BigTv News
October 20, 2024
Breaking News, ಧಾರವಾಡ
ಧಾರವಾಡ: ಲಾರಿ ಮತ್ತು ಅಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾದ ಘಟನೆ ಧಾರವಾಡದ ಸಂಪಿಗೆನಗರ ಬಳಿ ಇಂದು ಬೆಳಗ್ಗೆ ನಡೆದಿದೆ. ಆಟೋ ಚಾಲಕ ರಮೇಶ ಹಂಚನಿಮನಿ(35), ಮರೆವ್ವ ಹಂಚಿನಮನಿ(55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 6 ವರ್ಷದ ಮಗು ಕೂಡ ಸಾವನ್ನಪ್ಪಿದೆ. ಗಾಯಾಳುಗಳಾದ ರೇಣುಕಾ, ಪ್ರಣವ ಮತ್ತು ಪೃತ್ವಿ ಇಬ್ಬರಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. …
Read More »
BigTv News
October 20, 2024
Breaking News, ಮಹಾರಾಷ್ಟ್ರ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಬೈನ ತಿಲಕ್ ಭವನದಲ್ಲಿ ಆಯೋಜಿಸಿದ್ದ ಪಕ್ಷದ ಹಿರಿಯ ವೀಕ್ಷಕರ ಸಭೆಯಲ್ಲಿ ರಾಜ್ಯದಿಂದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಿ ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಸಭೆಯಲ್ಲಿ ಚುನಾವಣಾ ಉಸ್ತುವಾರಿ ರಮೇಶ್ ಚೆನ್ನಿತ್ತಲ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‍ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಮಾಜಿ ಮುಖ್ಯಮಂತ್ರಿ …
Read More »
BigTv News
October 20, 2024
Breaking News, ತಮಿಳುನಾಡು
ತಮಿಳುನಾಡು: ಈ ವರ್ಷ ದೀಪಾವಳಿ ಹಬ್ಬವನ್ನು ತಮಿಳುನಾಡಿನಲ್ಲಿ ಅಕ್ಟೋಬರ್ 31 ರಂದು ಆಚರಿಸಲಾಗುತ್ತಿದೆ ಅಕ್ಟೋಬರ್ 31 ಗುರುವಾರದ ಕಾರಣ, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸರ್ಕಾರಿ ಅಧಿಕಾರಿಗಳು ತಮ್ಮ ಊರುಗಳಿಗೆ ಹೋಗಲು ಅನುಕೂಲವಾಗುವಂತೆ ತಮಿಳುನಾಡು ಸರ್ಕಾರ ನವೆಂಬರ್ 1 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಈ ಕುರಿತು ತಮಿಳುನಾಡು ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ನವೆಂಬರ್ 1ರಂದು ಸಂಪೂರ್ಣ ರಜೆ ಎಂದು ಘೋಷಿಸಿದೆ. ಈ ಕುರಿತು ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಈ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು : ನವೆಂಬರ್ 13ರಂದು ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಶಿಗ್ಗಾವಿ ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಇನ್ನು ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಜೆಡಿಎಸ್ ನವರು ಅವರಿಗೆ ಬೇಕಾದವರಿಗೆ ಟಿಕೆಟ್ ಘೋಷಿಸಬಹುದು. ಬಿಜೆಪಿ ಜೆಡಿಎಸ್ …
Read More »
BigTv News
October 20, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ಶ್ರೀಗಂಧದ ಮರ ಕಳ್ಳತನದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಧ್ಯಪ್ರದೇಶ ಮೂಲದ ಮೋಹಿತ್(24), ಕತರ್ವ (38) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಗಳು ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಜಯರಾಂ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧದ ಮರಗಳಿದ್ದು, ಕಳ್ಳತನಕ್ಕೆ ಆಗಮಿಸಿದಾಗ ವಿದ್ಯುತ್ ತಂತಿ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ ಸಾಮಾಜಿಕ ಆರ್ಥಿಕ ಸಮೀಕ್ಷೆ, …
Read More »
BigTv News
October 20, 2024
Breaking News, ಬೆಂಗಳೂರು
ಬೆಂಗಳೂರು: ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 8ರಂದು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಮಸೂದೆ ಜಾರಿಗೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಈ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು ಅದನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು …
Read More »
BigTv News
October 20, 2024
Breaking News, ಹಾವೇರಿ
ಹಾವೇರಿ: ಉಪ ಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗುತ್ತದೆ ಶಿಗ್ಗಾವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ ಸೋಮವಾರ (ಅ.21) ಸಂಜೆಯೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಸಚಿವ ಎಚ್. ಕೆ.ಪಾಟೀಲ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ತತ್ವ ಸಿದ್ಧಾಂತಗಳನ್ನ ಬಿಡುವುದಿಲ್ಲ ಮುಸ್ಲಿಂ ಸಮುದಾಯದ ಇಬ್ಬರು ಆಕಾಂಕ್ಷಿಗಳ ಬಳಿ ಮಾತಾಡಿ ಅಂತಿಮ ಮಾಡುತ್ತೇವೆ ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸ್ಸು, …
Read More »
Shaikh BigTv
October 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಭಾಗದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರಕಾರ ಮುಂದಾಗಬೇಕು ಯಾವುದೇ ಕಾರಣಕ್ಕೂ ಇತರೆ ಭಾಗಗಳ ಬಗ್ಗೆ ಚಿಂತನೆ ಮಾಡಬಾರದು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಬಳಿ ಹೊಸ ನಿಲ್ದಾಣಯಾಗಬೇಕು. ಸಲಹಾ ಸಂಸ್ಥೆಯ ಅಭಿಪ್ರಾಯಕ್ಕೆ ಮನ್ನಣೆ …
Read More »