Breaking News

Breaking News

ಶಾಸಕ ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ 3 ತಾಲೂಕು ಬಂದ್ ಮಾಡಿ ಪ್ರತಿಭಟನೆ; ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ತೀವ್ರಗೊಂಡಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು, ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರು ರಾಜೀನಾಮೆ ಮತ್ತು ಪ್ರತಿಭಟನೆಗಳ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ. ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಮೂರು ಬಾರಿ ಶಾಸಕರಾಗಿದ್ದರೂ ಅವರನ್ನು ಕಡೆಗಣಿಸಲಾಗಿದೆ …

Read More »

ರಾಜ್ಯದಲ್ಲಿ ಭೀಕರ ಘಟನೆ – ಕೆಮಿಕಲ್‌ ಸೋರಿಕೆಯಿಂದ ಮೂವರು ಸಾವು, ಇಬ್ಬರು ಗಂಭೀರ!

ಯಾದಗಿರಿ : ಕೆಮಿಕಲ್‌ ಸೋರಿಕೆಯಿಂದಾಗಿ ಕಾರ್ಖಾನೆಯ ಮೂವರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಯಾದಗಿರಿಯ ಕಡೇಚೂರ್‌ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಔಷಧಿಗಳನ್ನು ತಯಾರಿಸವು ಸಿಲ್‌ ಲ್ಯಾಬೋರೇಟರಿ ಕಾರ್ಖಾನೆಯಲ್ಲಿ ಈ ಅವಘಡ ನಡೆದಿದೆ. ಮೃತರ ಪೈಕಿ ಇಬ್ಬರು ಉತ್ತರ ಭಾರತದ ಮೂಲದವರಾಗಿದ್ದು, ಮತ್ತೊಬ್ಬರು ತೆಲಂಗಾಣ ಮೂಲದವರೆನ್ನಲಾಗಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆಯ ಹೊತ್ತಿನಲ್ಲಿ ಇದ್ದಕ್ಕಿದ್ದಂತೆಯೇ ರಾಸಾಯನಿಕ ಸೋರಿಕೆಯಾಗಿ, ಅಲ್ಲಿ ಕೆಲಸ ಮಾಡುತ್ತಿದ್ದ …

Read More »

ಪೊಲೀಸರೇ ಗಂಡನನ್ನು ಕೊಂದ್ರು, ಮಕ್ಕಳನ್ನ ಎದೆಗವಚಿಕೊಂಡು ವಾಹನದ ಹಿಂದೆ ಓಡಿದೆ: ಶೈನಾಜ್ ಬೇಗಂ

ವಿಜಯನಗರದಲ್ಲಿ ಲಾಕಪ್‌ನಲ್ಲಿ ಮೃತಪಟ್ಟ ಕಟ್ಟಡ ಕಾರ್ಮಿಕ ಖಲೀಲ್ ಸಾಬ್ ಅವರ ಪತ್ನಿ ಶೈನಾಜ್ ಬೇಗಂ, ತಮ್ಮ ಪತಿಯನ್ನು ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಕಾರಣ ಬುದ್ಧಿ ಹೇಳಲು ಠಾಣೆಗೆ ಕರೆತಂದಿದ್ದರೂ, ಇಬ್ಬರು ಪೊಲೀಸರು ಹಲ್ಲೆ ನಡೆಸಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಪತಿ ಠಾಣೆಯಲ್ಲೇ ಮೃತಪಟ್ಟಿದ್ದರೂ ಚಿಕಿತ್ಸೆಗಾಗಿ ಕರೆದೊಯ್ಯುವ ನೆಪದಲ್ಲಿ ವಾಹನದಲ್ಲಿ …

Read More »

