Shaikh BigTv
September 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿನ ಸತ್ಯಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸತ್ಯ ಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ನಗರದ ಮಂಟೂರ ರಸ್ತೆಯಲ್ಲಿನ ಸ್ಮಶಾನ ಭೂಮಿಯಲ್ಲಿ ಕಳೆದ ನೂರಾರು ವರ್ಷಗಳಿಂದ 30ಕ್ಕೂ ಹೆಚ್ಚು ಬಡಾವಣೆಗಳ ಜನರು ಮೃತರ ಅಂತ್ಯಸಂಸ್ಕಾರ ನೆರವೇರಿಸುತ್ತಾರೆ ಎಂದರು. ಇತರರು ಗ್ರಾಮಸ್ಥರು ಭಾಗಿಯಾಗಿದ್ದರು.
Read More »
BigTv News
September 20, 2024
Breaking News
ನವದೆಹಲಿ: ಆಹಾರ ಉತ್ಪಾದನೆಗೆ ಭಾರತದಲ್ಲಿ ವಿಶಾಲ ಅವಕಾಶವಿದ್ದು, ಜಗತ್ತಿಗೇ ಆಹಾರೋತ್ಪನ್ನ ಪೂರೈಸಬಹುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ದೆಹಲಿಯಲ್ಲಿ ಆಯೋಜಿಸಿದ್ದ ವರ್ಲ್ಡ್ ಫುಡ್ ಇಂಡಿಯಾ 2024 ಮೇಳದ ಉದ್ಘಾಟನೆ ವೇಳೆ ಮಾತನಾಡಿ, ಗುಣಮಟ್ಟದ ಆಹಾರ ಉತ್ಪಾದನೆಯಲ್ಲಿ ಭಾರತ ವಿಶ್ವಪ್ರಸಿದ್ಧವಾಗಿದೆ ಎಂದು ಹೇಳಿದರು. ಆಹಾರ ಧಾನ್ಯಗಳ ಉತ್ಪಾದನೆ ಮತ್ತು ಸಂಸ್ಕರಣೆ ಜತೆಗೆ ಅತ್ಯುತ್ತಮ ಮಾರುಕಟ್ಟೆಯನ್ನೂ ಭಾರತ ಕಂಡುಕೊಳ್ಳುತ್ತಿದೆ ಎಂದ ಸಚಿವರು, ಹಾಲು, ಅಕ್ಕಿ, …
Read More »
Shaikh BigTv
September 20, 2024
Breaking News, ಬೆಂಗಳೂರು
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಹನಿಟ್ರ್ಯಾಪ್ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಡಿದೆದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಮುನಿರತ್ನ ಓರ್ವ ಒಕ್ಕಲಿಗ, ದಲಿತರ ವಿರೋಧಿ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಈ ಕೂಡಲೇ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡುವಂತೆ …
Read More »
Shaikh BigTv
September 20, 2024
Breaking News, ಧಾರವಾಡ
ಧಾರವಾಡ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಎರಡು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಂದ ತಲಾ 2 ಲಕ್ಷ ರೂಪಾಯಿ ಪರಿಹಾರದ ಚೆಕ್‌ನ್ನು ಶಾಸಕ ವಿನಯ್ ಕುಲಕರ್ಣಿ ಅವರು ಮೃತರ ಕುಟುಂಬಕ್ಕೆ ಹಸ್ತಾಂತರಿಸಿದರು. 2022ರ ಜೂನ್ 26 ರಂದು ಧಾರವಾಡ ತಾಲೂಕಿನ ವೆಂಕಟಾಪುರ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಧಾರವಾಡ ತಾಲೂಕಿನ ಬೋಗೂರು ಗ್ರಾಮದ ಸುಶೀಲಾ ಹರಿಜನ ಹಾಗೂ ಚೆನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿಯ …
Read More »
Shaikh BigTv
September 20, 2024
Breaking News, ಧಾರವಾಡ
ಅಣ್ಣಿಗೇರಿ: ಅಮೃತ ಕಲಾಕುಂಜ ಶಿಕ್ಷಣ ಸಂಸ್ಥೆಯ,ಆದಿಕವಿ ಪಂಪ ಪ್ರಾಥಮಿಕ ಹಾಗೂ ಶ್ರೀಮತಿ ಪಾರ್ವತಮ್ಮ ಮ ಹಾಳದೋಟರ ಪ್ರೌಢ ಶಾಲೆ ಅಣ್ಣಿಗೇರಿ ಈ ಶಾಲೆಯ ವಿದ್ಯಾರ್ಥಿನಿ ಕುಮಾರಿ ಪ್ರೀಯಂಕಾ ಕೊಂಡಗೂಳಿ, ಕುಂದಗೋಳ ದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರು ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕಿಯರು ಅಭಿನಂದನೆ ತಿಳಿಸಿದ್ದಾರೆ.
