Breaking News

Breaking News

ಬಸ್ಸಿನಲ್ಲಿ ಬಿಟ್ಟು ಹೋದ ಬ್ಯಾಗ್ ಮರಳಿಸಿ ಮಾನವೀಯತೆ ಮೆರೆದ ಚಾಲಕ

ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಪ್ರಮುಖ ದಾಖಲೆಗಳಿದ್ದ ಬ್ಯಾಗನ್ನು, ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಕಂ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಲ್ಯಾಪ್ ಟಾಪ್, ಪೆನ್ ಡ್ರೈವ್, ಹಣ ವನ್ನು ಮರಳಿ ಕೊಟ್ಟಿದ್ದಾರೆ. ತೆಲಂಗಾಣ ರಾಜ್ಯದ ಹೈದರಾಬಾದನಲ್ಲಿರುವ ಏರೊನಾಟಿಕಲ್ ಇಂಜಿನಿಯರಿಂಗ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವೀರಂ ಮಹಿಧರ ರೆಡ್ಡಿ ಎಂಬುವರು, ಅಕ್ಟೋಬರ್ 2ರಂದು ಬುಧವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ಬೆಳಗಾವಿಗೆ ಪ್ರಯಾಣ ಮಾಡಿದ್ದಾರೆ. ಬೆಳಗಾವಿ …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆ: ಶೇ.35.5 ಅಭ್ಯರ್ಥಿಗಳು ಗೈರು

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ 402 ಹುದ್ದೆ ಗಳ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆ ರಾಜ್ಯದ 6 ಜಿಲ್ಲೆಗಳ 163 ಕೇಂದ್ರಗಳಲ್ಲಿ ಯಾವುದೇ ಗೊಂದಲ ಇಲ್ಲದೆ ಗುರುವಾರ ಸುಸೂತ್ರವಾಗಿ ನಡೆಯಿತು. ಆದರೆ, ಇದಕ್ಕೆ ಶೇ. 35.5ರಷ್ಟು ಮಂದಿ ಗೈರಾಗಿದ್ದಾರೆ. ಒಟ್ಟು 66,990 ಮಂದಿ ಪರೀಕ್ಷೆಗೆ ಅರ್ಹರಾಗಿದ್ದರು ಅವರಲ್ಲಿ 56,528 ಮಂದಿ ಮಾತ್ರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದರು. ಅದರಲ್ಲೂ 43,250 ಮಂದಿ ಪರೀಕ್ಷೆಗೆ (ಶೇ. 64.5ರಷ್ಟು) ಹಾಜರಾಗಿದ್ದರು ಎಂದು …

Read More »

ಹುಬ್ಬಳ್ಳಿಯಲ್ಲಿ ಬಿಜೆಪಿ ಪಕ್ಷದ ಪ್ರಭಾರಿಗಳ ಸಭೆ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಅಂಗವಾಗಿ ಪ್ರಭಾರಿಗಳ ಸಭೆ ನಡೆಸಲು ಇಂದು ಹುಬ್ಬಳ್ಳಿಗೆ ಆಗಮಿಸಿದ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರನ್ನು ಬಿಜೆಪಿ ನಾಯಕರು ಹಾಗೂ ಮೇಯ‌ರ್ ರಾಮಣ್ಣ ಬಡಿಗೇರ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ. ಮಜ್ಜಗಿ, ಪಾಲಿಕೆ ಸದಸ್ಯರಾದ ಬೀರಪ್ಪ. ಕಂಡೇಕರ ಇದ್ದರು.

Read More »

ಸಿಂಧನೂರಿನಲ್ಲಿ ಕಲ್ಯಾಣ ಸೌಹಾರ್ದ ನಡೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ರಾಯಚೂರು : ಮುಡಾ ತನಿಖೆಯ ಟೆನ್ಷನ್ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 4 ಹಾಗೂ 5 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅ.4ರಂದು ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ಸಿಎಂ ಆಗಮಿಸಿದ್ದಾರೆ. ಅಲ್ಲಿಂದ ಮಧ್ಯಾಹ್ನ 12.15ಕ್ಕೆ ಸಿಂಧನೂರಿಗೆ ಬಂದು ದಸರಾ ಮಹೋತ್ಸವ, ಕಲ್ಯಾಣ ಸೌಹಾರ್ಧ ನಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಸಿಂಧನೂರಿನಿಂದ ಕಲ್ಮಲಾ ಜಂಕ್ಷನ್‌ ವರೆಗೆ ₹ 1635 ಕೋಟಿ ವೆಚ್ಚದಲ್ಲಿ ಚತುಷ್ಪಥ …

