Breaking News

Breaking News

ಕೈಗಾರಿಕೋದ್ಯಮಿ ರತನ್ ಟಾಟಾ ಅಂತಿಮ ನಮನ: ಮುಂಬೈ ಪೊಲೀಸ್ ಬ್ಯಾಂಡ್ ಗೌರವ ಸಮರ್ಪಣೆ

ಮುಂಬೈ: ದಂತಕಥೆ, ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ ಅವರ ಮನೆಯಿಂದ ಬಿಳಿ ಹೂವುಗಳಿಂದ ಅಲಂಕರಿಸಲ್ಪಟ್ಟ ಆಂಬ್ಯುಲೆನ್ಸ್ ನಲ್ಲಿ ದಕ್ಷಿಣ ಮುಂಬೈನ ಎನ್‌ಸಿಪಿಎಗೆ ಕೊಂಡೊಯ್ಯಲಾಯಿತು, ಅಲ್ಲಿ ಜನರಿಗೆ ಅಂತಿಮ ನಮನ ಸಲ್ಲಿಸಲು ಇಡಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ದಿಂದ ಒಂದೆರಡು ಕಿಲೋಮೀಟರ್ ದೂರದಲ್ಲಿರುವ ಟಾಟಾ ಅವರ ಮನೆಯಿಂದ ವಾಹನವು ಬರುವ ಮೊದಲು, ಮುಂಬೈ ಪೊಲೀಸ್ ಬ್ಯಾಂಡ್ ಅವರಿಗೆ ಗೌರವಾರ್ಥವಾಗಿ ಸಂಗೀತ ನುಡಿಸಿತು.

Read More »

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.38.75 ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 …

Read More »

ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರ ಅವಶ್ಯಕ: ಸಂಸದ ತುಕಾರಾಂ

ತೋರಣಗಲ್ಲು: ಗ್ರಾಮೀಣ ಪ್ರದೇಶದ ಬಡ ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರಗಳು ಅವಶ್ಯಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಸಂಸದ ಇ.ತುಕಾರಾಂ ಹೇಳಿದರು. ಗ್ರಾಮದ ನಾಡಕಾರ್ಯಾಲಯದ ಬಳಿ ಜಿಲ್ಲಾ ಖನಿಜ ನಿಧಿಯ ಅನುದಾನದಲ್ಲಿ ₹50 ಲಕ್ಷ ವೆಚ್ಚದ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದಲ್ಲಿ ಬಡ ಮಕ್ಕಳ ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗೆ …

Read More »

ಕೇಂದ್ರದಿಂದ 2028 ರವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳಾದ ಮಧ್ಯಾಹ್ನದ ಊಟ, ಉಚಿತ ಪಡಿತರ ಯೋಜನೆ, ಪಿಎಂ ಪೋಶಣ್​ ಯೋಜನೆಗಳಂತಹ ಎಲ್ಲಾ ಯೋಜನೆಗಳ ಅಡಿಯಲ್ಲಿ ಅಕ್ಕಿಯ ಪೂರೈಕೆಯನ್ನು ಜುಲೈ 2024 ರಿಂದ ಡಿಸೆಂಬರ್ 2028 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರಿಸಿದ್ದಾರೆ. ದೇಶದ ಬಡ ಜನರಿಗೆ ಮುಂದಿನ 4 ವರ್ಷಗಳವರೆಗೆ ಉಚಿತ ಆಹಾರ ಧಾನ್ಯಗಳು ಸಿಗಲಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಉಚಿತ …

Read More »

ಒಳಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲ ಸೇವಿಸಿ ಇಬ್ಬರು ಕಾರ್ಮಿಕರು ಸಾವು

ನವದೆಹಲಿ: ದೆಹಲಿಯ ಸರೋಜಿನಿ ನಗರ ಪ್ರದೇಶದಲ್ಲಿನ ಒಳಚರಂಡಿ ಮಾರ್ಗದಲ್ಲಿ ವಿಷಕಾರಿ ಅನಿಲವನ್ನು ಸೇವಿಸಿದ ಕನಿಷ್ಠ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸರೋಜಿನಿ ನಗರದಲ್ಲಿನ ನಿರ್ಮಾಣ ಸ್ಥಳದಲ್ಲಿ ಒಳಚರಂಡಿ ತೊಟ್ಟಿಯೊಳಗೆ ವಿಷಕಾರಿ ಅನಿಲವನ್ನು ಉಸಿರಾಡಿದ ನಂತರ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರು ತೊಟ್ಟಿಯೊಳಗೆ ಸ್ವಚ್ಛಗೊಳಿಸಲು ಹೋದಾಗ ಈ ಘಟನೆ ನಡೆದಿದೆ. ವಿಷಾನಿಲ ಸೇವಿಸಿ ಸಾವನ್ನಪ್ಪಿರುವ ಶಂಕೆ ಇದೆ ತೀವ್ರ ಅಸ್ವಸ್ಥ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇರೆ ಯಾರಾದರೂ ಪ್ರಯತ್ನ ನಡೆಸಿದ್ದರೆ ಅದು ಅ‍ವರ ವೈಯಕ್ತಿಕ ವಿಚಾರ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರು ಹಾಗೂ ಹೈಕಮಾಂಡ್‌ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಲ ನಾಯಕರು ಭೇಟಿಯಾಗಿದ್ದಾರೆ. ಅವರವರ ಪ್ರಯತ್ನ, ಆಸೆ …

