Breaking News

Breaking News

ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳು ನಾಮನಿರ್ದೇಶನ ಹೊಂದಿರುತ್ತಾರೆಂದು ಆದೇಶದಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ, ಮಾನ್ಯ ಸಭಾಧ್ಯಕ್ಷರು ಶ್ರೀ ಸಿ.ಸಿ. ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

Read More »

ವೆಂಕಟೇಶ ಬುಳ್ಳಾ ಅತ್ಯುತ್ತಮ ಜಿಲ್ಲಾ ವಿಪತ್ತು ಸಲಹೆಗಾರ ಪ್ರಶಸ್ತಿಯನ್ನು ಸ್ವೀಕಾರ

ಬೆಂಗಳೂರು : ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ವಿಪತ್ತು ನಿರ್ವಹಣಾ ಕೋಶದ ಸಲಹೆಗಾರ ವೆಂಕಟೇಶ ಬುಳ್ಳಾ ಅತ್ಯುತ್ತಮ ಜಿಲ್ಲಾ ವಿಪತ್ತು ಸಲಹೆಗಾರ ಪ್ರಶಸ್ತಿಯನ್ನು ಸ್ವೀಕರಿಸಿದರು.

Read More »

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಂದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರದಾನ

ಧಾರವಾಡ : ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದರು. ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲಾ …

Read More »

ಭಾರತೀಯ ಸೇನೆಯ ಫಿರಂಗಿ ದಳದ ಸಾಮರ್ಥ್ಯ ಹೆಚ್ಚಳ

ನವದೆಹಲಿ: ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯ ಫಿರಂಗಿ ದಳವು ಅತ್ಯಾಧುನಿಕ ಯುದ್ಧ ಸಾಮಗ್ರಿಗಳನ್ನು ಹೊಂದುವ ಮೂಲಕ ತನ್ನ ಸಾಮರ್ಥ್ಯ ಹೆಚ್ಚಿಸುತ್ತಿದೆ. ರಾಷ್ಟ್ರೀಯ ಭದ್ರತೆಗೆ ಎದುರಾಗಿರುವ ಸವಾಲುಗಳನ್ನು ಮನಗಂಡು ಫಿರಂಗಿ ದಳದ ಸಾಮರ್ಥ್ಯವನ್ನು ಹೆಚ್ಚಿಸಲು ವಿವಿಧ ಯುದ್ಧ ಸಲಕರಣೆಗಳನ್ನು ಖರೀದಿಸಲಾಗುತ್ತಿದೆ ಎಂದು ಸೇನೆಯ ಫಿರಂಗಿ ದಳದ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅದೋಷ್ ಕುಮಾರ್ ತಿಳಿಸಿದ್ದಾರೆ. ಫಿರಂಗಿ ದಳವನ್ನು ನಾವು ಹಿಂದೆಂದೂ ಕಾಣದಂತಹ ವೇಗದಲ್ಲಿ ಅಧುನೀಕರಣಗೊಳಿಸುತ್ತಿದ್ದೇವೆ ಎಂದು ಆರ್ಟಿಲರಿ ರೆಜಿಮೆಂಟ್‌ನ (ಫಿರಂಗಿ …

Read More »

ಯಾದಗಿರಿಯಲ್ಲಿ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯದ ಕೊರತೆ

ಯಾದಗಿರಿ: ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಪ್ರಾಗೈತಿಹಾಸಿಕ, ಐತಿಹಾಸಿಕ ಪ್ರವಾಸಿ ತಾಣಗಳಿದ್ದು, ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ. ಕೃಷ್ಣಾ ಮತ್ತು ಭೀಮಾ ನದಿಗಳು ಜಿಲ್ಲೆಯಲ್ಲಿ ಹರಿಯುತ್ತಿವೆ. ಯಾದಗಿರಿ ತಾಲ್ಲೂಕಿನ ಹತ್ತಿಕುಣಿ, ಸೌದಗಾರ್‌ ಬಳಿ ಎರಡು ಚಿಕ್ಕ ಜಲಾಶಯಗಳಿವೆ. ನಾರಾಯಣಪುರದಲ್ಲಿ ದೊಡ್ಡ ಜಲಾಶಯವಿದೆ. ಕೋಟೆ ಸೇರಿದಂತೆ ಬೆಟ್ಟಗುಡ್ಡಗಳಿಂದ ಆವೃತ್ತವಾಗಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಆದರೆ, ಅವುಗಳನ್ನು ಜನರಿಗೆ ಪ್ರವಾಸಿ ತಾಣವಾಗಿ ರೂಪಿಸಿ ಅವುಗಳಿಂದ ಆದಾಯ …

Read More »