Read More »
BigTv News
September 20, 2024
Breaking News, ಮುಂಬೈ
ಮುಂಬೈ: 2024-25ನೇ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು ಶೇ 6.7ರಷ್ಟು ಪ್ರಗತಿ ಕಾಣಲಿದೆ. 2030-31ರ ವೇಳೆಗೆ ಭಾರತವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಎಸ್ ಆಯಂಡ್ ಪಿ ಗ್ಲೋಬಲ್ ಸಂಸ್ಥೆಯ ವರದಿ ಗುರುವಾರ ಹೇಳಿದೆ. 2023-24ನೇ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ 8.2ರಷ್ಟು ಪ್ರಗತಿ ಕಂಡಿದೆ. ವಾಣಿಜ್ಯ ವಹಿವಾಟುಗಳ ಸುಧಾರಣೆ, ಖಾಸಗಿ ವಲಯದಲ್ಲಿ ಹೂಡಿಕೆ ಹೆಚ್ಚಳ ಮತ್ತು ಸಾರ್ವಜನಿಕ ಬಂಡವಾಳದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು …
Read More »
Shaikh BigTv
September 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಹಾರಿ ಮೂಲದ ಯುವಕರನ್ನು ಪ್ರಶ್ನಿಸಲು ಹೋದ 2 ಯುವಕರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡರ್ ಓಣಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ನೆರೆಹೊರೆಯವರ ಜೊತೆ ಜಗಳ ತೆಗೆಯುತ್ತಿದ್ದರು.ವಿಜಯ ನಗರದ ವಡ್ಡರ್ ಓಣಿಯಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಪೇಂಟಿಂಗ್ ಕೆಲಸ ಮಾಡಿಕೊಂಡು ವಾಸವಿದ್ದ ಬಿಹಾರ ಮೂಲದ ನಾಲೈದು ಜನ …
Read More »
BigTv News
September 20, 2024
Breaking News
ಹುನಗುಂದ: ಹುನಗುಂದ ಮತ್ತು ಇಳಕಲ್ ತಾಲ್ಲೂಕಿನಾದ್ಯಂತ ಮಳೆ ಕೊರತೆಯಿಂದ ತೊಗರಿ ಇಳುವರಿ ಕುಂಠಿತಗೊಳ್ಳುವ ಭೀತಿ ರೈತರನ್ನು ಕಾಡುತ್ತಿದೆ. ಕಳೆದ ಹದಿನೈದು ದಿನಗಳಿಂದ ಇಳಕಲ್ ಮತ್ತು ಹುನಗುಂದ ತಾಲ್ಲೂಕುಗಳಲ್ಲಿ ಮಳೆ ಸುರಿದಿಲ್ಲ. ಹೀಗಾಗಿ ಭೂಮಿಯಲ್ಲಿ ತೇವಾಂಶ ಕಡಿಮೆಯಾಗಿ ಎರೆಬಿಡಿ (ಬಿರುಕುಗಳು) ಕಾಣತೊಡಗಿವೆ. ಇದು ರೈತರನ್ನು ಮತ್ತಷ್ಟು ಚಿಂತಗೀಡು ಮಾಡಿದೆ. ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ಉತ್ತಮವಾಗಿ ಸುರಿದ ಪರಿಣಾಮ ಜೊತಗೆ ತೊಗರಿ ಬಿತ್ತನೆಗೆ ಪೂರಕ ವಾತಾವರಣದಿಂದಾಗಿ ಎರಡು ತಾಲ್ಲೂಕಿನ ರೈತರು …
Read More »
BigTv News
September 20, 2024
Breaking News
ಅಮರಾವತಿ: ಕೇಂದ್ರ ಸರ್ಕಾರದ ನೆರವು ಇಲ್ಲದೆ ಆಂಧ್ರ ಪ್ರದೇಶವು ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನೊಳಗೊಂಡ ಎನ್‌ಡಿಎ ಮೈತ್ರಿಕೂಟದಲ್ಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ನಾಯ್ಡು, ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡುತ್ತಿರುವ ನೆರವು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಆಮ್ಲಜನಕ ನೀಡಿದಂತೆ ಎಂದು ಬಣ್ಣಿಸಿದ್ದಾರೆ. ಕೇಂದ್ರದ …
Read More »
Shaikh BigTv
September 20, 2024
Breaking News, ಧಾರವಾಡ
ಧಾರವಾಡ : ಧಾರವಾಡ ನಗರವು ವಿದ್ಯಾಕಾಶಿ ಎಂದು ಹೆಸರು ಪಡೆದಿದ್ದು, ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಿಗೆ ಪ್ರತಿದಿನ ಭೇಟಿಕೊಡುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯು ಹೆಚ್ಚುತ್ತಿದೆ. ಪ್ರಯಾಣಿಕರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮರು ನಿರ್ಮಾಣಗೊಳಿಸಲಾಗುತ್ತಿದೆ ಎಂದು ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ …
Read More »