BigTv News
October 7, 2024
Breaking News, ಬೆಂಗಳೂರು
ಬೆಂಗಳೂರು : ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ …
Read More »
BigTv News
October 7, 2024
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಪ್ರಮುಖ ತೋಟಗಾರಿಕಾ ಬೆಳೆ ಟೊಮೆಟೊಗೆ ಈಗ ಬಂಪರ್ ಬೆಲೆ ಬಂದಿದ್ದು, ಜೂನ್ ಜುಲೈನಲ್ಲಿ ಉತ್ತಮ ದರವಿತ್ತು ಆ ನಂತರ ದರ ಕುಸಿಯಿತು. ಈಗ ಮತ್ತೆ ಉತ್ತಮ ದರ ಬಂದಿದೆ ಇದರಿಂದ ಸಹಜವಾಗಿ ರೈತರ ಮುಖದಲ್ಲಿ ಸಂತಸ ಮೂಡಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಮಧ್ಯಮ ದರ್ಜೆಯ ಒಂದು ಕೆ.ಜಿ ಟೊಮೆಟೊ ಬೆಲೆ ₹ 80ರಿಂದ 85 ಇದೆ. ಗುಣಮಟ್ಟದ ಹಣ್ಣು ಹೊರ ಜಿಲ್ಲೆ ಮತ್ತು ರಾಜ್ಯಗಳಿಗೆ ರವಾನೆ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ದೇಸಿ ಹಾಗೂ ಸಾಂಪ್ರದಾಯಿಕ ತಳಿಗಳನ್ನು ಮುಂದಿನ ಪೀಳಿಗೆಗೆ ಕಾಪಾಡುವ ಉದ್ದೇಶದಿಂದ ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕಾಗಿ ಈ ವರ್ಷ ಐದು ಕೋಟಿ ಮೀಸಲಿಡಲಾಗಿದೆ ಹೈಬ್ರಿಡ್ ತಳಿಗಳ ಹಾವಳಿ ಹೆಚ್ಚಾಗುತ್ತಿದ್ದು, ಭೂಮಿ ಸತ್ವಕ್ಕೆ ರಾಸಾಯನಿಕ ತೊಡಕಾಗಿದೆ. ರೋಗ ನಿರೋಧಕ ಶಕ್ತಿ ಹೊಂದಿರುವ ದೇಸಿ ತಳಿಗಳು ಕಡಿಮೆ ನೀರಿನಲ್ಲಿಯೂ ಬೆಳೆಯುತ್ತವೆ. ಇದಕ್ಕಾಗಿಯೇ ದೇಸಿ ತಳಿಗಳ ಸಂಗ್ರಹ ಸಂರಕ್ಷಣೆ ಉದ್ದೇಶದಿಂದ ರೈತರಿಗೆ ತರಬೇತಿ, ಮಾರುಕಟ್ಟೆಗೆ ಆದ್ಯತೆ ನೀಡಲು …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ನಿಟ್ಟಿನಲ್ಲಿ 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳ ನೇಮಕಾತಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಾತನಾಡಿದ ಅವರು, 371ಜೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿ ಕುರಿತು ಸೂಚನೆ ನೀಡಿದ್ದಾರೆ. 2023ರಲ್ಲಿ ಹೊರಡಿಸಿರುವ ಸುತ್ತೋಲೆ ಅನುಸರಿಸುವ ಕುರಿತು ಕ್ರಮಕ್ಕೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ಜಾತಿ ಜನಗಣತಿ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗಿಂತ ಮೊದಲಿನಿಂದಲೂ ಹೇಳುತ್ತಾ ಬಂದಿದೆ, ರಾಜ್ಯದಲ್ಲಿ ನಡೆದಿರುವ ವರದಿ ಕುರಿತು ಇಲ್ಲಿನ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಜಾತಿ ಜನಗಣತಿಯಾಗಬೇಕು ಎಂಬ ನಿಲುವನ್ನು ಹೊಂದಿದೆ. ಈ ಬಗ್ಗೆ ಹಲವು ಬಾರಿ ಹೇಳಿಕೆಗಳನ್ನು ನೀಡಲಾಗಿದ್ದು, ರಾಜ್ಯಗಳಿಗೂ ತನ್ನ ಅಭಿಪ್ರಾಯವನ್ನು ರವಾನೆ ಮಾಡಲಾಗಿದೆ. ಕರ್ನಾಟಕ ಸರ್ಕಾರ …
Read More »
Shaikh BigTv
October 7, 2024
