Breaking News

Breaking News

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಕೊಲೆಯ ಆರೋಪಿಯೊಬ್ಬನಿಗೆ ಧಾರವಾಡದ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ಸಾವಿರ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 2019ರ ಡಿಸೆಂಬರ್‌ನಲ್ಲಿ ಫಕ್ರುಸಾಬ್‌ ನದಾಫ್ ಎಂಬಾತನನ್ನು ಸಂತೋಷ ವಡ್ಡರ್ ಎಂಬಾತ ಆಸ್ಪತ್ರೆಗೆ ನುಗ್ಗಿ ಕೊಲೆ ಮಾಡಿದ್ದ. ನವಲಗುಂದದ ಅಪ್ರಾಪ್ತ ಮೇಲೆ ಫಕ್ರುಸಾಬ್ ನದಾಫ್ ಲೈಂಗಿಕ ದೌರ್ಜನ್ಯ ನಡೆಸಿದ್ದ. ಆತನಿಗೆ ಧರ್ಮದೇಟು ನೀಡಿದ್ದ ಸ್ಥಳೀಯರು ನಂತರ ಆತನನ್ನು ಪೊಲೀಸರ ವಶಕ್ಕೆ ನೀಡಿದ್ದರು. ಘಟನೆ: ಧರ್ಮದೇಟಿನಿಂದ ಗಾಯಗೊಂಡಿದ್ದ ಫಕ್ರುಸಾಬ್‌ನನ್ನು …

Read More »

ಶಾಂತಿಯುತವಾಗಿ ನಡೆದ ಗಣೇಶ ಚತುರ್ಥಿ, ಈದ್ ಮಿಲಾದ್ : ಧನ್ಯವಾದ ತಿಳಿಸಿದ ಎನ್.ಶಶಿಕುಮಾರ್

ಹುಬ್ಬಳ್ಳಿ: ಶ್ರೀ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಶಾಂತಿಯುತವಾಗಿ, ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಿದ ಸರ್ವ ನಾಗರಿಕರಿಗೂ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಕಮಿಷನ‌ರ್, ಎಲ್ಲ ಧರ್ಮಗಳ ಮುಖಂಡರು, ಶ್ರೀ ಗಣೇಶ ಮಂಡಳಿ ಮತ್ತು ಈದ್ ಮಿಲಾದ್ ಸಂಘಟನೆಯ ಮುಖಂಡರು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ನಗರದ ಎಲ್ಲ ಸಾರ್ವಜನಿಕರಿಗೆ ಮತ್ತು ವಿವಿಧ ಇಲಾಖೆಗಳ ಹಾಗೂ ಅಚ್ಚುಕಟ್ಟಾಗಿ ಕರ್ತವ್ಯವನ್ನು ನಿರ್ವಹಿಸಿದ ಹೊರ ಜಿಲ್ಲೆಗಳಿಂದ …

Read More »

ಧಾರವಾಡ ಕೇಂದ್ರ ಕಾರಾಗೃಹ ಭದ್ರತೆಗಾಗಿ ನಾಲ್ಕು ವೀಕ್ಷಣಾ ಗೋಪುರ ನಿರ್ಮಾಣ

ಧಾರವಾಡ: ನಗರದ ಕೇಂದ್ರ ಕಾರಾಗೃಹದಲ್ಲಿ ಭದ್ರತೆ, ನಿಗಾ ನಿಟ್ಟಿನಲ್ಲಿ ಸುತ್ತ ನಾಲ್ಕು ವೀಕ್ಷಣಾ ಗೋಪುರ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಶೇ 75ರಷ್ಟು ಮುಗಿದಿದೆ. ಜೈಲು ಭಾಗದಲ್ಲಿ ಕಣ್ಗಾವಲಿಗೆ ಒಳಭಾಗದಲ್ಲಿ 55 ಹಾಗೂ ಸುತ್ತ(ಹೊರ ವಲಯ) 10 ಒಟ್ಟು 65 ಸಿ.ಸಿ ಟಿವಿ ಕ್ಯಾಮೆರಾಗಳಿವೆ. ಒಂದು ಕೋಟಿ ವೆಚ್ಚದಲ್ಲಿ ಗೋಪುರಗಳು ನಿರ್ಮಾಣವಾಗಲಿವೆ. ಗೋಪುರದ ಎತ್ತರ 30 ಅಡಿ ಕಾಂಪೌಂಡ್‌ ಸುತ್ತಲಿನ ಚಲನವಲನಗಳ ಮೇಲೆ ನಿಗಾ ಇಡಲು, ಹೊರಗಿನಿಂದ ಜೈಲು ಭಾಗದೊಳಕ್ಕೆ ಯಾರಾದರೂ …

