BigTv News
October 3, 2024
Breaking News
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆ 2024ಗೆ ಎರಡೇ ದಿನ ಬಾಕಿ ಇದೆ ಈ ಮಧ್ಯೆ ಕೇಂದ್ರ ಚುನಾವಣಾ ಆಯೋಗವು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಸಾರ ಮಾಡದಂತೆ ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧವನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಹರಿಯಾಣದಲ್ಲಿ ಚುನಾವಣೆಗೆ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಸಾರಕ್ಕೆ ಚುನಾವಣೆ ಆಯೋಗ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದೆ. ಎಲ್ಲ ವಿಧದ ಸುದ್ದಿ ಮಾಧ್ಯಮಗಳು ಪ್ರಸಾರ ಮಾಡದಂತೆ ಕಳೆದ ತಿಂಗಳ ಸೆಪ್ಟೆಂಬರ್ 18 ಬೆಳಗ್ಗೆ 7:00 ಗಂಟೆಯಿಂದ …
Read More »
BigTv News
October 3, 2024
Breaking News, ಮೈಸೂರು
ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು, ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ. …
Read More »
BigTv News
October 3, 2024
Breaking News
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಳೆ (ಶುಕ್ರವಾರ) ಮೂರನೇ ಕೌಟಿಲ್ಯ ಆರ್ಥಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಉದ್ಯೋಗ ಸೃಷ್ಟಿ, ಹಸಿರು ಆರ್ಥಿಕತೆ, ಕೃತಕ ಬುದ್ಧಿಮತ್ತೆ ಮತ್ತು ಸಾರ್ವಜನಿಕ ನೀತಿ ವಿನ್ಯಾಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಈ ವರ್ಷದ ಸಮಾವೇಶವು ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪವನ್ನು ಸುಧಾರಿಸುವುದು, ಹಸಿರು ಪರಿವರ್ತನೆಗೆ ಹಣಕಾಸು ಒದಗಿಸುವುದು, ಭೌಗೋಳಿಕ ಆರ್ಥಿಕ ವಿಘಟನೆ ಮತ್ತು ಬೆಳವಣಿಗೆಯ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ದಿ …
Read More »
Shaikh BigTv
October 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಹಿಂದ ನಾಯಕನ ಉಳಿವಿಗಾಗಿ ಹುಬ್ಬಳ್ಳಿಯಿಂದ ಜಾಥಾ ಆರಂಭವಾಗಿದ್ದು, ಜಾಥಾಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ ಚಾಲನೆ ನೀಡಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದೆಂದು, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದದಿಂದ ಜಾಥಾ ಆರಂಭವಾಗಿದೆ. ನಾಳೆ ಸಾಯಂಕಾಲ ಅಹಿಂದ ಜಾಥಾ ಬೆಂಗಳೂರು ತಲುಪಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದೆಂದು ಒತ್ತಾಯ ಮಾಡಿದರು. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ …
Read More »
Shaikh BigTv
October 3, 2024
Breaking News, ಧಾರವಾಡ
ಧಾರವಾಡ : ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಕ್ಟೋಬರ್ 03 ರಂದು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25 ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 30, 2024 ರ ರೋಲ್‌ಗಾಗಿ http://shp.karnataka.gov.in/bcwd ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004, 8050770005 ಅಥವಾ https://bcwd.Karnataka.gov.in ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
Shaikh BigTv
October 3, 2024
Breaking News, ಧಾರವಾಡ
ಧಾರವಾಡ : ರಾಜ್ಯದ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರು ಮತ್ತು ಆಟೋರಿಕ್ಷಾ ಚಾಲಕರ ಮೆಟ್ರಿಕ್ ನಂತರದ ಉನ್ನತ ಶಿಕ್ಷಣಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ-ಒಂದು, ಕರ್ನಾಟಕ-ಒಂದು ಮೂಲಕ ಸೇವಾ ಸಿಂಧು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು, ಚಾಲಕರು, ವೃತ್ತಿಪರರು ಸೇವಾ ಸಿಂಧು ವೆಬ್‌ಸೈಟ್, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
Shaikh BigTv
October 3, 2024
Breaking News, ಧಾರವಾಡ
ಧಾರವಾಡ : ಅರಣ್ಯ ನಾಶದಿಂದ ಉಂಟಾಗುತ್ತಿರುವ ಪ್ರಾಣಿ ಮತ್ತು ಮಾನವ ಸಂರ್ಘಷವನ್ನು ತಪ್ಪಿಸಲು ತೊಂದರೆಯಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಿಸಬೇಕು. ಮತ್ತು ಅವುಗಳ ಸ್ವಚ್ಛಂದ ಜೀವನವನ್ನು ಉಳಿಸಿ ಬೇಳಸಲು ಎಲ್ಲರೂ ಪ್ರಯತ್ನಿಸಬೇಕೆಂದು ಕರ್ನಾಟಕ ವನ್ಯಜೀವಿ ಮಂಡಳಿಯ ಸದಸ್ಯೆ ವೈಶಾಲಿ ಕುಲಕರ್ಣಿ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಅರಣ್ಯ ಇಲಾಖೆಯ ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ವೃತ್ತದಿಂದ 70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆಯೋಜಿಸಿದ್ದ ಕಾಲ್ನಡಿಗೆ ಜಾಥಾ ಕಾರ್ಯಕ್ರಮದ …
Read More »
BigTv News
October 3, 2024
Breaking News, ಶಿವಮೊಗ್ಗ
ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೆರರ್ ಗಳು, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ …
Read More »
Shaikh BigTv
October 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಸಿದ್ದಾರೂಢರು ಇತಿಹಾಸ, ಪವಾಡ ಪುರುಷರು, ಈ ದೇಶದಲ್ಲಿ ಅದೆಷ್ಟೋ ಘಜ್ಜಿ ಮಹಮ್ಮದ್ ಎಷ್ಟೋ ಸಾರಿ ದಾಳಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಹುಬ್ಬಳ್ಳಿ ಸಿದ್ದಾರೂಢರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು,ಇಂತಹ ಶರಣರು, ತಪಸ್ವಿಗಳು ಬದುಕಿದ್ದರಿಂದ ನಾವು ಈ ದೇಶದಲ್ಲಿ ನೆಮ್ಮದಿಯಾಗಿದ್ದೇವೆ. ಇಂತಹ ಪುಣ್ಯಾತ್ಮರ ಸಂದೇಶಗಳು ನಮಗೆ ಶಕ್ತಿಯನ್ನು ಕೊಡುತ್ತವೆ. ನಿಷ್ಕಲ್ಮಶವಾಗಿ ಈ ದೇವರನ್ನು ಯಾರು ಪ್ರಾರ್ಥನೆ ಮಾಡುತ್ತಾರೆ ನಿನಗೂ ಸಿಗ್ತಾರೆ, ನಮಗೂ …
Read More »
Shaikh BigTv
October 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ವಿಚಾರ, ದಿನೇಶ್ ಗುಂಡೂರಾವ್ ಅವರಿಗೆ ಗುಂಡೂರಾವ್ ಮಗ ಎಂದು ತುಂಬಾ ಗೌರವ ಇದೆ.ಇತಿಹಾಸ ತಿಳಿದುಕೊಳ್ಳದೇ ಸಾವರ್ಕರ್ ಬಗ್ಗೆ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ..? ದಿನೇಶ್ ಗುಂಡೂರಾವ್ ಯಾವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೆಂಬುದು ನನಗೆ ಗೊತ್ತಿಲ್ಲವೆಂದು ಹುಬ್ಬಳ್ಳಿಯಲ್ಲಿ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
Read More »