Breaking News

Breaking News

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ತೀರ್ಮಾನವನ್ನು ಇಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾಯಿತು. ಈ ಬಾರಿ ದೀಪಾವಳಿ ಹಬ್ಬವೂ ನ.1ರಂದೇ ಇದೆ ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನ.3ರಂದು ಮೆರವಣಿಗೆ ಆಯೋಜಿಸಬೇಕು ಎಂದು ಯುವಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ರಮೇಶ ಸೊಂಟಕ್ಕಿ ಮತ್ತಿತರರು, ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. …

Read More »

ಗ್ರಾ.ಪಂ ಸಿಬ್ಬಂದಿಗಳ ವಿವಿಧ ಬೇಡಿಕೆಗಳ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಚಿವ ಶಿವಾನಂದ ಪಾಟೀಲ್

ವಿಜಯಪುರ: ವಿವಿಧ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತಿ ಪಿಡಿಒ ಸೇರಿದಂತೆ ಸಿಬ್ಬಂದಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಭೇಟಿ ನೀಡಿ ಪ್ರತಿಭಟನಾ ನಿರತರ ಬೇಡಿಕೆ ಆಲಿಸಿದರು. ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಸಮಸ್ಯೆಗಳು ಜೊತೆಗೆ ಸಾಮರಸ್ಯದಿಂದ …

Read More »

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಪ್ರಧಾನಿ ಮೋದಿ ಭೇಟಿಯಾದ ಕೇಂದ್ರ ಸಚಿವ ಸೋಮಣ್ಣ

ನವದೆಹಲಿ: ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸುದೀರ್ಘ 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ದಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ದಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಸೋಮಣ್ಣ ಅವರು ಪ್ರಧಾನಮಂತ್ರಿಗಳಿಗೆ ವಿವರಿಸಿದ್ದಾರೆ. ಬೆಂಗಳೂರು ಸಬ್ ಅರ್ಬನ್ ರೇಲ್ವೆ, …

Read More »

ಕರ್ನಾಟಕದಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿತ್ತು : ಡಿಕೆಶಿ

ಹುಬ್ಬಳ್ಳಿ: ಎಕ್ಸಿಟ್ ಪೋಲ್ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ.ಕರ್ನಾಟಕದಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ಹರಿಯಾಣ ಜಮ್ಮು ಕಾಶ್ಮೀರ ಚುನಾವಣೆ ಫಲಿತಾಂಶ ವಿಚಾರಕ್ಕೆ ಪ್ರತಿಕ್ರಿಯಿಸಿ,ಹರಿಯಾಣದಲ್ಲಿ ಯಾಕೆ ಹಿನ್ನಡೆಯಾಗಿದೆ ಪಕ್ಷದ ಒಳಗೆ ಚರ್ಚೆಯಾಗುತ್ತೆ ಹರಿಯಾಣ ದಿಲ್ಲಿಗೆ ಹತ್ತಿರವಿರುವ ರಾಜ್ಯ. ರಾಜಕೀಯವಾಗಿ ಸಾಕಷ್ಟು ಮಹತ್ವ ಇದೆ.‌ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು, ಆದ್ರೆ ಹುಸಿಯಾಗಿದೆ. ಜಮ್ಮುಕಾಶ್ಮೀರಲ್ಲಿ ಇಂಡಿಯಾ ಒಕ್ಕೂಟಕ್ಕೆ ಗೆಲುವಾಗಿದೆಬಹಳ ದಿನದ ನಂತರ …

Read More »

