Breaking News

Breaking News

ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ: ಆರ್ ಅಶೋಕ್ ವಾಗ್ದಾಳಿ

ಬೆಂಗಳೂರು: 15 ಬಜೆಟ್ ಮಂಡಿಸಿರುವ ಸ್ವಯಂಘೋಷಿತ ಆರ್ಥಿಕ ತಜ್ಞರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರೂ ಸಂಪನ್ಮೂಲ ಸಂಗ್ರಹಣೆಯಲ್ಲಿ ಶೇ.4% ರಷ್ಟು ಹಿನ್ನಡೆಯಾಗಿದ್ದು, ಕಾಂಗ್ರೆಸ್​ ಸರ್ಕಾರ ಬಂದಾಗಿನಿಂದ ಕುಸಿಯುತ್ತಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್​.ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರೇ, ತೆರಿಗೆ ಸಂಗ್ರಹ ಕುಸಿತವಾಗಿರುವುದಕ್ಕೆ ಗ್ಯಾರೆಂಟಿ ಫಲಾನುಭವಿಗಳನ್ನು ಯಾಕೆ ಹೊಣೆ ಮಾಡುತ್ತಿದ್ದೀರಿ ಗ್ಯಾರೆಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಈ ಹಿಂದೆ ತಾವೇ …

Read More »

ಬೆಳೆವಿಮೆ ಹಾಗೂ ಪರಿಹಾರವನ್ನು ಸಕಾಲದಲ್ಲಿ ಒದಗಿಸುವಂತೆ ಆಗ್ರಹಿಸಿ ಮನವಿ‌ ಸಲ್ಲಿಕೆ

ನವಲಗುಂದ: ಬೆಣ್ಣೆ ಹಳ್ಳ ಹಾಗೂ ತುಪ್ಪರಿಹಳ್ಳ ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಬೆಳೆವಿಮೆ ಹಾಗೂ ಪರಿಹಾರವನ್ನು ಸಕಾಲದಲ್ಲಿ ಒದಗಿಸುವಂತೆ ಆಗ್ರಹಿಸಿ ಭಾಜಪಾ ತಾಲೂಕಾಧ್ಯಕ್ಷ ಗಂಗಪ್ಪ ಮನಮಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಇಂದು ಮೊರಬ ಗ್ರಾಮಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಗಂಗಪ್ಪ ನವಲಗುಂದ ಗ್ರಾಮೀಣ ಭಾಗದ ರೈತರಿಗೆ ಪ್ರವಾಹದಿಂದಾಗಿ ಸಾಕಷ್ಟು ನಷ್ಟವಾಗಿದೆ. ರಸ್ತೆಗಳು ಸಂಪರ್ಕ ಕಡಿದುಕೊಂಡಿರುವದರಿಂದ ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥಗೊಂಡಿರುವದರಿಂದ ಪರಿಸ್ಥಿತಿಯನ್ನು …

Read More »

ಮುಡಾ ನಿವೇಶನ ಹಂಚಿಕೆಯಲ್ಲಿ 4500 ಕೋಟಿ ರೂಪಾಯಿಯಷ್ಟು ಅವ್ಯವಹಾರವಾಗಿದೆ: ಬಿ.ವೈ. ವಿಜಯೇಂದ್ರ

ಹುಬ್ಬಳ್ಳಿ: ಮೈಸೂರಿನ ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿಯನ್ನು ನಾವು ನಿರೀಕ್ಷೆ ಮಾಡಿದ್ವಿ. ಈಗ ಅದು ನಿಜವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎ1 ಆರೋಪಿ ಆಗಿದ್ದಾರೆ. ಇದರ ಸಂಪೂರ್ಣ ಜವಾಬ್ದಾರಿ ಮುಖ್ಯಮಂತ್ರಿ ಹೊರಬೇಕು. ಹೀಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲೇಬೇಕು. ಮುಡಾ ನಿವೇಶನ ಹಂಚಿಕೆಯಲ್ಲಿ 4500 ಕೋಟಿ ರೂಪಾಯಿಯಷ್ಟು ಅವ್ಯವಹಾರವಾಗಿದೆ …

Read More »

ಶಾಲೆಗಳಲ್ಲಿ ಕಲಿಕೆಯ ಫಲಿತಾಂಶ ಸುಧಾರಿಸಲು ಸರ್ಕಾರದಿಂದ ಶಿಕ್ಷಣ ಕೋಪೈಲಟ್ ಯೋಜನೆ ಜಾರಿಗೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷಣ ಕೋಪೈಲಟ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ 750 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1,000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್‌ – ಎಐ …

Read More »

ಮುಡಾದಲ್ಲಿ ಸಾವಿರಾರು ಕೋಟಿಯ ಹಗರಣವಿದೆ : ಬೆಲ್ಲದ್

ಧಾರವಾಡ: ಮುಡಾ ಹಗರಣದ ಎ4 ಆರೋಪಿ ದೇವರಾಜು ಅವರ ಮೈಸೂರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯ ಕಂಡ ಅತ್ಯಂತ ದೊಡ್ಡ ಹಗರಣ ಈ ಮುಡಾ ಹಗರಣ. ಇಲ್ಲಿ ಇಡಿ ದಾಳಿ ನಿರೀಕ್ಷಿತವಾಗಿತ್ತು. ಮುಡಾದಲ್ಲಿ ಸಾವಿರಾರು ಕೋಟಿಯ ಹಗರಣವಿದೆ. ಸಿಎಂ ಬೇರೆ ಬೇರೆ ದಾರಿಯಿಂದ ಕಾರಣ ಹೇಳಿ …

