BigTv News
September 27, 2024
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಡಾ.ಕೆ.ಸುಧಾಕರ್ ನೇಮಕ ಮಾಡಲಾಗಿದೆ. ಡಾ.ಕೆ.ಸುಧಾಕರ್ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಇದಕ್ಕೆ ಸಂಸದ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಅವರು ಹೇಳಿದ್ದಾರೆ. 2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ …
Read More »
Shaikh BigTv
September 27, 2024
Breaking News, ಧಾರವಾಡ
ಧಾರವಾಡ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಿನ್ನೆಯಷ್ಟೇ ಧಾರವಾಡ ತಹಶೀಲ್ದಾರ ಕಚೇರಿ ಎದುರು ಧರಣಿ ನಡೆಸಿದ್ದರು. ಇಂದು ಎಲ್ಲಾ ನೌಕರರು ತಮ್ಮ ಧರಣಿಯನ್ನು ಧಾರವಾಡ ಡಿಸಿ ಕಚೇರಿ ಎದುರಿಗೆ ಶಿಫ್ಟ್ ಮಾಡಿದ್ದಾರೆ. ಗ್ರಾಮ ಆಡಳಿತಾಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಗುಣಮಟ್ಟದ ಟ್ಯಾಬ್ ನೀಡಬೇಕು, ಕಚೇರಿಯಲ್ಲಿ ಪ್ರಿಂಟರ್ ಹಾಗೂ ಸ್ಕ್ಯಾನರ್ ನೀಡಬೇಕು ಹಾಗೂ ಕಚೇರಿ ಸಿಬ್ಬಂದಿಗೆ ಸುಸಜ್ಜಿತ ಟೇಬಲ್, ಖುರ್ಚಿ ಪೂರೈಕೆ ಮಾಡಬೇಕು ಹಾಗೂ ಕರ್ತವ್ಯ ನಿರತ ಸಿಬ್ಬಂದಿ ಸಾವಿಗೀಡಾದಾಗ ಆತನ …
Read More »
BigTv News
September 27, 2024
Breaking News, ಕೊಡಗು
ಮಡಿಕೇರಿ: ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಂಬಂಧ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ …
Read More »
BigTv News
September 27, 2024
Breaking News, ಬೆಂಗಳೂರು
ಬೆಂಗಳೂರು : ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ಬೆಲೆ ಸುಮಾರು 20% ರಷ್ಟು ಏರಿಕೆಯಾಗಿದ್ದು, ರಾಜ್ಯದಲ್ಲಿ ಹಬ್ಬದ ಋತುವನ್ನು ಆಚರಿಸುವ ಜನರ ಮೇಲೆ ಆರ್ಥಿಕ ಒತ್ತಡವನ್ನ ಹೆಚ್ಚಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯೊಂದಿಗೆ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಡುಗೆ ಎಣ್ಣೆ ಬೆಲೆಗಳ ಹೆಚ್ಚಳದ ಜೊತೆಗೆ, ಹಾಲು, ಬೇಳೆಕಾಳುಗಳು ಮತ್ತು ತರಕಾರಿಗಳಂತಹ ಅಗತ್ಯ ವಸ್ತುಗಳು ಇತ್ತೀಚಿನ ವಾರಗಳಲ್ಲಿ ದುಬಾರಿಯಾಗಿವೆ. ಮದ್ಯದ ಬೆಲೆಯನ್ನು ಈಗಾಗಲೇ ಮೂರು ಬಾರಿ ಹೆಚ್ಚಿಸಲಾಗಿದ್ದು, ರಾಜ್ಯ ಸರ್ಕಾರವು …
Read More »
BigTv News
September 27, 2024
Breaking News, ಕಲಬುರಗಿ
ಕಲಬುರಗಿ : ಬ್ಯಾಂಕ್ ಸಾಲದ ನೋಟಿಸ್‌ಗೆ ಹೆದರಿ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಸುಲೇಪೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊತಂಗಲ ಗ್ರಾಮದ ನಿವಾಸಿ ಪಾಂಡಪ್ಪ ಕೋರವನ್ (46) ಮೃತ ರೈತ ಎಂದು ತಿಳಿದು ಬಂದಿದೆ. ರೈತ ಪಾಂಡಪ್ಪ ಬ್ಯಾಂಕ್‌ನಿಂದ 1 ಲಕ್ಷ ರೂ. ಸಾಲ ಪಡೆದಿದ್ದ. ಈ ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಎರಡು ಬಾರಿ ನೋಟಿಸ್ ನೀಡಿದ್ದರು ಎನ್ನಲಾಗಿದೆ. …
Read More »
Shaikh BigTv
