Shaikh BigTv
October 16, 2024
Breaking News, ಧಾರವಾಡ, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕರ್ನಾಟಕ ಸರ್ಕಾರದ ಅಧೀನದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿಂದು ವಡ್ಡರ್ಸೆ ರಘುರಾಮ ಶೆಟ್ಟಿಯವರ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿ ಹಾಗೂ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ಜೆ.ಅಬ್ಬಾಸ್ ಮುಲ್ಲಾ ಅವರಿಗೆ ಹಿರಿಯ ಪತ್ರಕರ್ತರ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ …
Read More »
Shaikh BigTv
October 16, 2024
Breaking News, ಧಾರವಾಡ
ಕುಂದಗೋಳ : ತಾಲೂಕಿನ ವಿವಿಧ ಭಾಗಗಳಲ್ಲಿ ಸುರಿದು ಧಾರಾಕಾರ ಮಳೆಯ ಪರಿಣಾಮ ಬೆಳೆ ಹಾನಿಯಾದ ಸ್ಥಳಗಳಿಗೆ ಇಂದು ಸಹಾಯಕ ಕೃಷಿ ಅಧಿಕಾರಿ ಅಂಬಿಕಾ ಮಹೇಂದ್ರಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡೇನಕಟ್ಟಿ ಸುತ್ತ ಮುತ್ತಲಿನ ಭಾಗಗಳಿಗೆ ಭೇಟಿ ನೀಡಿದ ಅಂಬಿಕಾ ಮಹೇಂದ್ರಕರ್ ರೈತ ಹೊಲಗಳಲ್ಲಿ ಅತಿವೃಷ್ಟಿ ಪರಿಣಾಮ ಹಾಳಾದ ಬೆಳೆಗಳನ್ನು ಪರಿಶೀಲನೆ ನಡೆಸಿ ಪರಿಹಾರಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳಿಗೆ ತಿಳಿಸ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ವೇಳೆ ಹಾಳಾದ ಬೆಳೆಯನ್ನು …
Read More »
BigTv News
October 16, 2024
Breaking News, ಮಹಾರಾಷ್ಟ್ರ
ಮುಂಬೈ: ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯಿಂದ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ …
Read More »
Shaikh BigTv
October 16, 2024
Breaking News, ಧಾರವಾಡ
ಧಾರವಾಡ: ಪ್ರಸಕ್ತ ಸಾಲಿನ ಮೈಸೂರು ದಸರಾ ಮಹೋತ್ಸದಲ್ಲಿ ಭಾಗವಹಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ ಸ್ತಬ್ಧಚಿತ್ರಕ್ಕೆ ರಾಜ್ಯಮಟ್ಟದ ದ್ವಿತೀಯ ಪ್ರಶಸ್ತಿ ಲಭಿಸಿದ್ದು, ಈ ದಸರಾ ಮಹೋತ್ಸವದ ಸ್ತಬ್ದಚಿತ್ರ ಉಪ ಸಮಿತಿ ಇಂದು ಫಲಿತಾಂಶ ಪ್ರಕಟಿಸಿದೆ. ಇಸ್ರೋ ಗಗನಯಾನದಲ್ಲಿ ಹಣ್ಣಿನ ನೋಣಗಳ ಕುರಿತು ಧಾರವಾಡ ಜಿಲ್ಲಾ ಪಂಚಾಯತಿಯಿಂದ ಸ್ತಬ್ದ ಚಿತ್ರ ರೂಪಿಸಲಾಗಿತ್ತು. ಅತ್ಯತ್ತಮ ಸ್ತಬ್ದಚಿತ್ರ ಆಯ್ಕೆಗಾಗಿನ ತಜ್ಞರ ಸಮಿತಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲ ಜಿಲ್ಲೆಗಳ ಸ್ತಬ್ಧಚಿತ್ರಗಳನ್ನು ಪರಿಶೀಲಿಸಿ, ವಿನೂತನವಾದ ಮತ್ತು ಹೊಸ …
Read More »
Shaikh BigTv
October 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪ್ರೀತಿಸಿ ಮದುವೆಯಾದ ಜೋಡಿಗೆ ಹುಡುಗಿ ಮನೆಯವರು ಜೀವ ಬೆದರಿಕೆ ಹಾಕಿದ್ದ, ಈ ಹಿನ್ನೆಲೆ ಜೋಡಿ ಇದೀಗ ಜೀವದ ಭಯಕ್ಕೆ ಮಾಧ್ಯಮದ ಮುಂದೆ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಮದುವೆಯಾದ ಜೋಡಿ ಇದೀಗ ರಕ್ಷಣೆ ಕೊಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಆನಂದ ದೊಡ್ಡಮನಿ (21) ಮೇಘಾನಾ(19) ಪ್ರೀತಿಸಿ ಮದುವೆಯಾದ ಜೋಡಿ.ಆನಂದ ಆಟೋ ಚಾಲಕರಾಗಿದ್ದು, ಯುವತಿ ಮೇಘಾನಾ ಕಾಲೇಜು ವಿದ್ಯಾರ್ಥಿನಿ.. ಇಬ್ಬರು ಕಳೆದ ಮೂರು ವರ್ಷದಿಂದ ಪ್ರೀತಿ ಮಾಡುತ್ತಿದ್ದಾರಂತೆ.. ಇತ್ತೀಚೆಗೆ ಇವರ …