Read More »

ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗಿ

ಹುಬ್ಬಳ್ಳಿ :ಬೆಂಗೇರಿಯ ಗಾಯತ್ರಿ ದೇವಸ್ಥಾನದ ಆವರಣದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಶ್ರೀ ಗಾಯತ್ರಿ ದೇವಿಯ ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಮೂರುಸಾವಿರ ಮಠದ ಪರಮಪೂಜ್ಯರಾದ ಶ್ರೀಮನ್ಮಹಾರಾಜ ಡಾ. ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಗಾಯಿತ್ರಿ ದೇವಸ್ಥಾನದ ಟ್ರಸ್ಟ್ ಕಮೀಟಿ ಅಧ್ಯಕ್ಷರಾದ ಶ್ರೀ ಸದಾಶಿವ ಚೌಶೆಟ್ಟಿ ಇದ್ದರು.

Read More »

ಪಿಎಂ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ, ಕೃಷೋನ್ನತಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ ಮತ್ತು ಕೃಷೋನ್ನತಿ ಯೋಜನೆ ಗಳ ಅನುಷ್ಠಾನಕ್ಕೆ ಅದುನಿರ್ಧರಿಸಿದ್ದು, ರೈತರ ಆದಾಯ ಹೆಚ್ಚಳ ಮತ್ತು ಆಹಾರ ಭದ್ರತೆಗೆ 1,01,321 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಉಪಕ್ರಮಗಳು ಕೃಷಿ ಉತ್ಪಾದಕತೆ, …

Read More »

ತುರ್ತು ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ ಪಶ್ಚಿಮ ಏಷ್ಯಾದ ಪ್ರಮುಖ ರಾಷ್ಟ್ರಗಳ ನಡುವೆ ಭದ್ರತಾ ಪರಿಸ್ಥಿತಿಯು ಉಲ್ಬಣವಾಗುತ್ತಿದೆ (ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ) ಇದು ಭಾರತದಲ್ಲೂ ಆತಂಕ ಮೂಡಿಸಿದೆ. ಈ ರಾಷ್ಟ್ರಗಳ ನಡುವೆ ಯುದ್ಧ ಪರಿಸ್ಥಿತಿ ಸೃಷ್ಟಿಯಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ತುರ್ತು ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆಸಿರುವುದು ವರದಿಯಾಗಿದೆ. ಪಶ್ಚಿಮ …

Read More »

ಪಿಎಂ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ವಿಜಯಪುರ: 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಸಾಮಾನ್ಯ ವರ್ಗದ ರೈತರಿಗೆ 5 ಹೆಕ್ಟೆರ್‌ ಪ್ರದೇಶದ ವರೆಗೆ ಸಹಾಯಧನ ನೀಡಲು ಅವಕಾಶವಿದ್ದು, ಮೊದಲನೇ 2 ಹೆಕ್ಟೆರ್‌ ವರೆಗೆ ಶೇ 90 ರಷ್ಟು ಹಾಗೂ 2 ಹೆಕ್ಟೆರ್‌ ಮೇಲ್ಪಟ್ಟು 5 ಹೆಕ್ಟೆರ್‌ ವರೆಗೆ ಹನಿ ನೀರಾವರಿ …

Read More »

ವಿಳಂಬಗೊಂಡಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಅ.7, 9 ರಂದು ಖಾತೆಗೆ ಜಮಾ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ …

Read More »

ಬಿಹಾರ ಪ್ರವಾಹ ಪರಿಸ್ಥಿತಿ: ಪರಿಹಾರ ರಕ್ಷಣಾ ಕಾರ್ಯ ತ್ವರಿತಗೊಳಿಸಲು ಕೇಂದ್ರಕ್ಕೆ ಖರ್ಗೆ ಮನವಿ

ನವದೆಹಲಿ: ಬಿಹಾರ ಪ್ರವಾಹ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಸಂಭವಿಸಿರುವ ಪ್ರವಾಹದಿಂದಾಗಿ ತೊಂದರೆಗೆ ಒಳಗಾದವರ ಸಂಖ್ಯೆ 14.62 ಲಕ್ಷಕ್ಕೆ ತಲುಪಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಖರ್ಗೆ, ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗುತ್ತಿದೆ. ರಾಜ್ಯದ …

Read More »