Breaking News

Breaking News

ಜಿ.ಎಸ್.ಪಾಟೀಲ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಕ್ತದಾನ ಶಿಬಿರ

ಕುಂದಗೋಳ : ಐಕ್ಯೂಎಸಿ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಮಿಡ್‌’ಟೌನ್ ಧಾರವಾಡದ ಸಹಯೋಗದೊಂದಿಗೆ ಕುಂದಗೋಳ ಪಟ್ಟಣದ ಜೆ.ಎಸ್‌.ಎಸ್ ವಿದ್ಯಾಪೀಠದ ಜಿ.ಎಸ್.ಪಾಟೀಲ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನೂ ಪ.ಪೂ.ಶಿವಾನಂದ ಮಹಾ ಸ್ವಾಮೀಜಿ ಹಾಗೂ ಕಲ್ಯಾಣಪುರಮಠದ ಬಸವಣ್ಣ ಅಜ್ಜ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರೊ.ಜೆ.ಎನ್. ಆರಿಕಟ್ಟಿ ರಕ್ತದಾನದ ಮಹತ್ವ ಪ್ರಯೋಜನ ಕುರಿತು ವಿದ್ಯಾರ್ಥಿಗಳಿಗೆ ಅರಿವು …

Read More »

ರೈತನಿಗೆ ಸಂಕಷ್ಟ ತಂದ ಮಳೆ

ಅಳ್ಳಾವರ: ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದೆ ರೈತ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳ್ಳಾವರ ತಾಲೂಕಿನಾದ್ಯಂತ ವರ್ಷದ ಸರಾಸರಿಗಿಂತ ಈ ಬಾರಿ ತುಸು ಹೆಚ್ಚೇ ಮಳೆಯಾಗಿದೆ. ಭಾರೀ ಪ್ರಮಾಣದ ಮಳೆಗೆ ಬೆಳೆಗಳೆಲ್ಲ ಮಳೆ ನೀರಿಗೆ ಆಹುತಿಯಾಗಿವೆ. ಕಟಾವಿಗೆ ಬಂದ ಭತ್ತದ ಬೆಳೆ ಮೇಲೆಯೇ ನೀರು ಹರಿಯುತ್ತಿದ್ದು, ಭತ್ತದ ಬೆಳೆ ಸಂಪೂರ್ಣ ಹಾಳಾಗಿದೆ. ಇದರಿಂದ ಅಲ್ಪ ಸ್ವಲ್ಪ ಬಂದ ಬೆಳೆಯು ಕೈಗೆ …

Read More »

ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಸಿಕಂದರಾಬಾದ್ – ವಾಸ್ಕೋ ನಡುವೆ ಸಂಚರಿಸುವ ರೈಲು, ದಿನಾಂಕ 09/10/2024 ರಿಂದ ಬಳ್ಳಾರಿ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದು, ವಾರದಲ್ಲಿ ಎರಡು ದಿನ ಸಂಚರಿಸುವ ಈ ರೈಲು ಪ್ರಯಾಣಿಕರಿಗೆ ಅತ್ಯಂತ ಪ್ರಯೋಜನಕಾರಿಯಾಗಲಿದೆ. ಇದರ ಜೊತೆಗೆ ಬೆಳಗಾವಿ – ಮಣಗೂರು (ಭದ್ರಾಚಲಂ) ನಡುವೆ ರೈಲು ಸಂಚಾರ ಒದಗಿಸಬೇಕೆಂಬ ಸಚಿವರ ಮನವಿಯ ಮೇರೆಗೆ ದಿನಾಂಕ 16/10/2024 ರಿಂದ ರೈಲು …

Read More »

ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವು ಮಾಡದಂತೆ ಶಾಂತಿಯುತ ಪ್ರತಿಭಟನೆ

ಕುಂದಗೋಳ: ಗುಡೇನಕಟ್ಟಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಯ ಸ್ಥಳದಲ್ಲಿ ಅಭಿಮಾನಿಗಳು ಬೀಡು ಬಿಟ್ಟಿದ್ದು, ಪ್ರತಿಷ್ಠಾಪಿಸಿದ ಮೂರ್ತಿ ತೆರವು ಮಾಡದಂತೆ ಶಾಂತಿಯುತ ಪ್ರತಿಭಟನೆ ಕೈಗೊಂಡಿದ್ದಾರೆ. ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಬುಧವಾರ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ರಾಜು ಮಾವರಕರ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಧಿಕಾರಿಗಳ ಆದೇಶಕ್ಕೆ ಅನುಗುಣವಾಗಿ ಕ್ರಮ …

Read More »

ಕಳಸಾ ಬಂಡೂರಿ ಯೋಜನೆಗೆ ತಕ್ಷಣವೇ ಅನುಮೋದನೆ ನೀಡಲು ಕೇಂದ್ರಕ್ಕೆ ಸರ್ಕಾರ ಆಗ್ರಹ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜತೆಗೆ, ವಿಳಂಬ ಮಾಡದೆ ಯೋಜನೆಗೆ ಅನುಮೋದನೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಯೋಜನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ. ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಗಿದೆ. …