Read More »

ಜ.28 ರಿಂದ ಉತ್ತರಾಖಂಡ್ ದಲ್ಲಿ ರಾಷ್ಟ್ರೀಯ ಕ್ರೀಡೆಗಳು ಆರಂಭ

ನವದೆಹಲಿ: ಮುಂದಿನ (38ನೇ ಆವೃತ್ತಿಯ) ರಾಷ್ಟ್ರೀಯ ಕ್ರೀಡೆಗಳು ಉತ್ತರಾಖಂಡದಲ್ಲಿ ಜನವರಿ 28 ರಿಂದ ಫೆಬ್ರುವರಿ 14ರವರೆಗೆ ನಡೆಯಲಿವೆ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ಪ್ರಕಟಿಸಿದೆ. ವೇಳಾಪಟ್ಟಿಯು ಮುಂದಿನ ತಿಂಗಳ ಸಾಮಾನ್ಯಸಭೆಯಲ್ಲಿ ಸ್ಥಿರೀಕರಣ ಪಡೆಯಬೇಕಾಗಿದೆ ಎಂದು ಐಒಎ ಹೇಳಿದೆ. ಸಂಸ್ಥೆಯ ಸಾಮಾನ್ಯ ಸಭೆ ಅಕ್ಟೋಬರ್ 25ರಂದು ನಿಗದಿಯಾಗಿದೆ. ರಾಷ್ಟ್ರೀಯ ಕ್ರೀಡೆಗಳನ್ನು ಉತ್ತರಾಖಂಡದಲ್ಲಿ ನಡೆಸಲು ಸಂತಸವಾಗುತ್ತಿದೆ. ಈ ರಾಜ್ಯವು ಈ ಪ್ರತಿಷ್ಠಿತ ಕ್ರೀಡೆಗಳ ಆತಿಥ್ಯ ವಹಿಸಲು ಉತ್ಸಾಹ ಮತ್ತು ಬದ್ಧತೆಯನ್ನು …

Read More »

ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಅನುದಾನ ನೀಡುವುದಾಗಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಭರವಸೆ

ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಸರ್ಕಾರಿ ಅನುದಾನದ ನೆರವಿನ ಅಡಿಯಲ್ಲಿ ಹೆಚ್ಚುವರಿ ಕೋರ್ಸ್‍ಗಳನ್ನು ಪ್ರಾರಂಭಿಸಲು ಸೂಕ್ತ ಸಹಕಾರ ನೀಡುವುದಾಗಿ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಭರವಸೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಚೇಂಬರ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‍ನ ಚೇರ್ಮೆನ್ ನಾಗಳ್ಳಿ ರಮೇಶ್ ಅವರು ಸಚಿವರ ಬೆಂಗಳೂರಿನ ಮನೆಯಲ್ಲಿ …

Read More »

ಅನಾಥ ರಸ್ತೆ ಎಂದು ಆರತಿ ಮಾಡಿ ವಿರೋಧಿಸಿ ಪ್ರತಿಭಟನೆ

ಹುಬ್ಬಳ್ಳಿ : ಧೂಳು ಮತ್ತು ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಇದನ್ನು ವಿರೋಧಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘದ ವತಿಯಿಂದ ಅನಾಥ ರಸ್ತೆ ಎಂದು ಆರತಿ ಮಾಡಿ, ಶವದ ಮೇಲೆ ಹೂಗುಚ್ಚ ಇಡುವ ಹಾಗೇ ವಿರೋಧಿಸಿದ್ದಾರೆ. ಈಗಾಗಲೇ ಚನ್ನಮ್ಮ ಸರ್ಕಾಲ್ ಸುತ್ತ ಫೈ ಓವ‌ರ್ ಕಾಮಗಾರಿ ಆರಂಭವಾಗಿದೆ. ಆದ್ರೆ ಕೆಳಗಿನ ರಸ್ತೆ ಗುಂಡಿಗಳಿಂದ ತುಂಬಿಕೊಂಡಿದ್ದು, ಅದೆಷ್ಟೋ ಜನರು ಬಿದ್ದು ಗಾಯಗೊಂಡಿದ್ದಾರೆ. ಅದಕ್ಕಾಗಿ ಆಟೋ ಚಾಲಕರ ಸಂಘ …

Read More »

ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ

ಕಲಘಟಗಿ : ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ. ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು.ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್ ಇಟ್ಟು ಕಾರ್ಯಚರಣೆ ನಡೆಸಿದ್ದರು. ಇಂದು ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ. ದಿನನಿತ್ಯ ಭಯದಿಂದ ಓಡಾಡುತ್ತಿದ್ದ ಗ್ರಾಮದ ಜನರು …

Read More »