Breaking News

Breaking News

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಗೆ ವಿಶೇಷ ಒತ್ತು ನೀಡಲಾಗುವುದು: ಸಚಿವ ಬೋಸರಾಜು

ರಾಯಚೂರು: ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ತಿಳಿಸಿದರು. ಸ್ಥಳೀಯ ಕೇಂದ್ರ ಬಸ್ ನಿಲ್ದಾಣದ ಹತ್ತಿರವಿರುವ ಐತಿಹಾಸಿಕ ಕೋಟೆ ಮೆಕ್ಕಾ ದರವಾಜಾದಲ್ಲಿ ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆ ಹಾಗೂ ನಗರಸಭೆ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ …

Read More »

ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಪ್ರಶಸ್ತಿ ಪ್ರದಾನ

ಚಿತ್ರದುರ್ಗ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024ರ …

Read More »

ಹರಿಯಾಣ ವಿಧಾನಸಭಾ ಚುನಾವಣೆ: ಪ್ರಣಾಳಿಕೆಯನ್ನು ಪ್ರಕಟಿಸಿದ ಕಾಂಗ್ರೆಸ್

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಶನಿವಾರ ತನ್ನ ಪ್ರಣಾಳಿಕೆ ಪ್ರಕಟಿಸಿದೆ. ಉಚಿತ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಮಹಿಳೆಯರಿಗೆ ಆರ್ಥಿಕ ನೆರವು, ರೈತರಿಗೆ ಬೆಂಬಲ ಬೆಲೆ ಖಾತರಿ ಮತ್ತು ರಾಜ್ಯದಲ್ಲಿ ಜಾತಿ ಗಣತಿ ನಡೆಸುವುದು ಸೇರಿದಂತೆ ತನ್ನ ಯಶಸ್ಸಿನ ಮಾದರಿಯನ್ನು ಇಲ್ಲಿನ ಚುನಾವಣೆ ಪ್ರಣಾಳಿಕೆಯಲ್ಲೂ ಸೇರಿಸಲಾಗಿದೆ. ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹರಿಯಾಣ ಪ್ರದೇಶ ಕಾಂಗ್ರೆಸ್ …

Read More »

ಮೋದಿ ಅವರತ್ತ ಬೆರಳು ತೋರಿ ನಗೆಪಾಟಲಿಗೆ ಗುರಿಯಾಗ್ಬೇಡಿ, ಸುಮ್ಮನೆ ರಾಜೀನಾಮೆ ನೀಡಿ: ಪ್ರಲ್ಹಾದ ಜೋಶಿ

ನವದೆಹಲಿ: ಶುದ್ಧ ಹಸ್ತ, ಶ್ರಮಜೀವಿ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೆರಳು ತೋರುವ ಯಾವುದೇ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು 2500 ಕೋಟಿ ರೂಪಾಯಿಗೆ ಬಿಜೆಪಿ ಮಾರಿಕೊಂಡಿದ್ದು, ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಹಕ್ಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರಲ್ಹಾದ ಜೋಶಿ ಸಹ ಖಡಕ್ ಆಗಿಯೇ ಟ್ವೀಟ್ …

Read More »

ಮಾಜಿ ಸಚಿವ ಕೆ.ಬಿ.ಕೋಳಿವಾಡ ಹೇಳಿಕೆ ಅವರ ವೈಯಕ್ತಿಕ, ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ: ಮಾಜಿ ಸಚಿವ ಕೆ.ಬಿ.ಕೋಳಿವಾಡ ಹೇಳಿಕೆ ಅವರ ವೈಯಕ್ತಿಕ, ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಕೋಳಿವಾಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೋಳಿವಾಡ ಹೇಳಿಕೆ ಪಕ್ಷದ ನಿರ್ಧಾರ ಅಲ್ಲಾ ಹೈಕಮಾಂಡ್ ಇದೆ ನಮ್ಮ ಎಲ್ಲಾ ಶಾಸಕರು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಬೆನ್ನ ಹಿಂದೆ ಇದ್ದೇವೆ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆ ಬರೋದಿಲ್ಲ ಯಾಕೆ …

Read More »

ಬೆಳಗಾವಿ ವಿಭಜನೆ ಕುರಿತು ದಸರಾ ಹಬ್ಬದ ನಂತರ ಸಿಎಂ ಗೆ ಮನವಿ ಪತ್ರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು …

Read More »

ಲಿಂಗಸುಗೂರು ತಾಲೂಕಿನಲ್ಲಿ ನಿರ್ವಹಣೆ ನಿರ್ಲಕ್ಷ್ಯದಿಂದ ತಾಂಡಾಗಳಿಗೆ ಕಲುಷಿತ ನೀರು ಪೂರೈಕೆ

ಲಿಂಗಸುಗೂರು: ಕೆಲ ವರ್ಷಗಳಿಂದ ಕಲುಷಿತ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಾಲ್ಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರೆಬಾಳ ತಾಂಡಾ 1 ಮತ್ತು 2ರ ನಿವಾಸಿಗಳು ಆರೋಪಿಸಿದ್ದಾರೆ. 15 ವರ್ಷಗಳ ಹಿಂದೆ ತಾಂಡಾಗಳಿಗೆ ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ಪೂರೈಸಲು ಮೇಲ್ಮಟ್ಟದ ಜಲಸಂಗ್ರಹಗಾರ ನಿರ್ಮಿಸಲಾಗಿದೆ. ನಾಲ್ಕು ವರ್ಷಗಳಿಂದ ನಿರ್ವಹಣೆ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಕುರಿತು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪರ್ಯಾಯ ವ್ಯವಸ್ಥೆಗೆ ಮುಂದಾಗಿಲ್ಲ ಎಂಬ ದೂರುಗಳು …

Read More »

ರಸ್ತೆ ನಿರ್ಮಾಣಕ್ಕೆ 22 ಎಕರೆ ಭೂಮಿಯನ್ನು ಬಿಬಿಎಂಪಿಗೆ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿಸಿಎಂ ಡಿಕೆಶಿ

ಬೆಂಗಳೂರು : ರಸ್ತೆ ನಿರ್ಮಾಣಕ್ಕಾಗಿ ಬರೋಬ್ಬರಿ 22 ಎಕರೆ ಜಾಗವನ್ನು ಬಿಬಿಎಂಪಿಗೆ ಬಿಟ್ಟುಕೊಡಲು ರಕ್ಷಣಾ ಇಲಾಖೆ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಎಎಸ್​​ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರೊಂದಿಗೆ ಇಂದು ಡಿಕೆಶಿ ಅವರು ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಲೋವರ್ ಆಗರಂನಿಂದ ಸರ್ಜಾಪುರವರೆಗೆ ರಸ್ತೆ ಅಗಲೀಕರಣಕ್ಕಾಗಿ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ ನೀಡಿದೆ. …

Read More »

ಭಾರತದ ವೀಟೊ ಅಧಿಕಾರಕ್ಕಾಗಿ ಬೆಂಬಲ ಘೋಷಿಸಿದ ನಾಲ್ಕು ರಾಷ್ಟ್ರಗಳು

ನವದೆಹಲಿ: ಯುನೈಟೆಡ್ ಸ್ಟೇಟ್ಸ್, ರಷ್ಯಾ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್ಡಮ್ ಭಾರತದ ವೀಟೋ ಅಧಿಕಾರಕ್ಕಾಗಿ ತಮ್ಮ ಬೆಂಬಲವನ್ನು ಘೋಷಿಸಿವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವವನ್ನು ಈ ದೇಶಗಳು ಬೆಂಬಲಿಸುತ್ತಿವೆ. ಈ ಬೆಂಬಲದ ಹಿಂದಿನ ಪ್ರಾಥಮಿಕ ಕಾರಣವೆಂದರೆ ಭಾರತದ ಬೆಳೆಯುತ್ತಿರುವ ಜಾಗತಿಕ ಪಾತ್ರ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಉತ್ತೇಜಿಸುವ ಸಾಮರ್ಥ್ಯ. ವರದಿಯ ಪ್ರಕಾರ, ಭಾರತದ ವೀಟೋ ಅಧಿಕಾರವು ಭದ್ರತಾ ಮಂಡಳಿಯಲ್ಲಿ ಹೆಚ್ಚು ಸಮತೋಲಿತ ಮತ್ತು ಪರಿಣಾಮಕಾರಿ ನಿರ್ಧಾರ ತೆಗೆದುಕೊಳ್ಳುವ …

Read More »

ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ‌ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ …

Read More »