Breaking News

Breaking News

ಯುವಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವು

ಕಲಘಟಗಿ: ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ಬಳಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಪಾದಚಾರಿ ಯುವಕನಿಗೆ ಲಾರಿ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೆ ಯುವಕ ಮೃತಪಟ್ಟಿದ್ದಾನೆ. ಡಿಕ್ಕಿಯಾದ ರಭಸಕ್ಕೆ ದೇಹದ ಅಂಗಾಂಗಗಳು ಛಿದ್ರವಾಗಿವೆ. ಯುವಕನ ಹೃದಯ ಬೇರ್ಪಟ್ಟು ರಸ್ತೆ ಮೇಲೆ ಬಿದ್ದರೂ ಮಿಡಿಯುತ್ತಿರುವುದನ್ನು ಕಂಡ ಸ್ಥಳೀಯರು ಮಮ್ಮಲ ಮರುಗಿದ್ದಾರೆ. ಮೃತಪಟ್ಟಿರುವ ಯುವಕ ಸುಭಾಸ್ ಗುಂಡಪ್ಪನವರ ಎಂದು ತಿಳಿದು ಬಂದಿದೆ. ಈತ ಕಲಘಟಗಿ ತಾಲ್ಲೂಕಿನ ಸುಲಿಕಟ್ಟಿ ಗ್ರಾಮದವನು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ …

Read More »

ಹಳೇ ಹುಬ್ಬಳ್ಳಿ ಕೋಮು ಗಲಭೆ ಕುರಿತು ಪ್ರತಿಕ್ರಿಯಿಸಿದ ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಕೋಮು ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ಧಾರವಾಡಕ್ಕೆ ಆಗಮಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್ ವಜಾಗೊಳಿಸಬಾರದೆಂದು ಮನವಿ ಸಲ್ಲಿಸಲಾಗುತ್ತದೆ. ಅದಕ್ಕೂ ಬಗ್ಗದೆ ಇದ್ರೆ ಧಾರವಾಡ ಜಿಲ್ಲಾ ಬಿಜೆಪಿ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಮನವಿಗೆ ಮುಖ್ಯಮಂತ್ರಿಗಳು ಸ್ಪಂದನೆ ಮಾಡಿ ಈ ಕೇಸ್ ಹಿಂಪಡೆಯದೆ ಇದ್ರೆ ಇಲ್ಲಿಗೆ …

Read More »

ಮೈಸೂರು ದಸರಾ: ನಂದಿಪೂಜೆ ನೆರವೇರಿಸಿದ ಸಿಎಂ, ಡಿಸಿಎಂ

ಮೈಸೂರು: ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೂ ಮುನ್ನ ನಂದಿ ಪೂಜೆ ನೆರವೇರಿಸಲಾಯಿತು, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರು ಹಾಗೂ ಶಾಸಕರೊಂದಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ದಸರಾ ಹಬ್ಬದ ಭಾಗವಾಗಿ ಶನಿವಾರ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಬಾರಿ ಕರ್ನಾಟಕದಲ್ಲಿ ಮಳೆ ಉತ್ತಮವಾಗಿ ಜಲಾಶಯಗಳು ತುಂಬಿವೆ. ಉತ್ತಮ ಫಸಲು ಬಂದು ಜನರ ಜೀವನ ಇನ್ನಷ್ಟು ಸುಭಿಕ್ಷವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರು …

Read More »