Read More »

ಎಸ್.ಡಬ್ಲ್ಯು.ಆ‌ರ್.ಎಂ.ಯು ಚುನಾವಣೆಗೆ ನಾಮಪತ್ರ ಸಲ್ಲಿಕ್ಕೆ

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ನಡೆಯಲಿರುವ ಟ್ರೇಡ್ ಯೂನಿಯನ್ ಚುನಾವಣೆಗೆ ಎಸ್.ಡಬ್ಲ್ಯು.ಆ‌ರ್.ಎಂ.ಯು (ನೈಋತ್ಯ ರೈಲ್ವೆ ಮದ್ದೂರ ಯುನಿಯನ್) ಸಂಘಟನೆಯ ವತಿಯಿಂದ ಎ.ಎಂ.ಡಿಕ್ರೂಜ್ ಬಹುದೊಡ್ಡ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದರು. ಡಿಸೆಂಬ‌ರ್ 4ರಿಂದ 6ರವರೆಗೆ ನಡೆಯಲಿರುವ ರೈಲ್ವೆ ಇಲಾಖೆಯ ಟ್ರೇಡ್ ಯೂನಿಯನ್ ಚುನಾವಣೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರೈಲು ಸೌಧದಲ್ಲಿ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದರು. ಹುಬ್ಬಳ್ಳಿಯ ಕಚೇರಿಯಿಂದ ಬಹುದೊಡ್ಡ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಯ ಮೆರವಣಿಗೆ …

Read More »

ಹೆಣ್ಣು ಮಗುವಿನ ಮೇಲೆ ತಾತ್ಸಾರ ಮತ್ತು ತಿರಸ್ಕಾರದ ಭಾವನೆ ಬೇಡ: ಪರಶುರಾಮ ಎಫ್. ದೊಡ್ಡಮನಿ

ಧಾರವಾಡ : ಸಮಾಜದಲ್ಲಿ ಮೂಢನಂಬಿಕೆ ಮತ್ತು ಮೌಢ್ಯತೆಯ ತಪ್ಪು ಕಲ್ಪನೆಗಳಿಂದ ಹೆಣ್ಣು ಮಗುವಿನ ಮೇಲೆ ತಾತ್ಸಾರ ಮತ್ತು ತಿರಸ್ಕಾರದ ಭಾವನೆ ಬೇಡವೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ …

Read More »

ಲಾಡ್‌ಗೆ ಟಕ್ಕರ್ ಕೊಟ್ಟ ಬೆಲ್ಲದ್

ಹುಬ್ಬಳ್ಳಿ : ಕಳೆದ 16 ತಿಂಗಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿ ಧಾರವಾಡಕ್ಕೆ ಒಂದೇ ಒಂದು ಪ್ರಾಜೆಕ್ಟ್ ತಂದಿಲ್ಲ. ಮೋದಿ ಅವರ ಬಗ್ಗೆ ಮತ್ತು ಬೇರೆ ವಿಚಾರದ ಬಗ್ಗೆ ಮಾತನಾಡೊದನ್ನ ಬಿಟ್ಟು ಅನುದಾನ ತನ್ನಿ ಎಂದು ಸಂತೋಷ ಲಾಡ್‌ಗೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಟಕ್ಕರ್ ಕೊಟ್ಟರು.

Read More »

ಕಾಂಗ್ರೆಸ್ ನವರಿಗೆ ಮತಬ್ಯಾಂಕ್ ಅಂಧತ್ವವಿದೆ: ಬೆಲ್ಲದ್

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ವಿಚಾರವಾಗಿ, ಗಲಭೆಯಲ್ಲಿ ಭಾಗಿಯಾದವರಿಗೆ ಧರ್ಮದ ಅಂಧತ್ವವಿದೆ. ಆದ್ರೆ ಕಾಂಗ್ರೆಸ್ ನವರಿಗೆ ಮತಬ್ಯಾಂಕ್ ಅಂಧತ್ವವಿದೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಈ ರೀತಿ ವಿಷಯಾಂತರ ಮಾಡಿಸುತ್ತಿದ್ದಾರೆ. ಇ.ಡಿ ಈಗಾಗಲೇ ತನಿಖೆ ಮಾಡುತ್ತಿದೆ. ಹಳೇ ಹುಬ್ಬಳ್ಳಿ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಇದೇ ತಿಂಗಳು 25ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ …

Read More »

ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡಿದ ಅರವಿಂದ ಬೆಲ್ಲದ್

ಹುಬ್ಬಳ್ಳಿ: ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ ಬೊಮ್ಮಾಯಿ ಅವರನ್ನು ದೆಹಲಿಗೆ ಕರೆದಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಬೊಮ್ಮಾಯಿ ಪರ ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಬ್ಯಾಟಿಂಗ್‌ ಮಾಡಿದರು. ಮಾಧ್ಯಮಗೋಷ್ಠಿ …

Read More »