Breaking News

Breaking News

ವಯನಾಡು ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ: ಕಾಂಗ್ರೆಸ್ ಘೋಷಣೆ

ನವದೆಹಲಿ: ಭಾರತದ ಚುನಾವಣಾ ಆಯೋಗವು (ಇಸಿಐ) ಇಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ಜತೆಗೆ 2 ಲೋಕಸಭಾ ಸ್ಥಾನಗಳ ಉಪಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ. 47 ವಿಧಾನಸಭಾ ಕ್ಷೇತ್ರಗಳೊಂದಿಗೆ ಉಪಚುನಾವಣೆ ನಡೆಸಲಾಗುವ ಏಕೈಕ ಲೋಕಸಭಾ ಕ್ಷೇತ್ರ ವಯನಾಡು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ …

Read More »

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವ ಭರವಸೆ ಇದೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬೇಡಿಕೆ, ಹೋರಾಟ ಹಲವು ವರ್ಷಗಳಿಂದ ಮುಂದುವರಿದಿದ್ದು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು ಈ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹಕಚೇರಿಯಲ್ಲಿ ಅ. 18ರಂದು ಸಭೆ ಕರೆದಿದ್ದಾರೆ, ಇದುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಬೇಡಿಕೆಗೆ ಸಮರ್ಪಕವಾಗಿ ಸ್ಪಂದಿಸಿಲ್ಲ. ಅವರು 2 …

Read More »

ನವಿಲುತೀರ್ಥ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸವದತ್ತಿ: ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಜಲಾಶಯಗಳು, ಕೆರೆಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಹರ್ಷದ ಹೊನಲು ಮೂಡಿದೆ ಮಲಪ್ರಭಾ ಜಲಾಶಯದಲ್ಲಿ ರೈತರ ಅಗತ್ಯಕ್ಕೆ ತಕಷ್ಟು ನೀರು ಲಭ್ಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ …

Read More »

ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಸಿಎಂ ಸೂಚನೆ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಆದೇಶ ಹೊರಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಸಮಸ್ಯೆ ಕುರಿತು ಸಿಎಂ ಸಭೆ ನಡೆಸಿದರು. ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಟಿ ಸಮುದಾಯದ ಎಮ್‌ಎಲ್‌ಎಗಳು, ಸ್ವಾಮೀಜಿಗಳು ಸಮಸ್ಯೆ ಬಗ್ಗೆ ಮನವಿ ಮಾಡಿದ್ದರು. ವಾಲ್ಮೀಕಿ ನಿಗಮದ ಅನುದಾನವನ್ನು ಕಡಿತ ಮಾಡಬಾರದು ಎಂದು ಮನವಿ ಮಾಡಿದ್ದರು. ಎಸ್‌ಟಿ ಸಮುದಾಯದಲ್ಲಿ ಜಾತಿ ಪ್ರಮಾಣಪತ್ರವನ್ನು ಕೆಲವರು …

Read More »

1 ಕೋಟಿ ರೂ. ವೆಚ್ಚದ ಚಿಕ್ಕೇರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

ಹಾನಗಲ್: ತಾಲ್ಲೂಕಿನ ಚಿಕ್ಕೇರಿ ಹೊಸಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರಾಜ್ಯ ವಿಪತ್ತು ಉಪಶಮನ ನಿಧಿಯಡಿ ₹ 1ಕೋಟಿ ವೆಚ್ಚದ ಚಿಕ್ಕೇರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆರೆಯ ಮೂರು ತೂಬುಗಳನ್ನು ಹೊಸದಾಗಿ ನಿರ್ಮಿಸಿ, ಕೆರೆ ಕೋಡಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು. 200 ಮೀ. ಪಿಚ್ಚಿಂಗ್ ಹಾಗೂ ಡೊಂಬು ಬಿದ್ದಿರುವ ಜಾಗವನ್ನು ಪುನರ್ ನಿರ್ಮಿಸಿ ಕೆರೆಯನ್ನು ಸಮಗ್ರವಾಗಿ ಪುನಶ್ಚೇತನಗೊಳಿಸಲಾಗುವುದು ಕೃಷಿ …

