Breaking News

Breaking News

ಭಾರತೀಯ ರೈಲ್ವೆಯನ್ನು ಖಾಸಗಿಕರಣಗೊಳಿಸುವುದಿಲ್ಲ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನಾಸಿಕ್: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆ ಒದಗಿಸಲು ಗಮನಹರಿಸುತ್ತೆವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. 400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಮೀವರೆಗೆ ಪ್ರಯಾಣ ಮಾಡಬಹುದು ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಗುರಿ ಎಂದು ಸಚಿವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೇಳಿದರು. ಮುಂದಿನ ಐದು ವರ್ಷಗಳಲ್ಲಿ ರೈಲ್ವೆ ಸಂಪೂರ್ಣ ಬದಲಾವಣೆಗೆ ಒಳಗಾಗಲಿದೆ. ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ರೈಲುಗಳು ಹಾಗೂ ಕವಚ ರೈಲು ರಕ್ಷಣೆ …

Read More »

ಶುಕ್ರ ಗ್ರಹದ ಅನ್ವೇಷಣೆಗೆ ಮುಂದಾದ ಇಸ್ರೋ

ಬೆಂಗಳೂರು: ಇಸ್ರೋ ಚಂದ್ರಯಾನ 3 ಉಡಾವಣೆ ಮಾಡಿ ವಿಶ್ವದಲ್ಲೇ ದಾಖಲೆ ಬರೆದಿತ್ತ, ಅದಾದ ನಂತರ ಸೂರ್ಯನ ಅನ್ವೇಷಣೆಗೆ ಆದಿತ್ಯ ಎಲ್ 1 ಉಡಾವಣೆ ಮಾಡಿ ಅದರಲ್ಲೂ ಸಕ್ಸಸ್ ಆಗಿದ್ದ ಇಸ್ರೋ ಇದೀಗ ಶುಕ್ರಗ್ರಹದ ಮೇಲೆ ಅನ್ವೇಷಣೆ ಮಾಡುವುದಕ್ಕೆ ಮುಂದಾಗಿದೆ. ಆ ಮೂಲಕ ಭಾರತದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ಸಜ್ಜಾಗಿದೆ 2028 ರ ವೇಳೆಗೆ ದಾಖಲೆ ಬರೆಯುವುದು ಖಚಿತವಾಗಿದೆ. ಇಸ್ರೋ ಶುಕ್ರಗ್ರಹದ ಅನ್ವೇಷಣೆ ಮುಂದಾಗಿದ್ದು, ಇದಕ್ಕೆ ಸರ್ಕಾರವು ಕೈ ಜೋಡಿಸಿದೆ. 1200 …

Read More »

ಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ತಲಾ ಆದಾಯ ದ್ವಿಗುಣವಾಗಲಿದೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಮುಂದಿನ ಐದು ವರ್ಷದಲ್ಲಿ ಭಾರತದಲ್ಲಿ ತಲಾ ಆದಾಯ ದ್ವಿಗುಣವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕಳೆದ 10 ವರ್ಷಗಳಿಂದ ಸರ್ಕಾರ ಕೈಗೊಂಡ ರಚನಾತ್ಮಕ ಸುಧಾರಣೆಗಳ ಫಲಿತಾಂಶ ಇದಾಗಿದೆ ಎಂದು ಅವರು ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಮಾತನಾಡಿದರು. ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ ತಲಾ ಆದಾಯ ದ್ವಿಗುಣವಾಗುತ್ತದೆ. ಮುಂಬರುವ ದಶಕಗಳಲ್ಲಿ ಸಾಮಾನ್ಯ ಜನರ ಜೀವನಮಟ್ಟ ತೀವ್ರ ಏರಿಕೆ ಕಾಣಲಿದೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಆರ್ಥಿಕ ಬೆಳವಣಿಗೆ …

Read More »

ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ 10 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ 2024-25ನೇ ಸಾಲಿನ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ ಸುಮಾರು 10,000 ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ ಆಗಿದೆ. ಇದು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಹಿಡಿದ ಕನ್ನಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್ ಅವರು, ರಾಜ್ಯ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ …

Read More »

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಆಲಿಸಿದರು. ವಿವಿದೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. ಸರ್ಕಾರಿ ನೌಕರರು ವರ್ಗಾವಣೆಗಾಗಿ ಹಲವರು ಮನವಿ ಸಲ್ಲಿಸಿದರು, ಅನಾರೋಗ್ಯದಿಂದ ಬಳಲುತ್ತಿರುವವರು ಆರ್ಥಿಕ ನೆರವು ಕೋರಿ ಅರ್ಜಿ ಸಲ್ಲಿಸಿದರು. ಹಲವರು ತಮಗೊಂದು ಸರ್ಕಾರಿ ಕೆಲಸ ಕೊಡಿಸುವಂತೆ ಕೋರಿದರು.

