Breaking News

Breaking News

ರಸ್ತೆ ಪಕ್ಕ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೋಡ್ ರೋಲರ್: ಇಬ್ಬರು ದುರ್ಮರಣ

ಬ್ಯಾಡಗಿ: ಊಟ ಮಾಡಿ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ರೋಡ್‌ ರೋಲರ್‌ ಹರಿದ ಪರಿಣಾಮ ಇಬ್ಬರು ಕಾರ್ಮಿಕರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ರೋಡ್‌ ರೋಲರ್ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮೋಟೆಬೆನ್ನೂರು ಬಳಿ ನಡೆದಿದೆ. ಅಳಲಗೇರಿ ಗ್ರಾಮದ ಸಿದ್ದು ಕಿಳ್ಳಿಕ್ಯಾತರ (24) ಮತ್ತು ಪ್ರೀತಮ ಕಿಳ್ಳಿಕ್ಯಾತರ (24) ಮೃತಪಟ್ಟವರು. …

Read More »

ಕ್ವಾಡ್‌ ಮುಕ್ತ ಅಂತರ್ಗತ ಮತ್ತು ಸಮೃದ್ಧ ಇಂಡೋ ಪೆಸಿಫಿಕ್ ಗಾಗಿ ಬದ್ಧ: ಪ್ರಧಾನಿ ಮೋದಿ

ಡೆಲವೇರ್: ಕ್ವಾಡ್ ಉಚಿತ, ಮುಕ್ತ, ಅಂತರ್ಗತ ಮತ್ತು ಸಮೃದ್ಧ ಇಂಡೋ ಪೆಸಿಫಿಕ್‌ಗಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕದ ಡೆಲವೇರ್‌ನಲ್ಲಿ ನಡೆದ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತು ಉದ್ವಿಗ್ನತೆ ಮತ್ತು ಸಂಘರ್ಷದಿಂದ ಸುತ್ತುವರಿದಿರುವ ಸಮಯದಲ್ಲಿ ಕ್ವಾಡ್ ಶೃಂಗಸಭೆ ನಡೆಯುತ್ತಿದೆ ಮತ್ತು ಕ್ವಾಡ್ ದೇಶಗಳು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ಒಟ್ಟಾಗಿ ಕೆಲಸ ಮಾಡುವುದು ಇಡೀ ಮಾನವಕುಲಕ್ಕೆ ಬಹಳ ಮುಖ್ಯ ಎಂದು …

Read More »

ಮಲಪ್ರಭಾ ಸಕ್ಕರೆ ಕಾರ್ಖಾನೆ ಅವ್ಯವಹಾರ: ತನಿಖೆಯನ್ನು ಸಿಬಿಐಗೆ ಒಪ್ಪಿಸಲು ರೈತ ಸಂಘಗಳ ಆಗ್ರಹ

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕಾರ್ಖಾನೆ ಆವರಣದಲ್ಲಿ ರೈತ ಸಂಘಗಳ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು. ಅವ್ಯವಹಾರದ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಸೆ.25ರಂದು ನಡೆಯಲಿರುವ ಕಾರ್ಖಾನೆ ವಾರ್ಷಿಕ ಮಹಾಸಭೆಯಲ್ಲಿ ಠರಾವು ಪಾಸ ಮಾಡಬೇಕೆಂದು ಆಗ್ರಹಿಸಿದರು, ತನಿಖೆ ನಡೆಸಲು ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ರೈತರು, ಲೆಕ್ಕ …

Read More »

ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು: ಗಂಡನ ಮರಣದ ನಂತರ ಅವನ ಆಸ್ತಿಯ ಮೇಲೆ ಹೆಂಡತಿಗೆ ಸಂಪೂರ್ಣ ಹಕ್ಕಿಲ್ಲ

ನವದೆಹಲಿ : ಗಂಡನ ಅಸ್ತಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಗಂಡನ ಮರಣದ ನಂತರ ಅವನ ಆಸ್ತಿಯ ಮೇಲೆ ಹೆಂಡತಿಗೆ ಸಂಪೂರ್ಣ ಹಕ್ಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಗಂಡನ ಮರಣದ ನಂತರ, ಹಿಂದೂ ಮಹಿಳೆ ಅವನ ಆಸ್ತಿಯ ಲಾಭವನ್ನು ಪಡೆಯಬಹುದು, ಆದರೆ ಅವಳು ಗಂಡನ ಆಸ್ತಿಯ ಮೇಲೆ ಸಂಪೂರ್ಣ ಹಕ್ಕು ಹೊಂದಿರುವುದಿಲ್ಲ ಎಂದು ತಿಳಿಸಿದೆ. ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಅವರು, ಸ್ವಂತದ ಯಾವುದೇ ಆದಾಯವಿಲ್ಲದ ಹಿಂದೂ …

Read More »

