BigTv News
September 20, 2024
Breaking News, ಕೊಪ್ಪಳ
ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿರುವ ಕರ್ನಾಟಕ ನೀರಾವರಿ ನಿಗಮ ಕಚೇರಿಗೆ ಇಂದು ರೈತರು ಮುತ್ತಿಗೆ ಹಾಕಿ, ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕಾರಟಗಿ ತಾಲೂಕಿನ ಯರಡೋಣಾ, ತಿಮ್ಮಾಪುರ, ಹಾಲಸಮುದ್ರ, ಬೂದಗುಂಪಾ, ಚನ್ನಳ್ಳಿ ಮಾವಿನ ಮಡಗು ಸೇರಿದಂತೆ ಅನೇಕ ಗ್ರಾಮಗಳಲ್ಲಿ ರೈತರು, ತುಂಗಭದ್ರಾ ಜಲಾಶಯದ ನೀರನ್ನೇ ನಂಬಿ ಕೃಷಿ ಮಾಡುತ್ತಿದ್ದಾರೆ. ಈ ಗ್ರಾಮಗಳಿಗೆಲ್ಲ 31 ಮತ್ತು 32 ನೇ ವಿತರಣಾ ಕಾಲುವೆಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಆದರೆ ಕಳೆದ ಕೆಲ …
Read More »
Shaikh BigTv
September 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಂಟೂರ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಶ್ರೀರಾಮ ಸೇನೆಯ ಮಾತು ಕೇಳುವ ಅವಶ್ಯಕತೆಯಿಲ್ಲ. ಅಲ್ಲಿನ ಜನರ ಅಭಿಪ್ರಾಯ ಆಧರಿಸಿ ಮುಂದುವರೆಯಲಾಗುವುದು ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಶ್ರೀರಾಮ ಸೇನೆಗೆ ತಿರುಗೇಟು ನೀಡಿದರು. ನಗರದಲ್ಲಿ ಮಾತನಾಡಿದ ಅವರು,ಜನರು ಬೇಡ ಅಂದ್ರೆ ಬೇರೆ ಕಡೆಗೆ ಸ್ಥಳಾಂತರ ಮಾಡುತ್ತೇವೆ. ಅಲ್ಲಿಯೇ ಇರಲಿ ಎಂದರೆ ಅಲ್ಲಿಯೇ ಮುಂದುವರೆಸುತ್ತೇವೆ ಇನ್ನು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಕ್ಷಮೆ ಕೇಳುವ ಪ್ರಶ್ನೆಯೇ …
Read More »
BigTv News
September 20, 2024
Breaking News, ರಾಯಚೂರು
ರಾಯಚೂರು: ಕೃಷ್ಣಾ ನದಿ ಮೂಲಕ ತಾಲ್ಲೂಕಿನ ಡಿ.ರಾಂಪುರ ಕೆರೆ ಸೇರಿಕೊಂಡಿದ್ದ ಭಾರೀ ಗಾತ್ರದ ಮೊಸಳೆಯನ್ನು ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಗ್ರಾಮದ ಕೆರೆಗೆ ನೀರು ಕುಡಿಯಲು ಹೋದ ಕುರಿಗಳನ್ನು, ಹಂದಿಗಳನ್ನು ಮೊಸಳೆ ತಿಂದು ಹಾಕುತ್ತಿತ್ತು. ಇದನ್ನು ಗಮನಿಸಿದ್ದ ಗ್ರಾಮಸ್ಥರು ರಾಯಚೂರು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಫೋನ್ ಮೂಲಕ ತಿಳಿಸಿದ್ದರು. ಆದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿರಲಿಲ್ಲ. ಸಾಕು ಜಾನುವಾರುಗಳ ಮೇಲೆ ದಾಳಿ ನಡೆಸಿ …
Read More »
Shaikh BigTv
September 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಜೆಪಿಯವರಿಗೆ ಕೇವಲ ಶಾಂತಿ ಕದಡುವುದು ಬೇಕಾಗಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚನ್ನಾಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯಾ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಧಕ್ಕೆ ಬಂದಿಲ್ಲ. ಬಿಜೆಪಿಯವರಿಗೆ ಯಾವುದೇ ಅಭಿವೃದ್ಧಿ ಕೆಲಸ ಬೇಡವಾಗಿದೆ. ಯಾವುದೇ ಶಾಂತಿ ಸುವ್ಯವಸ್ಥೆ ಬೇಡವಾಗಿದೆ. ಅವರು ಸಣ್ಣ ಪುಟ್ಟ ಗಲಭೆಯನ್ನ ದೊಡ್ಡದಾಗಿ ಮಾಡುತ್ತಿದ್ದಾರೆ ಎಂದು ಅಬ್ಬಯ್ಯ ಆಕ್ರೋಶ ವ್ಯಕ್ತಪಡಿಸಿದರು.
Read More »
Shaikh BigTv
September 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡ ನಾಗರಹಾವೊಂದನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ನಾಗರಾಜ ಯಶಸ್ವಿಯಾಗಿದ್ದಾರೆ. ಅಮರಗೋಳ ಎಪಿಎಂಸಿ ಗೌಸ್ ಕಟ್ಟಿಮನಿ ಎಂಬುವರ ಅಂಗಡಿಯಲ್ಲಿ ಬಂದಂತಹ ನಾಗರ ಹಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು. ಜನರು ಓಡಾಡುವ ಸ್ಥಳದಲ್ಲಿಯೇ ಕಾಣಿಸಿಕೊಂಡ ಹಾವಿನಿಂದ ಜನರು ಆತಂಕಗೊಂಡಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಜನರ ಆತಂಕ ದೂರ ಮಾಡಿದ್ದಾರೆ.
