BigTv News
October 9, 2024
Breaking News
ನವದೆಹಲಿ: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ – ಆರ್ ಎನ್ ಐ ಎಲ್(ವೈಜಾಗ್ ಸ್ಟೀಲ್) ಯನ್ನು ಪುನರುದ್ಧಾರ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ತಡರಾತ್ರಿ ಮಹತ್ವದ ಸಭೆ ನಡೆಸಿದರು. ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದ್ದು, ಈ ಸಭೆಯು ನವದೆಹಲಿಯ ನಾರ್ಥ್ ಬ್ಲಾಕ್ ನಲ್ಲಿರುವ …
Read More »
BigTv News
October 9, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಡ ಜನರ ಏಳಿಗೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಬೇಕು. …
Read More »
BigTv News
October 9, 2024
Breaking News, ಬೆಳಗಾವಿ
ಚನ್ನಮ್ಮನ ಕಿತ್ತೂರು: ಕಿತ್ತೂರು ಸಂಸ್ಥಾನದ ಇತಿಹಾಸ, ಪರಂಪರೆ ಉಳಿಸಲು ಮತ್ತು ಭವಿಷ್ಯದ ಪೀಳಿಗೆಗೆ ತಿಳಿಸಲು ನೆರವಾಗುವ ಕಾಮಗಾರಿಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹58 ಕೋಟಿ ಅನುದಾನ ನೀಡಿದ್ದಾರೆ ಎಂದು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಇಲ್ಲಿಯ ಕೋಟೆ ಆವರಣದಲ್ಲಿ ವಿವಿಧ ಕಾಮಗಾರಿಗಳ ಚಾಲನೆ ನೀಡಿ ಅವರು ಮಾತನಾಡಿದರು. ಕಿತ್ತೂರಿಗಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರ ಮಾಹಿತಿಯನ್ನು ಈಗಿನ ಪೀಳಿಗೆಗೆ ತಿಳಿಯುವ …
Read More »
BigTv News
October 9, 2024
Breaking News, ಕೊಪ್ಪಳ
ಕೊಪ್ಪಳ: ಮದ್ಯಪಾನ ಮುಕ್ತ ಮತ್ತು ಶುಚಿತ್ವ ಹೊಂದಿದ ಗ್ರಾಮ ಎಂದು ಇತ್ತೀಚೆಗೆ ಸುದ್ದಿಯಲ್ಲಿರುವ ಲೇಬಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮನೂರ ಗ್ರಾಮವು ಜಿಲ್ಲಾ ಪಂಚಾಯಿತಿ ದತ್ತು ಗ್ರಾಮವೆಂದು ಆಯ್ಕೆಯಾಗಿದೆ. ಬೆಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರನಾಳ ಗ್ರಾಮವನ್ನೂ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವಕಾಶ …
Read More »
BigTv News
October 9, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯತ್‍ಗಳ ನೌಕರರು ಹಲವು ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರನಿರತರಾಗಿದ್ದು, ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯತ್‍ಗಳ 11 ವೃಂದಗಳ ನೌಕರರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಬೃಹತ್ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ಥಗಿತಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಗಂಭೀರವಾಗಿ …
Read More »
BigTv News
October 9, 2024
Breaking News, ರಾಯಚೂರು
ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಉದ್ಭವಿಸಿರುವ ಶಿಕ್ಷಕರ ಕೊರತೆ ಬಗ್ಗೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರನ್ನು ನೇಮಕ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಸುಮಾರು 2100ಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿವೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸುಮಾರು 2.5 ಲಕ್ಷ ಬಡ ವಿದ್ಯಾರ್ಥಿಗಳು ಓದುತ್ತಿದ್ದಾರೆ. …
Read More »
BigTv News
October 9, 2024
Breaking News, ಬೆಂಗಳೂರು
ಬೆಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ ಆತಂಕ ಎದುರಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 75 ರಿಂದ 80 ರೂಪಾಯಿಗೆ ಮಾರಾಟವಾಗಿದೆ. ಮಹಾರಾಷ್ಟ್ರದಿಂದ 500ಕ್ಕೂ ಅಧಿಕ ಲಾರಿಗಳು ಸೇರಿ ಸುಮಾರು 980 ಲಾರಿಗಳು ಬೆಂಗಳೂರಿಗೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ …
Read More »
BigTv News
October 9, 2024
Breaking News, ಕೊಪ್ಪಳ
ಕಾರಟಗಿ: ಸಕಾಲದಲ್ಲಿ ಮಾಡಬೇಕಾದ ಕೆಲಸ ಮಾಡಿ ಜನರ ಅಲೆದಾಟ ತಪ್ಪಿಸಿ, ಜನರ ಸದಸ್ಯರ ಜತೆ ಅಸಹಕಾರ ನಿರ್ಲಕ್ಷ್ಯತನ ತೋರಿದರೆ ಸಹಿಸಲಾಗದು. ದಕ್ಷತೆಯಿಂದ ಕೆಲಸ ಮಾಡುವವರು ಇಲ್ಲಿರಿ, ಉಳಿದವರು ಜಾಗೆ ಖಾಲಿ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪಟ್ಟಣದ ಪುರಸಭೆ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ನಿವೇಶನದ ಫಾರ್ಮ್ 3, ಮುಟೇಷನ್ ಹಾಗೂ ಕಟ್ಟಡ ಪರವಾನಗಿಯನ್ನು ತ್ವರಿತವಾಗಿ, …
Read More »
BigTv News
October 9, 2024
Breaking News, ಕಾರವಾರ
ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್‌ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಸರ್ವೆಯರ್ ಹುದ್ದೆಗಳ ನೇಮಕಾತಿ ಕೂಡ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ. 1091 ಲೈಸೆನ್ಸ್ ಸರ್ವೆಯರ್ ಗಳ ನೇಮಕ ಮಾಡಲಾಗಿದೆ ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇವೆ. ಒಂದು ಸಾವಿರ ಗ್ರಾಮ ಲೆಕ್ಕಗರ ನೇಮಕಾತಿ …
Read More »
BigTv News
October 9, 2024
Breaking News, ರಾಯಚೂರು
ರಾಯಚೂರು : ಶಿವಮೊಗ್ಗ ಜಿಲ್ಲೆ ಬಳಿಯ ನವಲಿ ಎಂಬಲ್ಲಿ ಅಣೆಕಟ್ಟು ನಿರ್ಮಾಣ ಸಂಬಂಧ ಒಂದು ತಿಂಗಳ ಒಳಗಾಗಿ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ರೈತ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ತುಂಗಾಭದ್ರ ಅಣೆಕಟ್ಟಿಗೆ ಪರ್ಯಾಯವಾಗಿ ನವಲಿಯಲ್ಲಿ ಅಣೆಕಟ್ಟು ನಿರ್ಮಿಸಬೇಕೆಂದು ಒತ್ತಾಯವಿದೆ. ಅಲ್ಲದೆ, 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ …
Read More »