BigTv News
October 7, 2024
Breaking News, ಧಾರವಾಡ
ಹುಬ್ಬಳ್ಳಿ: ಮಳೆಗಾಲ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ರವರ ಹಾಗೂ ಆರೋಗ್ಯಾಧಿಕಾರಿಗಳಾದ ಶ್ರೀಧರ ದಂಡಪ್ಪನವರ ಅವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ವಿವಿಧ ಪ್ರದೇಶದಲ್ಲಿ ಮಳೆ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಎಣ್ಣೆ ಸಿಂಪಡಿಸುವ ಕಾರ್ಯ ಇಂದು ಜರುಗಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಪದ್ಮಾ ತುಂಬಗಿ …
Read More »
BigTv News
October 7, 2024
Breaking News, ಧಾರವಾಡ
ನವಲಗುಂದ: ತಾಲೂಕಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣುಮಗುವಿಗೆ ಹೂವು ತೆಂಗಿನ ಸಸಿ ಹಾಗೂ ತಾಯಿಗೆ ಸಿಹಿ ನೀಡುವ ಮೂಲಕ ಮಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ತಹಶೀಲ್ದಾರ ಸುಧೀರ ಸಾಹುಕಾರ ಚಾಲನೆ ನೀಡಿದರು. ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿದಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಡಾವೋ’ ಇನ್ನೂ ಹೆಚ್ಚಾಗಿ ಅನುಷ್ಠಾನಕ್ಕೆ ಬರಬೇಕಿದೆ ಎಂದರು.
Read More »
Shaikh BigTv
October 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೇಶಪಾಂಡೆ ನಗರದ ಅಪರ್ಣಾ ಅಪಾರ್ಟೆಂಟ್ ನಲ್ಲಿನ ದೇವಸ್ಥಾನದಲ್ಲಿ ದತ್ತಾತ್ರೇಯ ದೇವರ ಮೂರ್ತಿಯನ್ನು ಭಗ್ನ ಗೊಳಿಸಿದ ಮಾಹಿತಿ ಬೆನ್ನಲ್ಲೇ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ತಡರಾತ್ರಿ ಈ ಹೀನ ಕೃತ್ಯ ನಡೆದಿದೆ. ದೇವಸ್ಥಾನದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿಯ ನಾಲ್ಕು ಕೈಗಳನ್ನು ಮುರಿದಿದ್ದು, ಇಂದು ಬೆಳಿಗ್ಗೆ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಆಗಮಿಸಿ ಸ್ಥಳದಲ್ಲಿ ಬಿದ್ದಿರುವ ರಾಡ್ ಹಾಗೂ ದೇವಸ್ಥಾನದ …
Read More »
Shaikh BigTv
October 7, 2024
Breaking News, ಧಾರವಾಡ
ಧಾರವಾಡ: ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಧಾರವಾಡದ ಗಾಂಧಿನಗರದ ಬಳಿ ಸಂಭವಿಸಿದೆ.ರಾಜಸ್ಥಾನ ಮೂಲದ ವಿಜಯದಾನ್ (52) ಎಂಬಾತನೇ ಈ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ಬಡಿಗತನ ಕೆಲಸ ಮಾಡುತ್ತಿದ್ದ ಈತ, ಗೋಪನಕೊಪ್ಪದಲ್ಲಿ ಮನೆ ಮಾಡಿಕೊಂಡು ವಾಸವಿದ್ದ. ಜೆಎಸ್‌ಎಸ್ ಕಾಲೇಜಿನಲ್ಲಿ ನಡೆಯುತ್ತಿದ್ದ ಕೆಲಸ ಮುಗಿಸಿಕೊಂಡು ಮರಳಿ ಮನೆ ಕೊಡೆ ಹೊರಟಿದ್ದ ಸಂದರ್ಭದಲ್ಲಿ ಜವರಾಯನ ರೂಪದಲ್ಲಿ ಬಂದ ಚಿಗರಿ ಬಸ್ಸು ಆತನ ಜೀವ ಬಲಿ ಪಡೆದಿದೆ. ಬಸ್ಸಿನ ಕೆಳಭಾಗದಲ್ಲಿ …
Read More »
BigTv News
October 7, 2024
Breaking News
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6000 ರೂ. ಧನಸಹಾಯ ನೀಡುವ ಮೂಲಕ …
Read More »
Shaikh BigTv
October 7, 2024
