BigTv News
October 16, 2024
Breaking News
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಕಾಲಿಕವಾಗಿ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಘೋಷಿಸಿ ರೈತರಿಗೆ ಬಲ ತುಂಬಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ಮಾತನಾಡಿ, ಮುಂಗಾರು, ಹಿಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಪ್ರಧಾನಿ ಮೋದಿ ಅವರು ಅನ್ನದಾತರಿಗೆ ಬೆಳಕು ತೋರಿದ್ದಾರೆ ಎಂದು ಬಣ್ಣಿಸಿದ್ದಾರೆ. 2025-26ಕ್ಕೆ ಹಿಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ …
Read More »
BigTv News
October 16, 2024
Breaking News, ದಾವಣಗೆರೆ
ದಾವಣಗೆರೆ: ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣೆಗೆ ಕಾಲಮಿತಿಯನ್ನು ನಿಗದಿಪಡಿಸಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, 21 ದಿನಗಳ ಒಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಪ್ರಮಾಣ ಪತ್ರ ನೀಡಬೇಕು ಎಂದು ಸೂಚನೆ ನೀಡಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೋಂದಣಿ ಪ್ರಕ್ರಿಯೆಯಲ್ಲಿ ಕೆಲ ಲೋಪಗಳು ಕಂಡುಬಂದಿವೆ ಮರಣ ದಿನಾಂಕ ಹಾಗೂ ನೋಂದಣಿ ಘಟಕವನ್ನು …
Read More »
BigTv News
October 16, 2024
Breaking News, ಕೊಪ್ಪಳ
ಕೊಪ್ಪಳ: ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳು ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿಗಳಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅತಿ ಹೆಚ್ಚು ಹಿಂದುಳಿದ ಜಾತಿಗಳ ಅಭಿವೃದ್ಧಿಯ ಉದ್ದೇಶದಿಂದಾಗಿ ಆಯಾ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಸೌಲಭ್ಯ ತಲುಪಲು ಒಳಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ಆಯಾ …
Read More »
BigTv News
October 16, 2024
Breaking News, ಯಾದಗಿರಿ
ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಬುಧವಾರ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 50 ಸಾವಿರ ಕ್ಯುಸೆಕ್ ನೀರು ಬರುತ್ತಿದ್ದು ಬಸವ ಸಾಗರ ಜಲಾಶಯದ 13 ಗೇಟ್ ತೆರೆದು 58 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಬಸವ ಸಾಗರ ಜಲಾಶಯಕ್ಕೆ ಇಂದು 50 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಒಳಹರಿವನ್ನು ಗಮನಿಸಿ ಕೃಷ್ಣಾನದಿಗೆ ನೀರುಬಿಡಲಾಗುತ್ತಿದೆ ಜಲಾಶಯದ ಒಳಹರಿವಿನ …
Read More »
BigTv News
October 16, 2024
Breaking News, ಕಲಬುರಗಿ
ಕಲಬುರಗಿ : ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಸರ್ಕಾರಿ ಹಾಸ್ಟೆಲ್ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಕಲಬುರಗಿ ನಗರದ ಜಗತ್ ವೃತ್ತದಿಂದ ನೂರಾರು ಜನ ಹೊರ ಗುತ್ತಿಗೆ ಕಾರ್ಮಿಕರು ಪ್ರಾದೇಶಿಕ ಆಯುಕ್ತರ ಕಚೇರಿವರೆಗೆ ತೆರಳಿ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. …
Read More »
BigTv News
October 16, 2024
Breaking News
ನವದೆಹಲಿ: ಜಮ್ಮುಕಾಶ್ಮೀರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಪೋಸ್ಟ್ ಮಾಡಿದ್ದಾರೆ. ಜಮ್ಮುಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಅವರು ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿ ತರುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ. ಒಮರ್ ಅಬ್ದುಲ್ಲಾ ಅವರ ತಂದೆ …
Read More »
BigTv News
October 16, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರಿಯಲಿದ್ದು, ಅಕ್ಟೋಬರ್ 19ರವರೆಗೆ ಧಾರಾಕಾರ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ಇನ್ನೂ ನಾಲ್ಕು ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರವಾಗಿ ವರ್ಷಧಾರೆ ಸುರಿಯಲಿದೆ. ಈಗಾಗಲೇ ಮೀನು …
Read More »
BigTv News
October 16, 2024
Breaking News, ರಾಯಚೂರು
ಸಿಂಧನೂರು: ನಗರದ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಟೀನ್‍ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಬಡವರಿಗೆ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟಗಳು ದೊರೆಯಬೇಕೆಂಬುದು ಸರ್ಕಾರದ ಆಶಯವಾಗಿದೆ. ಇಂದಿರಾ ಕ್ಯಾಂಟೀನ್‍ನಲ್ಲಿ …
Read More »
BigTv News
October 16, 2024
Breaking News, ಉತ್ತರ ಪ್ರದೇಶ
ಅಯೋಧ್ಯೆ : ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರು ಇಂದು ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದರು. ಭೇಟಿ ಬಳಿಕ ಮಾತನಾಡಿದ ಅಜರ್ ಭಗವಾನ್ ರಾಮನ ಈ ಭವ್ಯವಾದ ದೇವಾಲಯಕ್ಕೆ ಭೇಟಿ ನೀಡಿರುವುದು ನನಗೆ ನಿಜವಾಗಿಯೂ ಗೌರವ ತಂದಿದೆ. ಪ್ರತಿ ದಿನವೂ ಬರುವ ಯಾತ್ರಿಕರ ಸಂಖ್ಯೆ ನೋಡಿದೆ ಇದು ಹಿಂದೂ ನಂಬಿಕೆಗೆ ಸ್ಥಳದ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ. ಭಾರತದ ಜನರಂತೆ ಇಸ್ರೇಲ್ ಜನರು ಪ್ರಾಚೀನ ಧರ್ಮ, …
Read More »
BigTv News
October 16, 2024
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದೆ ಈ ಬಿಟ್ಟೂಬಿಡದ ಜಿಟಿ ಜಿಟಿ ಮಳೆಯಿಂದ ಕೆಂಪು ಸುಂದರಿ ಟೊಮೆಟೊಗೆ ಕಂಟಕ ಎದುರಾಗಿದ್ದು ಟೊಮೇಟೊ ಬೆಲೆ ಕುಸಿದಿದೆ. ಮೂರು ದಿನಗಳ ಹಿಂದೆ 15 ಕೆಜಿಯ ಒಂದು ಬಾಕ್ಸ್ ಟೊಮೇಟೊ ಬೆಲೆ ಸಾವಿರ ರೂಪಾಯಿ ಇತ್ತು. ಆದರೆ ಈಗ ದಿಢೀರ್ ಬೆಲೆ ಕುಸಿದಿದ್ದು 15 ಕೆಜಿಯ ಒಂದು ಬಾಕ್ಸ್ ಟೊಮೇಟೊ ಬೆಲೆ 250 ರೂಪಾಯಿಗೆ ಆಗಿದೆ. ಮಳೆಯಿಂದ ಟೊಮೆಟೊ ಒಂದು ಕಡೆಯಿಂದ ಇನ್ನೊಂದು ಕಡೆ ಸಾಗಾಟವಾಗದ …
Read More »