BigTv News
September 22, 2024
Breaking News, ಬೆಳಗಾವಿ
ಬೆಳಗಾವಿ: ಬೆಳಗಾವಿ ನಗರದ ಓಲ್ಡ್ ಪಿಬಿ ರಸ್ತೆಯಿಂದ ಖಾನಾಪುರ ಸಂಪರ್ಕಿಸುವ ರಸ್ತೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಡಾಂಬರ್ ಹಾಕಿ ಅಭಿವೃದ್ಧಿಪಡಿಸಲಾಗಿತ್ತು. ಸವಾರರು ಕೂಡ ನೆಮ್ಮದಿಯಾಗಿ ಓಡಾಡುತ್ತಿದ್ದರು. ಆದರೆ, ಹಾಗೆ ರಸ್ತೆ ನಿರ್ಮಾಣವಾದ ಮೂರು ವರ್ಷದ ಬಳಿಕ ಇದೀಗ ಬಂದ್ ಆಗಿದೆ, ಮಾಲೀಕನ ಅನುಮತಿ ಪಡೆಯದೇ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದರಿಂದ ರಸ್ತೆ ಮತ್ತೆ ಮಾಲೀಕನ ಪಾಲಾಗಿದೆ. ಅಧಿಕಾರಿಗಳ ಅವಾಂತರದಿಂದ ಪಾಲಿಕೆಗೆ 9 ಕೋಟಿ ರೂ. ನಷ್ಟವಾಗಿದೆ. ಸದ್ಯ 9 ಕೋಟಿ …
Read More »
BigTv News
September 22, 2024
Breaking News, ನ್ಯೂಯಾರ್ಕ್
ನ್ಯೂಯಾರ್ಕ್: ಭಾರತೀಯ ಸಮುದಾಯದ ಕಾರ್ಯಕ್ರಮ ಹಾಗೂ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನ್ಯೂಯಾರ್ಕ್ ತಲುಪಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ತಮ್ಮ ತವರು ಡೆಲವೇರ್ ರಾಜ್ಯದ ವಿಲ್ಮಿಂಗ್ಟನ್‌ನಲ್ಲಿ ಶನಿವಾರ ಆಯೋಜಿಸಿದ್ದ ಕ್ವಾಡ್ ಶೃಂಗ ಸಭೆ ಮುಕ್ತಾಯದ ಬಳಿಕ ಮೋದಿ, ನ್ಯೂಯಾರ್ಕ್‌ಗೆ ಬಂದಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಹಾಗೂ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರೂ ಕ್ವಾಡ್ ಶೃಂಗ ಸಭೆಯಲ್ಲಿ ಹಾಜರಾಗಿದ್ದರು. …
Read More »
BigTv News
September 22, 2024
Breaking News
ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವ ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯ ವಿರುದ್ಧ ಕಾಂಗ್ರೆಸ್ ತನ್ನ ನಿಲುವು ದೃಢಪಡಿಸುತ್ತಿದೆ ಮತ್ತು ಬೆಂಬಲ ಕ್ರೋಢೀಕರಿಸುತ್ತಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಎನ್ಡಿಎ ಲೋಕಸಭೆಯಲ್ಲಿ ಅಗತ್ಯ ಸಂಖ್ಯೆ ಬಲ ಹೊಂದಿಲ್ಲ. ಅಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೆ ಸಾಂವಿಧಾನಿಕ ತಿದ್ದುಪಡಿ ಮಂಡಿಸಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. 543 ಸಂಖ್ಯಾಬಲದ ಲೋಕಸಭೆಯಲ್ಲಿ ಎನ್ಡಿಎ ಕೇವಲ 293 ಸದಸ್ಯರನ್ನು …
Read More »
BigTv News
September 22, 2024
Breaking News
ನವದೆಹಲಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಂಡಿರುವ ಈಶಾನ್ಯ ರಾಜ್ಯಗಳ ಪ್ರವಾಸದ ಭಾಗವಾಗಿ ಶನಿವಾರದಂದು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರದ ಸಚಿವರು ನಾಗಾಲ್ಯಾಂಡ್ ರಾಜ್ಯದಲ್ಲಿರುವ ಧೀಮಾಪುರದ ಕೇಂದ್ರದ ಭಾರೀ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಸಿಮೆಂಟ್ ಕಾರ್ಪೊರೇಷನ್ ಆಡಳಿತದ ಬೋಕಾಜನ್ ಸಿಮೆಂಟ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಸಚಿವರಾದ …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು : ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್‍ಸೆಟ್‍ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆಗೆ ಸೆ.23 ರ ನಾಳೆಯೇ ಕೊನೆಯ ದಿನವಾಗಿದೆ. ಆದ್ದರಿಂದ ಹೆಸ್ಕಾಂಗಳು 10 ಹೆಚ್‌ಪಿ ಪಂಪ್ ಸೆಟ್ ಹೊಂದಿರುವ ರೈತರ ಆಧಾರ್ ಸಂಖ್ಯೆ ಸಂಗ್ರಹ ಮಾಡುತ್ತಿದೆ. ಹಾಲಿ ಇರುವ ಕೃಷಿ ಪಂಪ್‍ಸೆಟ್‍ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, …
Read More »
BigTv News
September 22, 2024
Breaking News, ಬೆಂಗಳೂರು
