Breaking News

Breaking News

ಬಿಬಿಎಂಪಿ ವ್ಯಾಪ್ತಿಯ ಬಡಾವಣೆಗಳ ಬೀದಿ ನಾಯಿಗಳಿಗೆ ಪ್ರಾಯೋಗಿಕ ಮೈಕ್ರೋ ಚಿಪ್​ ಅಳವಡಿಕೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೆಶ್ವರದ ಬಡಾವಣೆಗಳಲ್ಲಿರುವ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್​ ಅಳವಡಿಸಲಾಗುತ್ತಿದೆ ಎಂದು ಬಿಬಿಎಂಪಿಯ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್​ ವಿಕಾಸ್​ ಕಿಶೋಶ್​ ಹೇಳಿದ್ದಾರೆ. ಬಿಝ್​ ಆರ್ಬಿಟ್​ ಸಂಸ್ಥೆ ಸಹಯೋಗದೊಂದಿಗೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್​ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಹಿಂದೆ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣ …

Read More »

ಕೆ ಎಚ್ ಐ ಆರ್ ಸಿ ಟಿ ಯೋಜನೆಗೆ ಸೆ.26 ರಂದು ಸಿಎಂ ಸಿದ್ದರಾಮಯ್ಯ ಚಾಲನೆ: ಎಂ.ಬಿ.ಪಾಟೀಲ್

ಬೆಂಗಳೂರು: ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್‌ಐಆರ್ (ನಾಲೆಡ್ಜ್ ಹೆಲ್ತ್ ಇನ್ನೋವೇಶನ್ ರೀಸರ್ಚ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.26ರಂದು ಚಾಲನೆ ನೀಡಲಿದ್ದಾರೆ. ಇದರ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ದೇಶ ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ …

Read More »

ಜಾಗತಿಕ ಸಮೃದ್ಧಿಗೆ ಭಾರತ ಜಪಾನ್ ಸಂಬಂಧ ಅಭಿವೃದ್ಧಿಗೆ ಪೂರಕ: ಪ್ರಧಾನಿ ಮೋದಿ

ನವದೆಹಲಿ : ಜಾಗತಿಕ ಸಮೃದ್ಧಿಗೆ ಭಾರತ ಹಾಗೂ ಜಪಾನ್​ ನಡುವಿನ ಉಭಯ ರಾಷ್ಟ್ರಗಳ ಬಲವಾದ ಸಂಬಂಧವು ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟರು. ಅಮೆರಿಕಾದ ವಿಲ್ಮಿಂಗ್ಟನ್​​ನಲ್ಲಿ ನಡೆಯುತ್ತಿರುವ ಕ್ವಾಡ್​​​​​ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ ಅವರು, ಜಪಾನ್​​​ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಗ್ರೀನ್​​ ಎನರ್ಜಿ, ಸೆಮಿಕಂಡಕ್ಟರ್, ರಕ್ಷಣಾ ವಲಯ, ಮೂಲ ಸೌಕರ್ಯ ಮತ್ತಿರ ಮಹತ್ವದ ವಿಷಯಗಳಲ್ಲಿ ಭಾರತ ಜಪಾನ್​ ಉಭಯ ರಾಷ್ಟ್ರಗಳ …

Read More »

ಸೇನಾ ಯೋಧರಿದ್ದ ರೈಲು ದುರಂತಕ್ಕೆ ಸಂಚು: ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಅವಘಡ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ರೈಲುಗಳನ್ನು ಗುರಿಯಾಗಿಸಿ ಕಿಡಿಗೇಡಿಗಳು ದುಷ್ಕೃತ್ಯಕ್ಕೆ ಯತ್ನಿಸುತ್ತಿರುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಿವೆ. ಇದೀಗ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲ್ಲಿ ರೈಲು ದುರಂತಕ್ಕೆ ಸಂಚು ರೂಪಿಸಿದ್ದು, ಅದೃಷ್ಟವಶಾತ್‌ ಅಧಿಕಾರಿಗಳ ಸಮಯಪ್ರಜ್ಞೆಯಿಂಧ ಅವಘಡವೊಂದು ತಪ್ಪಿದೆ. ಮದ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸೇನಾ ಯೋಧರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿ ಭಾರೀ ‍ಸ್ಫೋಟಕ್ಕೆ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದೆ. ಸಗ್ಪಥಾ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸೇನೆಯ ವಿಶೇಷ ರೈಲೊಂದು ಜಮ್ಮು …

Read More »

ಕ್ವಾಡ್‌ ಶೃಂಗಸಭೆ: ಜಪಾನ್, ಆಸ್ಟ್ರೇಲಿಯಾ ಪ್ರಧಾನಿಗಳ ಜತೆ ಮೋದಿ ದ್ವಿಪಕ್ಷೀಯ ಮಾತುಕತೆ

ವಿಲ್ಮಿಂಗ್ಟನ್‌ : ಅಮೆರಿಕದಲ್ಲಿ ನಡೆಯುತ್ತಿರುವ ಕ್ವಾಡ್ ಶೃಂಗಸಭೆಯ ವೇಳೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್‌ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು. ವ್ಯಾಪಾರ, ಭದ್ರತೆ, ಬಾಹ್ಯಾಕಾಶ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಇನ್ನಷ್ಟು ಗತಿ …

Read More »

