Breaking News

Breaking News

ಪರಮೇಶ್ವ‌ರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ

ಹುಬ್ಬಳ್ಳಿ: ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೋರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ? ಎಲ್ಲಲ್ಲಿ ಬಾಂಬ್‌ ಬ್ಲಾಸ್ಟ್‌ಗಳಾಗಿವೆ ಎಂಬುದನ್ನು ತಿಳಿದು ಮಾತನಾಡಲಿ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವ‌ರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹ ಮಂತ್ರಿಯಾಗಿ ಜೆ.ಪರಮೇಶ್ವರ …

Read More »

ಅವ್ಯವಸ್ಥೆಯ ಆಗರವಾದ ಜಂಬಗಿ ಗ್ರಾ.ಪಂ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ

ಬೀದರ್​: ತಮ್ಮ ಸತ್ಯಮಾರ್ಗದಿಂದ ಇಡೀ ವಿಶ್ವಕ್ಕೆ ಚಿರಪರಿಚಿತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ರಾಜ್ಯ ಸರ್ಕಾರ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಆದ್ರೆ, ಬೀದರ್​ನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ಸರ್ಕಾರಕ್ಕೆ ‌ಚಳ್ಳೆ ಹಣ್ಣು ತಿನ್ನಿಸಿ, ಗಾಂಧೀಜಿ ಅವರ ಹೆಸರಿಗೆ ಕಳಂಕ ತರುವ ಕೆಲಸಕ್ಕೆ ಮುಂದಾಗಿದೆ. ಹೌದು, ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಬೀದರ್ …

Read More »

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಇಂದು ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಡುಗಡೆ ಮಾಡಲಿದ್ದಾರೆ. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ. ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ …

Read More »

ಎಲ್‌ಇಡಿ ಬಲ್ಟ್ ನೆಪದಲ್ಲಿ ಜನರಿಗೆ ಪಂಗನಾಮ : ಇದೀಗ ಪೋಲಿಸರ್ ಅತಿಥಿ

ಧಾರವಾಡ: ರಿಷಬ್ ಸ್ಮಾಲ್ ಎಂಟರ್‌ಪ್ರೈಸೆಸ್‌ ಮಾಲೀಕರಾದ ರಾಜಶೇಖರ ಚಿಕ್ಕಮಠ ಹಾಗೂ ಸರೋಜಾ ಚಿಕ್ಕಮಠ ಎಲ್‌ಇಡಿ ಬಲ್ಟ್ ನೆಪದಲ್ಲಿ ಬರೋಬ್ಬರಿ ನಲವತ್ತಕ್ಕೂ ಹೆಚ್ಚು ಜನರಿಗೆ ಪಂಗನಾಮ ಹಾಕಿ ಎಸ್ಕೆಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಲ್ಲಿ ಧಾರವಾಡ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಬಳಿಕ ಮೋಸ ಹೋದ ಜನರು ಪೊಲೀಸ್‌ ಠಾಣೆಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.ಅದರಂತೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಎಸಿಪಿ ಪ್ರಶಾಂತ ಸಿದ್ದನಗೌಡರ ಅವರು ವಿಶೇಷ ತಂಡ ರಚಿಸಿ, …

Read More »

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ

ಚಂಡೀಗಢ: ಭಾರೀ ಕುತೂಹಲ ಮೂಡಿಸಿದ್ದ ಹರಿಯಾಣದ ವಿಧಾನಸಭಾ ಚುನಾವಣಾ ಕದನ ಮಹತ್ವದ ಘಟ್ಟ ತಲುಪಿದ್ದು ಇಂದು ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಇಂದು ಒಂದೇ ಹಂತದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 90 ಶಾಸಕರನ್ನು ಆಯ್ಕೆ ಮಾಡಲು 2 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಮುಂದಾಗಿದ್ದು, ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿರುವ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಆಡಳಿತಾರೂಢ …

Read More »

