Breaking News

Breaking News

ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ನಡೆದಿದೆ. ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆ ನೀಡಿದ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಗಳ ಹಿಂದೆಯಷ್ಟೆ ಆಹಾರದಲ್ಲಿ ವಿಷ ಬೇರೆಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು …

Read More »

ಉಪಚುನಾವಣೆ ಗೆಲ್ಲಲು ಬಿಜೆಪಿ ರಾಜ್ಯ ಕೋರ್ ಕಮೀಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿ ವಿಸ್ತ್ರತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚನ್ನಪಟ್ಟಣ, ಸೊಂಡೂರು ಮತ್ತು ಶಿಗ್ಗಾಂವಿ ಉಪ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆ ಆಗಬಹುದು. 3 ಉಪ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ, ಗೆಲ್ಲುವ ದೃಷ್ಟಿಯಿಂದ ವಿಶೇಷ ಪ್ರಯತ್ನ …

Read More »

ಪತ್ರಿಕೋದ್ಯಮ ವಿಭಾಗದಲ್ಲಿ 9 ಚಿನ್ನದ ಪದಕ ಪಡೆದ ಜಯಶ್ರೀ ತಳವಾರ

ಧಾರವಾಡ: ಹೆಚ್ಚಿಗೆ ಸಮಯ ಓದುವುದಕ್ಕಿಂತ ಇಷ್ಟುಪಟ್ಟು ಒಂದು ತಾಸು ಓದಬೇಕು ಎಂದು ಪತ್ರಿಕೋದ್ಯಮ ವಿಭಾಗದಲ್ಲಿ 9 ಚಿನ್ನದ ಪದಕ ಪಡೆದ ಜಯಶ್ರೀ ತಳವಾರ ಎಂಬ ವಿದ್ಯಾರ್ಥಿನಿ ತನ್ನ ಮನದಾಳದ ಮಾತು ಹಂಚಿಕೊಂಡಿದ್ದಾಳೆ. ಮಂಗಳವಾರ ನಡೆದ ಧಾರವಾಡದ ಕವಿವಿ ಘಟಿಕೋತ್ಸವದಲ್ಲಿ ಜಯಶ್ರೀ ತಳವಾರ ಅವರಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಇವತ್ತಿನ ನನ್ನ ಈ ಸಾಧನೆಗೆ ನನ್ನ ತಂದೆ, ತಾಯಿ, ವಿದ್ಯೆ ಕಲಿಸಿದ ಗುರುಗಳು, ಸ್ನೇಹಿತೆಯರ ಸಹಕಾರ ಬಹಳಷ್ಟಿತ್ತು ಎಂದಿದ್ದಾಳೆ.

Read More »

ಸಿಎಂ ಸಾಚಾ ಆಗಿದ್ದರೇ ರಾಜೀನಾಮೆ ನೀಡಲಿ: ಶೆಟ್ಟರ್ ಕಿಡಿ

ಹುಬ್ಬಳ್ಳಿ: ಸಿಎಂ ಸಾಚಾ ಆಗಿದ್ದರೇ ರಾಜೀನಾಮೆ ನೀಡಲಿ. ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು. ಈ ಭಂಡತನ ಸರಿಯಲ್ಲಾ.. ಅಧಿಕಾರದಲ್ಲಿದ್ದು, ತನಿಖೆ ಎದುರಿಸುವುದು ನ್ಯಾಯ ಸಮ್ಮತವಾಗಲ್ಲ. ಈ ಭಂಡತನ ಮುಂದುವರಿದ್ರೆ ಜನ ದಂಗೆ ಎಳ ಬೇಕಾಗುತ್ತದೆ. ಕಾಂಗ್ರೆಸ್ ಹೈಕಮಾಂಡ್ ಈ ಕೂಡಲೇ ಸಿಎಂ …

Read More »

ಯಾವ ತನಿಖೆಗೂ ಹಿಂಜರಿಯುವುದಿಲ್ಲ, ಸತ್ಯಕ್ಕೆ ಜಯ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ, ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ, ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಹೈಕೋರ್ಟ್ ಎತ್ತಿ ಹಿಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಅವರು …

Read More »

ವಿಜಯಪುರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಅಮೃತಧಾರೆ ತಾಯಿಹಾಲು ಕೇಂದ್ರ ಸ್ಥಾಪನೆ

ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೇವೆ ಜೊತೆಗೆ ಕಳೆದ ಸುಮಾರು ಒಂದೂವರೇ ವರ್ಷದಿಂದ ಅಮೃತಧಾರೆ ತಾಯಿಹಾಲು ಕೇಂದ್ರ ಸ್ಥಾಪನೆಯಾಗಿದ್ದು, ಹುಟ್ಟಿದ ಮಗುವಿಗೆ ಜೀವಾ ಮೃತವಾಗಿರುವ ತಾಯಿ ಎದೆ ಹಾಲು ವಂಚಿತ ಸಾವಿರಾರು ನವಜಾತ ಶಿಶುಗಳಿಗೆ ಬಿ.ಎಲ್.ಡಿ.ಇ ಉಚಿತವಾಗಿ ತಾಯಿ ಹಾಲು ಒದಗಿಸುವ ಮೂಲಕ ಕಾಮಧೇನುವಿನಂತೆ ಸಮಾಜಮುಖಿ ಸೇವೆಗೈಯುತ್ತಿದೆ. ಕಳೆದ ಒಂದೂವರೇ ವರ್ಷಗಳ ಹಿಂದೆ ಆರಂಭಿಸಲಾದ ಸುಸಜ್ಜಿತ ಅಮೃತಧಾರೆ ತಾಯಿ ಹಾಲಿನ ಭಂಡಾರದಿಂದ ಇಲ್ಲಿಯವರೆಗೂ 1800 ಕ್ಕೂ …

Read More »

ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ನಿಗಮದ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಿಎಂ

ಶಿವಮೊಗ್ಗ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ 25 ಲಕ್ಷ ರೂಪಾಯಿಯ ಪರಿಹಾರ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಂದ್ರಶೇಖರ್‌ ಆತ್ಮಹತ್ಯೆ ದುರದೃಷ್ಟದ ಘಟನೆ, ಸರ್ಕಾರ ಅವರ ಕುಟುಂಬದ ನೋವಿಗೆ ಸ್ಪಂದಿಸಿದೆ ಮತ್ತು ಯಾವತ್ತೂ ಜತೆಗಿರಲಿದೆ ಎಂದು ಹೇಳಿದರು. ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, …

Read More »

ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತಿಗೆ ಮುಂದಾದ 400 ಉಗ್ರರು

ಅಗರ್ತಲಾ: ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಉಗ್ರಗಾಮಿಗಳು ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್) ಗೆ ಸೇರಿದವರಾಗಿದ್ದಾರೆ. ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕೇಂದ್ರ ಮತ್ತು ರಾಜ್ಯ …

Read More »

ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ಬಿಗ್ ಶಾಕ್: ಬಿಜೆಪಿಯಲ್ಲಿ ಸಂತಸ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲದ ನಿರ್ಧಾರವನ್ನು ಹೈಕೋರ್ಟ್​ ಎತ್ತಿಹಿಡಿದೆ. ಸಿದ್ದರಾಮಯ್ಯ ಅರ್ಜಿ ವಜಾಗೊಂಡಿದ್ದು, ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಕೋರ್ಟ್​ ತೀರ್ಪು ಹೊರಬೀಳುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿಯಲ್ಲಿ ಸಂತಸ ಮನೆ ಮಾಡಿದೆ. ಮುಂದಿನ ಹೋರಾಟ ಪ್ರಕಟಕ್ಕೆ ಬಿಜೆಪಿ ಮುಂದಾಗಿದ್ದು, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನವರೆಗೂ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಹೈಕೋರ್ಟ್​ ತೀರ್ಪು …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ತುರ್ತು ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು : ಮುಡಾ ಹಗರಣದ ಬಗ್ಗೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ 10 ಗಂಟೆ ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್ ಪಿ ಸಭೆ ನಡೆಯಲಿದ್ದು, ಮುಂದಿನ ಸಿಎಂ ನಡೆ ಬಹಳ ಕುತೂಹಲ ಮೂಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು …

Read More »