Breaking News

Breaking News

ದೇವಸ್ಥಾನಗಳ ನಿರ್ವಹಣೆಗೆ ಸೂಕ್ತ ಕಾನೂನು ರಚನೆಯಾಗಬೇಕು: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ 1.80 ಲಕ್ಷ ದೇವಸ್ಥಾನಗಳಿದ್ದು, ಇದರಲ್ಲಿ 34 ಸಾವಿರ ದೇವಸ್ಥಾನಗಳು ಮಾತ್ರ ಮುಜರಾಯಿ ಇಲಾಖೆ ಅಧೀನದಲ್ಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ಅಧೀನದಿಂದ ಹೊರಗೆ ಇಡಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ ರೀತಿಯಲ್ಲಿ ಸರ್ಕಾರದ ಅಧೀನದಿಂದ ದೇವಸ್ಥಾನಗಳನ್ನು ಹೊರಗಿಡಬೇಕು ಎಂಬ ಮಠಾಧೀಶರ ಆಗ್ರಹಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ನಮ್ಮ ರಾಜ್ಯದಲ್ಲಿ ಯಾವುದೇ ಮಠಗಳು ಸರ್ಕಾರದ ಅಧೀನದಲ್ಲಿ ಇಲ್ಲ. …

Read More »

ಕೋಲ್ಕತ್ತಾದಲ್ಲಿ ಹೊಸ ಸೆಮಿಕಂಡಕ್ಟರ್‌ ಘಟಕ ಸ್ಥಾಪನೆ

ನವದೆಹಲಿ: ಭಾರತದೊಂದಿಗೆ ಬಾಂಧವ್ಯವನ್ನು ಬಲಪಡಿಸಲು ಅಮೆರಿಕ ಉತ್ಸುಕವಾಗಿದೆ ಎಂದು ಸೂಚಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಮೆರಿಕದ ರಕ್ಷಣಾ ಸಂಸ್ಥೆ ಜನರಲ್ ಅಟಾಮಿಕ್ಸ್‌ನಿಂದ 31 ದೀರ್ಘಾವಧಿಯ ಎಂಕ್ಯೂ-9ಬಿ ಸಶಸ್ತ್ರ ಡ್ರೋನ್‌ಗಳ ಖರೀದಿ ಪ್ರಗತಿ ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹೊಸ ಸೆಮಿಕಂಡಕ್ಟರ್ ಘಟಕ ಸ್ಥಾಪನೆ ಕುರಿತು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಂವಾದದಲ್ಲಿ ಜೋ ಬೈಡನ್, ದ್ವಿಪಕ್ಷೀಯ ರಕ್ಷಣಾ ಸಹಕಾರ ಮತ್ತು ವಿಲಿಟರಿ ನಂಟನ್ನು ಹೆಚ್ಚಿಸುವ ಮಾರ್ಗಗಳು ಸೇರಿದಂತೆ …

Read More »

ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಏರಿಕೆ ಆಗಿದ್ದರ ಮಧ್ಯೆ ಈರುಳ್ಳಿ ಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಸಿಕ್ಕಿದೆ, ಈರುಳ್ಳಿ ಕೆ.ಜಿ. ಚಿಲ್ಲರೆ ಬೆಲೆ 55 ರಿಂದ 65 ರೂಪಾಯಿವರೆಗೆ ಇದೆ. ಫ್ರೆಶೋದಲ್ಲಿ ಕೆ.ಜಿ. ಈರುಳ್ಳಿಗೆ 79 ರೂಪಾಯಿ ಇದೆ. ಇದೆಲ್ಲ ಗಮನಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಇಂದಿನಿಂದ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದೆ. ಬೆಂಗಳೂರಿನಿಂದ ಇಂದಿನಿಂದ ಮೊಬೈಲ್ ವ್ಯಾನ್ ಮೂಲಕ ಕೇಂದ್ರ ಸರ್ಕಾರ ರಿಯಾಯಿತಿ ದರಕ್ಕೆ …

Read More »

ರೇಷ್ಮೆ ಬೆಳೆ ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ: ಕೇಂದ್ರ ಸಚಿವ ಎಚ್ ಡಿ ಕೆ

ಮೈಸೂರು: ಭಾರತದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಇಂದು ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು. ಮೈಸೂರಿನಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …

Read More »

ಸಿಡಿಲು ಬಡಿದು ನಾಲ್ವರು ಸಾವು

ಯಾದಗಿರಿ: ತಾಲ್ಲೂಕಿನ ಜಿನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ. ಕಿಶನ್‌ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24), ಸುನಿಬಾಯಿ ರಾಠೋಡ (30), ನೇನು ನಿಂಗಪ‍್ಪ ಜಾಧವ (18) ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ತಾಂಡಾದ ಜಮೀನಿನಲ್ಲಿ ಈರುಳ್ಳಿ ಸಸಿ ನಾಟಿ ಮಾಡುತ್ತಿರುವ ವೇಳೆ ಮಳೆ ಬಂದಿದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ಜಮೀನಿನಲ್ಲಿರುವ ದುರುಗಮ್ಮ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಈ ವೇಳೆ ಸಿಡಿಲು …

Read More »

ಸಿಎಂ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಸಭೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ನಾಲ್ಕನೇ ಸಭೆ ನಡೆಸಲಾಯಿತು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ.179.30 ಕೋಟಿ ಟೆಂಡರ್‌ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು, ಈಗ ಕಾಮಗಾರಿ ಮುಗಿಸಲು 3 ತಿಂಗಳ ಡೆಡ್ ಲೈನ್ ನೀಡಲಾಗಿದೆ. ಈ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ …

Read More »