Read More »

ಕನ್ನಡ ಅಗ್ರ ಭಾಷೆಯಾಗಲಿ, ಕರ್ನಾಟಕ ಕನ್ನಡಮಯವಾಗಲಿ: ಸಿಎಂ ಸಿದ್ದರಾಮಯ್ಯ

ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ ಹಿನ್ನೋಟ ಮುನ್ನೋಟ ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. …

Read More »

ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನ

ಧಾರವಾಡ ; ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ ನೀಡುವ ಯೋಜನೆಗಾಗಿ ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಆಡಳಿತಾಧಿಕಾರಿ ಮತ್ತು ಪಶುವೈದ್ಯಾಧಿಕಾರಿಗಳಿಂದ ದೃಢೀಕರಣ ಪ್ರತಿಗಳನ್ನು ಲಗತ್ತಿಸಿ ಅಕ್ಟೋಬರ್ 20, 2024 ರೊಳಗಾಗಿ ಪಶುವೈದ್ಯಕೀಯ ಸಂಸ್ಥೆಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ …

Read More »

ಹಿಂದುಳಿದ ವರ್ಗಗಳ ಆಯೋಗ ವರದಿ ಅನುಷ್ಠಾನಗೊಳಿಸಲು ಬಸವರಾಜ ರಾಯರಡ್ಡಿ ಆಗ್ರಹ

ಕೊಪ್ಪಳ: ರಾಜ್ಯದ ಎಲ್ಲ ಸಮುದಾಯಗಳ ಜನರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿ ಬಗ್ಗೆ ಕ್ರಮ ತಿಳಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಾರದ ಒಳಗೆ ಹಿಂದುಳಿದ ವರ್ಗಗಳ ಆಯೋಗದ ವರದಿ ಬಹಿರಂಗಗೊಳಿಸಬೇಕು, ನವೆಂಬರ್ ‌ಒಂದರಿಂದ ಅನುಷ್ಠಾನಗೊಳಿಸಬೇಕು ಎಂದು ಸಿ.ಎಂ. ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಆಗ್ರಹಿಸಿದರು. ತಾಲ್ಲೂಕಿನ ಗಿಣಗೇರಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಯೋಗದ ವರದಿ ಅನುಷ್ಠಾನಕ್ಕೆ ತರುವುದರಿಂದ ಸಾಮಾಜಿಕ ನ್ಯಾಯ ಸಿಗಲಿದೆ. ಮುಂದಿನ ವಾರದೊಳಗೆ ಸಂಪುಟ ಸಭೆಯಲ್ಲಿ ಅನುಮೋದನೆ …

Read More »

ವಿದ್ಯುತ್‍ ಉಪಕೇಂದ್ರದ ಕಾಮಗಾರಿ ಕಳಪೆ: ತನಿಖೆ ನಡೆಸಲು ಶಾಸಕ ಪ್ರಭು ಚವ್ಹಾಣ್ ಆಗ್ರಹ

ಔರಾದ್: ತಾಲ್ಲೂಕಿನ ನಾಗೂರ(ಬಿ) ಗ್ರಾಮದ ಬಳಿ ₹118 ಕೋಟಿ ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ 220 ಕೆ.ವಿ. ವಿದ್ಯುತ್ ಉಪ ಕೇಂದ್ರದ ಕಾಮಗಾರಿ ಕಳಪೆಯಾಗಿದ್ದು, ಈ ಸಂಬಂಧ ತನಿಖೆ ನಡೆಸಬೇಕು ಎಂದು ಶಾಸಕ ಪ್ರಭು ಚವಾಣ್ ಆಗ್ರಹಿಸಿದ್ದಾರೆ. ನಂಜುಂಡಪ್ಪ ವರದಿಯಂತೆ ಹಿಂದುಳಿದ ಪ್ರದೇಶವಾದ ಇಲ್ಲಿ ರೈತರಿಗೆ ನಿಯಮಿತ ವಿದ್ಯುತ್ ಪೂರೈಕೆ ಹಾಗೂ ಸಣ್ಣಪುಟ್ಟ ಕಾರ್ಖಾನೆ ಸ್ಥಾಪಿಸಿ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಬಹಳ ಪ್ರಯತ್ನಗಳ ನಂತರ ವಿದ್ಯುತ್ ಉಪಕೇಂದ್ರಕ್ಕೆ ಮಂಜೂರಾತಿ ಸಿಕ್ಕಿದೆ. ಆದರೆ, …

Read More »

ಜಾತಿಗಣತಿ ಸದ್ಯಕ್ಕೆ ಜಾರಿಯಿಲ್ಲ, ಈ ಕುರಿತು ಚರ್ಚೆ ನಡೆಸಿದ್ದೇವೆ: ಸಿಎಂ ಸಿದ್ದರಾಮಯ್ಯ

ರಾಯಚೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚಿಸಿ, ಸದನದಲ್ಲೂ ಮಂಡಿಸಲಾಗುವುದು ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಜಾತಿ ಗಣತಿಯನ್ನು ನಾವು ತಕ್ಷಣಕ್ಕೆ ಜಾರಿ ಮಾಡುವುದಾಗಿ ಹೇಳಿಲ್ಲ ಈಗ ಚರ್ಚೆ ಮಾಡುತ್ತಿದ್ದೇವಷ್ಟೇ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಜಾತಿ ಗಣತಿಗೆ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಏನಾದರೂ ಲೋಪಗಳಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದರು.

Read More »