Breaking News

Breaking News

ಎನ್‌ಪಿಎಸ್‌ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಜಾರಿ ಮಾಡಬೇಕೆಂದು ಮನವಿ ಸಲ್ಲಿಕೆ

ನವಲಗುಂದ: ಸರ್ಕಾರಿ ನೌಕರರಿಗೆ ಮಾರಕವಾಗಿರುವ ಎನ್‌ಪಿಎಸ್‌ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಜಾರಿ ಮಾಡಬೇಕೆಂದು ಆಗ್ರಹಿಸಿ ಎನ್‌ಪಿಎಸ್‌ ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿಯ ಶಿರಸ್ತೇದಾ‌ರ್ ಕೃಷ್ಣ ಅರೇರ ಅವರಿಗೆ ಮನವಿ ಸಲ್ಲಿಸಿದರು. ಚುನಾವಣೆ ಪೂರ್ವದಲ್ಲಿ ರಾಜಕೀಯ ಪಕ್ಷಗಳು ಒಪಿಎಸ್ ಜಾರಿಗೊಳಿಸುವುದಾಗಿ ಘೋಷಿಸಿದ್ದವು ಸಮಿತಿ ರಚನೆ ಆಗಿದೆಯೇ ಹೊರತು ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ದೂರಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಯಶವಂತಿ ನರಸಪ್ಪನವರ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ವಗ್ಗರ, ಎಸ್.ಎಫ್.ನೀರಲಗಿ, ಎನ್.ವೈ.ಕಳಸಾಪುರ, …

Read More »

ಪಾದಚಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ಸವಾರ

ಕುಂದಗೋಳ : ದ್ವಿಚಕ್ರ ಸವಾರನೋರ್ವ ವಾಹನದ ವೇಗ ನಿಯಂತ್ರಣ ಮಾಡಲಾಗದೆ ರಸ್ತೆ ಬದಿ ನಡೆದುಕೊಂಡು ಹೊರಟಿದ್ದ ಪಾದಚಾರಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಗೋಳ ತಾಲೂಕಿನ ಚಾಕಲಬ್ಬಿ ದೈಹಿಕ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಲ್ಲಪ್ಪ ಲಕ್ಷ್ಮಣ ಬಾರಕೇರ ಎಂಬುವವರು ರೊಟ್ಟಿಗವಾಡ ಮಾರ್ಗವಾಗಿ ನಲವಡಿ ಕಡೆ ಅತಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದು ನಿಯಂತ್ರಣ ಮಾಡಲಾಗದೆ ರಸ್ತೆ ಬದಿ ನಡೆದುಕೊಂಡು …

Read More »

ಕೇಂದ್ರ ಸರ್ಕಾರಿ ನೌಕರರಿಗೆ ರಸ್ತೆ ಮೈಲೇಜ್ ಭತ್ಯೆ ಹೆಚ್ಚಿಸಿ ಆದೇಶ

ನವದೆಹಲಿ : ಈ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 50 ಕ್ಕೆ ಹೆಚ್ಚಿಸಿದ ನಂತರ, 13 ಭತ್ಯೆಗಳನ್ನು ಸ್ವಯಂಚಾಲಿತವಾಗಿ ಅಸ್ತಿತ್ವದಲ್ಲಿರುವ ದರಗಳಿಗಿಂತ 25% ರಷ್ಟು ಪರಿಷ್ಕರಿಸಲಾಗಿದೆ. ಈಗ, ಅರ್ಹ ಫಲಾನುಭವಿಗಳಿಗೆ ಮತ್ತೊಂದು ಭತ್ಯೆಯನ್ನು ಪರಿಷ್ಕರಿಸಲಾಗಿದೆ. ಭಾರತದಲ್ಲಿನ ಕೇಂದ್ರ ಸರ್ಕಾರಿ ನೌಕರರು ಅವರು ಬಳಸುವ ಸಾರಿಗೆ ಪ್ರಕಾರ ಮತ್ತು ಅವರು ವಾಸಿಸುವ ನಗರದ ಆಧಾರದ ಮೇಲೆ ರಸ್ತೆ ಮೈಲೇಜ್ ಭತ್ಯೆ (ಆರ್‌ಎಂಎ) ಪಡೆಯಲು ಅರ್ಹರಾಗಿರುತ್ತಾರೆ. ಹೆಚ್ಚುವರಿಯಾಗಿ, ವಿಭಿನ್ನ …

Read More »

ಜಮ್ಮುಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ವಾಲ್ಮೀಕಿ ಸಮುದಾಯದವರಿಂದ ಮತ ಚಲಾವಣೆ

ಶ್ರೀನಗರ:‌ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಇದೇ ಮೊದಲ ಬಾರಿಗೆ ವಾಲ್ಮೀಕಿ ಸಮುದಾಯದ ಸದಸ್ಯರು ಮಂಗಳವಾರ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು ವಾಲ್ಮೀಕಿ ಸಮುದಾಯದವರನ್ನು 1957ರಲ್ಲಿ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಿಂದ ಜಮ್ಮು ಕಾಶ್ಮೀರಕ್ಕೆ ಸ್ವಚ್ಛತಾ ಕೆಲಸಕ್ಕಾಗಿ ಕರೆತರಲಾಗಿತ್ತು. ಮೊದಲ ಬಾರಿಗೆ ಹಕ್ಕು ಚಲಾಯಿಸಿ ಹಲವರು ಸಂತಸ ವ್ಯಕ್ತಪಡಿಸಿದರು. ನನ್ನ 45 ವರ್ಷಗಳ …

