Breaking News

Breaking News

ಇಸ್ರೇಲ್ ಮತ್ತು ಇರಾನ್ ಸಂಘರ್ಷ: ಏರಿಕೆಯ ಹಾದಿ ಹಿಡಿದ ತೈಲ ಬೆಲೆ

ನವದೆಹಲಿ: ಇಸ್ರೇಲ್‌ ಮತ್ತು ಇರಾನ್‌ ನಡುವೆ ಉಲ್ಬಣಗೊಂಡಿರುವ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆಯಲ್ಲಿ ಅನಿಶ್ಚಿತತೆ ತಲೆದೋರಿದೆ ಹಾಗಾಗಿ, ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ. ಇರಾನ್‌ನ ತೈಲ ನಿಕ್ಷೇಪ ಮತ್ತು ಸಂಗ್ರಹಾಗಾರಗಳ ಮೇಲೆ ಇಸ್ರೇಲ್‌ ವಾಯುದಾಳಿ ನಡೆಸಿತ್ತು. ಇಸ್ರೇಲ್‌ನ ಈ ದಾಳಿಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಬೆಂಬಲ ಘೋಷಿಸಿದ ಬೆನ್ನಲ್ಲೇ ಗುರುವಾರ ಬ್ರೆಂಟ್‌ ಕಚ್ಚಾ ತೈಲದ ಬೆಲೆಯಲ್ಲಿ ಶೇ 5ರಷ್ಟು ಏರಿಕೆಯಾಗಿತ್ತು. ಶುಕ್ರವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ …

Read More »

ಗ್ರಾ.ಪಂ ನೌಕರರ ಮುಷ್ಕರ: ವಿಜಯನಗರ ಜಿಲ್ಲೆಯಾದ್ಯಂತ ಗ್ರಾಮೀಣ ಆಡಳಿತ ಸೇವೆಗಳು ಸಂಪೂರ್ಣ ಸ್ಥಗಿತ

ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರದಿಂದ ಅನಿರ್ದಿಷ್ಟಾವಧಿಗೆ ಮುಷ್ಕರ ಆರಂಭವಾಗಿರುವದರಿಂದ ಜಿಲ್ಲೆಯಲ್ಲಿ ಗ್ರಾಮೀಣ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಶುಕ್ರವಾರ ಆನ್‌ಲೈನ್ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದವು ಹೆಚ್ಚಿನ ಪಿಡಿಒಗಳು ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿಗೆ ಹೋಗದವರು ಕಚೇರಿಗೆ ಬಂದಿಲ್ಲ ಇಂದಿನ ಮಟ್ಟಿಗೆ ಸಾರ್ವಜನಿಕರಿಗೆ ಅಂತಹ ತೊಂದರೆ ಉಂಟಾದ …

Read More »

ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ: ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆ

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ ಮಳೆ ನೀರಿನಲ್ಲಿ ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆಯಾಗಿವೆ, ಲಾರಿಗಳು ಜಲಾವೃತಗೊಂಡ ಹಿನ್ನೆಲೆ ಇಡೀ ರಾತ್ರಿ ಚಾಲಕರು ಪರದಾಡಿದ್ದಾರೆ. ಸಂಡೂರಿನ ನಂದಿಹಳ್ಳಿ ವಾಶಿಂಗ್ ಪ್ಲಾಂಟ್ ಬಳಿ ಮಳೆ ಅವಾಂತರಕ್ಕೆ ಲಾರಿ ಚಾಲಕರು ನಲುಗಿ ಹೋಗಿದ್ದಾರೆ. ಕುಮಾರಸ್ವಾಮಿ ಬೆಟ್ಟದಲ್ಲಿ ಸುರಿದ ಮಳೆಯಿಂದ ಅವಾಂತರ …

Read More »

ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ವಸತಿ ನಿಲಯ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದು, ಕುಲಸಚಿವರು ಇಷ್ಟು ದಿನ ಮೌಖಿಕ ಆದೇಶ ಮಾಡಿದ್ದರು. ಆದರೆ ಈಗ ಲಿಖಿತವಾಗಿ ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ಹುಬ್ಬಳ್ಳಿಯ ನಿಲಯದಲ್ಲಿ ಅನಧಿಕೃತವಾಗಿ ವಿದ್ಯಾರ್ಥಿಗಳ ವಾಸ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಕೂಡಲೇ ಹಾಸ್ಟೇಲ್‌ ತೆರವುಗೊಳೆಸಬೇಕೆಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದು, ಸಂಗೀತ ವಿ.ವಿ. ಕುಲಸಚಿವರಿಂದ …

Read More »

