Breaking News

Breaking News

ಕೃಷಿ ಇಲಾಖೆ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಆಹ್ವಾನ

ಧಾರವಾಡ ; ಕ್ಷೇತ್ರದ ಜೀವನ ನಿರ್ಮಾಣ, ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್‌ಸೆಟ್ (ಗರಿಷ್ಠ 10 ಎಚ್‌ಪಿ), ಲಘು ನೀರಾವರಿ ಮತ್ತು ತಂತಿ ಬೇಲಿ ಘಟಕಗಳನ್ನು ಸ್ಥಾಪಿಸಲು ಬಯಸುವ ಅರ್ಹ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಅಕ್ಟೋಬರ್ 20, 2024 ರೊಳಗೆ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು …

Read More »

ಸಿಎಂ ವಿಚಾರ ಕುರಿತು ಸ್ಪಷ್ಟನೆ ನೀಡಿದ ಡಿಕೆಶಿ

ಹುಬ್ಬಳ್ಳಿ: ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಯಾವುದೇ ಚರ್ಚೆ ಇಲ್ಲ. ಯಾವುದೇ ಲಾಭಿ ಇಲ್ಲ, ಯಾವುದೇ ಘೋಷಣೆ ಇಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕೈ ಕೆಳಗೆ ನಾವು ಕೆಲಸ ಮಾಡುತ್ತಿದ್ದೇವೆ. ತಾವು ಮುಖ್ಯಮಂತ್ರಿ ಆಗುವ ಅವಕಾಶ ಇದೇನಾ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಇದಾರಲ್ಲರೀ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ರು.

Read More »

ಜಾತಿ ಜನಗಣತಿ ವಿಚಾರವಾಗಿ ಸ್ವಪಕ್ಷದಲ್ಲೇ ಅಪಸ್ವರ ಉಂಟಾಗಿದೆ : ಚೆಲುವರಾಯಸ್ವಾಮಿ

ಹುಬ್ಬಳ್ಳಿ: ಜಾತಿ ಜನಗಣತಿ ವಿಚಾರವಾಗಿ ಸ್ವಪಕ್ಷದಲ್ಲೇ ಅಪಸ್ವರ ಉಂಟಾಗಿದೆ.ಜಾತಿ ಗಣತಿ ವಿಚಾರದ ಬಗ್ಗೆ ಸಿಎಂ ಈಗಾಗಲೇ ಹೇಳಿದ್ದಾರೆ. ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಜಾತಿ ಜನಗಣತಿ ಹಳೆಯದಾಗಿದ್ದರಿಂದ ಕೆಲವೊಬ್ಬರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕೆಲವೊಬ್ಬರು ತಿದ್ದುಪಡಿ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಈ ಸಮಿತಿಯಲ್ಲಿ ಚರ್ಚೆಯಾದ ನಂತರ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.

Read More »

ಬಿಜೆಪಿಯವರು ಒಂದು ಬಾರಿಯೂ 113 ಸ್ಥಾನ ದಾಟಿಲ್ಲ : ಚೆಲುವರಾಯಸ್ವಾಮಿ

ಹುಬ್ಬಳ್ಳಿ: ಬಿಜೆಪಿಯವರು ಒಂದು ಬಾರಿಯೂ 113 ಸ್ಥಾನ ದಾಟಿಲ್ಲ. ಬಿಜೆಪಿಯವರು ಯಾವಾಗಾದ್ರೂ ಐದು ವರ್ಷ ಅಧಿಕಾರ ನಡೆಸಿರುವ ಉದಾಹರಣೆ ಇದೆಯಾ..? ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿರೋ ಸರ್ಕಾರ ಅಂದ್ರೆ ಅದು ಕಾಂಗ್ರೆಸ್‌ ಸರ್ಕಾರ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಬಿಜೆಪಿಯವರು ಸರಿಯಾಗಿ ಅಧಿಕಾರ ಮಾಡಲ್ಲ. ಅಧಿಕಾರ ಕಳೆದುಕೊಂಡಾಗ ಅಧಿಕಾರ ಬೇಕು ಅಂತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

Read More »

