Breaking News

Breaking News

ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಸೂಪರ್ ಕಂಪ್ಯೂಟರ್ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಬದ್ಧತೆಗೆ ಅನುಗುಣವಾಗಿ, ಪಿಎಂ ಮೋದಿ ಗುರುವಾರ ರಾಷ್ಟ್ರೀಯ ಸೂಪರ್ ಕಂಪ್ಯೂಟರ್ ಮಿಷನ್ ಅಡಿಯಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸುಮಾರು 130 ಕೋಟಿ ರೂ.ಗಳ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ಬಿಡುಗಡೆ ಮಾಡಿದರು. ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪುಣೆಯ ಜೈಂಟ್ ಮೀಟರ್ ರೇಡಿಯೋ …

Read More »

5,800 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ಯೋಜನೆ ನಿರ್ಮಾಣ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಕ್ವಿನ್ ಸಿಟಿ ಇದೊಂದು ವೈಶಿಷ್ಟ್ಯ ಪೂರ್ಣ ಯೋಜನೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು. ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ …

Read More »

ವರ್ಲ್ಡ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದ ಹುಬ್ಬಳ್ಳಿ ಬಾಲಕಿ

ಹುಬ್ಬಳ್ಳಿ : 17 ಸೆಪ್ಟೆಂಪರ್ ನಿಂದ 22 ಸೆಪ್ಟೆಂಬ‌ರ್ ವರೆಗು ಇಟಲಿಯಲ್ಲಿ ನಡೆದ ವರ್ಲ್ಡ್ ಸ್ಟೇಟ್ ಗೇಮ್ಸ್ 2024 ನಲ್ಲಿ ಹುಬ್ಬಳ್ಳಿ ರೋಲ‌ರ್ ಸ್ಕೆಟಿಂಗ್ ಅಕಾಡೆಮಿ ಸ್ಕೆಟರ್ ಆದ ತ್ರಿಶಾ ಜಡಲ ಟೀಮ್ ಇಂಡಿಯ ಪ್ರತಿನಿಧಿಸಿ ಟೀಮ್ ಇಂಡಿಯಾಗೆ ಕಂಚಿನ ಪದಕ ಗೆದ್ದು ತಂದಿದಾರೆ. ತ್ರಿಶಾ ಉತ್ತರ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ವರ್ಲ್ಡ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದ ಏಕೈಕ ಬಾಲಕಿಯಾಗಿದ್ದಾರೆ.ಈ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು …

Read More »

ಮೊಬೈಲ್’ಗಳನ್ನು ಕಳ್ಳತನ ಮಾಡುತ್ತೀದ್ದ ಆರೋಪಿ ವಶಕ್ಕೆ

ಹುಬ್ಬಳ್ಳಿ: ಕಳ್ಳತನ ಮಾಡಿದ್ದ ಮೊಬೈಲ್’ಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಸೆಟ್ಲಮೆಂಟ್ ನಿವಾಸಿಯಾಗಿರುವ ಸ್ಯಾಟ್ಸನ್ ಜಮಖಂಡಿ ಎಂಬಾತ ವಿವಿಧ ಕಂಪನಿಗಳ 10 ಮೊಬೈಲ್ ಗಳನ್ನು ಕುಸುಗಲ್ ಬಳಿಯ ರಿಂಗ್ ರೋಡ್ ಹತ್ತಿರದಲ್ಲಿ ಲಾರಿ ಚಾಲಕರಿಗೆ ಮಾರಾಟಕ್ಕೆ ಯತ್ನ ನಡೆಸಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆ ಗ್ರಾಮೀಣ ಠಾಣೆ ಇನ್ಸೆಕ್ಟ‌ರ್ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ ಪಿಎಸ್‌ಐ ಸಚಿನ್‌ ಅಲಮೇಲಕರ, ಸಿಬ್ಬಂದಿಗಳಾದ ಎನ್.ಎಮ್.ಹೊನ್ನಪ್ಪನವರ, …

Read More »

