Breaking News

Breaking News

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಸುತ್ತಿಗೆಯಿಂದ ಹೊಡೆದು ಪತ್ನಿ, 7 ತಿಂಗಳ ಮಗುವನ್ನು ಕೊಂದ ಪಾಪಿ ಪತಿ!

ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ಸುತ್ತಿಗೆಯಿಂದ ಹೊಡೆದು ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗಳು ಅಶ್ವಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮಾತಿನ ಚಕಮಕಿ ತೀವ್ರಗೊಂಡ ವೇಳೆ ಆರೋಪಿ ಹೊನ್ನೂರಸ್ವಾಮಿ ಸುತ್ತಿಗೆಯಿಂದ ಇಬ್ಬರ ತಲೆಗೆ ಹೊಡೆದಿದ್ದು, ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು …

Read More »

ಸಹೋದ್ಯೋಗಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ – ಸರ್ಕಾರಿ ಅಧಿಕಾರಿಯ ಕಾಮಲೀಲೆ ಬಹಿರಂಗ!

ತುಮಕೂರು ಜಿಲ್ಲೆಯ ಪಾವಗಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಗೋಪಾಲಪ್ಪ ವಿರುದ್ಧ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಂಪ್ಯೂಟರ್ ಆಪರೇಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕೆಲಸವನ್ನು ಖಾಯಂ ಮಾಡಿಸುವ ಆಮಿಷ ಒಡ್ಡಿ ಕಿರುಕುಳ ನೀಡಿದ್ದಾಗಿ ದೂರಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 74 ಹಾಗೂ 351(2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆದರೆ, ಪ್ರಕರಣ ದಾಖಲಾಗಿದ್ದರೂ ಆರೋಪಿ …

Read More »

ಬೆಳ್ಳಂ ಬೆಳಗ್ಗೆ ಉಡುಪಿಯಲ್ಲಿ ಫೈರಿಂಗ್​, ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಶೂಟ್‌ಔಟ್‌ನಲ್ಲಿ 45 ವರ್ಷದ ಐವನ್ ರಿಚರ್ಡ್ ಮಸ್ಕರೇನಸ್ ಗುಂಡೇಟಿಗೆ ಬಲಿಯಾಗಿದ್ದಾರೆ. ಘಟನೆ ಹೋಲಿ ರೋಜರಿ ಚರ್ಚ್ ಸಮೀಪ ಬೆಳಗಿನ ಜಾವ ನಡೆದಿದೆ. ಅಪರಿಚಿತ ದುಷ್ಕರ್ಮಿ ಗುಂಡು ಹಾರಿಸಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಹಣಕಾಸಿನ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Read More »

ಬೆಂಗಳೂರಿನ ರಸ್ತೆಯಲ್ಲಿ ಮೊಳೆ ಚೆಲ್ಲಿ ಪಂಚರ್ ದಂಧೆ ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು ಜಾಲಹಳ್ಳಿ ವ್ಯಾಪ್ತಿಯ ಎಂಇಎಸ್ ರಿಂಗ್ ರಸ್ತೆಯಲ್ಲಿ ವಾಹನಗಳ ಟೈರ್ ಪಂಚರ್ ಆಗುವಂತೆ ಉದ್ದೇಶಪೂರ್ವಕವಾಗಿ ರಸ್ತೆಗೆ ಮೊಳೆಗಳನ್ನು ಚೆಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದ ಇಬ್ಬರು ಪಂಚರ್ ಅಂಗಡಿ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಆರೋಪಿಗಳು ಬೈಕ್‌ನಲ್ಲಿ ಬಂದು ರಸ್ತೆಯುದ್ದಕ್ಕೂ ಮೊಳೆಗಳನ್ನು ಚೆಲ್ಲುತ್ತಿದ್ದರು. ಬಳಿಕ ಪಂಚರ್ ಆದ ವಾಹನಗಳಿಗೆ ನೆರವು ನೀಡುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಾರ್ವಜನಿಕರ ದೂರುಗಳ ಬಳಿಕ ಸಿಸಿಟಿವಿ …

Read More »

ಶಿವಮೊಗ್ಗದಲ್ಲಿ ಭಾರಿ ವಂಚನೆ: ಸಿಎಂ ಡಿ.ಕೆ. ಶಿವಕುಮಾರ್ ಪಿಎ ಎಂದು 15 ಲಕ್ಷ ಪಂಗನಾಮ ಹಾಕಿದ್ದ ಖದೀಮ ಅರೆಸ್ಟ್!

ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಸಹಾಯಕ (ಪಿಎ) ಎಂದು ಸುಳ್ಳು ಹೇಳಿ ರಿಕ್ರಿಯೇಷನ್ ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ್ದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ವಿರುದ್ಧ ರೈತ ಮಂಜುನಾಥ್ ಹಂಜಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ಮಾದರಿಯಲ್ಲಿ ಮತ್ತಾರಿಗಾದರೂ ವಂಚನೆ ನಡೆಸಿದ್ದಾನೆಯೇ ಎಂಬ ಬಗ್ಗೆ ತನಿಖೆ …

Read More »

ಎಸ್‍ಐಆರ್ ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ; ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ದಸ್ತಗೀರ್ ಮತ್ತು ಯಾರಬ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಮೀಕ್ಷಾ ಕಾರ್ಯಕ್ಕಾಗಿ ತೆರಳಿದ್ದ ಅಧಿಕಾರಿಗಳ ಬಳಿ ದಸ್ತಗೀರ್ ಎಸ್‌ಐಆರ್ ಫಾರ್ಮ್ ನೀಡುವಂತೆ ಒತ್ತಾಯಿಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿದ್ದರಿಂದ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರೆಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡ ದಸ್ತಗೀರ್ …

Read More »

ಸಿಎಂ ಡಿಕೆ ಶಿವಕುಮಾರ್ ಪಿಎ ಎಂದು 15 ಲಕ್ಷ ರೂಪಾಯಿ ಪಡೆದು ವಂಚನೆ : ಓರ್ವ ಅರೆಸ್ಟ್!

ಶಿವಮೊಗ್ಗದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ (30) ಎಂದು ಗುರುತಿಸಲಾಗಿದೆ. ಆರೋಪಿ ಮೊದಲು ದೂರುದಾರ ಮಂಜುನಾಥ್ ಹಂಜಿ ಅವರೊಂದಿಗೆ ಸ್ನೇಹ ಬೆಳೆಸಿ, ತಾನು ಡಿಸಿಎಂ ಪಿಎ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಸರ್ಕಾರದ ಮಟ್ಟದಲ್ಲಿ ಮಾತುಕತೆ …

Read More »

ಹಣದ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಇನ್ಸ್‌ಸ್ಪೆಕ್ಟರ್ ಸಹಿತ ಮೂವರ ಅಮಾನತು

ಉಡುಪಿ: ಲಂಚದ ಹಣ ಸ್ವೀಕರಿಸುವ ವಿಡಿಯೋಗೆ ಸಂಬಂಧಿಸಿ ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ. ಹಣದ ಬೇಡಿಕೆ ಇಟ್ಟಿರುವ ಕುರಿತ ವಿಡಿಯೊಗಳು ಮತ್ತು ಆರೋಪಗಳ ಆಧಾರದ ಮೇಲೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಅದರ ಆಧಾರದ ಮೇಲೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ …

Read More »

ಮಂಡ್ಯದಲ್ಲಿ ದಾರುಣ ಘಟನೆ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದು ರೈತ ದಂಪತಿ ಆತ್ಮಹತ್ಯೆ

ಮಂಡ್ಯ ಜಿಲ್ಲೆಯ ಹಟ್ನ ಬೇವುಕಲ್ಲು ಗ್ರಾಮದಲ್ಲಿ ಸಾಲದ ಒತ್ತಡ ಹಾಗೂ ಬೆಳೆ ಕೈಕೊಟ್ಟ ಹಿನ್ನೆಲೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೀಸೆ ಪುಟ್ಟಸ್ವಾಮಿ (58) ಮತ್ತು ನಾಗಮ್ಮ (55) ಮೃತಪಟ್ಟವರು. ಸುಮಾರು 5 ಎಕರೆ ಜಮೀನು ಹೊಂದಿದ್ದ ಪುಟ್ಟಸ್ವಾಮಿ ಸಾಲದ ಹೊರೆ ಹಾಗೂ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಮನನೊಂದು ಇಬ್ಬರೂ ಜಮೀನಿನ ಸಮೀಪದ ಆಲದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ …

Read More »

ಬೋವಿ ಸ್ವಾಮೀಜಿ ಮೇಲೆ ಹಲ್ಲೆ ಪ್ರಕರಣ – ಆರು ಮಂದಿ ವಿರುದ್ಧ ಎಫ್‌ಐಆರ್

ಚಿಕ್ಕಮಗಳೂರಿನಲ್ಲಿ ಬೋವಿ ಸಮುದಾಯದ ಪೂಜ್ಯ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಠ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ವಿವಾದದ ವೇಳೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಸ್ವಾಮೀಜಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಸುದ್ದಿ ತಿಳಿಯುತ್ತಿದ್ದಂತೆ ಬೋವಿ ಸಮುದಾಯದ ಮುಖಂಡರು ಹಾಗೂ ಭಕ್ತರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ಸಂಬಂಧ …

Read More »