Read More »

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಮುಳಬಾಗಿಲು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟ ಆಕಾಂಕ್ಷಿಗಳಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟಾಂಗ್ ನೀಡಿದರು. ಮುಳಬಾಗಿಲು ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಖಾರವಾಗಿ ಉತ್ತರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ. ರಾಮ್ ಪ್ರಸಾದ್, …

Read More »

ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಯಲ್ಲಿ ವಿಜಯಪುರದ ಸತ್ತಿಗೆ ಕುಣಿತಕ್ಕೆ ಪ್ರಥಮ ಬಹುಮಾನ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕಲಾತಂಡಗಳಿಗೆ ಬಹುಮಾನ ಘೋಷಿಸಲಾಗಿದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲ್ಲೂಕಿನ ಸಿದ್ದಾಪುರ (ಕಾರಿಕೊಳ್ಳ)ದ ಸಂಜೀತ ಸಿ.ಕೋತ ನೇತೃತ್ವದ ರೇವಣಸಿದ್ದೇಶ್ವರ ಯುವಕ ಕಲಾಸಂಘದ ಸತ್ತಿಗೆ ಕುಣಿತಕ್ಕೆ ಪ್ರಥಮ ಬಹುಮಾನ (₹ 15 ಸಾವಿರ) ದೊರೆತಿದೆ. ಯಾದಗಿರಿಯ ವಿಶ್ವಾಸಪುರ ತಾಂಡಾದ ಮನೋಹರ ಖೇಮು ಪವಾರ ಸಾರಥ್ಯದ ಲಂಬಾಣಿ ನೃತ್ಯ ಕಲಾ ತಂಡ, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಕ್ಯಾತಘಟ್ಟದ ಕೀರ್ತಿನಿ …

Read More »

ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಹಿಂದೂ ವಿರೋಧಿ ಸರ್ಕಾರ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಅಭಿವೃದ್ಧಿ ಶೂನ್ಯ ಸರ್ಕಾರ, ಭ್ರಷ್ಟ ಮುಖ್ಯಮಂತ್ರಿ ವಿರುದ್ಧ ಶೀಘ್ರದಲ್ಲೇ ರಾಷ್ಟ್ರಪತಿಗಳ ಭೇಟಿ ಮಾಡಿ ಭ್ರಷ್ಟ ಸರ್ಕಾರವನ್ನು ವಜಾಗೊಳಿಸಲು ಮನವಿ ಮಾಡುತ್ತೇವೆ ಎಂದರು. ಈ ಸರ್ಕಾರದಿಂದ ರಾಜ್ಯದ ರೈತರಿಗೆ, ಜನರಿಗೆ ಅನುಕೂಲವಾಗುತ್ತಿಲ್ಲ, ರಾಜ್ಯದ ಜನರ ಪಾಲಿಗೆ ಬದುಕಿದ್ದೂ …

Read More »

ಶಾಸಕ ಯತ್ನಾಳ ನೇತೃತ್ವದಲ್ಲಿ ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ. ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ …

Read More »

ಹಾವೇರಿಯಲ್ಲಿ ನರೇಗಾ ಯೋಜನೆಯ ಬಗ್ಗೆ ಗ್ರಾಮೀಣ ಜನತೆಗೆ ಜಾಗೃತಿ ಮೂಡಿಸಲು ರಥಯಾತ್ರೆಗೆ ಚಾಲನೆ

ಹಾವೇರಿ: ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಕಲ್ಪಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮಾಹಿತಿ ಹಾಗೂ ಆಯವ್ಯಯ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ರಥ ಯಾತ್ರೆ ರೂಪಿಸಲಾಗಿದೆ. ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನರೇಗಾ ಜಾಗೃತಿ ರಥಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಚಾಲನೆ ನೀಡಿ, ಜಾಗೃತಿಯ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಸಿಇಓ ಅಕ್ಷಯ್ ಶ್ರೀಧರ್ ಮಾತನಾಡಿ, ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ …

Read More »