ರೈತರಿಗೆ ಸಿಹಿಸುದ್ದಿ: ಮುಂಗಾರು, ಹಿಂಗಾರು ಎರಡು ಬೆಳೆಗೆ ನೀರು ಪೂರೈಕೆಗೆ ಸಿಎಂ ಘೋಷಣೆ

ಕೊಪ್ಪಳ: ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಲ್ಲಿ ಮುಂಗಾರು ಬೆಳೆ ಬೆಳೆದಿರುವ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಹಿಂಗಾರು ಬೆಳೆಯ ಸಿಹಿಸುದ್ದಿ ನೀಡಿದ್ದಾರೆ. ಇಂದು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಮುನಿರಾಬಾದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. ಮುಂಗಾರು ಮತ್ತು ಹಿಂಗಾರು ಎರಡು ಬೆಳೆಗೆ ನೀರು ಸಿಗುತ್ತದೆ ಎಂದು ಘೋಷಿಸಿದರು. ಈ ಮೂಲಕ ಈ …

Read More »

ಭೀಕರ ಬರ ಪರಿಸ್ಥಿತಿ: ಬರಿದಾಗ್ತಿದೆ ಅಮೆಜಾನ್ ನದಿ

ಬ್ರೆಜಿಲ್‌: ಬ್ರೆಜಿಲ್‌, ದಕ್ಷಿಣ ಅಮೇರಿಕಾ ಸೇರಿದಂತೆ ಕೆಲ ಕಡೆ ಬರ ಪರಿಸ್ಥಿತಿ ಭೀಕರವಾಗಿದೆ. ಬರ ಉಂಟಾದಾಗ ಮೊದಲು ಜಲ ಮೂಲಗಳು ಬತ್ತಿ ಹೋಗುತ್ತವೆ, ಅಲ್ಲಿನ ಜನ ಹನಿ ನೀರಿಗೂ ಒದ್ದಾಡುತ್ತಾರೆ. ಈಗ ಇಂತಹದ್ದೇ ಒಂದು ಬರ ಪರಿಸ್ಥಿತಿಯನ್ನು ಮತ್ತೊಂದು ನದಿ ಎದುರಿಸುತ್ತಿದೆ. ವಿಶ್ವದ ಅತಿದೊಡ್ಡ ನದಿ ಅನ್ನೋ ಹೆಗ್ಗಳಿಕೆ ಪಡೆದಿರುವ ಅಮೆಜಾನ್ ನದಿ ಬರಿದಾಗ್ತಿದೆ. ಅಮೆಜಾನ್ ನದಿಯ ಜಲಾನಯನ ಪ್ರದೇಶವು ಅತ್ಯಂತ ಕೆಟ್ಟ ಬರವನ್ನು ಅನುಭವಿಸುತ್ತಿದ್ದು, ಎಂದೂ ಕಂಡು ಕೇಳರಿಯದ …

Read More »

2 ಎ ಮೀಸಲಾತಿ ಕುರಿತು ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಸರಕಾರ ಮತ್ತು ಮುಖ್ಯಮಂತ್ರಿಗಳು ಶಾಸಕರ ಹಾಗೂ ಸ್ಚಾಮೀಜಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಈಗ ವಕೀಲರ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮೀಸಲಾತಿ ಸಂಬಂಧ ಶೀಘ್ರದಲ್ಲೇ ಸಿಎಂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಭೆಯ …

Read More »

ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಮನವಿ

ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ತಿರುಪತಿ ಲಡ್ಡು ಪ್ರಕರಣ ಇದೀಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನೆಣ್ಣೆ ಬೆರೆಕೆ ಮಾಡಿದ್ದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇನ್ನು ಮತ್ತೊಂದೆಡೆ ಇದೀಗ ಕರ್ನಾಟಕದ ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್​​ ಬಂದಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಇ-ಮೇಲ್​​​ …

Read More »

ವಕ್ಫ್ ಮಸೂದೆ ತಿದ್ದುಪಡಿ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾದ ಕೇಂದ್ರಸರ್ಕಾರ

ವಿಜಯಪುರ: ದೇಶಾದ್ಯಂತ ಇರುವ ವಕ್ಫ್ ಆಸ್ತಿಗಳು ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ತಿದ್ದುಪಡಿ ಮಾಡುವ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಮೈಸೂರು ಭಾಗದಲ್ಲಿ ಒಂದಿಷ್ಟು ಹೊರತುಪಡಿಸಿದರೇ ಅತ್ಯಂತ ಹೆಚ್ಚು ವಕ್ಫ್ ಆಸ್ತಿ ಇರುವುದೇ ಉತ್ತರ ಕರ್ನಾಟಕ ಭಾಗದಲ್ಲಿ ಎಂಬುದು ಬೆಳಕಿಗೆ ಬಂದಿದೆ. ಈ ಪೈಕಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿರುವ ಕಲಬುರಗಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 2ನೇ …

Read More »

ಬ್ಯಾಂಕ್ ಠೇವಣಿದಾರರ ಹಣ ಮರಳಿಸಲು ಯತ್ನ: ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ಮಹಾಲಕ್ಷ್ಮಿ ಅರ್ಬನ್‌ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು ಮೋಸಹೋದವರಿಗೆ ಹಣ ಮರಳಿ ಕೊಡಿಸುವ ಯತ್ನ ಮಾಡಲಾಗುವುದು. ಆರ್.ಬಿ.ಐ. ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಭರವಸೆ ನೀಡಿದರು. ₹74.87 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ ಠೇವಣಿದಾರರ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು …

Read More »