ಬೆಂಗಳೂರು: ಹೊರಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಒದಗಿಸುವ ಸೊಸೈಟಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದೆ. ಈ ಕುರಿತು ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು, ಪ್ರಸ್ತುತ ಕಲಬುರ್ಗಿ ವಿಭಾಗದ ಬೀದರ್ ಜಿಲ್ಲೆಯಲ್ಲಿ ಮಾತ್ರ ಈ ಮಾದರಿ ಅನುಷ್ಠಾನದಲ್ಲಿತ್ತು. ಈಗ ಇತರ ಮೂರು ವಿಭಾಗಗಳ ಮೈಸೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಈ ಸೊಸೈಟಿ ರಚಿಸಲು ಪ್ರಸ್ತಾವನೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ …
Read More »
Shaikh BigTv
September 22, 2024
Breaking News, ಧಾರವಾಡ
ಧಾರವಾಡ: ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು 3 ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ಆಯೋಜಿಸಲಾಗಿದ್ದು. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಇರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು http://karnatakasahithyaacademy.org ವೆಬ್‍ಸೈಟ್ ಮೂಲಕ ಅಕ್ಟೋಬರ್ 8, 2024 ರೊಳಗಾಗಿ ಅರ್ಜಿಸಲ್ಲಿಸಬೇಕು. …
Read More »
Shaikh BigTv
September 22, 2024
Breaking News, ಧಾರವಾಡ
ಧಾರವಾಡ: ಧಾರವಾಡದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದಿಂದ ನಡೆಯುವ ಕೃಷಿ ಮೇಳದ ಭಾಗವಾದ ಬೀಜ ಮೇಳವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಉದ್ಘಾಟಿಸಿದರು. ಬೀಜ ಮೇಳ ಉದ್ಘಾಟಿಸಿದ ನಂತರ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಾಕಲಾಗಿರುವ ವಿವಿಧ ಸ್ಟಾಲ್‌ಗಳಿಗೆ ಭೇಟಿ ನೀಡಿದ ಅವರು, ನೂತನವಾಗಿ ಆವಿಷ್ಕರಿಸಲಾದ ಕೃಷಿ ಯಂತ್ರ ಸೇರಿದಂತೆ ಇತ್ಯಾದಿ ಮಾಹಿತಿ ಪಡೆದುಕೊಂಡರು. ಭಾರತ ಸರ್ಕಾರ ಕೃಷಿಗೆ ನೀಡಿದ ಸೌಕರ್ಯಗಳ ಕುರಿತು ಹಾಕಲಾದ ಸ್ಟಾಲ್‌ಗಳಿಗೂ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. …
Read More »
Shaikh BigTv
September 22, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಜೂನಿಯರ್ ವಿಷ್ಣುವರ್ಧನ್ ಜೊತೆ “ಕರ್ನಾಟಕದ ಇತಿಹಾಸದಲಿ ಬಂಗಾರದ ಯುಗದ ಕಥೆಯನ್ನು ಹಾಡುವೆ ಕೇಳಿ ನಾ ಹಾಡುವೆ… ” ಈ ಹಾಡನ್ನು ಹಾಡಿ ಜನರನ್ನು ರಂಜಿಸಿದರು. ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿರುವ ಹುಬ್ಬಳ್ಳಿ- ಧಾರವಾಡ ಹಿಂದೂ ಮಹಾಗಣಪತಿ ಉತ್ಸವ ಮಂಡಳಿ ಹಮ್ಮಿಕೊಂಡಿದ್ದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಉತ್ತರ ಕರ್ನಾಟಕದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ಜೂನಿಯರ್ ವಿಷ್ಣುವರ್ಧನ್ ಜೊತೆ ಎನ್. ಶಶಿಕುಮಾರ್ …
Read More »
Shaikh BigTv
September 22, 2024
Breaking News, ಧಾರವಾಡ
ನವಲಗುಂದ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥೆಯಲ್ಲಿ ಕೆಲಸ ಮಾಡುವ ಸೇವಾ ಪ್ರತಿನಿಧಿಗಳು ವೀರೇಂದ್ರ ಹೆಗಡೆಯವರ ಆಶಯದಂತೆ ಗ್ರಾಮೀಣ ಜನರ ಬದುಕಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಅಭಿವೃದ್ಧಿಗೆ ಪೂರಕವಾದಂತ ಯೋಜನೆಯ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕ ಚಂದ್ರಶೇಖರ ಜೆ. ಹೇಳಿದರು. ಪಟ್ಟಣದ ಶ್ರೀ ಅಜಾತ ನಾಗಲಿಂಗ ಸ್ವಾಮೀಜಿ ಮಠದಲ್ಲಿರುವ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಸೇವಾ ಪ್ರತಿನಿಧಿಗಳಿಗೆ …
Read More »