ಜೂಜಾಟದ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ : 7 ಜನ ಬಂಧನ

ಹುಬ್ಬಳ್ಳಿ: ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಜೂಜಾಟದ ಆಡುತ್ತಿದ್ದ ಅಡ್ಡೆ ಮೇಲೆ, ಹುಬ್ಬಳ್ಳಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪಿಎಸ್.ಐ ಚಾಮುಂಡಿ ನೇತೃತ್ವದಲ್ಲಿ ದಾಳಿ ನಡೆಸಿ ಎಳು ಜನರ ಜೊತೆಗೆ 19850 ರೂ.ನಗದು ಮತ್ತು ಇಸ್ಪೀಟು ಕಾರ್ಡ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಡಿಕೆಶಿ ನೇತೃತ್ವದಲ್ಲಿ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಹತ್ವದ ಸಭೆ

ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಹತ್ವದ ಸಭೆ ಮಾಡಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಗುಪ್ತ ಸಭೆಯನ್ನು ಮಾಡಲಾಗಿದೆಂದು ತಿಳಿದು ಬಂದಿದ್ದು, ಈ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮ್ಮದ್, ಶಾಸಕ ಎನ್.ಹೆಚ್. ಕೋನರೆಡ್ಡಿ, ಸೇರಿದಂತೆ ಕಾಂಗ್ರೆಸ್‌ ಮುಖಂಡರು ಭಾಗಿಯಾಗಿದ್ದರು.

Read More »

ಹರಿಯಾಣದಲ್ಲಿ ಬಿಜೆಪಿ ಗೆಲುವು : ಧಾರವಾಡದಲ್ಲಿ ವಿಜಯೋತ್ಸವ

ಧಾರವಾಡ: ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಧಾರವಾಡದಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಧಾರವಾಡದ ಸುಭಾಷ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

Read More »

18 ಕ್ಕೂ ಅಧಿಕ ಜನರನ್ನೂ ಕಚ್ಚಿದ ನಾಯಿ ಸಾವು

ಕುಂದಗೋಳ : ಸಂಶಿ ಗ್ರಾಮದಲ್ಲಿ 18 ಕ್ಕೂ ಅಧಿಕ ಜನರನ್ನೂ ಕಚ್ಚಿ ಜನ ಮನೆ ಬಿಟ್ಟು ಹೊರಬರಲು ಭಯ ಬೀಳುವಂತೆ ಮಾಡಿದ್ದ ಹುಚ್ಚು ನಾಯಿ ಕೊನೆಗೂ ಪ್ರಾಣ ಬಿಟ್ಟಿದೆ. ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಕಳೆದ ಭಾನುವಾರ ಬಿಡು ಬಿಟ್ಟಿದ್ದ ಹುಚ್ಚು ನಾಯಿ 18ಕ್ಕೂ ಅಧಿಕ ಜನರಿಗೆ ಕಚ್ಚಿ ಗಾಯ ಮಾಡಿತ್ತು. ಸ್ಥಳೀಯ ಗ್ರಾಮ ಪಂಚಾಯಿತಿ ಜನರಲ್ಲಿ ಜಾಗೃತಿ ಮೂಡಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ನಾಯಿಯನ್ನು ಪತ್ತೆ ಮಾಡಿ ಹಿಡಿಯಲು …

Read More »

ಹರಿಯಾಣ, ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶ : ಸಂತಸ ವ್ಯಕ್ತಪಡಿಸಿದ ಜೋಶಿ

ನವದೆಹಲಿ : ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವಕ್ಕೆ ನಿದರ್ಶನ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಣ್ಣಿಸಿದ್ದಾರೆ. ಜರ್ಮನಿ ಪ್ರವಾಸದಲ್ಲಿರುವ ಸಚಿವರು, ಚುನಾವಣಾ ಫಲಿತಾಂಶ ಕುರಿತು ಟ್ವಿಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಅದರಂತೆ ಜಮ್ಮು-ಕಾಶ್ಮೀರದಲ್ಲೂ ಬಿಜೆಪಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸಿದೆ ಎಂದು ಜೋಶಿ ಹೇಳಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಉಳಿಸಿಕೊಳ್ಳಲು …

Read More »

ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ದಿ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿಪಡಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತೀಯ ಅರಣ್ಯ ಸಮೀಕ್ಷೆ ವರದಿಯಂತೆ ಬೆಂಗಳೂರು ಭಾರತದಲ್ಲಿ ಅತಿ ಹೆಚ್ಚು ಭೂ ಪ್ರದೇಶ ಹೊಂದಿರುವ ಮೂರನೇ ನಗರವಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನಗರದಲ್ಲಿ ಸುಮಾರು 89 ಚದರ …

Read More »