Breaking News

Breaking News

ಮೈಸೂರು ಗ್ರಾಮದಲ್ಲಿ ಅಕ್ರಮ ಗಾಂಜಾ ಮಾರಾಟ ತಡೆದ ಮುಸ್ಲಿಂ ಯುವಕರು!

ಮೈಸೂರು: ಅಕ್ರಮ ಗಾಂಜಾ ಮಾರಾಟವನ್ನು ಮುಸ್ಲಿಂ ಯುವಕರು ತಡೆದಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಬಳಿ ನಡೆದಿದೆ.ಸುಮಾರು 1 ಕೆಜಿಯಷ್ಟು ಗಾಂಜಾವನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದರು. ಗ್ರಾಮದ ಅಕ್ಕಪಕ್ಕದ ಹಾಗೂ ಹಾಡಿಗಳಲ್ಲಿ ಗಾಂಜಾ ಸಂಗ್ರಹವಾಗುತ್ತಿತ್ತು. ಅಕ್ಕಪಕ್ಕದ ಗ್ರಾಮದ ಯುವಕರಿಗೆ ವ್ಯಕ್ತಿ ಗಾಂಜಾ ಮಾರಾಟ ಮಾಡುತ್ತಿದ್ದರು. ಗಾಂಜಾ ಮಾರಾಟಗಾರರನ್ನು ಮುಸ್ಲಿಂ ಯುವಕರು ತಡೆದಿದ್ದಾರೆ. ಸುಮಾರು 1 ಕೆಜಿ ಗಾಂಜಾವನ್ನು ಪೊಲೀಸರಿಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ. ಯುವಕರು ಪ್ರಶ್ನಿಸುತ್ತಿದ್ದ ವೇಳೆ ಆರೋಪಿ ಸ್ಥಳದಿಂದ …

Read More »

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಬೂಟ್ ಕಾಲಲ್ಲಿ ಒದ್ದ ಕಂಡಕ್ಟರ್ – ಬಿಎಂಟಿಸಿ ಸಿಬ್ಬಂದಿ ವರ್ತನೆಗೆ ಆಕ್ರೋಶ :

ಬೆಂಗಳೂರು : ಇಲ್ಲಿನ ನೆಲಮಂಗಲ ಟೋಲ್ ಬಳಿ ಬಿಎಂಟಿಸಿ ಬಸ್ ಸಿಬ್ಬಂದಿಯೊಬ್ಬರ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್ ಏರಲು ಯತ್ನಿಸಿದ್ದ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ತಳ್ಳಿದ ಘಟನೆ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ವೇಳೆ ಭಿಕ್ಷುಕ ನೆಲಕ್ಕೆ ಬಿದ್ದರೂ ಸಿಬ್ಬಂದಿ ಯಾವುದೇ ಸ್ಪಂದನೆ ತೋರದೆ ಬಸ್‌ನೊಂದಿಗೆ ಸ್ಥಳದಿಂದ ತೆರಳಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೆ ಸಾಗುತ್ತಿದ್ದ ಬೈಕ್ ಸವಾರ ತನ್ನ …

Read More »

ವಿನಯ್​ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆ ಅಮಾನತು: ಶಾಸಕ ಸ್ಥಾನ ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ

ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಿಂದ ಶಾಸಕತ್ವ ಕಳೆದುಕೊಂಡಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರಾಜ್ಯ ವಿಧಾನಸಭೆ ಸಚಿವಾಲಯ ಮರುಸ್ಥಾಪಿಸಿದೆ. ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. 2016ರಲ್ಲಿ ನಡೆದ ಯೋಗೇಶ್‌ಗೌಡ ಕೊಲೆ ಪ್ರಕರಣದ ತನಿಖೆಯನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಗೆ ಜೀವಾವಧಿ …

Read More »

ಗಂಗೊಳ್ಳಿ: ಕೋಳಿ ಅಂಕ- ಪೊಲೀಸ್ ದಾಳಿ: ಇಬ್ಬರ ಬಂಧನ

ಗಂಗೊಳ್ಳಿ: ನಾಡ ಗ್ರಾಮದ ಕೋಣ್ಕಿಯ ನಂದ್ರೋಳಿ ಮನೆಯ ಸಾರ್ವಜನಿಕ ಜಾಗದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳದ ಮೇಲೆ ಗಂಗೊಳ್ಳಿ ಪೊಲೀಸರು ದಾಳಿ ನಡೆಸಿ ಸೋಮವಾರ (ಆ.03)ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಂಬದಕೋಣೆ ಗ್ರಾಮ ಹಳಗೇರಿ ನಿವಾಸಿ ಸುಧಾಕರ (61) ಮತ್ತು ಕಿರಿಮಜೇಶ್ವರ ನಿವಾಸಿ ಸುರೇಶ (40) ಬಂಧಿತ ಆರೋಪಿಗಳು. ದಾಳಿ ವೇಳೆ ಉಳಿದವರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ 10 ಕೋಳಿಗಳು, ಕೋಳಿಬಾಳು (ಕತ್ತಿ), 2350 ರೂ. ನಗದು ಹಾಗೂ 8 …

Read More »