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಕಛೇರಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಆದೇಶಿಸಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು 2ನೇ ಹಂತದ ಹೆಚ್ಚುವರಿ ಅತಿಥಿ ಶಿಕ್ಷಕರ ಹಂಚಿಕೆ ಬಗ್ಗೆ ಆದೇಶಿಸಲಾಗಿದೆ. ಈ ಕುರಿತು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಈ ಪತ್ರ 2024-25ನೇ ಸಾಲಿನ ಶೈಕ್ಷಣಿಕ …

Read More »

ಜಿ.ಟಿ ದೇವೇಗೌಡ ಹೇಳಿಕೆ ಬಿಜೆಪಿಗೆ ಏನೂ ಡ್ಯಾಮೇಜ್‌ ಆಗೋಲ್ಲ : ಜೋಶಿ

ಹುಬ್ಬಳ್ಳಿ: ಜಿ.ಟಿ ದೇವೇಗೌಡ ಹೇಳಿಕೆ ಬಿಜೆಪಿಗೆ ಏನೂ ಡ್ಯಾಮೇಜ್‌ ಆಗೋಲ್ಲ. ಜಿ.ಟಿ ದೇವೇಗೌಡ ಮೊನ್ನೆ ಮೊನ್ನೆವರೆಗೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರದ ವಿರುದ್ಧ ಮಾತನಾಡಿದ್ದರು. ಈಗ ಏಕಾಏಕಿ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗ ರಾಜಕಾರಣದಲ್ಲಿ ಕೆಲವರಿಗೆ ತಮಗೆ ಬೇಕಾದ ಸ್ಥಾನಮಾನ ಸಿಗದೆ ಇದ್ದಲ್ಲಿ, ಟಿಕೆಟ್, ಮಂತ್ರಿ ಸ್ಥಾನ ಸಿಗದೆ ಹೋದ್ರೆ ಪಕ್ಷದ …

Read More »

ಪರಮೇಶ್ವ‌ರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ

ಹುಬ್ಬಳ್ಳಿ: ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೋರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ? ಎಲ್ಲಲ್ಲಿ ಬಾಂಬ್‌ ಬ್ಲಾಸ್ಟ್‌ಗಳಾಗಿವೆ ಎಂಬುದನ್ನು ತಿಳಿದು ಮಾತನಾಡಲಿ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವ‌ರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹ ಮಂತ್ರಿಯಾಗಿ ಜೆ.ಪರಮೇಶ್ವರ …

Read More »

ಅವ್ಯವಸ್ಥೆಯ ಆಗರವಾದ ಜಂಬಗಿ ಗ್ರಾ.ಪಂ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ

ಬೀದರ್​: ತಮ್ಮ ಸತ್ಯಮಾರ್ಗದಿಂದ ಇಡೀ ವಿಶ್ವಕ್ಕೆ ಚಿರಪರಿಚಿತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ರಾಜ್ಯ ಸರ್ಕಾರ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಆದ್ರೆ, ಬೀದರ್​ನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ಸರ್ಕಾರಕ್ಕೆ ‌ಚಳ್ಳೆ ಹಣ್ಣು ತಿನ್ನಿಸಿ, ಗಾಂಧೀಜಿ ಅವರ ಹೆಸರಿಗೆ ಕಳಂಕ ತರುವ ಕೆಲಸಕ್ಕೆ ಮುಂದಾಗಿದೆ. ಹೌದು, ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಬೀದರ್ …

Read More »

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಇಂದು ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಡುಗಡೆ ಮಾಡಲಿದ್ದಾರೆ. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ. ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ …

Read More »

ಎಲ್‌ಇಡಿ ಬಲ್ಟ್ ನೆಪದಲ್ಲಿ ಜನರಿಗೆ ಪಂಗನಾಮ : ಇದೀಗ ಪೋಲಿಸರ್ ಅತಿಥಿ

ಧಾರವಾಡ: ರಿಷಬ್ ಸ್ಮಾಲ್ ಎಂಟರ್‌ಪ್ರೈಸೆಸ್‌ ಮಾಲೀಕರಾದ ರಾಜಶೇಖರ ಚಿಕ್ಕಮಠ ಹಾಗೂ ಸರೋಜಾ ಚಿಕ್ಕಮಠ ಎಲ್‌ಇಡಿ ಬಲ್ಟ್ ನೆಪದಲ್ಲಿ ಬರೋಬ್ಬರಿ ನಲವತ್ತಕ್ಕೂ ಹೆಚ್ಚು ಜನರಿಗೆ ಪಂಗನಾಮ ಹಾಕಿ ಎಸ್ಕೆಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಲ್ಲಿ ಧಾರವಾಡ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಬಳಿಕ ಮೋಸ ಹೋದ ಜನರು ಪೊಲೀಸ್‌ ಠಾಣೆಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.ಅದರಂತೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಎಸಿಪಿ ಪ್ರಶಾಂತ ಸಿದ್ದನಗೌಡರ ಅವರು ವಿಶೇಷ ತಂಡ ರಚಿಸಿ, …

Read More »