Breaking News

Breaking News

ತುಮಕೂರು ವಿವಿಯಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಮನವಿ: ಸಚಿವ ಪರಮೇಶ್ವರ್

ತುಮಕೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಂದು ಭರವಸೆ ನೀಡಿದರು. ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸುಮಾರು 5 ಸಾವಿರ ವರ್ಷಗಳ ಹಿಂದೆ ಹುಟ್ಟಿದ ವರ್ಣಾಶ್ರಮ ಪದ್ಧತಿಯಿಂದ ಈಗಲೂ ಶ್ರಮಿಕ ವರ್ಗದವರನ್ನು ಕೆಳಸ್ತರದವರೆಂದು ಗುರುತಿಸುತ್ತಿರುವುದು ನಮ್ಮ ದೌರ್ಭಾಗ್ಯ ದೇಶದಲ್ಲಿ ಶ್ರಮಿಕ ವರ್ಗ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಶೋಷಣೆ ನಿಂತಿಲ್ಲ. …

Read More »

ನಿರಂತರ ಮಳೆಯಿಂದಾಗಿ ಉಕ್ಕಿ ಹರಿದ ಸೊಟ್ಟೆ ಹಳ್ಳ: ದಡದಲ್ಲಿ ಪೂಜೆ ಸಲ್ಲಿಸಿದ ರೈತರು

ಧಾರವಾಡ: ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸುರಿದ ಬಾರಿ ಮಳೆಯಿಂದಾಗಿ ಹಿರೇಹರಕುಣಿ ಹಾಗೂ ಶಿಶುನಾಳ ಗ್ರಾಮದ ನಡವೆ ಸಂಚಾರ ಸ್ಥಗಿತವಾಗಿದೆ. ಸೊಟ್ಟ ಹಳ್ಳದ ನೀರಿನಿಂದಾಗಿ ಗ್ರಾಮಸ್ಥರು ಹಾಗೂ ರೈತರು ಪರದಾಡುತ್ತಿದ್ದು, ಶಿಗಿ ಹುಣ್ಣಿಮೆ ಹಿನ್ನೆಲೆ ಜಮೀನಿಗೆ ತೆರಳಬೇಕಿದ್ದ ರೈತರು ಹಳ್ಳದ ದಡದಲ್ಲಿಯೇ ಪೂಜೆ ಸಲ್ಲಿಸಿ ಮರಳುವ ಸ್ಥಿತಿ ನಿರ್ಮಾಣವಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಹಾಗೂ ಶಿಶುನಾಳ ಗ್ರಾಮದ ನಡುವೆ ಬರುವ …

Read More »

ಬಸವಕಲ್ಯಾಣದಲ್ಲಿ 23ನೇ ಕಲ್ಯಾಣ ಪರ್ವಕ್ಕಾಗಿ ಸಕಲ ಸಿದ್ಧತೆ

ಬಸವಕಲ್ಯಾಣ: ನಗರದ ಸಸ್ತಾಪುರ ರಸ್ತೆಯಲ್ಲಿನ 108 ಅಡಿ ಎತ್ತರದ ಬಸವಣ್ಣನವರ ಬೃಹತ್ ಪುತ್ಥಳಿಯ ಎದುರಲ್ಲಿನ ಬಸವ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದಿಂದ ಮೂರು ದಿನ ಹಮ್ಮಿಕೊಂಡಿರುವ 23ನೇ ಕಲ್ಯಾಣ ‌ಪರ್ವಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಅಕ್ಟೋಬರ್ 18ರಿಂದ ಮೂರು ದಿನಗಳವರೆಗೆ ವಿವಿಧ ಗೋಷ್ಠಿ ಹಾಗೂ ಇತರೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಇದಕ್ಕಾಗಿ ಇಲ್ಲಿ ಬೃಹತ್ ಸಭಾ ಮಂಟಪ ನಿರ್ಮಿಸಿದ್ದು ವೇದಿಕೆ ಸಿದ್ಧಪಡಿಸಲಾಗಿದೆ.‌ ಮಂಟಪಕ್ಕೆ ಆಕರ್ಷಕ ಮಹಾದ್ವಾರ …

Read More »

ಭಾರೀ ಮಳೆಯಿಂದಾಗಿ ಬನಶಂಕರಿ ದೇವಸ್ಥಾನ ಜಲಾವೃತ

ಬಾಗಲಕೋಟೆ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ದೇವಸ್ಥಾನ ಕೂಡ ಭಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಆವರಣ ಸಂಪೂರ್ಣವಾಗಿ ಜಲಾವೃತವಾಗಿದೆ. ಆದರೂ ಸಹ ಭಕ್ತರು ನೀರಿನಲ್ಲಿ ನಡೆದುಕೊಂಡು ಹೋಗಿ ದೇವಿಯ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ.

