Breaking News

Breaking News

ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್: ಪರಮೇಶ್ವರ ಅಚ್ಚರಿ ಹೇಳಿಕೆ

ಬೆಂಗಳೂರು: ಮುಡಾ ಹಗರಣ ಆರೋಪ ತೀವ್ರಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಸ್ ನೀಡಿದ್ದರು. ಅದರ ಬೆನ್ನಲ್ಲೇ ಕೆಐಎಡಿಬಿ ಭೂಮಿ ಹಂಚಿಕೆಯಲ್ಲಿಯೂ ಅಕ್ರಮದ ಆರೋಪ ಕೇಳಿಬಂದಿತ್ತು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್ ಮಾಡಿದ್ದು, ಪರಮೇಶ್ವರ್‌ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿನ ಮಾಧ್ಯಮಗಳ ಜೊತೆಗೆ ಮಾತನಾಡಿ, ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ …

Read More »

ಮಲೆನಾಡು ಭಾಗದಲ್ಲಿ ಹೆಚ್ಚಾದ ಮಂಗಗಳ ಹಾವಳಿ: ಹೈರಾಣಾದ ರೈತರು

ಸಾಗರ: ಬೆಳೆ ಹಾನಿ ಮಾಡುವ ಮಂಗಗಳನ್ನು ಹಿಡಿಯಲು ಮುಂದಾದರೆ ಅದು ವನ್ಯಜೀವಿ ಸಂರಕ್ಷಣೆ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ. ಆದ ನಷ್ಟಕ್ಕೆ ಕಾಯ್ದೆ ಪ್ರಕಾರವೇ ಬೆಳೆ ಪರಿಹಾರ ಕಲ್ಪಿಸಿ ಅಂದರೆ ಮಾತ್ರ ಅಧಿಕಾರಿಗಳಿಂದ ತೀವ್ರ ಮೌನ, ಅರಣ್ಯ ಇಲಾಖೆಯ ಈ ಇಬ್ಬಂದಿತನ ಮಲೆನಾಡಿನ ರೈತರನ್ನು ಹೈರಾಣಾಗಿಸಿದೆ. ಮಲೆನಾಡು ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಂಗ ಹಾಗೂ ಮುಸಿಯಾಗಳ ಹಾವಳಿ ವಿಪರೀತವಾಗಿದೆ. ಬೆಳೆ ಹಾನಿ ಮಾಡಿ ರೈತ ಸಮೂಹಕ್ಕೆ ತೊಂದರೆ ಕೊಡುವ ಜೊತೆಗೆ …

Read More »

ಸಾಲು ಸಾಲು ರಜೆ: ಬಂಡೀಪುರ ಸಫಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ಆಗಮನ

ಗುಂಡ್ಲುಪೇಟೆ: ನಾಡಹಬ್ಬ ದಸರಾ ಹಾಗೂ ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ಪ್ರವಾಸಿಗರು ಬಂಡಿಪುರಕ್ಕೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಸಫಾರಿ ಅವರಣ ತುಂಬಿ ತುಳುಕುತ್ತಿತ್ತು. ತಾಲ್ಲೂಕಿನಲ್ಲಿ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಫಾರಿಗೆ ಅವಕಾಶವಿದ್ದು …

Read More »

ಮಹಾರಾಷ್ಟ್ರ ರಾಜ್ಯ ಕೌಟಿಲ್ಯ ವಿಶ್ವವಿದ್ಯಾಲಯಕ್ಕೆ ರತನ್ ಟಾಟಾ ವಿವಿ ಎಂದು ಮರುನಾಮಕರಣ

ಮಂಬೈ : ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯವನ್ನು ಪದ್ಮವಿಭೂಷಣ ರತನ್ ಟಾಟಾ ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೌಶಲ್ಯ ಅಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಸೋಮವಾರ ತಿಳಿಸಿದ್ದಾರೆ . ಅಕ್ಟೋಬರ್ 9 ರಂದು ಮುಂಬೈನಲ್ಲಿ ಕೊನೆಯುಸಿರೆಳೆದ ದಿವಂಗತ ಭಾರತೀಯ ಐಕಾನ್ ಮತ್ತು ಕೈಗಾರಿಕೋದ್ಯಮಿ ರತನ್ ಟಾಟಾ ಅವರನ್ನು ಗೌರವಿಸಲು ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ. ಕೌಶಲ್ಯ ಅಭಿವೃದ್ಧಿ …

Read More »

ರೆಡ್ಡಿ ಸಹಕಾರ ಬ್ಯಾಂಕಿನ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಭಾಗಿ

ಧಾರವಾಡ: ಡಾ.ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಭಾನುವಾರ ರೆಡ್ಡಿ ಸಹಕಾರ ಬ್ಯಾಂಕಿನ ಶತಮಾನೋತ್ಸವ ಸಮಾರಂಭ ಜರುಗಿತು. ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ರಾಮಲಿಂಗಾ ರೆಡ್ಡಿ, ಆರ್.ಬಿ.ತಿಮ್ಮಾಪುರ, ಎಚ್‌.ಕೆ.ಪಾಟೀಲ, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಎನ್‌.ಎಚ್.ಕೋನರಡ್ಡಿ, ಪ್ರಕಾಶ ಕೋಳಿವಾಡ, ಪ್ರಸಾದ್‌ ಅಬ್ಬಯ್ಯ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಯಾವತ್ತೂ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿಲ್ಲ. ನನಗೆ ಸಹಕಾರಿ ಕ್ಷೇತ್ರದಲ್ಲಿ ಜ್ಞಾನ …

