Breaking News

Breaking News

ತಿರುಪತಿ ಮಾದರಿಯಲ್ಲೇ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಳಗಾವಿ: ತಿರುಪತಿ ಮಾದರಿ ಅಧ್ಯಯನ ಮಾಡಿ ಅದೇ ಮಾದರಿಯಲ್ಲಿ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸವದತ್ತಿಯಲ್ಲಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ಅಧ್ಯಕತೆ ವಹಿಸಿ ಅವರು ಮಾತನಾಡಿದರು. ₹45 ಕೋಟಿ ಬ್ಯಾಂಕಿನಲ್ಲಿದ್ದು, ವಾರ್ಷಿಕ ಅಂದಾಜು ₹5 ಕೋಟಿ ಆದಾಯ ಬರುತ್ತಿದೆ. ಉತ್ತಮ ಸೌಲಭ್ಯ ಒದಗಿಸುವ …

Read More »

ರೈತರಿಗೆ ಸಂಕಷ್ಟ ತಂದ ಮಳೆರಾಯ

ಕಲಘಟಗಿ : ಕಲಘಟಗಿ ತಾಲ್ಲೂಕಿನ ರೈತರು ಹಲವು ವರ್ಷಗಳಿಂದ ತಮ್ಮ ಹೊಲಗಳಲ್ಲಿ ಕಬ್ಬು ಬೆಳೆಯುತ್ತಿದ್ದಾರೆ. ಕಳೆದ ವರ್ಷ ಮಳೆ ಕಡಿಮೆಯಾಗಿದ್ದರಿಂದ ಕಬ್ಬಿನ ಬೆಳೆ ಇಳುವರಿ ಬಾರದೆ ಇರುವುದರಿಂದ ರೈತ ಸಂಕಷ್ಟ ಎದುರಿಸಿದ್ದಾನೆ. ಈ ವರ್ಷ ಅದೇ ರೀತಿ ನಷ್ಟ ಅನುಭವಿಸಬಾರದು ಎಂದು ಬಹಳಷ್ಟು ರೈತರು ಕಬ್ಬುಗಳನ್ನು ತೆಗೆದು ಗೋವಿನ ಜೋಳ ಬಿತ್ತನೆ ಮಾಡಿದ್ದಾರೆ. ಆದರೆ ರೈತನ ದುರದೃಷ್ಟಕ್ಕೆ ಈ ವರ್ಷ ಹೆಚ್ಚು ಮಳೆ ಆಗಿದ್ದು ಹೊಲಗಳಲ್ಲಿ ನೀರು ನಿಂತು ಗೋವಿನ …

Read More »

ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಕುರಿತು ಕೇಂದ್ರದಿಂದ ಆದೇಶ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಬೇಡಿಕೆಯಾದ 8ನೇ ವೇತನ ಆಯೋಗ ರಚನೆಗೆ ಕೇಂದ್ರದ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಇನ್ನೂ ಅಂತಿಮ ಒಪ್ಪಿಗೆ ನೀಡಿಲ್ಲ. ಆದರೆ, ತುಟ್ಟಿಭತ್ಯೆ (ಡಿಎ) ಹೆಚ್ಚಳದ ಕುರಿತು ಮುಂದಿನ ವಾರ ಘೋಷಣೆಯಾಗುವ ನಿರೀಕ್ಷೆ ಇದ್ದು, ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಬಂಪರ್ ಕೊಡುಗೆ ಸಿಗಲಿದೆ. ಶೇ 3ರಷ್ಟು ಡಿಎ ಹೆಚ್ಚಳವಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಡಿಎ ಹೆಚ್ಚಳದಿಂದ ಕೇಂದ್ರ ಸರ್ಕಾರಿ ನೌಕರರು, ನಿವೃತ್ತರು ಸೇರಿದಂತೆ ಸುಮಾರು …

Read More »

ಅವಾಚ್ಯ ಪದಗಳಿಂದ ನಿಂದನೆ: ಆತನಿಗೆ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಕಾರ್ಯಕರ್ತರು ಪಥಸಂಚಲನ ಮಾಡುತ್ತಿರುವ ವೇಳೆಯಲ್ಲಿ ಸಿಬಿಟಿ ಬಾಕಳೆ ಗಲ್ಲಿಯಲ್ಲಿ ಕಿಡಿಗೇಡಿಯೊಬ್ಬ ಅಡ್ಡ ನಿಂತು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಆಗ ಅಲ್ಲೇ ಇದ್ದ ಸಾರ್ವಜನಿಕರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇಂದು ಆರ್‌ಎಸ್‌ಎಸ್ ವತಿಯಿಂದ ಹುಬ್ಬಳ್ಳಿಯ ನೆಹರೂ ಮೈದಾನದಿಂದ ಪಥಸಂಚಲನ ಆರಂಭವಾಗಿದ್ದು, ಸಿಬಿಟಿ ಬಾಕಳೆ ಗಲ್ಲಿಯಲ್ಲಿ ಕಾರ್ಯಕರ್ತರು ಪಥಸಂಚಲನ ಮಾಡುತ್ತಿದ್ದಾಗ ಕಿಡಿಗೇಡಿಯೊಬ್ಬ ಅಡ್ಡ ನಿಂತಿದ್ದಾನೆ. ಆ ಸಂದರ್ಭ ಅಲ್ಲಿದ್ದ ಸಾರ್ವಜನಿಕರು ಸೈಡ್ ಗೆ ಬಾ ಎಂದು ಸೂಚಿಸಿದ್ದಾರೆ. ಆದರೆ, ಸೈಡ್ …