Read More »
BigTv News
October 16, 2024
Breaking News, ವಿಜಯಪುರ
ವಿಜಯಪುರ: ನೀಟ್ ಪರೀಕ್ಷೆ ಉತ್ತೀರ್ಣರಾಗಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟ್ ಪಡೆದರೂ ಶುಲ್ಕ ಭರಿಸಲಾಗದೆ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಿರುವ ಸಂಪೂರ್ಣ ಆರ್ಥಿಕ ನೆರವು ನೀಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮುಂದಾಗಿದ್ದಾರೆ. ವಿಜಯಪುರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ತಿಕೋಟಾ ತಾಲ್ಲೂಕಿನ ಬಾಬಾನಗರದ ವಿಶಾಲ ರಾಯಗೊಂಡ ಕೋರೆಗಾಂವ, ಅರಕೇರಿಯ ಕರಣ ಪಂಡಿತ ಸಿಂಧೆ …
Read More »
BigTv News
October 15, 2024
Breaking News, ಬೆಳಗಾವಿ
ಸವದತ್ತಿ : ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು. ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು.
Read More »
BigTv News
October 15, 2024
Breaking News, ನವಲಗುಂದ
ನವಲಗುಂದ: ಬೆಣ್ಣೆಹಳ್ಳ ಹಾಗೂ ತುಪ್ಪರಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ರೈತರ ಭೂಮಿಯ ದಾಖಲೆಗಳನ್ನು ಕೃಷಿ ಇಲಾಖೆಗೆ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ತಹಶೀಲ್ದಾರ್ ಕಚೇರಿ ಶಿರಸ್ತೇದಾರ ಕೃಷ್ಣ ಅರೇರ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಗಂಗಪ್ಪ ಮನಮಿ ಮಾತನಾಡಿ, ಪ್ರವಾಹ ಹಾಗೂ ಅತಿವೃಷ್ಟಿಯಾದಾಗ 72 ಗಂಟೆಯ ಒಳಗೆ ದಾಖಲೆ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಕೃಷಿ ಇಲಾಖೆ ರೈತರಿಗೆ ಸಕಾಲದಲ್ಲಿ ತಿಳಿಸಿಲ್ಲ. ಅ.15 ಕೊನೆಯ ದಿನ ಎಂದು ಹೇಳಲಾಗಿದೆ. …
Read More »
BigTv News
October 15, 2024
Breaking News, ಕೊಡಗು
ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದಾರೆ ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ …
Read More »
BigTv News
October 15, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಿಂಗಾರು ಮಳೆಗೆ ಅಕ್ಷರಶಃ ನಲುಗಿದ್ದು, ನಿನ್ನೆ ಸೋಮವಾರದಿಂದ ಮಂಗಳವಾರ ಬೆಳಗ್ಗೆವರೆಗೆ ಸುರಿದ ಧಾರಾಕಾರ ಮಳೆಗೆ ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ. ಐಎಂಡಿ ಹೇಳುವ ಪ್ರಕಾರ, ರಾತ್ರಿಯಿಂದ ಈವರೆಗೆ ಬರೋಬ್ಬರಿ 16.2 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದ ವಿವಿಧಡೆ ಮಳೆಯಿಂದಾಗಿ ಅನೇಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಬಿಬಿಎಂಪಿ ಅಲರ್ಟ್ ಆಗಿದೆ. ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನ ಏರ್‌ಪೋರ್ಟ್ ಪ್ರದೇಶದಲ್ಲಿ 10.5 ಮಿ.ಮೀ. ಹಾಗೂ …
Read More »