Read More »

ಪ್ರೀಮೆಟ್ರಿಕ್ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರೂ.750 ರಿಂದ 1750ಕ್ಕೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯಾರ್ಥಿ ವೇತನವನ್ನು ರೂ.750ರಿಂದ ರೂ.1,750ಕ್ಕೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಮ್ಮ ಸಂವಿಧಾನ ಜಾರಿಯಾಗುವ ಮೊದಲೇ ಮೈಸೂರು ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದಲ್ಲಿ ಮೀಸಲಾತಿಯನ್ನು ಜಾರಿಗೆ ತರಲಾಗಿತ್ತು. 1960 ರಲ್ಲಿ ನಾಗೇಗೌಡ ಸಮಿತಿ ರಚನೆಯಾಯಿತು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾವನೂರು ಆಯೋಗ ರಚಿಸಲಾಯಿತು. …

Read More »

ಬೆಂಗಳೂರಿನಲ್ಲಿ ಅ.4 ರಿಂದ ಗ್ರಾ.ಪಂ ನೌಕರರ ಮುಷ್ಕರ: ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ

ಬೆಂಗಳೂರು : ಅ.4 ರಿಂದ ನಡೆಯಲಿರುವ ಗ್ರಾ. ಪಂ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ ಮಾಡಿದೆ. ದಿ. 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲ ಸೂಚಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ …

Read More »

ಲೋಳಸೂರ ಸೇತುವೆ ನಿರ್ಮಾಣಕ್ಕೆ ಶೀಘ್ರ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ

ಗೋಕಾಕ: ಜತ್ತ- ಜಾಂಬೋಟಿ ಅಂತರರಾಜ್ಯ ಹೆದ್ದಾರಿ ಭಾಗವಾದ, ಇಲ್ಲಿನ ಲೋಳಸೂರ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ₹40 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಘಟಪ್ರಭಾ ಪ್ರವಾಹದಲ್ಲಿ ಪದೇಪದೇ ಮುಳುಗಡೆಯಾಗುವ ಸೇತುವೆ ಹಾಗೂ ಹೊಸ ಸೇತುವೆಯ ನೀಲನಕ್ಷೆಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಬಹಳ ಹಳೆಯದಾದ ಈ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗುತ್ತದೆ. ಆಗ ಅಂತರರಾಜ್ಯ ವಾಹನ ಸಂಚಾರ ಬಂದ್‌ …

Read More »

ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತಾಧಿಕಾರಿಗಳಿಗೂ ಟ್ಯಾಬ್ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್‌ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ವಿಕಾಸಸೌಧದಲ್ಲಿ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ ನೀಡಬೇಕು ಎಂಬ ಬೇಡಿಕೆ ಇದೆ. ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ …

Read More »

ಕೇಂದ್ರ ಸರ್ಕಾರದಿಂದ ವಾಹನ ಸವಾರರಿಗೆ ಸಿಹಿಸುದ್ದಿ: ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 20ರೂ. ಇಳಿಕೆ

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಲವೇ ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 20 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಬಹುಬೇಗ ಜನರು ಪೆಟ್ರೋಲ್ ಅವಲಂಬಿತರಾಗುವಂತೆ ಮಾಡಲು ಸರ್ಕಾರ ಮುಂದಾಗಿದೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ದೇಶದ ಬಹುತೇಕ ಪೆಟ್ರೋಲ್ ಪಂಪ್‌ಗಳಲ್ಲಿ ಶೀಘ್ರದಲ್ಲೇ ಎಥೆನಾಲ್ ಮಿಶ್ರಿತ ಪೆಟ್ರೋಲ್ ಲಭ್ಯವಾಗಲಿದೆ ಎಂದು ಸಾರಿಗೆ ಸಚಿವ ನಿತಿನ್ …

Read More »

ನಿಗದಿ ಗ್ರಾಮದ ರೈತರ ಹೊಲದಲ್ಲಿ ಪತ್ತೆಯಾದ ಬೃಹತ್ ಗಾತ್ರದ ಹೆಬ್ಬಾವು

ಧಾರವಾಡ: ತಾಲೂಕಿನ ನಿಗದಿ ಗ್ರಾಮದ ರೈತರ ಕಬ್ಬಿನ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ. ನಿಗದಿ ಗ್ರಾಮದ ರೈತ ಸಿದ್ಧಬಸಪ್ಪ ಹಳಿಯಾಳ ಎಂಬ ರೈತ ಅಂಬ್ಲಿಕೊಪ್ಪ ಗ್ರಾಮದ ಹದ್ದಿನಲ್ಲಿ ಕಬ್ಬಿನ ಜಮೀನು ಹೊಂದಿದ್ದು, ಕಬ್ಬಿನ ಸೋಗೆ ಸುಲಿಯುವ ಸಂದರ್ಭದಲ್ಲಿ ಈ ಹೆಬ್ಬಾವು ರೈತನ ಕಣ್ಣಿಗೆ ಬಿದ್ದಿದೆ. ಕೂಡಲೇ ಈ ಮಾಹಿತಿಯನ್ನು ಉರಗ ರಕ್ಷಕ ಯಲ್ಲಪ್ಪ ಜೋಡಳ್ಳಿ ಅವರ ಗಮನಕ್ಕೆ ತಂದಾಗ …

Read More »