Shaikh BigTv
September 22, 2024
Breaking News, ಧಾರವಾಡ
ನವಲಗುಂದ: ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ ಎಂದು ನವಲಗುಂದ ಪಂಚಗ್ರಹ ಹಿರೇಮಠ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಅವರು ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಆರೇಕುರಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಯನ್ನು …
Read More »
Shaikh BigTv
September 22, 2024
Breaking News, ಧಾರವಾಡ
ಧಾರವಾಡ: ಜೆಸಿಬಿಗೆ ಹಿಂದಿನಿಂದ ಬಂದ ಟೆಂಪೊ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಟೆಂಪೊ ಚಾಲಕನ ಪ್ರಾಣಪಕ್ಷಿ ಕ್ಷಣಾರ್ಧದಲ್ಲಿ ಎಲ್ಲರ ಕಣ್ಮುಂದೆಯೇ ಹಾರಿ ಹೋದ ಘಟನೆ ಗರಗ ಗ್ರಾಮದಲ್ಲಿ ನಡೆದಿದೆ. ಅಪಘಾತ ಆಗುತ್ತಿದ್ದಂತೆ ಸ್ಥಳೀಯರು ಅಲ್ಲಿ ಜಮಾಯಿಸಿದ್ದಾರೆ. ಟೆಂಪೊದ ಮುಂಭಾಗ ಸಂಪೂರ್ಣ ನಜ್ಜಗುಜ್ಜಾಗಿದ್ದರಿಂದ ಚಾಲಕ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಹೊರತೆಗೆಯಲು ಸ್ಥಳೀಯರು ಪರದಾಡಿದ್ದಾರೆ. ಕೆಲವರು ಅಲ್ಲೇ ಚಾಲಕನಿಗೆ ನೀರು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ನೋಡ ನೋಡುತ್ತಿದ್ದಂತೆ ಚಾಲಕನ ಪ್ರಾಣಪಕ್ಷಿ …
Read More »
BigTv News
September 21, 2024
Breaking News, ಬೆಂಗಳೂರು
ಬೆಂಗಳೂರು: ರೇಷ್ಮೆ ಕೃಷಿ ಪಾಲುದಾರರಿಗೆ ಸರ್ಕಾರ ನೀಡುತ್ತಿರುವ ಸಹಾಯಧನ ಬಹಳ ಕಡಿಮೆ ಇದೆ. ಇದನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ರೇಷ್ಮೆ ಮಂಡಳಿ ಸದಸ್ಯ, ಸಂಸದ ಎ.ಜಿ. ಲಕ್ಷ್ಮಿನಾರಾಯಣ ಆಗ್ರಹಿಸಿದರು. ನಗರದಲ್ಲಿ ಶನಿವಾರ ನಡೆದ ರೇಷ್ಮೆ ಕೃಷಿ ಪಾಲುದಾರರ ಸಭೆ ಮತ್ತು ಕೇಂದ್ರ ರೇಷ್ಮೆ ಮಂಡಳಿ ಅಮೃತ ಮಹೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು. ಕೃಷಿ ಪಾಲುದಾರರಿಗೆ ನೀಡುತ್ತಿರುವ ಸಾಲ ಸೌಲಭ್ಯವನ್ನು ₹4 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಬೇಕು. ರೀಲರ್‌ಗಳಿಗೂ ಸಹಾಯಧನವನ್ನು …
Read More »
BigTv News
September 21, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿಯೂ ರಿಲಯನ್ಸ್ ಜಿಯೋದ ನೆಟ್‌ವರ್ಕ್ ಒದಗಿಸಿಕೊಡುವುದಕ್ಕಾಗಿ ಟವರ್ ಸ್ಥಾಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹೂಗ್ಯಂನಂತಹ ಗ್ರಾಮಗಳಲ್ಲಿ ಜಿಯೋ ಟವರ್ ಸ್ಥಾಪಿಸುವಲ್ಲಿ ಯಶಸ್ಸು ಕಂಡಿದೆ. ಪರಿಸರ ಮತ್ತು ಭೌಗೋಳಿಕ ಸವಾಲುಗಳನ್ನು ಮೀರಿ ಜಿಯೋ 4ಜಿ ಮತ್ತು 5ಜಿ ನೆಟ್‌ವರ್ಕ್ ಸೇವೆಯನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಾದ್ಯಂತ ಮುನ್ನೂರಕ್ಕೂ ಹೆಚ್ಚು ತಾಲ್ಲೂಕುಗಳಿಗೆ ತನ್ನ ಸೇವೆಯನ್ನು ವಿಸ್ತರಿಸಿದ್ದು, ಇದರಿಂದ ಆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಅನೇಕ ಹಳ್ಳಿಗಳು …
Read More »
BigTv News
September 21, 2024
Breaking News, ಬೀದರ್
ಬೀದರ್: ಇಲ್ಲಿನ ಭಾರತೀಯ ವಾಯುಪಡೆ ತರಬೇತಿ ಕೇಂದ್ರಕ್ಕೆ ಸೇರಿದ ಒಂಬತ್ತು ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು. ಶನಿವಾರ ಸಂಜೆ ನಗರದ ಬಹಮನಿ ಕೋಟೆಯ ಆಗಸದ ಮೇಲೆ ಲೋಹದ ಹಕ್ಕಿಗಳ ಕರಾಮತ್ತು ನೋಡಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಿಸಿದರು. ಕೋಟೆಯ ಆವರಣದಲ್ಲಿ ದೇಶಭಕ್ತಿ ಗೀತೆಗಳನ್ನು ಹಾಕಲಾಗಿತ್ತು. ಅದರ ನಡುವೆ ಸೂರ್ಯಕಿರಣ ವಿಮಾನಗಳ ಮೈನವಿರೇಳಿಸುವ ಕಸರತ್ತು ಜನರನ್ನು ಮಂತ್ರ ಮುಗ್ಧಗೊಳಿಸಿತು. ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಹೊಗೆ …
Read More »
BigTv News
September 21, 2024
Breaking News
ಅಮರಾವತಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆ ವಿಚಾರಕ್ಕೆ ಸಂಬಂಧಿಸಿ ಮುಂದಿನ ಕ್ರಮಗಳ ಕುರಿತು ಮಠಾಧೀಶರು, ಅರ್ಚಕರು ಮತ್ತು ಇತರ ಹಿಂದೂ ಧರ್ಮದ ಉನ್ನತ ತಜ್ಞರೊಂದಿಗೆ ನಮ್ಮ ಸರಕಾರ ಸಮಾಲೋಚನೆ ನಡೆಸಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಶನಿವಾರ ಹೇಳಿದ್ದಾರೆ. ತಿರುಪತಿಯ ವಿಶ್ವವಿಖ್ಯಾತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಅಧಿಕೃತ ತಿರುಮಲ ತಿರುಪತಿ ದೇವಸ್ಥಾನ ಸಂಬಂಧಿಸಿದಂತೆ ಸಮಾಲೋಚನೆಯ ನಂತರ ಸರಕಾರ ತನ್ನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ …
Read More »
BigTv News
September 21, 2024
Breaking News, ರಾಯಚೂರು
ರಾಯಚೂರು: ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ ಲಿಂಗಸುಗೂರು ರಸ್ತೆ ವೃತ್ತದವರೆಗಿನ 78 ಕಿಲೋಮೀಟರ್ ರಸ್ತೆಯ ಅಭಿವೃದ್ದಿ ಕಾಮಗಾರಿಯಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು, ಗುಣಮಟ್ಟದ ಹಾಗೂ ಕ್ಷಿಪ್ರಗತಿಯಲ್ಲಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅಧಿಕಾಗಳಿಗೆ ಸೂಚನೆ ನೀಡಿದರು. ವಿಕಾಸ ಸೌಧದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಸಚಿವರಾದ ಎನ್ ಎಸ್ ಭೋಸರಾಜು, ಶರಣಪ್ರಕಾಶ್ ಪಾಟೀಲ್, ಶಾಸಕರಾದ …
Read More »
BigTv News
September 21, 2024
Breaking News
ನವದೆಹಲಿ: ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ತವರೂರು ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಶೃಂಗಸಭೆ ಸಭೆಯನ್ನು ಆಯೋಜಿಸಲಾಗಿದೆ. ಕ್ವಾಡ್ ಶೃಂಗಸಭೆಯಲ್ಲಿ ನನ್ನ ಸ್ನೇಹಿತರಾದ ಅಧ್ಯಕ್ಷ ಬೈಡನ್, ಪ್ರಧಾನಿ ಅಲ್ಬನೀಸ್ ಮತ್ತು ಪ್ರಧಾನಿ ಕಿಶಿದಾ ಅವರನ್ನು ನಾನು ಎದುರು …
Read More »
BigTv News
September 21, 2024
Breaking News, ರಾಯಚೂರು
ರಾಯಚೂರು: ಶಿವಶರಣ ಮಾದಾರ ಚೆನ್ನಯ್ಯ ಸೇವಾ ಸಮಿತಿ ರಾಯಚೂರು ಹಾಗೂ ಶ್ರೀ ಆದಿ ಜಾಂಬವ ವೆಲ್ಫೇರ್ ಟ್ರಸ್ಟ್ ವತಿಯಿಂದ ನಗರದ ರಂಗಮಂದಿರ ಹಿಂದಿರುವ ಮಾದರ ಚೆನ್ನಯ್ಯ ಭವನದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸುವ ಕುರಿತು ವಿಚಾರಗೋಷ್ಠಿ ಮತ್ತು ಸನ್ಮಾನ ಕಾರ್ಯಕ್ರಮವನ್ನು ನಡೆಯಿತು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿರೂಪಾಕ್ಷಿ ಮಾತನಾಡಿ, ತಳ ಸಮುದಾಯದ ವಿದ್ಯಾವಂತರು ಹಾಗೂ ನೌಕರರು ಜಾಗೃತರಾಗಿ ಒಳ ಮೀಸಲಾತಿ ಪಡೆದುಕೊಳ್ಳಲು ಅಗತ್ಯ ಸಹಕಾರ ನೀಡಬೇಕು …
Read More »
BigTv News
September 21, 2024
Breaking News, ಬೆಂಗಳೂರು
ಬೆಂಗಳೂರು: ಈಶಾನ್ಯ ಭಾರತದ ಮೂರು ರಾಜ್ಯಗಳಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆಯಿಂದ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ರಾತ್ರಿಯೇ ಬೆಂಗಳೂರಿನಿಂದ ನಾಗಾಲ್ಯಾಂಡ್ ರಾಜ್ಯದ ಧೀಮಾಪುರಕ್ಕೆ ತೆರಳಿದ್ದಾರೆ. ನಾಗಲ್ಯಾಂಡ್ ಮುಖ್ಯಮಂತ್ರಿ ನಿಪ್ಯು ರಿಯುಜು ಅವರು, ಧೀಮಾಪುರದಲ್ಲಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಸ್ವಾಗತಿಸಿ ದಂಪತಿಗೆ ಭೋಜನ ಕೂಟ ಏರ್ಪಡಿದ್ದರು. ಬಳಿಕ ಆ ರಾಜ್ಯದ …
Read More »