ಮುಖ್ಯಮಂತ್ರಿ ಸ್ಥಾನಕ್ಕೆ ಯಾರಿಂದಲೂ ಪೈಪೋಟಿ ನಡೆಯುತ್ತಿಲ್ಲ : ಚೆಲುವರಾಯಸ್ವಾಮಿ

ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ದಲಿತ ಸಿಎಂ ಚರ್ಚೆ ವಿಚಾರಕ್ಕೆ ಕೃಷಿ‌ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿ, ಈ‌ ಬಗ್ಗೆ ಯಾವುದೇ ಚರ್ಚೆ ಇಲ್ಲ.ಮುಖ್ಯಮಂತ್ರಿ ಸ್ಥಾನಕ್ಕೆ ಯಾರಿಂದಲೂ ಪೈಪೋಟಿ ನಡೆಯುತ್ತಿಲ್ಲ. ಎಐಸಿಸಿ, ಮಂತ್ರಿಮಂಡಲ ಈ ಬಗ್ಗೆ ಸ್ಪಷ್ಟತೆ ನೀಡಿದೆಸಿಎಂ ರಾಜೀನಾಮೆ ನೀಡುವಂತೆ ಎಐಸಿಸಿ‌ ಕೇಳಿಯೂ ಇಲ್ಲ ಎಂದರು. ಹುಬ್ಬಳ್ಖಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ಸಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ‌ಖಾಲಿ‌ ಇಲ್ಲ.ಇದೆಲ್ಲ ಕೇವಲ ಊಹಾಪೋಹವಷ್ಟೇ. ಬಿಜೆಪಿಯವರು ಒಂದು ಬಾರಿಯೂ 113 ಸ್ಥಾನ ದಾಟಿಲ್ಲ.ಬಿಜೆಪಿಯವರು ಯಾವಾಗಾದ್ರೂ ಐದು …

Read More »

ಮುಂದಿನ ಸಿಎಂ ಡಿಕೆಶಿ ಎಂದು ಘೋಷಣೆ ಕೂಗಿದ ಕಾರ್ಯಕರ್ತರು

ಹುಬ್ಬಳ್ಳಿ : ಸಿಂಧನೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕರ್ತರು ಮುಂದಿನ ಸಿಎಂ ಡಿಕೆಶಿ ಎಂದು ಘೋಷಣೆ ಕೂಗಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಡಿಕೆಶಿ ಆಗಮಿಸಿದ್ದರು.ಆವೇಳೆ ಮುಂದಿನ‌ ಸಿಎಂ ಡಿಕೆಶಿ ಎಂದು ಘೋಷಣೆ ಕೇಳಿಬಂದಿದೆ.ಕಾರು ಹತ್ತಲು ಹೊರಡುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಸುತ್ತ ಪಡಿಸಿದರ.ಕಾರು ಹತ್ತಿ ಎಲ್ಲರತ್ತ ಕೈ ಬೀಸಿ ಹೊರಟ್ಟಿದ್ದಾರೆ.

Read More »

ಸೇವಾ ವಿಮುಕ್ತಿ ನೌಕರರಿಗೆ ಬಾಕಿ ಹಣ ನೀಡುವಂತೆ ಪ್ರತಿಭಟನೆ

ಹುಬ್ಬಳ್ಳಿ: ತಮ್ಮ ಇಡೀ ಜೀವನವನ್ನು ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಾ ನಿವೃತ್ತಿ ಹೊಂದಿದವರು. ಆದ್ರೆ ಸಾರಿಗೆ ಸಂಸ್ಥೆ ಮಾತ್ರ ಇವರ ಸೇವಾ ವಿಮುಕ್ತಿ ನೌಕರರಿಗೆ ಬಾಕಿ ಹಣ ನೀಡದೆ ಗೋಳಾಡಿಸುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೇವೆ ಮಾಡಿ ನಿವೃತ್ತಿ ಹೊಂದಿದವರು. ಸೇವಾ ವಿಮುಕ್ತಿ ನೌಕರರಿಗೆ ಜನವರಿ 2020 ರಿಂದ 2023 ರವರೆಗಿನ ಅವಧಿಗೆ 15% ರಷ್ಟು ಹೆಚ್ಚಿನ ವ್ಯತ್ಯಾಸದ ಉಪದಾನ ಮತ್ತು ನಿವೃತ್ತಿಗಳಿಗೆ ರಜೆ ನಗದೀಕರಣ ಮೊತ್ತವನ್ನು …

