Breaking News

Breaking News

ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ : ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಕೆ

ಕುಂದಗೋಳ : ಭಾಗದ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೇವೆ ಒದಗಿಸಿದ್ದಕ್ಕೆ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಂಜುನಾಥ ಎಂಟೂವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದಾರೆ. ಕುಂದಗೋಳ ಗ್ರೇಡ್-2 ತಹಶೀಲ್ದಾರ್ ಹೆಚ್.ಎಸ್.ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಹಿಂದೆ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಮನ್ನಣೆ ನೀಡುವಂತೆ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ …

Read More »

ಮೈದುಂಬಿ ಹರಿಯುತ್ತಿರುವ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳ

ನವಲಗುಂದ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳ ಮೈದುಂಬಿ ಹರಿಯುತ್ತಿವೆ. ನಗರದಲ್ಲಿ ಬೆಣ್ಣೆಹಳ್ಳ ಮತ್ತು ತುಪ್ಪರಿಹಳ್ಳ ಸಂಗಮವಾಗುವದು. ಯಮನೂರು ಮತ್ತು ನರಗುಂದ ಮಾರ್ಗಗಳ ಮಧ್ಯ ಇರುವ ಸೇತುವೆಯ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿಗೆ ಆಗುತ್ತಿದ್ದು, ಅಕ್ಕ ಪಕ್ಕದ ಜಮೀನುಗಳು ಜಲಾವೃತಗೊಂಡಿವೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಳ್ಳದ ಪಕ್ಕದ ಜನರು ಮುಂಜಾಗ್ರತೆ ವಹಿಸಿ ಎಂಬ ಮುನ್ಸೂಚನೆ ನೀಡಿದ್ದಲ್ಲದೆ ಆಯಾ ತಾಲೂಕಿನಲ್ಲಿ ಸಹಾಯವಾಣಿ ಆರಂಭಿಸಿದ್ದಾರೆ. ಇನ್ನೂ ಸಾರ್ವಜನಿಕರು ಎಚ್ಚರಿಕೆ ವಹಿಸಿ …

Read More »

ಗೂಂಡಾಗಿರಿ ಮಾಡಿದವರ ಕೇಸನ್ನು ಈ ಸರ್ಕಾರ ವಾಪಸ್ ಪಡೆದಿದೆ : ಶೆಟ್ಟರ್ ವಾಗ್ದಾಳಿ

ಧಾರವಾಡ : ಯಾವ ಪ್ರಕರಣ ವಾಪಸ್ ಪಡೆಯಬೇಕು ಯಾವ ಪ್ರಕರಣ ವಾಪಸ್ ಪಡೆಯಬಾರದು ಎಂಬುದು ಸರ್ಕಾರಕ್ಕೆ ತಿಳಿಯಬೇಕಿತ್ತು. ಗೂಂಡಾಗಿರಿ ಮಾಡಿದವರ ಕೇಸನ್ನು ಈ ಸರ್ಕಾರ ವಾಪಸ್ ಪಡೆದಿದೆ ಎಂದು ಸಂಸದ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಕೇಸ್ ವಾಪಸ್ ಪಡೆಯುವುದು ಸಹಜ. ರೈತರ ಹೋರಾಟದ ಕೇಸ್‌ಗಳನ್ನು ವಾಪಸ್ …

Read More »

ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ : ಪ್ರಲ್ಲಾದ್ ಜೋಶಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ ಆರೋಪಿಗಳು ಅಮಾಯಕರು ಅಂತ ಜಮೀರ್ ಅಹ್ಮದ್ ಪತ್ರ ಬರೆದಿದ್ದರು. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ. ಕಾಂಗ್ರೆಸ್ ನವರಿಗೆ ಮತಾಂಧತೆಯ ಪಿತ್ತ ತಲೆಗೇರಿದೆ ಎಂದು ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕುರಿತು ಮಾತನಾಡಿದ ಅವರು, ಕೇಸ್ ತೆಗೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ. ನನಗೆ ಅಧಿಕೃತವಾಗಿ ಸಿಕ್ಕಿಲ್ಲ, …

Read More »

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆಹಳ್ಳ: ರಸ್ತೆ ಸಂಪರ್ಕ ಸ್ಥಗಿತ

ಗದಗ: ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದ್ದು ಗದಗ ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದ ಬಳಿ ಸೇತುವೆ ಜಲಾವೃತವಾಗಿದ್ದು ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಸೇತುವೆ ಜಲಾವೃತಗೊಂಡಿದ್ದು ರೋಣ ಹಾಗೂ ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ …

Read More »

ಕೇಂದ್ರ ಸರ್ಕಾರದಿಂದ ವಿವಿಧ ರಾಜ್ಯಗಳಿಗೆ ತೆರಿಗೆ ಪಾಲು ಹಂಚಿಕೆ

ನವದೆಹಲಿ: ಕೇಂದ್ರ ಸರ್ಕಾರ ತನಗೆ ಸಂದಾಯವಾಗಿ ಜಿಎಸ್​ಟಿ ತೆರಿಗೆಯಲ್ಲಿ 1,78,173 ಕೋಟಿ ರೂ ಮೊತ್ತವನ್ನು ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಹಬ್ಬದ ಸೀಸನ್ ಇರುವುದರಿಂದ ಹಾಗೂ ರಾಜ್ಯ ಸರ್ಕಾರಗಳು ಅಭಿವೃದ್ಧಿ ಯೋಜನೆಗಳಿಗೆ ವೆಚ್ಚ ಮಾಡಲು ನೆರವಾಗಲು ಕೇಂದ್ರ ಸರ್ಕಾರ ಮುಂಗಡವಾಗಿ ಒಂದು ಕಂತನ್ನು ಹೆಚ್ಚುವರಿಯಾಗಿ ನೀಡಿದೆ. ಇದರಿಂದಾಗಿ ಈ ಬಾರಿ ರಾಜ್ಯಗಳಿಗೆ ಸಿಕ್ಕ ತೆರಿಗೆ ಪಾಲು ಎರಡು ಪಟ್ಟು ಹೆಚ್ಚಿದೆ. ತೆರಿಗೆ ಹಂಚಿಕೆಯಲ್ಲಿ ಉತ್ತರಪ್ರದೇಶಕ್ಕೆ ಸಿಂಹಪಾಲು ಮುಂದುವರಿದಿದೆ. 1.78 ಲಕ್ಷ ಕೋಟಿ …

Read More »

ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಅನುಮೋದನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ. ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ …

Read More »

ಗ್ರಾ.ಪಂ ನೌಕರರಿಗೆ ಶೀಘ್ರವೇ ಬಡ್ತಿ ನೀಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆ ಪರಿಹರಿಸಿ ಬಡ್ತಿ ನೀಡಲಾಗುವುದು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಕ್ಲರ್ಕ್ ಮತ್ತು ಡಾಟಾ ಎಂಟ್ರಿ ಆಪರೇಟರ್ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ …

Read More »

ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ಸೂಚನೆ; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ವಾಯುಭಾರ ಕುಸಿತದಿಂದ ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ಸೂಚನೆ ಇದ್ದು, ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಿದ್ದಾರೆ. ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆಯ ಎಲ್ಲ ತಾಲ್ಲೂಕಿನ ಅಧಿಕಾರಿಗಳಿಗೆ ಪ್ರಭಾರ ಜಿಲ್ಲಾಧಿಕಾರಿಗಳಾಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ತಿಳಿಸಿದ್ದಾರೆ. …

Read More »

ರೈತನಿಗೆ ಸಂಕಷ್ಟ ತಂದ ಮಳೆ

ಅಳ್ಳಾವರ: ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದೆ ರೈತ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳ್ಳಾವರ ತಾಲೂಕಿನಾದ್ಯಂತ ವರ್ಷದ ಸರಾಸರಿಗಿಂತ ಈ ಬಾರಿ ತುಸು ಹೆಚ್ಚೇ ಮಳೆಯಾಗಿದೆ. ಭಾರೀ ಪ್ರಮಾಣದ ಮಳೆಗೆ ಬೆಳೆಗಳೆಲ್ಲ ಮಳೆ ನೀರಿಗೆ ಆಹುತಿಯಾಗಿವೆ. ಕಟಾವಿಗೆ ಬಂದ ಭತ್ತದ ಬೆಳೆ ಮೇಲೆಯೇ ನೀರು ಹರಿಯುತ್ತಿದ್ದು, ಭತ್ತದ ಬೆಳೆ ಸಂಪೂರ್ಣ ಹಾಳಾಗಿದೆ. ಇದರಿಂದ ಅಲ್ಪ ಸ್ವಲ್ಪ ಬಂದ ಬೆಳೆಯು ಕೈಗೆ …

Read More »