BigTv News
October 1, 2024
Breaking News, ಕೊಪ್ಪಳ
ಕೊಪ್ಪಳ: ಹೆಸರಾಂತ ಧಾರ್ಮಿಕ ಕ್ಷೇತ್ರಗಳಲ್ಲಿ ವರ್ಷಕ್ಕೊಮ್ಮೆಯೋ ಅಥವಾ ವಿಶೇಷ ಸಂದರ್ಭದಲ್ಲಿಯೋ ಲಕ್ಷಾಂತರ ಭಕ್ತರು ಒಂದೆಡೆ ಸೇರುವುದು ಸಹಜ. ಆದರೆ ಕೊಪ್ಪಳ ತಾಲ್ಲೂಕಿನ ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಿ ದರ್ಶನಕ್ಕೆ ವಾರಕ್ಕೆ ಎರಡು ಬಾರಿ ಹಾಗೂ ಪ್ರತಿ ಹುಣ್ಣಿಮೆಗೂ ಲಕ್ಷಾಂತರ ಭಕ್ತರು ಬರುವುದು ಸಾಮಾನ್ಯವಾಗಿದೆ. ಕರ್ನಾಟಕ, ಆಂಧ್ರ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಸಾಕಷ್ಟು ಭಕ್ತರನ್ನು ಹೊಂದಿರುವ ಉತ್ತರ ಕರ್ನಾಟಕದ ಶಕ್ತಿ ದೇವತೆ ಎಂದೇ ಹೆಸರಾದ ಹುಲಿಗಿಗೆ ದೊಡ್ಡಮಟ್ಟದಲ್ಲಿ ಭಕ್ತ ಸಮೂಹವಿದೆ. ಪ್ರತಿ ತಿಂಗಳು …
Read More »
Shaikh BigTv
October 1, 2024
Breaking News, ಧಾರವಾಡ
ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ತಮಗೆ ಟ್ಯಾಬ್ ವಿತರಣೆ, ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವುದು, ಭತ್ಯೆ ನೀಡುವುದು, ಕರ್ತವ್ಯ ನಿರತ ಸಿಬ್ಬಂದಿ ಸಾವಿಗೀಡಾದರೆ 40 ಲಕ್ಷ ಪರಿಹಾರ ನೀಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಆಡಳಿತಾಧಿಕಾರಿಗಳು ಕೈಗೆ …
Read More »
Shaikh BigTv
October 1, 2024
Breaking News, ಧಾರವಾಡ
ಧಾರವಾಡ: ಕ್ಯಾಂಟರ್ ವಾಹನವೊಂದು ಏಕಾಏಕಿ ಅಂಗಡಿಗೆ ಗುದ್ದಿದ ಘಟನೆ ಧಾರವಾಡದ ಮೃತ್ಯುಂಜಯ ನಗರದ ಡಿಪೊ ಸರ್ಕಲ್ ಬಳಿ ನಡೆದಿದೆ. ಸವದತ್ತಿ ಕಡೆಯಿಂದ ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಬಂದ ಕ್ಯಾಂಟರ್ ಏಕಾಏಕಿ ಅಂಗಡಿಗೆ ಗುದ್ದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Read More »
Shaikh BigTv
October 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದಲ್ಲಿ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ, ಮನೆ ಕಳ್ಳತನ ಮಾಡುತ್ತಿದ್ದ ಮನೆಗಳ್ಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಶೋಕ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗಂಗಾಧರನಗರದ ನಿವಾಸಿ ರತ್ನವ್ವ ಬಾಳಿಮೇಡ್ (45), ಕುಸುಗಲ್ ನಿವಾಸಿ ಮುತ್ತುಂಸಾಬ್ ಕುಂಬಿ (27) ಗುರುತಿಸಲಾಗಿದೆ. ಇವರಿಂದ 2.50 ಲಕ್ಷ ರೂ ಮೌಲ್ಯದ 50 ಗ್ರಾಂ ತೂಕದ 4 ಬಂಗಾರದ ಬಳೆಗಳು, 50 ಸಾವಿರ ಮೌಲ್ಯದ 10 ಗ್ರಾಂ ತೂಕದ …
Read More »
BigTv News
October 1, 2024
Breaking News, ಬಳ್ಳಾರಿ
ಬಳ್ಳಾರಿ: ಬಳ್ಳಾರಿ ಗಣಿ ಧಣಿ ಜನಾರ್ದನ ರೆಡ್ಡಿ ಅಕ್ರಮಗಣಿಗಾರಿಕೆ ಪ್ರಕರಣದಡಿ 2011 ರಲ್ಲಿ ಜೈಲು ಸೇರಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಸೆರೆವಾಸ ಅನುಭವಿಸಿದ ರೆಡ್ಡಿ, ಬಳಿಕ ಷರತ್ತುಬದ್ಧ ಜಾಮೀನು ಪಡೆದಿದ್ದರು. 2011 ರಿಂದ ಈವರಗೆ ತನ್ನೂರು ಬಳ್ಳಾರಿಗೆ ಮುಕ್ತ ಪ್ರವೇಶಕ್ಕೆ ರೆಡ್ಡಿಗೆ ಅವಕಾಶ ಇರಲಿಲ್ಲ. ಕೋರ್ಟ್ ಅನುಮತಿ ಪಡದೇ ರೆಡ್ಡಿ ಬಳ್ಳಾರಿಗೆ ಬರಬೇಕಿತ್ತು. ಸುಮಾರು 14 ವರ್ಷಗಳ ಕಾಲ ರೆಡ್ಡಿ ತನ್ನೂರನ್ನ ಬಿಟ್ಟು, ಹೈದರಾಬಾದ್, ಬೆಂಗಳೂರು, ಗಂಗಾವತಿಯಲ್ಲಿ ಜೀವನ …