ತಂದೆಯ ಕತ್ತು ಹಿಸುಕಿ ಕೊಲೆ: ಆರೋಪಿ ಪುತ್ರನ ಬಂಧನ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಣಿನಘಟ್ಟ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೇ ತಂದೆಯನ್ನು ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ನಡೆದಿದೆ. ಶಿವಾಗ ನಾಯ್ಕ (55) ಮೃತರಾಗಿದ್ದು, ಹಿರಿಯ ಪುತ್ರ ಮಂಜುನಾಥ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ನಿರ್ಮಾಣ ಹಾಗೂ ಮಕ್ಕಳ ಮದುವೆಗಾಗಿ ಮಾಡಿದ್ದ ಸಾಲದ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಕುಟುಂಬದವರು ಹಳೆಯ ಮನೆಯಲ್ಲಿ ವಾಸವಿದ್ದು, ಶಿವಾಗ ನಾಯ್ಕ ಹೊಸ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು …

Read More »

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ಮರದ ದಿಮ್ಮಿಗಳ ಸಮೇತ ವಾಹನ ವಶ; ಆರೋಪಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಸಕಲೇಶಪುರದಿಂದ ಮಂಗಳೂರಿಗೆ ಯಾವುದೇ ದಾಖಲೆಗಳಿಲ್ಲದೆ ಮರ ಸಾಗಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಮಠ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ ರೋಹಿತ್ ಎಸ್.ಎಲ್. ಅವರನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ವಾಹನ ಹಾಗೂ ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದ್ದು, …

Read More »

ಬೀದರ್‌: ನಾಲ್ವರು ಕಳ್ಳರ ಬಂಧನ, ₹2.75 ಲಕ್ಷ ಮೌಲ್ಯದ 55 ಸಿಲಿಂಡರ್‌ ಜಪ್ತಿ

ಬೀದರ್ ಜಿಲ್ಲೆಯ ಭಾಲ್ಕಿ ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಸಿಲಿಂಡರ್‌ ಕಳ್ಳರನ್ನು ಬಂಧಿಸಿ, ಅವರಿಂದ ₹2.75 ಲಕ್ಷ ಮೌಲ್ಯದ 55 ಗ್ಯಾಸ್‌ ಸಿಲಿಂಡರ್‌ ಹಾಗೂ ಕೃತ್ಯಕ್ಕೆ ಬಳಸಿದ್ದ ₹7 ಲಕ್ಷ ಮೌಲ್ಯದ ಕಾರನ್ನು ಜಪ್ತಿ ಮಾಡಿದ್ದಾರೆ. ಬಂಧಿತರು ಭಾಲ್ಕಿ ಹಾಗೂ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳ ಅಡುಗೆ ಕೋಣೆಗಳ ಬೀಗ ಒಡೆದು ಸಿಲಿಂಡರ್‌ ಕಳವು ಮಾಡುತ್ತಿದ್ದರು. ಕಳವು ಮಾಡಿದ ಸಿಲಿಂಡರ್‌ಗಳನ್ನು ಮಹಾರಾಷ್ಟ್ರದಲ್ಲಿ ಮಾರಾಟ ಮಾಡಲು ಯೋಜಿಸಿದ್ದ ವೇಳೆ ಬೀದರ್–ಉದಗೀರ್‌ ರಸ್ತೆಯ …

Read More »

ಮನೆ ಒಡತಿ ಸ್ನಾನ ಮಾಡುವ ದೃಶ್ಯ ಸೆರೆ: ಟೆಕಿ ಬಂಧನ

ಬೆಂಗಳೂರು ಬೇಗೂರುದಲ್ಲಿ ಮನೆ ಮಾಲಕಿ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ರಹಸ್ಯವಾಗಿ ಚಿತ್ರೀಕರಿಸಿದ ಆರೋಪದಡಿ ಸಾಫ್ಟ್‌ವೇರ್ ಉದ್ಯೋಗಿ ಮಂಜುನಾಥ್ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕಳೆದ ಐದು ವರ್ಷಗಳಿಂದ ಸಂತ್ರಸ್ತೆಯ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಎಂದು ತಿಳಿದುಬಂದಿದೆ. ಜುಲೈ 27ರಂದು ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಬಾತ್‌ರೂಮ್ ಕಿಟಕಿಯಲ್ಲಿ ಮೊಬೈಲ್ ಇಟ್ಟು ವಿಡಿಯೋ ಸೆರೆ ಹಿಡಿಯುತ್ತಿದ್ದಾಗ ಮಹಿಳೆ ಗಮನಿಸಿ ಕೂಗಿಕೊಂಡಿದ್ದಾರೆ. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ …

Read More »

ನಾಲ್ವರು ಇಂಜನೀಯರಿಂಗ್​ ವಿದ್ಯಾರ್ಥಿಗಳ ಬಂಧನ

ಉಡುಪಿಯ ಮಣಿಪಾಲದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆಗಸ್ಟ್ 2ರಂದು ರಾತ್ರಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಪವನಕುಮಾರ್ ಎಂಬ ಯುವಕನನ್ನು ಆರೋಪಿಗಳು ತಡೆದು ಮೆಟಲ್ ಪಂಚ್‌ನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಹಲ್ಲೆ ತಡೆಯಲು ಬಂದ ಸಹೋದರ ಹಾಗೂ …

Read More »

ಚಿಕ್ಕಮಗಳೂರು: ಐವರು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಕಾಫಿ ತೋಟದಲ್ಲಿ ನೆಲೆಸಿದ್ದ ಐವರು ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ.ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್, ಮಹಮದ್ ಹಸೀಬುಲ್ ಬಂಧಿತರು. ಜಿಲ್ಲೆಯಲ್ಲಿ ಎಸ್ಟೇಟ್‌ಗಳು, ರೆಸಾರ್ಟ್‌ ಮತ್ತು ಹೋಂಸ್ಟೇಗಳು ಹೆಚ್ಚು ಇರುವುದರಿಂದ ಕೆಲಸಕ್ಕೆ ಬಂದವರ ದಾಖಲೆಗಳನ್ನು ಪೊಲೀಸರು ಎಲ್ಲೆಡೆ ಪರಿಶೀಲಿಸುತ್ತಿದ್ದಾರೆ. ಬಣಕಲ್ ಠಾಣೆ ವ್ಯಾಪ್ತಿಯ ತೋಟವೊಂದರಲ್ಲಿ ದಾಖಲೆ ಸಂಗ್ರಹಿಸುವ ವೇಳೆ ಅಕ್ರಮ ವಲಸಿಗರು ಪತ್ತೆಯಾಗಿದ್ದಾರೆ. ‘ಅವರನ್ನು ವಿಚಾರಣೆ ಮಾಡಿದಾಗ ಬಾಂಗ್ಲಾ ದೇಶದ …

Read More »

ಹುಟ್ಟುಹಬ್ಬದ ಪಾರ್ಟಿಗೆ ಕರೆದು ಯುವತಿಯನ್ನು ಹತ್ಯೆ ಮಾಡಿದರಾ ? ಮಂಡ್ಯ ಕಾರು ಅಪಘಾತದ ಹಿಂದೆ ಅತ್ಯಾಚಾರ ಯತ್ನದ ಶಂಕೆ !

ಮಂಡ್ಯದಲ್ಲಿ ಹುಟ್ಟುಹಬ್ಬದ ಆಚರಣೆಗೆ ಸ್ನೇಹಿತರೊಂದಿಗೆ ತೆರಳಿದ್ದ ಯುವತಿ ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಆರಂಭದಲ್ಲಿ ರಸ್ತೆ ಅಪಘಾತ ಎಂದು ಹೇಳಲಾಗಿದ್ದರೂ, ಮೃತಳ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಮೃತ ಯುವತಿ ನವೀನಾ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿದ್ದ ವೇಳೆ ಅಪಘಾತ ಸಂಭವಿಸಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರಿನಲ್ಲಿದ್ದ ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕುಟುಂಬಸ್ಥರು, ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ …

Read More »