲಿ ಜೂಜಾಟದಲ್ಲಿ ಬ್ಯಾಂಕ್ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳೇ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವಂತ ಘಟನೆ ಕೋಲಾರದ ಕಠಾರಿಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಜೂಜಾಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಎಸ್ಪಿ ನಿಖಿಲ್ ಅವರಿಗೆ ಸಿಕ್ಕಿತ್ತು ಈ ಹಿನ್ನಲೆಯಲ್ಲಿ ಸಿಇಎನ್ ಠಾಣೆಯ ಪೊಲೀಸರು ದಾಳಿ ನಡೆಸಿ, ಬಂಧಿಸುವಂತೆ ಸೂಚಿಸಿದ್ದರು. ಕೋಲಾರ ಎಸ್ಪಿ ಸೂಚನೆಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ …

Read More »

ಲಾರಿ ಮತ್ತು ಆಟೋ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಧಾರವಾಡ: ಲಾರಿ ಮತ್ತು ಆಟೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡದ ಸಂಪಿಗೆನಗರದ ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ. ಆಟೋ ಚಾಲಕ ರಮೇಶ ಹಂಚಿನಮನಿ (35) ಹಾಗೂ ಮರೆವ್ವ ಹಂಚಿನಮನಿ (55) ಎಂಬುವವರೇ ಈ ಅಪಘಾತದಲ್ಲಿ ಸಾವಿಗೀಡಾದ ದುರ್ದೈವಿಗಳು. ಆಟೋದಲ್ಲಿದ್ದ ರೇಣುಕಾ, ಪ್ರಣವ್ ಮತ್ತು ಪೃಥ್ವಿ ಎಂಬುವವರು ಈ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಪ್ರಯಾಣಿಕರನ್ನು ರೈಲು ನಿಲ್ದಾಣಕ್ಕೆ ಬಿಟ್ಟು …

Read More »

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ: ಬೆಲ್ಲದ

ಹುಬ್ಬಳ್ಳಿ : ಶಿಗ್ಗಾಂವಿ-ಸವಣೂರು ವಿಧಾನಸಭಾ ಮತಕ್ಷೇತ್ರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಗೆ ಟಿಕೆಟ್ ನೀಡಿರುವ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಎಂದಿಗೂ ವಂಶ ಪಾರಂಪರಿಕ ಪಕ್ಷವಲ್ಲ. ನಮ್ಮದು ಪ್ರಜಾಪ್ರಭುತ್ವ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡುವ ಪಕ್ಷ. ಅಲ್ಲಿನ ಜನರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಭರತ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಚನ್ನಪಟ್ಟಣ …

Read More »

ಈ ಭಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗಳಾಗಬೇಕು: ಬೆಲ್ಲದ

ಹುಬ್ಬಳ್ಳಿ: ಡಿ.9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಲಾಗುವುದು. ಇದರೊಂದಿಗೆ ಕಳೆದ ಭಾರಿ ಅಧಿವೇಶನದಲ್ಲಿ ನಡೆಸಿದ ಚರ್ಚೆ ನಡೆಸಿ ತೆಗೆದುಕೊಂಡ ನಿರ್ಧಾರಗಳನ್ನು ಪಟ್ಟಿಮಾಡಿ ಅವುಗಳಲ್ಲಿ ಎಷ್ಟು ಜಾರಿಯಾಗಿವೆ ಎಂಬುದನ್ನು ಸಿಎಂ ಜನರಿಗೆ ತಿಳಿಸಬೇಕು ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅದರಂತೆ ಈ ಭಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ …

Read More »

ಚಿರತೆ ಪತ್ತೆ : ಸಾರ್ವಜನಿಕರಿಗೆ ಹೆಚ್ಚಿದ ಭಯದ ವಾತಾವರಣ

ಅಳ್ಳಾವರ: ತಾಲೂಕಿನ ಕೋಗಿಲಗೇರಿ ಗ್ರಾಮದಲ್ಲಿ ಚಿರತೆಯೊಂದು ಕಾಣಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸುಮಾರು ದಿನಗಳಿಂದ ತಮ್ಮ ಸುತ್ತ ಮುತ್ತಲಲ್ಲೇ ಚಿರತೆಯೊಂದು ಓಡಾಡುತ್ತಿದೆ ಎಂಬ ಅನುಮಾನ ಕೋಗಿಲಗೇರಿ ಗ್ರಾಮಸ್ಥರಲ್ಲಿ ಮೂಡಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಇಲ್ಲಿಯ ವರೆಗೆ ಸುಮಾರು ನೂರರ ಆಸುಪಾಸಿನಷ್ಟು ಆಡು-ಕುರಿಗಳು, ಮೂವತ್ತಕ್ಕೂ ಹೆಚ್ಚು ನಾಯಿಗಳು ಕಾಣೆಯಾಗಿದ್ದವು. ಯಾವುದೋ ಪ್ರಾಣಿಗೆ ಬಲಿಯಾಗಿರಬಹುದು ಎಂಬ ಅನುಮಾನಕ್ಕೆ ಬಂದಿದ್ದರೂ ಎಲ್ಲಿಯೂ ಅವುಗಳ ಅವಶೇಷಗಳು ದೊರೆಯದ ಕಾರಣ ಗ್ರಾಮಾಸ್ಥರು ಸುಮ್ಮನಾಗಿದ್ದರು. ನಿನ್ನೆ …

Read More »

ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಶಂಕರ ನೇತ್ರಾಲಯ ಸೇರಿ ವಿವಿಧ ಯೋಜನೆಗಳಿಗೆ ಚಾಲನೆ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಆರ್‌ಜೆ ಶಂಕರ ನೇತ್ರಾಲಯ ಸೇರಿ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಆರ್‌ಜೆ ಶಂಕರ ಕಣ್ಣಿನ ಆಸ್ಪತ್ರೆಯು ವಿವಿಧ ಕಣ್ಣಿನ ಕಾಯಿಲೆಗಳಿಗೆ ಸಮಗ್ರ ಸಮಾಲೋಚನೆ ಮತ್ತು ಚಿಕಿತ್ಸೆಯನ್ನು ನೀಡುತ್ತದೆ. ಕಂಚಿ ಮಠದಿಂದ ನಡೆಸಲ್ಪಡುತ್ತಿರುವ ಆರ್‌ಜೆ ಶಂಕರ ಕಣ್ಣಿನ ಆಸ್ಪತ್ರೆಯು ಪೂರ್ವ ಉತ್ತರ ಪ್ರದೇಶದ 20 ಜಿಲ್ಲೆಗಳ ಜನರಿಗೆ ಮತ್ತು ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರಯೋಜನವನ್ನು …

Read More »