Breaking News

Breaking News

ಯುದ್ಧಕ್ಕೆ ಸನ್ನದ್ಧರಾಗಿರುವಂತೆ ಸೈನ್ಯಕ್ಕೆ ಚೀನಾ ಅಧ್ಯಕ್ಷ ಜಿನ್ ಪಿಂಗ್ ಕರೆ

ಬೀಜಿಂಗ್: ಈ ವಾರ ಯುದ್ಧಕ್ಕೆ ಸನ್ನದ್ಧರಾಗಿರುವಂತೆ ಸೈನ್ಯಕ್ಕೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕರೆ ನೀಡಿದ್ದಾರೆ. ತೈವಾನ್ – ಚೀನಾ ನಡುವೆ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಪೀಪಲ್ಸ್ ಲಿಬರೇಶನ್ ಆರ್ಮಿ ರಾಕೆಟ್ ಫೋರ್ಸ್‌ನ ಬ್ರಿಗೇಡ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ಸಿ ಈ ಸಲಹೆ ನೀಡಿದ್ದಾರೆ ಎಂದು ಆ ದೇಶದ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಮಿಲಿಟರಿಯು ಸಮಗ್ರವಾಗಿ ತರಬೇತಿ ಮತ್ತು ಯುದ್ಧದ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಪಡೆಗಳು ಯಾವುದೇ ಸಂದರ್ಭದಲ್ಲಿ ಯುದ್ಧ …

Read More »

ಗದಗದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಗದಗ : ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ನಗರದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ ಗಾಯಗೊಂಡ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣ್ಣಿನಡಿ ಸಿಲುಕಿದ ಕಾರ್ಮಿಕನನ್ನು ನಜೀರ್ ಸಾಬ್ ಬೈಲು ಹುಲಿ ಎಂದು ಗುರುತಿಸಲಾಗಿದ್ದು, ಗದಗ ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.

Read More »

ದೇಶದಲ್ಲಿ ಪ್ರಧಾನಿ ಮೋದಿ ಅಭಿವೃದ್ದಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ವೃದ್ಧಿಸಿವೆ: ಬಿ.ಸಿ ಪಾಟೀಲ

ಹಿರೇಕೆರೂರು: ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಸದೃಢ …

Read More »

ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥ: ಆರ್.ಅಶೋಕ್

ಬೆಂಗಳೂರು: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ, ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥವಾಗಿದ್ದಾರೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಬೆಳೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ …

Read More »

ರಾಜ್ಯದಲ್ಲಿ ಶೇ.10 ರಷ್ಟು ಸೇವೆಯನ್ನು ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ: ಪ್ರಿಯಾಂಕ್ ಖರ್ಗೆ ಅಸಮಾಧಾನ

ಬೆಂಗಳೂರು: ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಸಮನ್ವಯತೆ, ಸಮಯಪ್ರಜ್ಞೆ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಹೊಣೆಗಾರಿಕೆ ಈ ಪಂಚಸೂತ್ರಗಳನ್ನು ಇರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪಂಚಾಯತ್‌ ರಾಜ್‌ ಮತ್ತು ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರದಲ್ಲಿ ಆಯೋಜಿಸಲಾಗಿದ್ದ ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುತ್ತ, ರಾಜ್ಯದ ಜನರಿಗೆ ಸ್ವಾಭಿಮಾನ ಬದುಕು ನೀಡುವ …

Read More »

ಅಪಾಯದ ಅಂಚಿನಲ್ಲಿರುವ ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರಿಗೆ ಸೌಲಭ್ಯ: ಕಿಶನ್ ಮಕ್ವಾನ ಭರವಸೆ

