Shaikh BigTv
October 17, 2024
Breaking News, ಧಾರವಾಡ
ಕಲಘಟಗಿ:ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಸಂಭ್ರಮ ಸಡಗರದ ನಡೆಯಬೇಕಿದ್ದ ಸೀಗೆ ಹುಣ್ಣಿಮೆ ಈ ಬಾರಿ ಸಂಕ್ಷೇಪವಾಗಿ ರೈತರು ತಮ್ಮ ಜಮೀನುಗಳಿಗೆ ಚರಗ ಚೆಲ್ಲುವ ಮೂಲಕ ಆಚರಣೆ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ಹಳ್ಳ ಕೊಳ್ಳ ತುಂಬಿ ಹರಿಯುತ್ತಿದ್ದು ರೈತರು ತಮ್ಮ ಜಮೀನಿಗೆ ಹೋಗಲಾರದೆ ರಸ್ತೆ ಪಕ್ಕದಲ್ಲಿ ಐದು ಮಂದಿ ಪಾಂಡವರ ಮೂರ್ತಿ ಇಟ್ಟು ಚರಗ ಚೆಲ್ಲಿದರು. ನೆನ್ನೆ ಕೆಲವರು ರಸ್ತೆ ಪಕ್ಕದಲ್ಲಿ ಇರುವ ಜಮೀನಿಗೆ ತೆರಳಿ ಚೆರಗ ಚೆಲ್ಲಿ ಮಳೆ ಕಡಿಮೆ ಆಗುವಂತೆ ದೇವರಲ್ಲಿ …
Read More »
Shaikh BigTv
October 17, 2024
Breaking News, ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಆಸಿಡ್ ತೆಗೆದುಕೊಂಡು ಹೋಗುತ್ತಿದ್ದ ಟ್ಯಾಂಕರ್ ವಾಹನ ದಾರಾವತಿ ಟೆಂಪಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರಲ್ಲಿದ್ದ ಆಸಿಡ್ ಎಲ್ಲ ಲಿಕೇಜ್ ಆಗಿ ರಸ್ತೆ ಪೂರ್ತಿ ಹರಿದ ಪರಿಣಾಮ ದಟ್ಟ ಹೊಗೆ ಆವರಿಸಿಕೊಂಡು ಬೈಪಾಸ್ ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಆಸಿಡ್ ರಸ್ತೆ ತುಂಬಾ ಬಿದ್ದ ಕೂಡಲೇ ದಟ್ಟ ಹೊಗೆಯಿಂದ ವಾಹನ ಸಂಚಾರಕ್ಕೆ ಅನಾನುಕೂಲವಾದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಸಂಚಾರಿ ವಿಭಾಗದ ಡಿಸಿಪಿ …
Read More »
BigTv News
October 17, 2024
Breaking News
ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಜತೆಗೂಡಿ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಜನರ ಸೇವೆ ಮಾಡುವ ಅವರ ಪ್ರಯತ್ನಕ್ಕೆ …
Read More »
BigTv News
October 17, 2024
Breaking News
ನವದೆಹಲಿ: 2024 ರಲ್ಲಿ ಸುಮಾರು 129 ಮಿಲಿಯನ್ ಭಾರತೀಯರು ತೀವ್ರ ಬಡತನದಲ್ಲಿ ಬದುಕುತ್ತಿದ್ದಾರೆ ಎಂದು ವಿಶ್ವ ಬ್ಯಾಂಕ್ ವರದಿ ಬಹಿರಂಗಪಡಿಸಿದೆ. ಈ ಜನರು 2.15 ಮಿಲಿಯನ್ ಡಾಲರ್ (ಅಂದಾಜು 181 ರೂ.) ಗಿಂತ ಕಡಿಮೆ ಆದಾಯದಲ್ಲಿ ಬದುಕುತ್ತಿದ್ದಾರೆ ಎಂದು ವರದಿಯಾಗಿದೆ. ವಿಶೇಷವೆಂದರೆ, 1990 ರಲ್ಲಿ 431 ಮಿಲಿಯನ್ ಭಾರತೀಯರು ತೀವ್ರ ಬಡತನದಲ್ಲಿದ್ದರು ಆದಾಗ್ಯೂ, ದಿನಕ್ಕೆ 6.85 ಡಾಲರ್ (ಅಂದಾಜು 576 ರೂ.) ಹೆಚ್ಚಿನ ಬಡತನದ ಮಾನದಂಡವನ್ನು ಪರಿಗಣಿಸಿದರೆ, 1990 ಕ್ಕೆ …
Read More »
BigTv News
October 17, 2024
Breaking News, ಕೊಡಗು
ಮಡಿಕೇರಿ: ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಯಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದು, ಮೂರು ಬಾರಿ ಉಕ್ಕಿ ಬಂದ ನಂತರ ಅರ್ಚಕರು ನೆರೆದಿರುವ ಭಕ್ತರಿಗೆ ಬ್ರಹ್ಮ ಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಿದರು. ನಿಗದಿಯಂತೆ 7:40ಕ್ಕೆ ಸೂರ್ಯ ಕನ್ಯಾ ಲಗ್ನದಿಂದ ತುಲಾ ಲಗ್ನಕ್ಕೆ ಪ್ರವೇಶಿಸುತ್ತಿದ್ದಂತೆ ತೀರ್ಥೋದ್ಭವ ನೆರವೇರಿತು. ಬೆಳಿಗ್ಗೆ 6 ಗಂಟೆಯಿಂದಲೇ ನಿರಂತರವಾಗಿ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ …
Read More »
BigTv News
October 17, 2024
