Breaking News

Breaking News

ಖಾಸಗಿ ಬಸ್ ಹರಿದು 150 ಕುರಿಗಳ ಸಾವು

ರಾಯಚೂರು: ಸಮೀಪದ ಯರಮರಸ್ ಬೈಪಾಸ್ ನಲ್ಲಿ ಖಾಸಗಿ ಬಸ್ ಹರಿದು 150ಕ್ಕೂ ಹೆಚ್ಚು ಕುರಿಗಳ ಮಾರಣಹೋಮ ನಡೆದಿದ್ದು, ಅಂದಾಜು 15 ಲಕ್ಷ ಹಾನಿ ಸಂಭವಿಸಿದೆ. ತೆಲಂಗಾಣದ ನಾರಾಯಪೇಟೆ, ಹೊಳಪುರ ಮೂಲದ ಕುರಿಗಾಹಿಗಳು ಕುರಿ ಹೊಡೆದುಕೊಂಡು ಹೊಗುವಾಗ ವೇಗದಲ್ಲಿ ಬಂದ ಬಸ್ ಮೇಲೆ ಹರಿದಿದೆ. ಪರಿಣಾಮ 150ಕ್ಕೂ ಅಧಿಕ ಕುರಿಗಳು ಸ್ಥಳದಲ್ಲೇ ಅಪ್ಪಚ್ಚಿಯಾದರೆ 30 ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ ಗಂಟೆ ಮಲ್ಲೇಶ, ಪೂಜಾರಿ ಚಿನ್ನಪ್ಪ, ಬಾಲರಾಜ್ ಎಂಬುವವರಿಗೆ ಸೇರಿದ ಕುರಿಗಳು …

Read More »

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿ

ಧಾರವಾಡ: 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್ ವೆಬ್‍ಸೈಟ್ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ ಪ್ರತಿಯನ್ನು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಅಲ್ಪಸಂಖ್ಯಾತರ ಅರಿವು ಕೇಂದ್ರಗಳಲ್ಲಿ ಅಕ್ಟೋಬರ್ 05, 2024 ರ …

Read More »

ಡಿ.12ರಂದು 5 ಸಾವಿರ ಟ್ರಾಕ್ಟರಗಳ ಮೂಲಕ ವಿಧಾನಸೌಧ ಚಲೋ ಕಾರ್ಯಕ್ರಮ: ಬಸವಜಯಮೃಂತ್ಯುಂಜಯ ಸ್ವಾಮಿಜಿ

ನವಲಗುಂದ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಲ್ಲಿ ಸಿಎಂ ಸಿದ್ದರಾಮಯ್ಯ ಉದಾಸೀನ ಮನೋಭಾವ ತೋರುತಿದ್ದಾರೆ. ಇದೇ ರೀತಿ ನಿರ್ಲಕ್ಷ್ಯ ಧೋರಣೆ ಮುಂದುವರೆದಲ್ಲಿ ಡಿ.12ರಂದು 5 ಸಾವಿರ ಟ್ರಾಕ್ಟರಗಳ ಮೂಲಕ ವಿಧಾನಸೌಧ ಚಲೋ ಕಾರ್ಯಕ್ರಮ ನಡೆಸಲಾಗುವುದೆಂದು ಲಿಂಗಾಯತ ಪಂಚಮಸಾಲಿ ಸಮಾಜದ ಕೂಡಲ ಸಂಗಮ ಪೀಠದ ಬಸವಜಯಮೃಂತ್ಯುಂಜಯ ಸ್ವಾಮಿಜಿ ಎಚ್ಚರಿಸಿದರು. ಪಟ್ಟಣದ ವೀರಶೈವ ಲಿಂಗಾಯತ ಸಭಾಭವನದಲ್ಲಿ ತಾಲುಕಾ ಪಂಚಮಸಾಲಿ ಸಮಾಜ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪದಗ್ರಹಣ ಕಾರ್ಯಕ್ರಮದ ಸಾನ್ನಿಧ್ಯ …

Read More »

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್ ಅಳವಡಿಕೆ ಕಡ್ಡಾಯ: ಜಿಲ್ಲಾಧಿಕಾರಿ ಆದೇಶ

ಕೊಪ್ಪಳ: ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ, ಆದರೆ ಆ ಕೆಲಸವನ್ನು ಮಾಡುವ ಅಧಿಕಾರಿಗಳಲ್ಲಿ ಹಲವರು ಸರಿಯಾದ ಸಮಯಕ್ಕೆ ಕಚೇರಿಗೆ ಬಾರದೆ ಸಭೆ ಇದೆ ಎನ್ನುವ ನೆಪ ಮುಂದಿಡುತ್ತಿದ್ದು, ಈ ಕುರಿತು ವ್ಯಾಪಕ ದೂರುಗಳು ಕೇಳಿಬಂದಿವೆ. ಆದ್ದರಿಂದ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಸರ್ಕಾರದ ಸೂಚನೆಯಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಬಯೊಮೆಟ್ರಿಕ್‌ ಅಳವಡಿಕೆ ಕಡ್ಡಾಯ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಕಚೇರಿಯಲ್ಲಿ ತಮ್ಮ …

Read More »

ನೀರು ಪೂರೈಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ: ಪ್ರವೀಣಕುಮಾರ ಶೆಟ್ಟಿ

ನವಲಗುಂದ: ರಾಜ್ಯದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಆರೋಪಿಸಿದ್ದಾರೆ. ಕಪ್ಪತಗುಡ್ಡ ರಕ್ಷಣೆ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಗೆ ನರಗುಂದಕ್ಕೆ ಹೋಗುವ ವೇಳೆ ಪಟ್ಟಣದ ರೈತ ಭವನದಲ್ಲಿ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಕುಡಿಯುವ ನೀರಿನ ಯೋಜನೆಗೆ ಸಾವಿರಾರು ಕೋಟಿ ರೂ ಮೀಸಲಿಟ್ಟಿದ್ದೇವೆ …