September 27, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಪ್ರಕಾರ, ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಏಳು ಸಂಶೋಧಕರು ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಎಕ್ಸೆವಿಯರ್ ಸಹಯೋಗದೊಂದಿಗೆ ಸಂಗ್ರಹಿಸಿದ ಪಟ್ಟಿಯಲ್ಲಿ ವಿಶ್ವದ ಅತ್ಯಂತ ಪ್ರಭಾವಶಾಲಿ ವಿಜ್ಞಾನಿಗಳ ಅಗ್ರ 2% ರಲ್ಲಿ KLETU ನ ಏಳು ಅಧ್ಯಾಪಕ ಸದಸ್ಯರು ಮತ್ತು ವಿಜ್ಞಾನಿಗಳು ಒಂದು ರೀತಿಯ ದಾಖಲೆಯಲ್ಲಿ ಹೆಸರಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ತೇಜರಾಜ್ ಎಂ.ಅಮೀನಭಾವಿ, ನಾಗರಾಜ್ ಪಿ.ಶೆಟ್ಟಿ, ನಾಗರಾಜ್ …
Read More »
BigTv News
September 27, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರದಿಂದ ಪಿಎಂ ಮಿತ್ರ ಟೆಕ್ಸ್ಟೈಲ್ ಪಾರ್ಕ್ ಯೋಜನೆಗೆ ಮೂಲಸೌಕರ್ಯ ನಿರ್ಮಿಸಲು 390 ಕೋಟಿ ರೂಪಾಯಿ ಅನುದಾನ ಸಚಿವ ಸಂಪುಟದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿ ನೀಡಿದರು. ಎಪಿಎಂಸಿ ವರ್ತಕರು ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ಅಧ್ಯಕ್ಷರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಒಂದು ಸಾವಿರ ಎಕರೆ ಭೂಮಿ ಹಂಚಿಕೆ ಮಾಡಿ ಪಿಎಂ ಮಿತ್ರ …
Read More »
BigTv News
September 27, 2024
Breaking News, ಆಂಧ್ರ ಪ್ರದೇಶ
ವಿಜಯವಾಡ: ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಡೀ ಜಗತ್ತಿನ ಸಂಪತ್ತಾಗಿದ್ದು, ಇವುಗಳ ಸಂರಕ್ಷಣೆಗೆ ಎಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳಲ್ಲಿ ವನ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಒಗ್ಗೂಡಿ ಶ್ರಮಿಸಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ವಿಜಯವಾಡದ ಲೆಮನ್ ಟ್ರೀ ಹೊಟೆಲ್ ನಲ್ಲಿ ಶುಕ್ರವಾರ (ಸೆ 27 ) ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ …
Read More »
BigTv News
September 27, 2024
Breaking News, ಕೊಪ್ಪಳ
ಯಲಬುರ್ಗಾ: ಸಮುದಾಯದ ಅಭಿವೃದ್ಧಿಯು ಶಿಕ್ಷಣ ಮತ್ತು ದುಡಿಮೆಯಿಂದ ಸಾಧ್ಯ. ಜತೆಗೆ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಬಹುಮುಖ್ಯ ಪಾತ್ರವಾಗುತ್ತದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ಪಟ್ಟಣದಲ್ಲಿ ಜಿಲ್ಲಾ ಗಾಣಿಗ ಸಮಾಜದ ವತಿಯಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಾಣಿಗ ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಪ್ರದೇಶದಲ್ಲಿ ನಿವೇಶನ ಒದಗಿಸಿದರೆ ₹8 ಕೋಟಿ ಅನುದಾನ ನೀಡಲಾಗುವುದು. ಈ ಬಗ್ಗೆ ಸಮುದಾಯದ ಮುಖಂಡರು …
Read More »
BigTv News
September 27, 2024
Breaking News, ಕಲಬುರಗಿ
ಚಿಂಚೋಳಿ: ತೆಲಂಗಾಣದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಮದ ಮೊಹ್ಮದ್ ಗೌಸ್ ಮೊಹ್ಮದ್ ಒಸ್ಮಾನ್ ಗೆ ಸೇರಿದ ಸರ್ವೇ ನಂಬರ್ 109//1 ರ 1 ಎಕರೆ ಹಾಗೂ ಅಬ್ದುಲ್ ರವೂಫ್ ಅಬ್ದುಲ್ ನಬೀಸಾಬ್ ಗೆ ಸೇರಿದ ಸರ್ವೇ ನಂಬರ್ 106//1 ರ 4 ಎಕರೆ 37 ಗುಂಟೆ ಕೃಷಿ ಜಮೀನು ಮಾರ್ಪಡಿಸಿ ಶಾಹಬಾದ ಕಲ್ಲು ಗಾಣಿಗರಿಕೆ ನಡೆಸುವ ಅನುಮತಿ ಕೋರಿ ಸಲ್ಲಿಸಿದ ಅನುಮತಿಗಾಗಿ ರಾಜ್ಯ ಪರಿಸರ ಮಾಲಿನ್ಯ …
Read More »