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ಈ ಭಾಗದ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯ ಸ್ಥಿತಿಯಲ್ಲಿದ್ದು, ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೂಚನೆ ನೀಡಿದೆ. ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ವಿಜ್ಞಾನಿಗಳ ತಂಡ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮಳೆಗಾಲದೊಳಗೆ ಈ ಗ್ರಾಮಗಳ ಜನರನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಾ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ …
Read More »
BigTv News
October 17, 2024
Breaking News, ವಿಜಯಪುರ
ವಿಜಯಪುರ: ವಿಜಯಪುರ ಜಿಲ್ಲೆಯ ಮಮದಾಪುರದ 1495 ಎಕರೆ ಮೀಸಲು ಅರಣ್ಯವನ್ನು ಜೀವವೈವಿಧ್ಯ ಪರಂಪರೆಯ ತಾಣವೆಂದು ರಾಜ್ಯ ಸರ್ಕಾರ ಘೋಷಿಸಿದ್ದು, ಹಲವಾರು ಜಾತಿಯ ಸಸ್ಯ ಮತ್ತು ಪ್ರಾಣಿಗಳಿಗೆ ನೆಲೆಯಾಗಿರುವ ಕುರುಚಲು ಅರಣ್ಯ ಭೂಮಿಯ ವೈಜ್ಞಾನಿಕ ನಿರ್ವಹಣೆಗೆ ವೇದಿಕೆ ಕಲ್ಪಿಸಿದೆ. ಈ ಹಿಂದೆ ವಿವಿಧ ಅಧಿಸೂಚಿತ ಅರಣ್ಯ ಪ್ರದೇಶಗಳಲ್ಲಿ ಘೋಷಿಸಲಾಗಿದ್ದ 1,494 ಎಕರೆ 38 ಗುಂಟೆ ಭೂಮಿಯನ್ನು ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆಯ ತಾಣ ಎಂದು ಘೋಷಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ …
Read More »
Shaikh BigTv
October 17, 2024
Breaking News, ಹುಬ್ಬಳ್ಳಿ
ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಸಾವಿರಾರು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಬಿಆರ್‌ಟಿಎಸ್ ಯೋಜನೆಯ “ಚಿಗರಿ’ ಬಸ್ಸು ಮತ್ತೆ ಟ್ರೋಲ್‌ಗೆ ಒಳಗಾಗಿದೆ. ಈ ಬಸ್‌ನಲ್ಲಿ ಸರಿಯಾಗಿ ಎಸಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಆಗಾಗ ಕೇಳಿ ಬರುತ್ತಲೇ ಇತ್ತು. ಈಗ ಮಳೆಯಾದರೆ ಸಾಕು ಈ ಬಸ್‌ಗಳು ಸೋರಲು ಆರಂಭಿಸಿವೆ. ಬುಧವಾರ ಸುರಿದ ಮಳೆಯಿಂದಾಗಿ ಚಿಗರಿ ಬಷ್ಟೊಂದು ಸೋರುತ್ತಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಛತ್ರಿ ಹಿಡಿದು ಕುಳಿತು ಪ್ರಯಾಣಿಸಿದ್ದಾರೆ. ಸದ್ಯ …
Read More »
Shaikh BigTv
October 17, 2024
Breaking News, ಧಾರವಾಡ
ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿರುವ ನರಚನಹಳ್ಳ ಮಳೆ ಬಂದಾಗ ನೀರು ತುಂಬಿ ರಭಸದಿಂದ ಹರಿದು ಪ್ರವಾಹ ಸೃಷ್ಟಿ ಮಾಡುವ ಸಂದರ್ಭದಲ್ಲಿ ಬೆಣ್ಣೆ ಹಳ್ಳ ಹಾಗೂ ನರಚನಹಳ್ಳ ತುಂಬಿ ಹರಿಯುವ ವೇಳೆ ನರಚನಹಳ್ಳದ ನೀರು ತನ್ನ ಹರಿವಿನಲ್ಲಿ ಸೇರಿಸಿಕೊಳ್ಳದೆ ರೈತರ ಜಮೀನುಗಳಿಗೆ ಪ್ರತಿ ವರ್ಷವೂ ನುಗ್ಗಿ ಬೆಳೆಯನ್ನು ಹಾಳು ಮಾಡುತ್ತಿದೆ. ನರಚನಹಳ್ಳವನ್ನು ಕೂಡಲೇ ಹೂಳೆತ್ತುವ ಕಾರ್ಯವನ್ನು ಮಾಡಬೇಕು ಹಾಗೂ ಹಳ್ಳದ ನೀರು ನುಗ್ಗಿ ಅಕ್ಕಪಕ್ಕ ಜಮೀನಿನಲ್ಲಿ ಹಾಳಾಗಿರುವ ಬೆಳೆಗಳಿಗೆ ಪರಿಹಾರ …
Read More »
Shaikh BigTv
October 17, 2024
Breaking News, ಧಾರವಾಡ
ಧಾರವಾಡ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಜನ ಧಾರವಾಡದಲ್ಲಿ ಬೃಹತ್ ಹೋರಾಟ ನಡೆಸಿದರು. ಧಾರವಾಡದ ಕಲಾಭವನದಲ್ಲಿ ಜಮಾಯಿಸಿದ ಸಾವಿರಾರು ಜನ, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಆಗುತ್ತ ಬಂದಿದ್ದರೂ ಈ ಒಳ …
Read More »