Read More »

ಸಂಗೊಳ್ಳಿ ರಾಯಣ್ಣನ ಮೂರ್ತಿ ವಿರೂಪ : ತಹಶೀಲ್ದಾ‌ರ್ ಕಚೇರಿ ಎದುರಿಗೆ ಪ್ರತಿಭಟನೆ

ಹುಬ್ಬಳ್ಳಿ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ, ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ್ದನ್ನು ಖಂಡಿಸಿ, ಜಯ ಕರ್ನಾಟಕ ಸಂಘಟನೆ ವತಿಯಿಂದ ಹುಬ್ಬಳ್ಳಿಯ ತಹಶೀಲ್ದಾ‌ರ್ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿದರು. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ ವ್ಯಕ್ತಿಗೆ ಉಗ್ರವಾದ ಶಿಕ್ಷೆಯಾಗಬೇಂದು ಜಯ ಕರ್ನಾಟಕ ಸದಸ್ಯರು ಆಕ್ರೋಶ …

Read More »

ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಹೆಚ್ಚುವರಿ ಗೋಧಿ ಹಂಚಿಕೆಯಲ್ಲಿ ಹೆಚ್ಚಳ

ಬೆಂಗಳೂರು: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ (ಪಿಎಂಜಿಕೆಎವೈ) ಗೋಧಿ ಹಂಚಿಕೆಯನ್ನು ಹೆಚ್ಚಿಸಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಯೋಜನೆಯಡಿ ಫಲಾನುಭವಿಗಳು ಆಹಾರ ಧಾನ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಹೇಳಿದ್ದಾರೆ. ವರದಿಗಳ ಪ್ರಕಾರ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯನ್ನು ಸ್ಥಿರಗೊಳಿಸಲು ಹಂಚಿಕೆ ಮಾಡಲಾಗುತ್ತಿದೆ. ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಪ್ರಕಾರ, ಹಂಚಿಕೆ ಅಕ್ಟೋಬರ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಸಚಿವರ ಸಮಿತಿಯು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ 35 ಲಕ್ಷ ಟನ್ …

Read More »

ಲಕ್ಷ ಮೌಲ್ಯದ ಪರ್ಸ್ ಹಿಂದಿರಿಗಿಸಿದ ಮಾನವೀಯತೆ ಮರೆದ ಯುವಕ

ಹುಬ್ಬಳ್ಳಿ: ಮೊನ್ನೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ತಡರಾತ್ರಿ ರಸ್ತೆ ಬದಿಯಲ್ಲಿ ಕೊಟಗೊಂಡಹುಣಸಿ ಗ್ರಾಮದ ರವಿ ಎಂಬುವರು ತಮ್ಮ ಪರ್ಸ್‌ ಕಳೆದುಕೊಂಡಿದ್ದರು.ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 15-20 ಗ್ರಾಂ ಚಿನ್ನದ ಸರ ಜೊತೆಗೆ ಪ್ರಮುಖ ದಾಖಲೆಗಳನ್ನು ಹೊಂದಿರುವ ಪರ್ಸ್‌ ಕಳೆದುಕೊಂಡ ಬೇಜಾರಿನಲ್ಲಿ ಇದ್ದರು. ಈ ವೇಳೆ ನೂಲ್ವಿ ಗ್ರಾಮದ ಶಂಭಾಜಿರಾವ್ ಲಕ್ಷ್ಮಣ ರಾವ್ ಗೋರ್ಪಡೆ ಅವರು ಕರೆಮಾಡಿ ನಿಮ್ಮ ಪರ್ಸ್ ಸಿಕ್ಕಿದೆ ಬಂದು ತೆಗೆದುಕೊಂಡು ಹೋಗಿ ಎಂದು ನೂಲ್ವಿಯ ಎಲ್ಲ …

Read More »

ಬಿಸಿಎಮ್ ಇಲಾಖೆ ಜಿಲ್ಲಾ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡ ಜಯಶ್ರೀ ಹೆಂಡೆಗಾರ

ಧಾರವಾಡ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ತಾಲ್ಲೂಕಾ ಕಲ್ಯಾಣಾಧಿಕಾರಿ ಜಯಶ್ರೀ ಹೆಂಡೆಗಾರ ಅವರು ತಮ್ಮ ಹುದ್ದೆಯ ಕರ್ತವ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.

Read More »

ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕಸ್ತೂರಿ ರಂಗನ್‌ ವರದಿ ಜಾರಿಗೆ ಸಮ್ಮತಿ

ಬೆಂಗಳೂರು: ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆ ನಿಟ್ಟಿನಲ್ಲಿ ಕಸ್ತೂರಿ ರಂಗನ್‌ ವರದಿ ಜಾರಿಗೆ ಸಂಬಂಧಿಸಿ ಜನಪ್ರತಿನಿಧಿಗಳ ಸಮ್ಮತಿ ದೊರಕಿದೆ. ಕೆಲವು ಷರತ್ತುಗಳೊಂದಿಗೆ ವರದಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಿ ಪಶ್ಚಿಮ ಘಟ್ಟಗಳ ಶ್ರೇಣಿಯನ್ನು ಉಳಿಸಿಕೊಳ್ಳಬಹುದು ಎನ್ನುವ ಸಲಹೆಯನ್ನೂ ನೀಡಲಾಗಿದೆ.ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎನ್ನುವುದು ಪ್ರಮುಖ ನಿರ್ಣಯ ಈ …

Read More »