Breaking News, ಹುಬ್ಬಳ್ಳಿ
ಧಾರವಾಡ: ಭೂ ವಂಚನೆ ಸಂಬಂಧ ಈಗಾಗಲೇ ವಿಪಕ್ಷ ನಾಯಕ ಆರ್.ಅಶೋಕ್ ಕೋರ್ಟ್‌ನಿಂದ ಎಲ್ಲವೂ ಬಗೆಹರಿದಿದೆ ಎಂದಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕೇಸ್ ಜೊತೆ ಇನ್ನೊಬ್ಬರ ಕೇಸ್ ಹೋಲಿಕೆ ಮಾಡಬಾರದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಅಶೋಕ್ ಅವರು ತಮ್ಮ ಪ್ರಕರಣದ ಬಗ್ಗೆ ಸ್ಪಷ್ಟಿಕರಣ ಸಹ ಕೊಟ್ಟಿದ್ದಾರೆ. ಕೋರ್ಟ್‌ನಲ್ಲೇ ಅಶೋಕ ಅವರ ತಪ್ಪಿಲ್ಲ ಎಂದು ಸಾಬೀತಾಗಿದೆ. ಈಗ ಮುಡಾ ಹಗರಣ ಎದ್ದಿದೆ. ತನಿಖೆಗೆ ಆದೇಶ ಕೂಡ …
Read More »
Shaikh BigTv
October 7, 2024
Breaking News, ಧಾರವಾಡ
ಕಲಘಟಗಿ : ತಾಲೂಕಿನ ಧಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಟೋದಲ್ಲಿದ್ದ ಚಾಲಕನ ಮಗಳು ಹಾಗೂ ಮಗನಿಗೂ ಗಾಯಗಳಾಗಿವೆ. ಆಟೋ ಚಾಲಕ ಕಲಘಟಗಿ ಮೂಲದವನಾಗಿದ್ದು ಗಣೇಶ ಭಾಪಶೇಟ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಲ್ಲಿ ವಾಸವಾಗಿದ್ದ ಇವರು ಮಕ್ಕಳನ್ನು ಕರೆದುಕೊಂಡು ಕಲಘಟಗಿ ಬಂದು ಹೋಗುತ್ತಿರುವಾಗ ಘಟನೆ ಸಂಭವಿಸಿದೆ. ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆ ಸೃಜಿಸುವ ಬಗ್ಗೆ ಸರ್ಕಾರ ಸಮಿತಿ ರಚನೆ ಮಾಡಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿ.ವಿ. ಅಧ್ಯಯನ ಸಮಿತಿ ಸೋಮವಾರದಿಂದ ಆಯ್ದ 32 ಗ್ರಾಮ ಪಂಚಾಯಿತಿಗಳಿಗೆ ಸಮಿತಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದೆ. ಬೆಳಗಾವಿ, ಧಾರವಾಡ, ರಾಯಚೂರು, ಕೂಪ್ಪಳ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಮಂಡ್ಯ ಮತ್ತು ಕೂಡಗು ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಅಧ್ಯಯನ ಸಮಿತಿ ಪ್ರವಾಸ …
Read More »
BigTv News
October 7, 2024
Breaking News, ವಿಜಯಪುರ
ಇಂಡಿ: ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು, ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ರಾಜನಾಳ ಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳು ಚುನಾವಣೆಗಾಗಿ …
Read More »
BigTv News
October 7, 2024
Breaking News, ಬೆಂಗಳೂರು
ಬೆಂಗಳೂರು: ಅಧಿಕಾರಿಗಳಿಂದ ಸ್ಪಷ್ಟ ಭರವಸೆ ಸಿಗದ ಕಾರಣ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು, ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿದ್ದ ಮುಷ್ಕರವನ್ನು ಶನಿವಾರ ಸ್ಥಗಿತಗೊಳಿಸಿ, ರಾಜ್ಯದ 31 ಜಿಲ್ಲಾ ಪಂಚಾಯಿತಿ ಕಚೇರಿಗಳ ಎದುರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಜಿಟಿಜಿಟಿ ಮಳೆಯ ನಡುವೆಯೂ ಧರಣಿಯಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರ ಮತ್ತು ಸದಸ್ಯರನ್ನು ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕ ಎಂ.ಚಂದ್ರಪ್ಪ …
Read More »