Read More »

ಸಿಎಂ ಸಿದ್ದರಾಮಯ್ಯ ಅ.13 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಅಕ್ಟೋಬರ್ 13 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ, ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ ಧಾರವಾಡಕ್ಕೆ ಆಗಮಿಸಲಿದ್ದಾರೆ. ಧಾರವಾಡದಲ್ಲಿರುವ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಸಂಭ್ರಮ ಹಾಗೂ ಪ್ರಧಾನ ಕಚೇರಿ ನೂತನ ಕಟ್ಟಡದ ಉದ್ಘಾಟನೆ ಮತ್ತು ಎಫ್.ಟಿ.ನಲವಡಿ ಹಾಗೂ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲರ ಪುತ್ಥಳಿಗಳ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಅವರು ಸತ್ತೂರಿನಲ್ಲಿರುವ ಡಿ. …

Read More »

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಚಹಾ, ಭೋಜನದ ನೆಪದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್‌.ಸಿ.ಮಹದೇವಪ್ಪ, ಜಿ. ಪರಮೆಶ್ವರ್ ಅವರು ಗೌಪ್ಯವಾಗಿ ಸಭೆ ಸೇರಿ ಚರ್ಚಿಸಿರುವ ವಿಚಾರ ಸಭೆಯಲ್ಲಿ ಪ್ರಸ್ತಾವವಾಗಿದೆ. ಈ ವೇಳೆ ಮೂವರು ಸಚಿವರೂ, ಜೊತೆಯಾಗಿ ಊಟ ಮಾಡಿರುವುದನ್ನೇ ಮಾಧ್ಯಮಗಳು ಅಪಾರ್ಥ ಕಲ್ಪಿಸಿಕೊಂಡು …

Read More »

ಮುಸ್ಲಿಂರಿಗೂ ಒಳ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿ: ಸಿ.ಟಿ ರವಿ

ಚಿತ್ರದುರ್ಗ: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿ ಅವಲೋಕಿಸಿ ಮುಸ್ಲಿಮರಿಗೂ ಒಳ ಮೀಸಲಾತಿ ನೀಡಬೇಕು. ಆ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದರು. ಮುಸ್ಲಿಮರಲ್ಲಿ 48 ಉಪ ಜಾತಿಗಳಿವೆ. ಅವರಲ್ಲಿಯೂ ಬಡವರಿದ್ದಾರೆ. ಪರಿಶಿಷ್ಟ ಜಾತಿ ಅಷ್ಟೇ ಅಲ್ಲ, ಹಿಂದುಳಿದ ವರ್ಗದಲ್ಲೂ ಒಳಮೀಸಲು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಬಿಜೆಪಿ ಮೀಸಲಾತಿ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಜವಾಹರಲಾಲ್‌ …

Read More »

ಸಚಿವರ ನಿರ್ಧಾರದಿಂದ ಸುಖ್ಯಾಂತಗೊಂಡ ಗ್ರಾ.ಪಂ ನೌಕರರ ಮುಷ್ಕರ

ಬೆಂಗಳೂರು: ಕಳೆದ ಆರು ದಿನಗಳಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತೆಗೆದುಕೊಂಡ ನಿರ್ಧಾರಗಳಿಂದ ಸುಖಾಂತ್ಯವಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿದರು. ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ತಮ್ಮ …

Read More »

ಗವಿ ಸಿದ್ದೇಶ್ವರ ಸ್ವಾಮೀಜಿ ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್‌ ಠಾಣೆಗೆ ಭೇಟಿ

ಹುಬ್ಬಳ್ಳಿ: ಕೊಪ್ಪಳದ ಗವಿ ಸಿದ್ದೇಶ್ವರ ಸ್ವಾಮೀಜಿ ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಪೊಲೀಸ್ ಠಾಣೆಯ ಆವರಣದಲ್ಲಿ ಬೆಳೆದ ಉದ್ಯಾನವನದ ಮಾಹಿತಿಯನ್ನು ಇನ್ಸೆಕ್ಟರ್ ರಾಘವೇಂದ್ರ ಹಳ್ಳೂರ್ ಅವರಿಂದ ಪಡೆದರು. ಬೇರೆ ಕಾರ್ಯ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಕೊಪ್ಪಳದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ ಕಸಬಾಪೇಟ ಪೊಲೀಸ್‌ ಠಾಣೆಯ ಮುಂದೆ ಹೋಗುವಾಗ ಠಾಣೆಯ ಮುಂಭಾಗ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋದನ್ನು ನೋಡಿ ಪೊಲೀಸ್‌ ಠಾಣೆಗೆ ಭೇಟಿಯನ್ನು ನೀಡಿದರು. ಇದುವರೆಗೂ ಒಂದು ಬಾರಿಯೂ …

Read More »