Shaikh BigTv
October 1, 2024
Breaking News, ಧಾರವಾಡ
ಧಾರವಾಡ : ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಅಕ್ಟೋಬರ್ 2 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 2 ರಂದು ಬೆಳಿಗ್ಗೆ 7. 35 ಗಂಟೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಅವರು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮತ್ತು ಅವರು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.
Read More »
Shaikh BigTv
October 1, 2024
Breaking News, ಧಾರವಾಡ
ಧಾರವಾಡ: ಮಹಾತ್ಮ ಗಾಂಧಿ ಅವರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯ ಅಧಿಕಾರಿ, ಸಿಬ್ಬಂದಿಗಳು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ್ದರು.
Read More »
BigTv News
October 1, 2024
Breaking News, ಹಾಸನ
ಹಳೇಬೀಡು: ಗ್ರಾಮೀಣ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಸಮರ್ಪಕವಾಗಿ ಸಂಪನ್ಮೂಲಗಳ ಬಳಕೆ ಮಾಡಿಕೊಂಡು ಮುನ್ನಡೆಯುತ್ತಿರುವುದರಿಂದ ಮಾದಿಹಳ್ಳಿ ಹೋಬಳಿಯ ಇಬ್ಬಿಡು ಗ್ರಾಮ ಪಂಚಾಯಿತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ದೊರಕಿದೆ. ಸತತ ಎರಡನೇ ಬಾರಿಗೆ ಈ ಗೌರವಕ್ಕೆ ಪಾತ್ರವಾಗಿದೆ. ಅ.2ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ನಾಮಫಲಕ, ಪ್ರಮಾಣಪತ್ರ ಹಾಗೂ ₹5 ಲಕ್ಷ ಬಹುಮಾನ ಒಳಗೊಂಡಿದೆ. 16 ಹಳ್ಳಿಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಶಾಸಕರುಗಳಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾಗರಾಜು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
Read More »
BigTv News
October 1, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ. ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. …
Read More »
BigTv News
October 1, 2024
Breaking News, ಆಂಧ್ರ ಪ್ರದೇಶ
ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಎನ್ಡಿಎ ಸರ್ಕಾರ ಹೊಸ ಮದ್ಯ ನೀತಿಯನ್ನು ಪ್ರಕಟಿಸಿದೆ. ಹರಿಯಾಣ ಮತ್ತು ಇತರೆ ರಾಜ್ಯಗಳ ಮಾದರಿಯಲ್ಲಿ ಖಾಸಗಿ ಚಿಲ್ಲರೆ ವ್ಯಾಪಾರಿಗಳಿಗೆ ಮದ್ಯ ಮಾರಾಟ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ರಾಜ್ಯ ಸರ್ಕಾರವು 5,500 ಕೋಟಿ ಆದಾಯ ಗಳಿಸುವ ನಿರೀಕ್ಷೆ ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಇತರ ರಾಜ್ಯಗಳಲ್ಲಿ ಇರುವ ಉತ್ತಮ ಅಬಕಾರಿ ನೀತಿಯನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ ಬಳಿಕ ಹೊಸ ಮದ್ಯ ನೀತಿಯನ್ನು ಜಾರಿಗೆ …
Read More »
BigTv News
October 1, 2024
Breaking News
ಚಂಡೀಗಢ: ನಾವು ಅಧಿಕಾರಕ್ಕೆ ಬಂದರೆ 1200 ರೂ.ಗೆ ಮಾರಾಟವಾಗುತ್ತಿರುವ ಎಲ್‌ಪಿಜಿ, ಪ್ರತಿ ಗ್ಯಾಸ್ ಸಿಲಿಂಡರ್‌ಗೆ ಕೇವಲ 500 ರೂ.ಗೆ ಲಭ್ಯವಾಗಲಿದೆ ಎಂದು ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಹರಿಯಾಣದ ಬಹದ್ದೂರ್‌ಗಢದಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನೂ ನೀಡುತ್ತೇವೆ. ಹರಿಯಾಣದ ಜನರು ಸೇನೆಗೆ ಸೇರುತ್ತಿದ್ದರು, ಆದರೆ ನರೇಂದ್ರ ಮೋದಿ ಅವರು ಅಗ್ನಿವೀರ್ ಯೋಜನೆ ತರುವ …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು …
Read More »
BigTv News
October 1, 2024
Breaking News, ಮಹಾರಾಷ್ಟ್ರ
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಇದರ ನಡುವೆ ವಿವಿಧ ಪಕ್ಷಗಳು ಭಿನ್ನವಾಗಿ ಪ್ರಚಾರ ನಡೆಸುತ್ತಿವೆ. ಇದೀಗ ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಪ್ರಚಾರದ ಭಾಗವಾಗಿ ಲಾಪತಾ ಲೇಡೀಸ್ ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನದ ಮೂಲಕ ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ದಿನಾಂಕ ಇನ್ನು ಕೆಲವೇ ದಿನಗಳಲ್ಲಿ …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು : ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ ಮಾಡಲಾಗಿದೆ. ಬಿಪಿಎಲ್ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ …
Read More »