ವಂದೇ ಭಾರತ್‌ ರೈಲಿನ ಪೈಕಿ ಹುಬ್ಬಳ್ಳಿ ರೈಲು ಸೇವೆಯಲ್ಲಿ ಬದಲಾವಣೆ : ವಿವರಣೆ ಇಲ್ಲಿದೆ ನೋಡಿ

ಹುಬ್ಬಳ್ಳಿ: ಕರ್ನಾಟಕದ ವಿವಿಧ ಭಾಗಗಳನ್ನು ಸಂಪರ್ಕಿಸುವ ವಂದೇ ಭಾರತ್‌ ರೈಲಿನ ಪೈಕಿ ಹುಬ್ಬಳ್ಳಿ ರೈಲು ಸೇವೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ನಿಲುಗಡೆ, ಸಮಯ ಸೇರಿದಂತೆ ವೇಳಾಪಟ್ಟಿ ಬದಲಾಗಿದೆ. ಪ್ರಮುಖವಾಗಿ ಹುಬ್ಬಳ್ಳಿ-ಪುಣೆ ನಡುವಿನ ವಂದೇ ಭಾರತ್ ರೈಲಿನ ಸಮಯ, ನಿಲುಗಡೆಯಲ್ಲಿ ಕೆಲ ಬದಲಾವಣೆಯಾಗಿದೆ. ಬದಲಾದ ಸಮಯ ಇಲ್ಲಿದೆ ಹುಬ್ಬಳ್ಳಿಯಿಂದ ಪುಣೆ ವಂದೇ ಭಾರತ್ ಹುಬ್ಬಳ್ಳಿಯಿಂದ ಹೊರಡುವ ಸಮಯ ಬೆಳಗ್ಗೆ 5 ಗಂಟೆ ಪುಣೆ ತಲುಪುವ ಸಮಯ ಮಧ್ಯಾಹ್ನ 1.30, ಪುಣೆಯಿಂದ ಹುಬ್ಬಳ್ಳಿ …

Read More »

ಪೊಲೀಸ್‌ ಇಲಾಖೆಯಿಂದ ಹಾಗೂ ಕಾಂಗ್ರೆಸ್ ಮುಖಂಡರಿಂದ ಜಿ.ಪರಮೇಶ್ವರಗೆ ಅದ್ಧೂರಿ ಸ್ವಾಗತ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಗೃಹ ಸಚಿವ ಜಿ.ಪರಮೇಶ್ವರ ಅವರು, ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನಕ್ಕೆ ಆಗಮಿಸುತ್ತಿದ್ದಂತೆಯೇ ಪೊಲೀಸ್‌ ಇಲಾಖೆಯಿಂದ ಹಾಗೂ ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು. ಇನ್ನೂ ಹುಬ್ಬಳ್ಳಿಗೆ ಆಗಮಿಸಿದ ಗೃಹ ಸಚಿವರು, ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದ್ದು, ಇದೇ ವೇಳೆ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗಾಡ್ ಆಫ್ ಹಾನರ್ ಮೂಲಕ ಗೃಹ ಸಚಿವರಿಗೆ ವಿಶೇಷ ಗೌರವ ನೀಡಲಾಯಿತು. ಬೆಳಿಗ್ಗೆ 10 ಗಂಟೆಗೆ ಧಾರವಾಡದ ರಾಷ್ಟ್ರೀಯ …

Read More »

ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಪರಮೇಶ್ವ‌ರ್ ವಾಗ್ದಾಳಿ ನಡೆಸಿದ ಜಿ.ಪರಮೇಶ್ವರ್

ಹುಬ್ಬಳ್ಳಿ: ನಮಗೂ ರಾಜಕಾರಣ ಮಾಡೋಕೆ ಬರುತ್ತೆ. ಇನ್ನು ಮುಂದೆ ನಾವೂ ರಾಜಕಾರಣ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಪರಮೇಶ್ವ‌ರ್ ವಾಗ್ದಾಳಿ ನಡೆಸಿದರು. ಮುಡಾ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪದೇ ಪದೇ ರಾಜಕಾರಣ ಮಾಡುತ್ತಿವೆ. ಪ್ರಕರಣ ದಾಖಲಾಗಿದೆ, ತನಿಖೆ ಮಾಡಲು ಅವಕಾಶ ಮಾಡಿಕೊಡಬೇಕು. ಅದನ್ನು ಬಿಟ್ಟು ನಿತ್ಯ ರಾಜಕಾರಣ ಮಾಡೋದು ಸರಿಯಲ್ಲ …

Read More »

ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ : ಜೋಶಿ

ಹುಬ್ಬಳ್ಳಿ: ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೋರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ? ಎಲ್ಲಲ್ಲಿ ಬಾಂಬ್‌ ಬ್ಲಾಸ್ಟ್‌ಗಳಾಗಿವೆ ಎಂಬುದನ್ನು ತಿಳಿದು ಮಾತನಾಡಲಿ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹ ಮಂತ್ರಿಯಾಗಿ ಜೆ.ಪರಮೇಶ್ವರ …

Read More »

ಬಿಜೆಪಿಯವರೇ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ : ಜಿ.ಪರಮೇಶ್ವರ್

ಹುಬ್ಬಳ್ಳಿ: ಜಾತಿ ಗಣತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ಯಾರ ಮೇಲೂ ನಾವು ಸೇಡಿನ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರೇ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರೈ ಓವರ್ ಅವಘಡದಲ್ಲಿ ಪೊಲೀಸ್‌ ಅಧಿಕಾರಿ ಸಾವಿನ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಇಂದು ಮಾಹಿತಿ ಪಡೆಯುತ್ತೇನೆ. ಪ್ರತಿ ಪಕ್ಷದವರು ಸರ್ಕಾರಕ್ಕೆ ಸಲಹೆ, ಸೂಚನೆ ಕೊಡಬೇಕು. ಅದನ್ನು ಮೀರಿ …

Read More »