Read More »

ರಾಜ್ಯದ 1,426 ಕಿ.ಮೀ ರೈಲು ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಅಳವಡಿಕೆ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ 1,426 ಕಿ‌. ಮೀ. ರೈಲು ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್‌ ಅಳವಡಿಸಲಾಗುವುದು ಈಗಾಗಲೇ 127 ಕಿ.ಮೀ ಪೂರ್ಣಗೊಂಡಿದೆ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ರೈಲ್ವೆ ಪ್ರಯಾಣಿಕರ ವೇದಿಕೆಯಿಂದ ಹಮ್ಮಿಕೊಂಡಿದ್ದ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ 12 ಲಕ್ಷ ರೈಲ್ವೆ ನೌಕರರು ಕೆಲಸ ಮಾಡುತ್ತಿದ್ದಾರೆ. ಪ್ರಪಂಚದ ಸಾರಿಗೆ ವ್ಯವಸ್ಥೆಯಲ್ಲಿ ಭಾರತದ ರೈಲ್ವೆ 4ನೇ …

Read More »

ಬಳ್ಳಾರಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು. ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ …

Read More »

ಎಸ್ ಸಿ ಒ ಶೃಂಗಸಭೆ: ನಾಳೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ಭೇಟಿ

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಪಾಕಿಸ್ತಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಚೀನಾದ ಪ್ರಧಾನಿ ಲಿ ಕಿಯಾಂಗ್, ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಮತ್ತು ಜೈಶಂಕರ್ ಸೇರಿದಂತೆ ಹಿರಿಯ ಪ್ರಾದೇಶಿಕ ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬುಧವಾರ ನಡೆಯಲಿರುವ ಮುಖ್ಯ ಶೃಂಗಸಭೆಗೆ ಮುಂಚಿತವಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸಿರುವ ಸ್ವಾಗತ ಔತಣಕೂಟಕ್ಕೆ ವಿದೇಶಾಂಗ ಸಚಿವರು ಸಮಯಕ್ಕೆ ಸರಿಯಾಗಿ …

Read More »

ಶಿವಕುಮಾರ ಮಹಾಸ್ವಾಮೀಜಿಗೆ ಡಾಕ್ಟರೇಟ್ ಪದವಿ

ಅಣ್ಣಿಗೇರಿ: ಪಟ್ಟಣದ ದಾಸೋಹ ಮಠದ ಶ್ರೀಗಳಾದ ಶಿವಕುಮಾರ ಮಹಾಸ್ವಾಮಿಗಳು ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವೇದಾಂತ ವಿಭಾಗದಿಂದ ಶ್ರೀಮದ್ ಭಗವದ್ಗೀತಾ ಕೈವಲ್ಯಪದ್ಧತ್ಯೋಃ ತೌಲನಿಕ ಮಧ್ಯಯನಮ್ ವಿಷಯದ ಕುರಿತು ಪ್ರೌಢ ಪ್ರಭಂದವನ್ನು ಮಂಡಿಸಿ ಡಾಕ್ಟರೇಟ್ ಪದವಿ (ವಿದ್ಯಾವಾರಧಿ)ಯನ್ನು ಪಡೆದಿದ್ದಾರೆ. ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವೇದಾಂತ ವಿಭಾಗ ಸಹಾಯಕ ಪ್ರಾಧ್ಯಾಪಕರಾದ ಡಾ.ಶರತ್ ಚಂದ್ರ ಸ್ವಾಮಿ ಮಾರ್ಗದರ್ಶನ ನೀಡಿದ್ದಾರೆ ಎಂದು ದಾಸೋಹ ಮಠದ ನಿರಂತರ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

Read More »

ಮಹಾತ್ಮಾ ಗಾಂಧಿ ಪ್ರತಿಮೆಯ ಮಾಯವಾದ ಕನ್ನಡಕ

ಕಲಘಟಗಿ : ತಾಲ್ಲೂಕಿನ ಗಳಗಿ ಹುಲಕೊಪ್ಪ ಗ್ರಾಮದ ಗಾಂಧಿ ಸರ್ಕಲ್ ನಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಇರಿಸಲಾಗಿದೆ. ಆದರೆ, ಕಳೆದ ಎರಡು ತಿಂಗಳಿಂದಲೂ ಈ ಪ್ರತಿಮೆಗೆ ಹಾಕಲಾಗಿದ್ದ ಕನ್ನಡಕ “ಮಾಯ”ವಾಗಿದೆ! ಕನ್ನಡಕ ಇಲ್ಲದೇ ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಗಾಂಧಿ ಜಯಂತಿಯನ್ನು ಆಚರಿಸಿ ಮಹಾತ್ಮರಿಗೆ ಅವಮಾನಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲಾ ತಿಳಿದಿದ್ದರೂ ಈ ಬಗ್ಗೆ ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಕಂಡು ಕಾಣದಂತೆ ಕೂತಿದ್ದಾರೆ. …

Read More »