Read More »
BigTv News
October 1, 2024
Breaking News
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಒಂದು ದೇಶ, ಒಂದು ಚುನಾವಣೆ ತರಲು ಸಿದ್ಧತೆ ಮುಂದುವರೆದಿದ್ದು, ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಮುಖ ಕಾರ್ಯಸೂಚಿಯಾದ ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಸಂವಿಧಾನದ ತಿದ್ದುಪಡಿಗೆ ಸಂಬಂಧಿಸಿದ ಎರಡು ಮಸೂದೆಗಳು …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಹೊರೆ ಕಡಿಮೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಮುಷ್ಕರ ನಿರತ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಭರವಸೆ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ ಫ್ರೂಟ್ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ …
Read More »
BigTv News
September 29, 2024
Breaking News, ಮೈಸೂರು
ಮೈಸೂರು : ಗ್ಯಾರಂಟಿ ಯೋಜನೆಗಳ ಫಲ ಜನರಿಗೆ ತಲುಪಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು. ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಈ ವಿಚಾರದಲ್ಲಿ ತೋರುವ ಅಸಡ್ಡೆ ಮತ್ತು ಉದಾಸೀನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸರಕಾರ ವರ್ಷಕ್ಕೆ ಸುಮಾರು 56 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇಷ್ಟೂ ಹಣ ಜನರಿಗೆ ತಲುಪುವಂತೆ ಮಾಡಬೇಕು ಎಂದು ಸೂಚಿಸಿದರು. ದಸರಾ ನೆಪದಲ್ಲಿ …
Read More »
BigTv News
September 29, 2024
Breaking News
ಹರಿಯಾಣ: ಕರ್ನಾಟಕದಲ್ಲಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೇರಿದಂತೆ ವಿಪಕ್ಷಗಳ ಆಡಳಿತದ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೇ ಸಿದ್ಧರಾಮಯ್ಯ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನ ಆಡಳಿತದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ …
Read More »
BigTv News
September 29, 2024
Breaking News, ಮಹಾರಾಷ್ಟ್ರ
ಪುಣೆ: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಯಡಿ ತರಲು ನಾನು ಉತ್ಸುಕನಾಗಿದ್ದೇನೆ. ಆದರೆ, ರಾಜ್ಯಗಳು ಇದಕ್ಕೆ ಸರ್ವಾನುಮತದಿಂದ ಬೆಂಬಲ ನೀಡಬೇಕಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪುಣೆ ಇಂಟರ್‌ನ್ಯಾಷನಲ್ ಸೆಂಟರ್‌ನಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ನಾನು ಹಲವು ದಿನಗಳಿಂದ ಸಲಹೆ …
Read More »