Read More »

ದಸರಾಕ್ಕೆ ರಜೆ ಘೋಷಣೆ ಮಾಡದ ಶಾಲೆಗೆ ಮುತಾಲಿಕ್ ಭೇಟಿ

ಧಾರವಾಡ: ನಾಡ ಹಬ್ಬ ದಸರಾಕ್ಕೆ ಸರ್ಕಾರವೇ 15 ದಿನಗಳ ಕಾಲ ಶಾಲೆಗೆ ಅಧಿಕೃತ ರಜೆ ಘೋಷಣೆ ಮಾಡಿದೆ. ಆದರೆ, ಕೆಲ ಕ್ರಿಶ್ಚಿಯನ್ ಶಾಲೆಗಳು ಸರ್ಕಾರದ ಆದೇಶವನ್ನು ಮೀರಿ ಶಾಲೆಗಳನ್ನು ನಡೆಸುತ್ತಿವೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಧಾರವಾಡದ ಬಾಸೆಲ್ ಮಿಶನ್ ಶಾಲೆಗೆ ತೆರಳಿ ಶಾಲೆಯ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ನಾಡಹಬ್ಬ ದಸರಾಕ್ಕೆ ರಜೆ ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಕ್ರಿಶ್ಚಿಯನ್ …

Read More »

ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮ

ಕುಂದಗೋಳ : ಹೆಣ್ಣು ಮಗು ಹುಟ್ಟಿದ್ದೇ ಶಾಪ ಎಂಬ ಭಾವನೆ ತೊಡೆದು ಹೋಗಿದೆ ಹೆಣ್ಣು ಅನಾದಿಕಾಲದಿಂದಲೂ ಇಲ್ಲಿಯವರೆಗೆ ಪ್ರತಿ ರಂಗದಲ್ಲೂ ತನ್ನ ಔದಾರ್ಯ ತೋರಿದ್ದಾಳೆ ಎಂದು ಸಿವಿಲ್ ನ್ಯಾಯಾಧೀಶ ಗೌರವಾನ್ವಿತ ಶ್ರೀಮತಿ ಗಾಯತ್ರಿ ಅವರು ಹೇಳಿದರು. ಅವರು ಕುಂದಗೋಳ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಯೋಜನಾಧಿಕಾರಿಗಳ ಕಾರ್ಯಾಲಯದ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದ ಅಂಗವಾಗಿ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿಗೆ ಅಭಿನಂದನೆ …

Read More »

ದಸರಾ ಹಬ್ಬ : ರೈಲುಗಳ ತಾತ್ಕಾಲಿಕ ನಿಲುಗಡೆ ವಿವರ

ಹುಬ್ಬಳ್ಳಿ: ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು, ಮೈಸೂರು-ಬೆಳಗಾವಿ-ಮೈಸೂರು (ರೈಲು ಸಂಖ್ಯೆ 17301/17302) ಡೈಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ಈ ಕೆಳಗಿನ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಕ್ಟೋಬ‌ರ್ 9ರಿಂದ 13ರ ವರೆಗೆ ಮೈಸೂರಿನಿಂದ ಪ್ರಾರಂಭವಾಗುವ ಮೈಸೂರು-ಬೆಳಗಾವಿ (17301) ಡೈಲಿ ಎಕ್ಸ್‌ಪ್ರೆಸ್ ರೈಲು ಬೆಳಗುಳ, ಸಾಗರಕಟ್ಟೆ, ಹೊಸ ಅಗ್ರಹಾರ, ಅಕ್ಕಿಹೆಬ್ಬಾಳು, ಬೀರಹಳ್ಳಿ ಹಾಲ್ಟ್ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯಾಗಲಿದೆ. ಅಕ್ಟೋಬರ್ 11ರಂದು ಬೆಳಗಾವಿ ನಿಲ್ದಾಣದಿಂದ …

Read More »