ಕೊಪ್ಪಳದ ಹಿರೇಹಳ್ಳಕ್ಕೆ ಹಾರಿದ ಮಹಿಳೆಯ ರಕ್ಷಣೆ

ಕೊಪ್ಪಳ: ಹಿರೇಹಳ್ಳಕ್ಕೆ ಹಾರಿ ಮಹಿಳೆಯನ್ನು ಗ್ರಾಮದ ಯುವಕರು ರಕ್ಷಿಸಿರುವ ಘಟನೆ ನಗರದ ಭಾಗ್ಯನಗರದಲ್ಲಿ ಶನಿವಾರ ನಡೆದಿದೆ. ಹಳ್ಳಕ್ಕೆ ಹಾರಿದ ಮಹಿಳೆಯನ್ನು ತಾಲೂಕಿನ ಓಜನಹಳ್ಳಿ ಗ್ರಾಮದ ಭರಮಮ್ಮ ಮಡಿವಾಳರ್ ಎಂದು ಗುರುತಿಸಲಾಗಿದೆ. ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿರುವ ಭರಮಮ್ಮ ಕಳೆದೊಂದು ವಾರದಿಂದಲೂ ಭಾಗ್ಯನಗರ ಸಮೀಪದಲ್ಲಿ ಹಿರೇಹಳ್ಳದ ದಡದಲ್ಲಿರುವ ಕರಿಬಸವೇಶ್ವರ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದರು. ಶನಿವಾರ ತಡರಾತ್ರಿಯಿಂದಲೇ ಹಿರೇಹಳ್ಳ ಜಲಾಶಯದಿಂದ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದು, ಬೆಳಗ್ಗೆ ಹೊತ್ತಿಗೆ ಹಳ್ಳದ ಎರಡು ದಂಡೆಯ ಮೇಲೆ ನೀರು …

Read More »

50 ವರ್ಷಗಳ ಬಳಿಕ ಸಹರಾ ಮರಭೂಮಿಯಲ್ಲಿ ಭಾರೀ ಪ್ರವಾಹ

ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದ್ದು, ಅಚ್ಚರಿಯಾದರೂ ಇದು ಸತ್ಯವಾಗಿದೆ. ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ. ಇನ್ನು ಆಗ್ನೇಯ ಮೊರಾಕೊದಲ್ಲಿ ಕಳೆದ ಎರಡು …

Read More »

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಹರಿದ ನೆತ್ತರ

ಹುಬ್ಬಳ್ಳಿ: ಮಹಾನವಮಿ ಹಬ್ಬದ ದಿನವೇ ಯುವಕನ ಮೇಲೆ ಆತನ ಸ್ನೇಹಿತರೇ ಚಾಕುವಿನಿಂದ ಸಿಕ್ಕ ಸಿಕ್ಕಲ್ಲಿ ಇರಿದು ಕೊಲೆಗೈದ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ.ಕೊಲೆಯಾದ ಯುವಕನನ್ನು ಗೋಪನಕೊಪ್ಪದ 22 ವರ್ಷದ ಶಿವರಾಜ ಅಂತ ಗುರುತಿಸಲಾಗಿದೆ. ಗೋಪನಕೊಪ್ಪದ ಕರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಶಿವರಾಜ ಹಾಗೂ ಸಂದೀಪ್ ಎಂಬ ಯುವಕರ ಜೊತೆಗೆ ಜಗಳ ಮಾಡಿಕೊಂಡಿದ್ದ. ಈ ಜಗಳವು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಆಗ ಅಲ್ಲೇ ಇದ್ದ …

Read More »

ಎಸ್ಬಿಎಸ್ 3 ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ಮೋದಿ ಒಪ್ಪಿಗೆ

ನವದೆಹಲಿ: ಬಾಹ್ಯಾಕಾಶದಿಂದ ಕಣ್ಗಾವಲು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸ್ಪೇಸ್ ಬೇಸ್ಡ್ ಸರ್ವೈವಲೆನ್ಸ್ (ಎಸ್ಬಿಎಸ್-3) ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭದ್ರತೆ ಕುರಿತ ಸಂಪುಟ ಸಮಿತಿ ಒಪ್ಪಿಗೆ ನೀಡಿದೆ. ಈ ಯೋಜನೆಯಡಿ ಹಲವು ಬೇಹುಗಾರಿಕೆ ಉಪಗ್ರಹಗಳನ್ನು ಕೆಳ ಭೂ ಮತ್ತು ಭೌಗೋಳಿಕ ಕಕ್ಷೆಗೆ ಕಳುಹಿಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ನಡೆದ ಸಿಸಿಎಸ್ ಸಭೆಯಲ್ಲಿ ಎಸ್ಬಿಎಸ್-3 ಯೋಜನೆಯಡಿ 52 ಉಪಗ್ರಹಗಳನ್ನು ಉಡಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕೆ ಸುಮಾರು 27 …