ಕೇಂದ್ರ ಸರ್ಕಾರದ ಕೇಂದ್ರ ಮತ್ತು ಕಲ್ಯಾಣ ಸಮಿತಿಯ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇಮಕ

ದಾವಣಗೆರೆ: ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕೇಂದ್ರ ಸರ್ಕಾರದ ಕೇಂದ್ರ ಮತ್ತು ಕಲ್ಯಾಣ ಸಮಿತಿಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. 18ನೇ ಲೋಕಸಭೆಯಲ್ಲಿ ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರ್ ಓಂ. ಬಿರ್ಲಾರವರು ನೇಮಕ ಮಾಡಿದ್ದಾರೆ. ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾಗಿ ಮಹತ್ವದ ಸಮಿತಿಯಲ್ಲಿ ಡಾ. …

Read More »

ಪ್ರವಾಸೋಧ್ಯಮ ಅಭಿವೃದ್ಧಿಗೆ ಪೂರಕವಾಗಿದೆ: ರಾಘವೇಂದ್ರ ಆನೇಗುಂದಿ

ಧಾರವಾಡ : ವಿಶ್ವ ಪರ್ಯಟನೆ ಮಾಡುವುದರಿಂದ ಜೀವನಾನುಭವ ಹೆಚ್ಚುತ್ತದೆ ಮತ್ತು ಪ್ರವಾಸೋಧ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಪ್ರೆಸ್ಟೀಜ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ನಿರ್ದೇಶಕ ರಾಘವೇಂದ್ರ ಆನೆಗುಂದಿ ಅವರು ಹೇಳಿದರು. ಅವರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಧಾರವಾಡ ಪ್ರೆಸ್ಟೀಜ್ ಇನ್ಸ್ಟೀಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಸಹಯೋಗದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ರಾಜ್ಯ ಮತ್ತು …

Read More »

285 ಕೋಟಿ ರೂ. ವೆಚ್ಚದಲ್ಲಿ ಐಸ್ ಕ್ರೀಂ ಉತ್ಪಾದನಾ ಘಟಕ ಸ್ಥಾಪನೆ

ಬೆಂಗಳೂರು: ಐವತ್ತು ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 14 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳು ಸೇರಿದಂತೆ ಒಟ್ಟು 88 ಯೋಜನೆಗಳಿಂದ ₹4,071.11 ಕೋಟಿ ಬಂಡವಾಳ ಹೂಡಿಕೆಯ ಹಾಗೂ 10,585 ಜನರಿಗೆ ಉದ್ಯೋಗವಕಾಶ ಲಭಿಸುವ ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಆನೇಕಲ್‌ನ ವೀರಸಂದ್ರ …

Read More »

ಬೀಜ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋನರಡ್ಡಿ

ನವಲಗುಂದ: ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ಇರುವ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ರೈತರಿಗೆ ಹಿಂಗಾರು ಬೆಳೆ ಬೆಳೆಯಲು ಕಡಲೆ, ಗೋಧಿ, ಜೋಳ, ಬೀಜ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ರೈತ ಭಾಂದವರಿಗೆ ಬೀಜ ವಿತರಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎನ್.ಹೆಚ್.ಕೋನರೆಡ್ಡಿ ನೆರವೇರಿಸಿ ಚಾಲನೆ ನೀಡಿದರು.ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ ಸೇರಿದಂತೆ ಅನೇಕರು ಇದ್ದರು.

Read More »

ಸ್ವಚ್ಛತಾ ಹೀ ಸೇವಾ ಅಭಿಯಾನ

ನವಲಗುಂದ: ನಗರದ ರಾಜಕುಮಾರ ಸಂಘದ ಕಚೇರಿಯಲ್ಲಿ ಸ್ವಚ್ಛ ಭಾರತ ಮಿಷನ್ ನಗರಾಭಿವೃದ್ಧಿ ಇಲಾಖೆ, ಪೌರಡಳಿತ ನಿರ್ದೇಶನಾಲಯ ಮತ್ತು ಪುರಸಭೆ ಕಾರ್ಯಾಲಯ ಸಹಯೋಗದೊಂದಿಗೆ ಸ್ವಚ್ಛತಾ ಹೀ ಸೇವಾ ಅಭಿಯಾನ 2024 ಅಡಿಯಲ್ಲಿ ಮಾನವೀಯತೆ ಗೋಡೆ ಎಂಬ ವ್ಯಾಖ್ಯಾನದೊಂದಿಗೆ ಆ‌ರ್.ಆ‌ರ್.ಆ‌ರ್. ಕೇಂದ್ರದ ಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕ ಎನ್.ಹೆಚ್.ಕೋನರಡ್ಡಿ ಉದ್ಘಾಟನೆ ಮಾಡಿ ಮಾತನಾಡಿದರು.ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, …

Read More »