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ದೇಶದಾದ್ಯಂತ ನಂದಿನಿ ತುಪ್ಪಕ್ಕೆ ಭಾರೀ ಬೇಡಿಕೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಸಿ.ಎಂ ಎನ್‌.ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ತಯಾರಿಸಿದ ನಂದಿನಿ ತುಪ್ಪಕ್ಕೆ ದೇಶದಾದ್ಯಂತ ಜನರು ಮತ್ತು ದೇವಾಲಯಗಳಿಂದ ಭಾರಿ ಬೇಡಿಕೆ ಬಂದಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ (ಬೆಮುಲ್‌) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಎಂಎಫ್ ಅಧ್ಯಕ್ಷನಿದ್ದಾಗ, ತಿರುಮಲ ತಿರುಪತಿ ದೇವಸ್ಥಾನಕ್ಕೆ ಲಡ್ಡು …

Read More »

ನಟೋರಿಯಸ್ ರೌಡಿ ಶೀಟರ್ ಅರೆಸ್ಟ್ ಮಾಡಿದ ಹುಬ್ಬಳ್ಳಿ ಪೋಲಿಸರು

ಹುಬ್ಬಳ್ಳಿಯಲ್ಲಿ ಮತ್ತೊಂದು ಫೈರಿಂಗ್… ಖಾಕಿಪಡೆಗೆ ಚಳ್ಳೆಹಣ್ಣು ತಿನಿಸಿಲು ಹೋಗಿ ಕಿಮ್ಸ್ ಪಾಲಾದ ಭೂಪ!!!! ರೋಡಲ್ಲಿ ನಿಂತು ವಸೂಲಿ ಮಾಡಿದ್ರೆ ಕಾಲು ಕಳೆದುಕೊಳ್ಳುವ ಗ್ಯಾರಂಟಿ ಸಂದೇಶ ಕೊಟ್ಟ ಪೊಲೀಸರು! ಹುಬ್ಬಳ್ಳಿ:ತಲ್ವಾರ್ ತೋರಿಸಿ ಚಿನ್ನಾಭರಣ, ಹಣ ಸೇರಿದಂತೆ ಮೊಬೈಲ್ ಫೋನ್‌ಗಳನ್ನು ದೋಚುತ್ತಿದ್ದ ನಟೋರಿಯಸ್ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಅರೆಸ್ಟ್ ಮಾಡಿದ್ದಾರೆ. ವಿನೋದ್ ಗುಡಿಹಾಳ ಎಂಬಾತನ ಮೇಲೆಯೇ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈತ ಬಳ್ಳಾರಿ, ಧಾರವಾಡ, ಹಾವೇರಿ ಸೇರಿದಂತೆ ವಿವಿಧ …

Read More »

ಕೃಷಿ ಮೇಳಕ್ಕೆ ಅಂದಾಜು ಏಳೂವರೆ ಲಕ್ಷ ಜನ ಭೇಟಿ

ಧಾರವಾಡ: ನಿನ್ನೆ ಭಾನುವಾರ ರಜಾ ದಿನವಾಗಿದ್ದರಿಂದ ಧಾರವಾಡದ ಕೃಷಿ ಮೇಳಕ್ಕೆ ಅಂದಾಜು ಏಳೂವರೆ ಲಕ್ಷ ಜನ ಭೇಟಿ ಕೊಟ್ಟಿದ್ದರು. ಇಂದು ಸೋಮವಾರವಾದರೂ ಮಧ್ಯಾಹ್ನದವರೆಗೂ ಸುಮಾರು ನಾಲ್ಕೂವರೆ ಲಕ್ಷ ಜನ ಕೃಷಿ ಮೇಳಕ್ಕೆ ಬಂದು ಕೃಷಿ ಮೇಳದ ಮೆರಗು ಮತ್ತಷ್ಟು ಹೆಚ್ಚಾಗುವಂತೆ ಮಾಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದಲೂ ಜನ ಕೃಷಿ ಮೇಳಕ್ಕೆ ಆಗಮಿಸಿದ್ದು, ಕೃಷಿಗೆ ಬೇಕಾದ ಸಲಕರಣೆಗಳನ್ನು ಖರೀದಿ ಮಾಡಿಕೊಂಡು ಹೋಗುತ್ತಿದ್ದಾರೆ. ಇದರ ಜೊತೆಗೆ ಕೃಷಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಪೂರಕ …

Read More »

ಈಶ್ವರಪ್ಪ, ಯತ್ನಾಳ್ ಸಾರಥ್ಯದಲ್ಲಿ ಆರ್ ಸಿ ಬಿ ಸಂಘಟನೆ ಆರಂಭಿಸಲು ಚಿಂತನೆ

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಸಂಘಟನೆ ಆರಂಭಿಸಲಿದ್ದಾರೆ. ರಾಯಣ್ಣ ಚೆನ್ನಮ್ಮ ಬ್ರಿಗೇಡ್(ಆರ್ ಸಿ ಬಿ) ಸಂಘಟನೆಯನ್ನು ಆರಂಭಿಸಿ ಕುರುಬ ಸಮುದಾಯ, ಪಂಚಮಸಾಲಿ ಸಮಾಜಗಳನ್ನು ಒಗ್ಗೂಡಿಸಲು ಪ್ಲಾನ್ ಮಾಡಿಕೊಂಡಿದ್ದಾರೆ. ಅಕ್ಟೋಬರ್ 20ರಂದು ಆರ್ಸಿಬಿ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿಂದೆ ಕೆ.ಎಸ್. ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ಸಂಘಟನೆ ಮಾಡಿದ್ದರು. ಇದೀಗ ಹೊಸ ರೂಪ, ಹೊಸ ಹೆಸರಿನೊಂದಿಗೆ ರಾಜ್ಯಮಟ್ಟದಲ್ಲಿ …

Read More »