Read More »

ನಾಳೆ ಕಲಬುರಗಿ ನಗರದಲ್ಲಿ ಮಿನಿ ಉದ್ಯೋಗ ಮೇಳ

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಾಳೆ (ಅ.18 ರಂದು) ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಇಲ್ಲಿನ ಸರಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾರ್ಡ್ ದಾಖಲೆಗಳೊಂದಿಗೆ ಮಿನಿ …

Read More »

ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿತ

ಕಲಘಟಗಿ : ನಿನ್ನೆ ಸಾಯಂಕಾಲ ದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಘಟಗಿ ಪಟ್ಟಣದ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಕಲಘಟಗಿ ಪಟ್ಟಣ ಮಚಿಗಾರ ಓಣಿಯಲ್ಲಿ ಇರುವ ಮಂಜುನಾಥ ಮಂಗೋಡಿ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಾಶ ಯಾವದೇ ಪ್ರಾಣ ಹಾನಿ ಸಂಭವಿಸಿಲ್ಲಾ. ಬಹಳಷ್ಟು ಹಳೆಯ ಗೋಡೆ ಇದಾಗಿದ್ದು ಸತತ ಮಳೆ ಇಂದಾಗಿ ಗೋಡೆ ನೆನೆದು ಕುಸಿದಿದ್ದು ಕೂಲಿ ಮಾಡಿಕೊಂಡು ಬದಕು ಸಾಗಿಸುತ್ತಿರುವ ಇವರಿಗೆ ಸರ್ಕಾರ ಶೀಘ್ರವಾಗಿ ಪರಿಹಾರ ನೀಡಬೇಕೆಂದು …

Read More »

ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಿಸಬೇಕಂದು ಮನವಿ ಸಲ್ಲಿಕೆ

ನವಲಗುಂದ: ತಾಲೂಕಷ್ಟೇ ಅಲ್ಲದೇ ಉತ್ತರ ಕರ್ನಾಟಕ ಭಾಗದಲ್ಲಿ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ, ಉಳ್ಳಾಗಡ್ಡಿ, ಶೇಂಗಾ ಸೇರಿದಂತೆ ಅನೇಕ ಬೆಳೆಗಳು ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ರೈತ ಭವನದ ರೈತ ಹೋರಾಟ ವೇದಿಕೆಯಿಂದ ತಹಶೀಲ್ದಾರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ಈ ವೇಳೆಯಲ್ಲಿ ರೈತ ಮುಖಂಡ ಸುಭಾಷಗೌಡ …

Read More »

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ದುರ್ಮರಣ

ದಾವಣಗೆರೆ : ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದ ಸ್ಥಳದಲ್ಲೇ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹಾಲೇಶಪುರದ ಬಳಿ ಅಪಘಾತ ಸಂಭವಿಸಿದೆ. ಇನ್ನು ಈ ಒಂದು ಭೀಕರ ಅಪಘಾತದಲ್ಲಿ ಮೃತಪಟ್ಟ ಯುವಕರ ಗುರುತು ಇನ್ನು ಪತ್ತೆಯಾಗಿಲ್ಲ. ಮೃತದೇಹಗಳನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತಂತೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಅಪಘಾತದ ಘಟನೆ …

Read More »

ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

ಚಂಡೀಗಢ : ಹರಿಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, 90 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿದೆ. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನಾಯಬ್ ಸಿಂಗ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ …

Read More »

ಉತ್ತರ ನೈಜಿರೀಯಾದಲ್ಲಿ ಅಪಘಾತಕ್ಕೀಡಾದ ಪೆಟ್ರೋಲ್ ಟ್ಯಾಂಕರ್ ಸ್ಫೋಟ: 140ಕ್ಕೂ ಹೆಚ್ಚು ಜನರು ಸಾವು

ನೈಜೀರಿಯಾ: ಉತ್ತರ ನೈಜೀರಿಯಾದಲ್ಲಿ ಅಪಘಾತಕ್ಕೀಡಾದ ಪೆಟ್ರೋಲ್ ಟ್ಯಾಂಕರ್ ನಿಂದ ಇಂಧನವನ್ನು ಸಂಗ್ರಹಿಸಲು ಜನಸಂದಣಿ ಧಾವಿಸಿದಾಗ ಸ್ಫೋಟದಲ್ಲಿ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಸಂದರ್ಭವನ್ನು ಎದುರಿಸುತ್ತಿರುವ ನೈಜೀರಿಯಾವು ಘಟನೆಯಿಂದ ತತ್ತರಿಸಿದೆ ಇಡೀ ಪ್ರದೇಶದಾದ್ಯಂತ ಭಾರಿ ಬೆಂಕಿ ಹರಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಅಲ್ಲದೆ ಸ್ಥಳದಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ. ಇಂಧನ ಟ್ಯಾಂಕರ್ ಮತ್ತೊಂದು ವಾಹನಕ್ಕೆ ಡಿಕ್ಕಿ …

Read More »