ಈ ಚುನಾವಣೆಯ ಮೂಲಕ 3 ಕುಟುಂಬಗಳ ಆಡಳಿತ ಕೊನೆಯಾಗಲಿದೆ: ಕೇಂದ್ರ ಸಚಿವ ಅಮಿತ್ ಶಾ

ಜಮ್ಮುಮತ್ತು ಕಾಶ್ಮೀರ: ಈ ಚುನಾವಣೆಯು ಜಮ್ಮುಕಾಶ್ಮೀರದಲ್ಲಿ 3 ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. ಅಬ್ದುಲ್ಲಾ ಕುಟುಂಬ, ಮುಫ್ತಿ ಕುಟುಂಬ ಮತ್ತು ನೆಹರು ಗಾಂಧಿ ಕುಟುಂಬದ ಆಡಳಿತ ಈ ಚುನಾವಣೆಯ ಮೂಲಕ ಕೊನೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ. ಎರಡನೇ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ಶಾ ಜಮ್ಮು ಕಾಶ್ಮೀರದ ಮೆಂಧರ್ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಮೂರು ಕುಟುಂಬಗಳು ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ …

Read More »

ರಾಜ್ಯದ ಮೂಲೆ ಮೂಲೆಗೂ ರಸ್ತೆಗಳನ್ನು ಸಂಪರ್ಕಿಸಲು ವಿಶೇಷ ಅನುದಾನ: ಸಚಿವ ಸತೀಶ ಜಾರಕಿಹೊಳಿ

ಬ್ಯಾಡಗಿ: ರಸ್ತೆಗಳ ಅಭಿವೃದ್ಧಿ ರಾಜ್ಯದ ಪ್ರಗತಿಗೆ ಮಾನದಂಡವಾಗಿದೆ. ಸಮರ್ಪಕ ರಸ್ತೆಗಳು ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿ ಬೆಳವಣಿಗೆಯನ್ನು ನಿರ್ಧರಿಸಲಿದ್ದು, ರಾಜ್ಯದ ಮೂಲೆ ಮೂಲೆಗಳಿಗೂ ರಸ್ತೆಗಳನ್ನು ಸಂಪರ್ಕಿಸುವಲ್ಲಿ ಆದ್ಯತೆಗೆ ಅನುಗುಣವಾಗಿ ವಿಶೇಷ ಅನುದಾನ ನೀಡುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ₹ 22 ಕೋಟಿ ವೆಚ್ಚದಲ್ಲಿ ಪಟ್ಟಣದ ಅಗಸನಹಳ್ಳಿಯಿಂದ ಶಿಡೇನೂರ ಗ್ರಾಮದವರೆಗೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ …

Read More »

ಡಿಸಿಎಂ ಡಿ.ಕೆ.ಶಿವಕುಮಾರ್ ರಿಂದ 200 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ

ಚನ್ನಪಟ್ಟಣ : 2,069 ಅರ್ಜಿದಾರರಿಗೆ ನಿವೇಶನ, 2,300 ವಸತಿ ವಿತರಣೆ ಹಾಗೂ 200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುವ ಸಂಕಲ್ಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು. ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಟ್ಟೆಕೆರೆಯ ಕುಡಿಯುವ ನೀರಿನ ಕಟ್ಟೆ ಬಳಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮೂಲಕ ಡಿಸಿಎಂ ತಮ್ಮ …

Read More »

ದಸರಾ ಪ್ರಯುಕ್ತ 34 ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ. ಇದರಿಂದಾಗಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಓಡಾಟಕ್ಕೆ ಅನುಕೂಲವಾಗಲಿದೆ. ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

Read More »

ಗೋದಾವರಿ ನದಿಯಲ್ಲಿ ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ

ಅಮರಾವತಿ: ಆಂಧ್ರದ ಕೋನಸೀಮ ಜಿಲ್ಲೆಯಲ್ಲಿ ಗೋದಾವರಿ ನದಿಯಿಂದ ಅನಿಲ ಸೋರಿಕೆಯಾಗುತ್ತಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಕಾಟ್ರೇನಿಕೋಣ ಮಂಡಲದ ಯಾಣಂ ದರ್ಯಾಲತಿಪ್ಪ ಮತ್ತು ಬಳುಸುತಿಪ್ಪ ನಡುವೆ ನದಿಯಲ್ಲಿ ಒಎನ್‌ಜಿಸಿ ಗ್ಯಾಸ್ ಪೈಪ್‌ಲೈನ್ ಹಾಕಿದೆ. ಆದರೆ ಸೆ.20 ರಂದು ರಾತ್ರಿಯಿಂದಲೇ ಗ್ಯಾಸ್ ಸೋರಿಕೆಯಾಗುತ್ತಿದ್ದು, ಇದುವರೆಗೂ ಅಧಿಕಾರಿಗಳು ಪತ್ತೆ ಮಾಡದ ಕಾರಣ ಸ್ಥಳೀಯರಲ್ಲಿ ಆತಂಕ ಎದುರಾಗಿದೆ. ನೀರಿನ ಮೇಲೆ ಬುಗ್ಗೆಯಂತೆ ಚಿಮ್ಮುತ್ತಿರುವ ಗ್ಯಾಸ್​ ನದಿ ತಳಭಾಗದಲ್ಲಿ ಹಾಕಿರುವ ಪೀಪ್​ ಒಡೆದಿರುವುದರಿಂದ ಬರುತ್ತಿದೆ. ಇದೀಗ ಗ್ಯಾಸ್ ಹೊತ್ತಿ …

Read More »