ತನ್ನ ಗ್ಯಾರೇಜ್ ಬಳಿ ಮೂತ್ರ ವಿಸರ್ಜಿಸಿದ್ದಕ್ಕೆ ವ್ಯಕ್ತಿಯ ಹತ್ಯೆ: ಕಾರು ಮೆಕ್ಯಾನಿಕ್ ಬಂಧನ

ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ಯಾರೇಜ್‌ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡಿದ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮೆಕ್ಯಾನಿಕ್ ಮೊಹಮ್ಮದ್ ಯೂಸೆಫ್ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 28ರಂದು ರಾತ್ರಿ ಮದ್ಯ ಸೇವಿಸಿ ಮನೆಗೆ ತೆರಳುತ್ತಿದ್ದ ಕುಮಾರ್ (43) ಗ್ಯಾರೇಜ್ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಆರೋಪಿ ಜಗಳ ಆರಂಭಿಸಿದ್ದಾನೆ. ಬಳಿಕ ಬೈಕ್‌ನಿಂದ ಕುಮಾರ್ ಅವರನ್ನು ಕೆಳಗೆ ಎಳೆದಿದ್ದು, ಅವರು …

Read More »

ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಭೀಕರ ಕೊಲೆ: ಅಪ್ರಾಪ್ತರು ಸೇರಿ 8 ಮಂದಿಯ ಬಂಧನ

ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಹದಿಹರೆಯದವರೂ ಸೇರಿ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ಖಾಸಗಿ ಅಂಗಗಳನ್ನು ವಿರೂಪಗೊಳಿಸಲಾಗಿದ್ದು, ದೇಹದ ಹಲವು ಭಾಗಗಳಲ್ಲಿ ಚಿತ್ರಹಿಂಸೆಯ ಗಾಯದ ಗುರುತುಗಳು ಪತ್ತೆಯಾಗಿವೆ. ಕುಟುಂಬದವರೊಂದಿಗೆ ಔತಣಕೂಟಕ್ಕೆ ತೆರಳಿದ್ದ ಬಾಲಕಿ ರಾತ್ರಿ ಒಬ್ಬಳೇ ಮನೆಗೆ ಮರಳಿದ್ದಳು. ಬಳಿಕ ಮನೆಯವರು ಮನೆಗೆ ಬಂದಾಗ ಆಕೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪ್ರಕರಣ …

Read More »

ಲೈನ್ ಆಫ್ ಮಾಹಿತಿ ವಿವಾದ: ಮೆಸ್ಕಾಂ ಎ.ಇ. ವಿರುದ್ಧ ಹಲ್ಲೆ ಆರೋಪ; ಪೊಲೀಸರಿಗೆ ದೂರು

ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ಲೈನ್ ಆಫ್ ಮಾಡಿದ ಕುರಿತು ಮುಂಚಿತವಾಗಿ ಮಾಹಿತಿ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ (ಎ.ಇ.) ಒಬ್ಬರು ಆಪರೇಟರ್ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಗಾಯಗೊಂಡ ಆಪರೇಟರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. 33 ಕೆವಿ ವಿದ್ಯುತ್ ಮಾರ್ಗದ ಜಂಪರ್ ದುರಸ್ತಿಗಾಗಿ ಆಪರೇಟರ್ ರಾಘವ ಅವರು ಲೈನ್ ಆಫ್ ಮಾಡಿದ್ದು, ಈ ಬಗ್ಗೆ ವಿಭಾಗದ ಮುಖ್ಯಸ್ಥರಿಗೆ …

Read More »

ಹುಬ್ಬಳ್ಳಿ-ವಿಜಯಪುರ ಬಸ್ ಅಪಘಾತ! 9 ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬಸ್‌ ಚಾಲಕನ ನಿಯಂತ್ರಣ ತಪ್ಪಿ ನವಲಗುಂದ ತಾಲೂಕಿನ ಅಮರಗೋಳ ಕ್ರಾಸ್‌ ಬಳಿ ರಸ್ತೆ ಪಕ್ಕಕ್ಕೆ ಉರುಳಿ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 38 ಮಂದಿಯಲ್ಲಿ ನಿರ್ವಾಹಕ ಸೇರಿ 9 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕೆಎ28 ಎಫ್ 2263 ಸಂಖ್ಯೆಯ ಬಸ್ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. …

Read More »

ಬರೋಬ್ಬರಿ 5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಎಸಿ ಲೋಕಾಯುಕ್ತ ಬಲೆಗೆ!

ಮೈಸೂರು: ಜಮೀನಿನ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಎಸಿ ಕಾವ್ಯಾರಾಣಿ ಹಾಗೂ ಕಚೇರಿಯ ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಹೆಚ್.ಡಿ. ಕೋಟೆ ತಾಲೂಕಿನ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನವಿದ್ದರೂ ಕೆಲಸ …

Read More »

ಸಂಪುಟ ವಿಸ್ತರಣೆ ಬೆನ್ನಲ್ಲೆ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ರಾಜೀನಾಮೆ!

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ನಾಯಕರ ಬೆಂಬಲಿಗರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ ಬೆಂಬಲಿಗನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಸಚಿವ ಸ್ಥಾನ ಹಂಚಿಕೆ ಕುರಿತ ಅಸಮಾಧಾನ ಎಷ್ಟರ ಮಟ್ಟಿಗೆ …

Read More »