Breaking News, ಧಾರವಾಡ
ನವಲಗುಂದ: ಕಂದಾಯ ಇಲಾಖೆಯು ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ನೌಕರರೂ ಸಹ ಮಾತೃ ಹೃದಯದಿಂದ ಜನಸೇವೆಗೆ ಮುಂದಾಗಬೇಕು ಎಂದು ತಹಸೀಲ್ದಾರ ಸುಧೀರ ಸಾಹುಕಾರ ಕಿವಿಮಾತು ಹೇಳಿದರು. ಅವರು ತಹಸೀಲ್ದಾರ ಕಚೇರಿ ಸಭಾಂಗಣದಲ್ಲಿ ನೂತನವಾಗಿ ರಚನೆಯಾದ ಕಂದಾಯ ಇಲಾಖೆಯ ನೌಕರರ ಸಂಘ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳ ಆಯ್ಕೆ ಹಾಗೂ ಸನ್ಮಾನ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು ಕಂದಾಯ ಇಲಾಖೆ ಪ್ರತಿದಿನ …
Read More »
BigTv News
October 7, 2024
Breaking News
ನವದೆಹಲಿ: ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಮಾಲ್ಡೀವ್ಸ್ ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಇಂದು ಸಹಿ ಹಾಕಿದವು. ಈ ಒಪ್ಪಂದದಿಂದಾಗಿ ದ್ವೀಪಸಮೂಹ ರಾಷ್ಟ್ರ ಮಾಲ್ಡೀವ್ಸ್ ಗೆ ವಿದೇಶಿ ವಿನಿಮಯ ಮೀಸಲು ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದು ಸಾಧ್ಯವಾಗಲಿದೆ. ಸುಮಾರು 400 ಮಿಲಿಯನ್ ಡಾಲರ್ (3,000 ಕೋಟಿ ರೂ) ಗಾತ್ರದ ಒಪ್ಪಂದ ಇದಾಗಿದ್ದು, 12 ತಿಂಗಳಿನಿಂದ ಹದಗೆಟ್ಟಿದ್ದ ಭಾರತ- ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧ ಮುಂದಿನ ದಿನಗಳಲ್ಲಿ ಉತ್ತಮಗೊಳ್ಳುವ ನಿರೀಕ್ಷೆ ಇದೆ. ಕಳೆದ ವರ್ಷ ಮಾಲ್ಡೀವ್ಸ್ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು : ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ ಎಂದು …
Read More »
Shaikh BigTv
October 7, 2024
Breaking News, ಧಾರವಾಡ
ಧಾರವಾಡ ; ಚಿಕ್ಕ ಮಕ್ಕಳು, ವಿದ್ಯಾರ್ಥಿಗಳು ಯುವಕರು ತಂಬಾಕು ಉತ್ಪನ್ನಗಳಿಗೆ, ಬೀಡಿ ಸಿಗರೇಟ ಸೇವನೆಗೆ ಅಂಟಿಕೊಳ್ಳದಂತೆ ನಗರಗಳಲ್ಲಿ, ಗ್ರಾಮಗಳಲ್ಲಿ ಹೆಚ್ಚಿನ ಅರಿವು ಜಾಗೃತಿ ಕಾರ್ಯಕ್ರಮ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂಬಾಕು ಮುಕ್ತ …
Read More »
Shaikh BigTv
October 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ, ಧ್ವನಿಯಾಗಲು ಸಾಧುಸಂತರ ನೇತೃತ್ವದಲ್ಲಿ ನೂತನ ಸಂಘಟನೆಯನ್ನು ಹುಟ್ಟುಹಾಕಲು ಚಿಂತಿಸಲಾಗಿದೆ. ಅಕ್ಟೋಬರ್ 20ರಂದು ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಹಿಂದುಳಿದ ವರ್ಗದ ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೊಸ ಸಂಘಟನೆ ಹುಟ್ಟುಹಾಕಲಾಗಿದೆ. ಈ ಸಭೆಯಲ್ಲಿ 25 ಕ್ಕೂ ಹೆಚ್ಚು ಸಾಧು – ಸಂತರು, …
Read More »