Read More »
BigTv News
September 20, 2024
Breaking News, ಬಳ್ಳಾರಿ
ಬಳ್ಳಾರಿ : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು. ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ …
Read More »
Shaikh BigTv
September 20, 2024
Breaking News, ಧಾರವಾಡ
ಕಲಘಟಗಿ: ತಾಲೂಕಿನ ಬೆಲವಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹನುಮಾಪುರ ಗ್ರಾಮದಲ್ಲಿನ ಕುಡಿಹೊಂಡ ಕೆರೆ ಜಾಗವನ್ನು ಗ್ರಾಮದ ಉಪಾಧ್ಯಕ್ಷೆ ಸಹನಾಜಬಿ ಉಗ್ಗಿನಕೇರಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಉಪಾಧ್ಯಕ್ಷೆಯ ಪತಿ ಕಲಂದರ ಉಗ್ಗಿನಕೇರಿ ಎಂಬುವವರು, ಗ್ರಾಮದ ಕುಡಿಹೊಂಡ ಕೆರೆ ಜಾಗವನ್ನು ಗ್ರಾಮ ಪಂಚಾಯಿತಿ ರಿಜಿಸ್ಟ್ರಾರ್ ಬುಕ್‌ನಲ್ಲಿ, ಗಂಗವ್ವ ಭಾವನವರ ಎಂಬುವವರ ಹೆಸರಿನಲ್ಲಿ ಇ ಸ್ವತ್ತು ಉತ್ತಾರವನ್ನು ದಾಖಲಿಸಿದ್ದಾರೆ. ನಂತರ ಆ ಜಾಗವನ್ನು ತನ್ನ ಹೆಸರಿಗೆ …
Read More »
BigTv News
September 20, 2024
Breaking News, ಬೆಂಗಳೂರು
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿ ಉಪಧನ ಗ್ರಾಚ್ಯುಟಿ ಸೌಲಭ್ಯ ಹಾಗೂ ಗೌರವ ಧನ ಇಡುಗಂಟು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನ್ವಯ ಇದೀಗ ನೀಡಲಾಗುತ್ತಿರುವ ಗೌರವ ಸಂಭಾವನೆಯಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. …
Read More »
Shaikh BigTv
September 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪಕ್ಷದವರಿಗೆ ನೈತಿಕತೆ ಇದ್ದರೆ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಒತ್ತಾಯಿಸಿದರು. ಶಾಸಕ ಮುನಿರತ್ನ ನಾಯ್ಡು ಮಾಡಿರುವುದು ಜನಪ್ರತಿನಿಧಿಗಳೆಲ್ಲರೂ ತಲೆತಗ್ಗಿಸುವಂತಹ ವಿಚಾರ, ಮಾತನಾಡಿದ ಅವರು ಎಚ್.ಐ.ವಿ ಇಂಜೆಕ್ಷನ್ ಮಾಡಲು ಪ್ರಯತ್ನಿಸಿದ ಆರೋಪದಲ್ಲಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಗಳಾಗಿ ಮುಂದುವರೆಯಲು ಯೋಗ್ಯವಲ್ಲ. ನಾಲಾಯಕ್ ಅಯೋಗ್ಯರು. ನಾವೆಲ್ಲರೂ ತಲೆತಗ್ಗಿಸುವಂತಹ ವಿಚಾರವಾಗಿದೆ. ಪಕ್ಷದವರಿಗೆ ನೈತಿಕತೆ ಇದ್ದರೇ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹರಿಹಾಯ್ದರು.
Read More »
BigTv News
September 20, 2024
Breaking News, ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ: ಬೆಳೆ ಸಮೀಕ್ಷೆ ಮಾಡಲು ಹೋದ ಕಂದಾಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದ ಖಾಸ್ ಬಾಗ್ ನ ಕೃಷ್ಣಪ್ಪ ನವರ ಜಮೀನಿನಲ್ಲಿ ನಡೆದಿದೆ. ಸಿದ್ದೇನಾಯಕನಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ರಾಜೇಂದ್ರ ಬಾಬು ಹಲ್ಲೆಗೊಳಗಾದ ಗ್ರಾಮಲೆಕ್ಕಾಧಿಕಾರಿಯಾಗಿದ್ದು, ಬೆಳೆ ಸಮೀಕ್ಷೆ ನಡೆಸಲು ಮೊಬೈಲ್ ನಲ್ಲಿ ಪೋಟೋ ತೆಗೆಯುತ್ತಿದ್ದ ವೇಳೆ ಗ್ರಾಮಲೆಕ್ಕಾಧಿಕಾರಿ ಮೇಲೆ ಜಮೀನಿನ ಮಾಲಿಕನ ಮಗ ವಂಸತ್ ಕುಮಾರ್ ನಿಂದ ಹಲ್ಲೆ ಮಾಡಲಾಗಿದೆ. ತೆಂಗಿನ ಮೊಟ್ಟೆಯಿಂದ ಗ್ರಾಮಲೆಕ್ಕಾಧಿಕಾರಿ ತಲೆ …
Read More »