ಮೈಸೂರು: ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಪಡೆಯಲು ಸಮಸ್ಯೆ ಎದುರಿಸುತ್ತಿದ್ದು, ಅವರಿಗೆ ಅಗತ್ಯವಿರುವ ಗುರುತಿನ ಚೀಟಿಗಳನ್ನು ದೊರಕಿಸಲಾಗುವುದು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಅಧ್ಯಕ್ಷ ಕಿಶನ್‌ ಮಕ್ವಾನ ಭರವಸೆ ನೀಡಿದರು. ನಗರದಲ್ಲಿ ಆಶೋದಯ ಸಮಿತಿಯು ಏರ್ಪಡಿಸಿದ್ದ, ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ದಾಖಲೆಗಳಿಲ್ಲದೆ ಲೈಂಗಿಕ ಕಾರ್ಯಕರ್ತೆಯರು ಕೇಂದ್ರ …

Read More »

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನ

ಬೆಳಗಾವಿ: ಪ್ರಸ್ತಕ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಜಿಲ್ಲೆಯಲ್ಲಿರುವ ಕನಿಷ್ಠ 20 ಕ್ಕಿಂತ ಹೆಚ್ಚು ಕುರಿ ಮೆಕ್ಕೆಗಳನ್ನು ಹೊಂದಿರುವ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸಂಚಾರಿ ಕುರಿಗಾರರು ನಿಗದಿತ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂದಪಟ್ಟ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ತಮ್ಮ ವ್ಯಾಪ್ತಿಯಲ್ಲಿ …

Read More »

ಮೀಸಲಾತಿ ಪ್ರಮಾಣವನ್ನು ಶೇ.75 ಕ್ಕೆ ಏರಿಸುವ ಚರ್ಚೆ ಇದೆ: ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯ ಅನುಸಾರ ಮೀಸಲಾತಿ ಪ್ರಮಾಣವನ್ನು ಶೇ. 75ಕ್ಕೆ ಏರಿಸುವ ಚರ್ಚೆ ಇದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದರು. ಮುಂದಿನ ಸಂಪುಟ ಸಭೆಯಲ್ಲಿ ವರದಿ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ ವರದಿಯನ್ನು ಸಂಪುಟದಲ್ಲಿ ಇಡಲು ನಾನು ತಯಾರಿದ್ದೇನೆ. ಆದರೆ, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಮೊದಲು ಎಲ್ಲರನ್ನೂ …

Read More »

ರಾಜ್ಯ ಸರ್ಕಾರದಿಂದ ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್, 400 ಪಶು ವೈದ್ಯರ ನೇಮಕಕ್ಕೆ ಗ್ರೀನ್ ಸಿಗ್ನಲ್

ಮೈಸೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಶುಪಾಲನಾ ಇಲಾಖೆಯಲ್ಲಿ 700 ಮಂದಿ ಡಿ ಗ್ರೂಪ್ ಹಾಗೂ 400 ಪಶು ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ …

Read More »

ಜಾರ್ಖಂಡ್‌ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 66 ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದ್ದು, ಜಾರ್ಖಂಡ್‌ನ ಮಾಜಿ ಸಿಎಂಗಳಾದ ಬಾಬುಲಾಲ್ ಮರಾಂಡಿ ಮತ್ತು ಚಂಪೈ ಸೊರೆನ್ ಹೆಸರು ಪಟ್ಟಿಯಲ್ಲಿದೆ. ಧನ್ವಾರ್ ಕ್ಷೇತ್ರದಿಂದ ಬಾಬುಲಾಲ್ ಮರಾಂಡಿ ಸ್ಪರ್ಧಿಸಲಿದ್ದು, ಸಾರೈಕೆಲಾ ಕ್ಷೇತ್ರದಿಂದ ಚಂಪೈ ಸೊರೆನ್ ಕಣಕ್ಕಿಳಿಯುತ್ತಿದ್ದಾರೆ. ಪಕ್ಷದ ಪ್ರಮುಖರಾದ ಸೀತಾ ಸೊರೆನ್ ಜಮ್ತಾರಾದಿಂದ ಕಣಕ್ಕಿಳಿದಿದ್ದು, ನೀರಾ ಯಾದವ್ ಕೊಡರ್ಮಾದಿಂದ ಸ್ಪರ್ಧಿಸಲಿದ್ದಾರೆ. ಗಂಡೆಯಲ್ಲಿ …

Read More »