Read More »

ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಲೇವಡಿ

ಬೆಂಗಳೂರು: ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ರೀತಿ ಹಬ್ಬ ಎಂದು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯಸರ್ಕಾರದ ವಿರುದ್ದ ಲೇವಡಿ ಮಾಡಿದ್ದಾರೆ. ಹಿಂದೆಯೂ ಅನೇಕ ಗಲಭೆ ಕೇಸ್ ವಾಪಸ್ ಪಡೆದು ಅಧಿಕಾರ ಕಳೆದುಕೊಂಡರು. ಈಗಲೂ ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿದ್ಧಾರೆ. ಇಂತಹ ಬೆಳವಣಿಗೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ ಆಗಲಿದೆ ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ಕಿಡಿ ಕಾರಿದ್ದಾರೆ. ಮುಸ್ಲಿಂ ಮತೀಯ ಭಯೋತ್ಪಾದಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ …

Read More »

ರಾಜ್ಯದಲ್ಲಿ ಸೆಪ್ಟೆಂಬರ್ ನ ವಾಣಿಜ್ಯ ತೆರಿಗೆಗಳ ಸಂಗ್ರಹ 8429.23 ಕೋಟಿ ರೂ.

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ 8429.23 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ, ಇದು ಕಳೆದ ಐದು ತಿಂಗಳಲ್ಲಿ ಅಧಿಕವಾಗಿದೆ.ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ ಏಪ್ರಿಲ್‌ನಲ್ಲಿ 9662.80 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿತ್ತು ನಂತರ ಸೆಪ್ಟೆಂಬರ್ ನಲ್ಲಿ ಮಾತ್ರ 8 ಸಾವಿರ ಕೋಟಿ ರೂ.ಗಿಂತ ಹೆಚ್ಚು ಸಂಗ್ರಹವಾಗಿದೆ. ಮೇನಿಂದ ಆಗಸ್ಟ್ ವರೆಗೆ ಯಾವ ತಿಂಗಳಲ್ಲೂ ವಾಣಿಜ್ಯ ತೆರಿಗೆ ಸಂಗ್ರಹ 8 ಸಾವಿರ ಕೋಟಿ ರೂ.ಗಿಂತ ಅಧಿಕವಾಗಿರಲಿಲ್ಲ. ಆಗಸ್ಟ್ ತಿಂಗಳ …

Read More »

ರೈತರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳು

ಬೆಂಗಳೂರು: ನಾಡಿನ ರೈತ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಭೂತಾಯಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಮಣ್ಣಿಂದ ಜೀವ, ಮಣ್ಣಿಂದ ಕಾಯ ಎಂದಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಕ್ಯೂಆರ್ ಕೋಡ್ ಬಳಸಿ ಕೃಷಿ ಉಪಕರಣಗಳ ವಿತರಣೆಯ ಕ್ರಮ ವಹಿಸಲಾಗಿದೆ. ಈ ಮೂಲಕ ಪಾರದರ್ಶಕತೆಯೊಂದಿಗೆ ನಿರ್ವಹಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭೂಸಾರ ನೂತನ ಮೊಬೈಲ್ ಆಪ್ ಬಳಸಿ 4.27 ಲಕ್ಷ ಮಣ್ಣು …

Read More »

ಬಟ್ಟೆ ತೊಳೆಯುವ ವೇಳೆ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ತಾಯಿ ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ತಾಯಿ ಹಾಗೂ ಮಗಳು ಇಬ್ಬರೂ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ರಾಯಚೂರು ತಾಲೂಕಿನ ಬಿ.ಯದ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಸುಜಾತಾ (27 ಹಾಗೂ ಮಗಳು ಶ್ರಾವಣಿ (10) ಮೃತರು. ತಾಯಿ ಶವ ಪತ್ತೆಯಾಗಿದ್ದು, ಮಗಳ ಶವಕ್ಕಾಗಿ ಶೋಧ …

Read More »

ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ನಿರ್ಮಾಣ ಮಾಡಿದ ಮಹಿಳೆ

ಬೆಂಗಳೂರು: ಗೃಹಲಕ್ಷ್ಮೀ ಹಣದಿಂದ ಟಿವಿ, ಫ್ರಿಜ್‌ ತೆಗೆದುಕೊಂಡಿದ್ದು ಸುದ್ದಿಯಾಗಿತ್ತು. ಇತ್ತೀಚೆಗೆ ಉತ್ತರ ಕರ್ನಾಟಕದ ಮಹಿಳೆಯೊಬ್ಬಳು ಇಡೀ ಊರಿಗೆ ಹೋಳಿಗೆ ಊಟವ್ನೂ ಹಾಕಿಸಿದ್ದರು. ಎರಡು ದಿನಗಳ ಹಿಂದೆ ಮಹಿಳೆಯೊಬ್ಬಳು ತನ್ನ ಮಗನಿಗೆ ಬೈಕ್‌ಅನ್ನು ಗೃಹಲಕ್ಷ್ಮೀ ಹಣದಲ್ಲಿ ಖರೀದಿ ಮಾಡಿದ್ದರು. ಈಗ ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಈ …

Read More »

ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 5,267 ಹುದ್ದೆಗಳ ನೇಮಕಾತಿ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ …

Read More »