Read More »

ಕೊಪ್ಪಳ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಹಿರೇಹಳ್ಳ ಡ್ಯಾಂ ಭರ್ತಿ

ಕೊಪ್ಪಳ: ಹಿಂದಿನ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು, ಕೆರೆಗಳು ತುಂಬಿವೆ. ಕೊಪ್ಪಳ ತಾಲ್ಲೂಕಿನ ಕಿನ್ನಾಳ ಬಳಿಯಿರುವ ಹಿರೇಹಳ್ಳ ಡ್ಯಾಂ ಭರ್ತಿಯಾಗಿದ್ದು ನೀರು ಹೊರಬಿಡಲಾಗಿದೆ. ಡ್ಯಾಂ ಒಟ್ಟು 1.67 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು ಈಗ 18,886 ಕ್ಯುಸೆಕ್‌ ನೀರು ಹೊರಬಿಡಲಾಗಿದೆ. ಸುತ್ತಲಿನ ಭತ್ತದ ಗದ್ದೆಗೆ ನೀರು ನುಗ್ಗಿದ್ದು ಬೆಳೆ ಹಾನಿಯಾಗಿದೆ. ಇರಕಲ್ಲಗಡ ಭಾಗದ ಕೆರೆಗಳು ಭರ್ತಿಯಾಗಿವೆ.

Read More »

ಶಿವಮೊಗ್ಗದಲ್ಲಿ ಭಾರೀ ಮಳೆ: ನಷ್ಟದ ಹಾದಿ ಹಿಡಿದ ನೂರಾರು ಎಕರೆ ಬೆಳೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಅಡಿಕೆ ಮತ್ತು ಭತ್ತ ಬೆಳೆಯುವ ರೈತರಿಗೆ ಸಂಕಷ್ಟವನ್ನು ತಂದಿದೆ. ಭತ್ತದ ಗದ್ದೆಯಲ್ಲಿ ಕೀಟಬಾಧೆ ಕಾಣಿಸಿಕೊಂಡಿದ್ದು ನೂರಾರು ಎಕರೆ ಬೆಳೆ ನಷ್ಟದ ಹಾದಿಯತ್ತ ಸಾಗಿದೆ. ಭತ್ತದ ಬೆಳೆಯ ಕೀಟಬಾಧೆಯನ್ನು ಹೋಗಲಾಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಂಟಿ ಕೃಷಿ ನಿರ್ದೇಶಕರಾದ ಕಿರಣ್ ಕುಮಾರ್ ಎಂ. ರೈತರಿಗೆ ಸಲಹೆಗಳನ್ನು ನೀಡಿದ್ದಾರೆ. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಕನ್ನಂಗಿ ಪಂಚಾಯತಿ ಗರಗ ಕಿಕ್ಕೇರಿಯ ಭತ್ತದ ಗದ್ದೆಗಳಲ್ಲಿ ಕೀಟಬಾಧೆಯಿಂದ ನೂರಾರು …

Read More »

ದೇಶಾದ್ಯಂತ ವಿಜಯದಶಮಿ ಸಂಭ್ರಮ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯ

ಬೆಂಗಳೂರು: ಇಂದು (ಶನಿವಾರ) ದೇಶದಾದ್ಯಂತ ಸಂಭ್ರಮದ ವಿಜಯದಶಮಿ ಆಚರಿಸಲಾಗುತ್ತಿದೆ. ಸಡಗರದ ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ದೇಶದ ಜನತೆಗೆ ಶುಭಾಶಯ ತಿಳಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಿಜಯದಶಮಿಯ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಅನ್ಯಾಯದ …

Read More »