ಕವಿವಿ ಪ್ರಭಾರ ಕುಲಪತಿಯಾಗಿ ಡಾ.ಮಂಜುಳಾ ಅವರು ಅಧಿಕಾರ ಸ್ವೀಕಾರ

ಧಾರವಾಡ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿಯಾಗಿದ್ದ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರಾವಧಿ ಪೂರ್ಣಗೊಂಡಿದ್ದು, ಇದೀಗ ಕವಿವಿ ಪ್ರಭಾರ ಕುಲಪತಿಯಾಗಿ ಡಾ.ಮಂಜುಳಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಡಾ.ಮಂಜುಳಾ ಅವರಿಗೆ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರ ಹಸ್ತಾಂತರಿಸಿದರು.

Read More »

ಕರ್ನಾಟಕ ರಾಜ್ಯದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಜೆ.ಅಬ್ಬಾಸ್‌ ಮುಲ್ಲಾ ಆಯ್ಕೆ

ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ರಾಜ್ಯದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್‌ ಮುಲ್ಲಾ ಅವರು ಆಯ್ಕೆಯಾಗಿದ್ದಾರೆ. ಸುಮಾರು 25 ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅವಿಸ್ಮರಣೀಯ ಸೇವೆಯನ್ನು ಸಲ್ಲಿಸಿರುವ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಅವರು ಈ ಹಿಂದೆ ಧಾರವಾಡ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೂಡ ಸೇವೆ ಸಲ್ಲಿಸಿದ್ದು, ಈಗ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿರುವುದು ಧಾರವಾಡ ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ. ಇನ್ನೂ ಹಿರಿಯ ಪತ್ರಕರ್ತರಾದ …

Read More »

ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನಕ್ಕೆ ತುಮಕೂರು ಜಿಲ್ಲೆಯ 29 ಗ್ರಾಮಗಳು ಆಯ್ಕೆ

ತುಮಕೂರು: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯ 29 ಗ್ರಾಮ ಗಳನ್ನು ಆಯ್ಕೆ ಮಾಡಿದ್ದು, ಮೂಲಭೂತ ಸೌರ್ಯಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ 79156 ಕೋಟಿ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ …

Read More »

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಚಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು …

Read More »

ಹಂತ ಹಂತವಾಗಿ ರಾಜೀವ್ ವಿವಿ ರಾಮನಗರಕ್ಕೆ ಸ್ಥಳಾಂತರ: ಡಿಸಿಎಂ ಡಿಕೆಶಿ

ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ (ನ್ಯಾಷನಲ್ ಮೆಡಿಕಲ್ ಕಮಿಷನ್)ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಮನಗರ ಹಾಗೂ ಕನಕಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಹಾಗೂ ಕಾರ್ಯಾರಂಭ ಸಂಬಂಧ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, …

Read More »

ಮಹಿಳೆಗೆ ಚಾಕು ಇರಿದು ಪರಾರಿಯಾಗಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ : ಕಮೀಷನರ್ ಎನ್. ಶಶಿಕುಮಾರ್

ಹುಬ್ಬಳ್ಳಿ: ಗಾಯಗೊಂಡಿರುವ ನೀಲಾ ಮಗಳಿಗೆ ಆರೋಪಿ ಮಹೇಶ್ ಮದುವೆಯಾಗು, ಲವ್ ಮಾಡು ಎಂದು ಐದು ವರ್ಷದಿಂದ ಬಲವಂತ ಮಾಡುತ್ತಿದ್ದ ಇಂದು ಏಕಾಏಕಿ ಬಂದು ನೀಲಾ ಎಂಬ ಮಹಿಳೆಗೆ ಚಾಕು ಇರಿದು ಪರಾರಿಯಾಗಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದರು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ನಂತರ ಮಾತನಾಡಿದ ಅವರು , ಹುಬ್ಬಳ್ಳಿಯ ಲೋಹಿಯಾ ಕಾಲೋನಿಯಲ್ಲಿ ಮಹೇಶ್ ಎಂಬಾತ ಏಕಾಏಕಿ ಬಂದು …

Read More »