Read More »

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೆಲಗೇರಿ ಕೆರೆಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸಾಧನಕೇರಿಯ ಮಂಗಳಗಟ್ಟಿ ಪ್ಲಾಟ್ ನಿವಾಸಿ ದಾದಾಪೀ‌ರ್ ಬಿಸ್ತಿ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಈದ್ ಮಿಲಾದ್ ಹಬ್ಬದಂದೇ ಮನೆಯಿಂದ ಹೊರಹೋಗಿದ್ದ ದಾದಾಪೀ‌ರ್ ಇಂದು ಕೆಲಗೇರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಏನು ಎಂದು ಗೊತ್ತಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು …

Read More »

ರಾಜ್ಯದಲ್ಲಿ ಮುಂದಿನ 5-6 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿರುವ ಜನರಿಗೆ ಸಿಹಿ ಸುದ್ದಿಯೊಂದನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 5-6 ದಿನವೂ ಹಲವೆಡೆ ಮಳೆ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣವಿರಲಿದ್ದು, ಗುಡುಗು, ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ …

Read More »

ಕಳಸಾ ಬಂಡೂರಿ ನಾಲಾ ಯೋಜನೆ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 18ರಂದು ಪತ್ರ ಬರೆದಿರುವ ಸಿದ್ದರಾಮಯ್ಯ, ಪ್ರಧಾನಿಗೆ ಜನ್ಮದಿನದ (ಮೋದಿ ಜನ್ಮದಿನ ಸೆಪ್ಟೆಂಬರ್ 17ರಂದು) ಶುಭಾಶಯವನ್ನೂ ಕೋರಿದ್ದಾರೆ. ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ …

Read More »

ಜಮ್ಮುಮತ್ತುಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರ‍್ಯಾಲಿ

ಶ್ರೀನಗರ: ಸೆ. 25 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶ್ರೀನಗರ ಮತ್ತು ಕತ್ರಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ, ನಂತರ ಮಧ್ಯಾಹ್ನ 3:00 ಗಂಟೆಗೆ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಕ್ಷೇತ್ರ ಮಂಡಳಿಯ ಕ್ರೀಡಾ ಸಂಕೀರ್ಣದಲ್ಲಿ …

Read More »

ಕಾರ್ಮಿಕರ ಕೊರತೆಯಿಂದ ಕೃಷಿ ಚಟುವಟಿಕೆಗೆ ಸಮಸ್ಯೆ: ಬೆಳೆ ಕಟಾವಿಗೆ ಯಂತ್ರಗಳ ಮೊರೆ

ಹಾವೇರಿ: ಜಿಲ್ಲೆಯಲ್ಲಿ ಬೆಳೆದಿರುವ ಗೋವಿನ ಜೋಳ, ಸೋಯಾಬೀನ್, ಹೆಸರು, ಭತ್ತ ಹಾಗೂ ಇತರೆ ಬೆಳೆಗಳು ಕಟಾವು ಹಂತಕ್ಕೆ ಬರುತ್ತಿವೆ. ಕಾರ್ಮಿಕರ ಕೊರತೆ ಹಾಗೂ ನಾನಾ ಸಮಸ್ಯೆ ಎದುರಿಸುತ್ತಿರುವ ರೈತರು, ಫಸಲು ಕಟಾವು ಮಾಡಲು ಯಂತ್ರಗಳ ಮೊರೆ ಹೋಗುತ್ತಿದ್ದಾರೆ. ಜಿಲ್ಲೆಯ ಹಾವೇರಿ, ಹಾನಗಲ್, ರಾಣೆಬೆನ್ನೂರು, ಹಿರೇಕೆರೂರು, ಶಿಗ್ಗಾವಿ, ಸವಣೂರು, ರಟ್ಟೀಹಳ್ಳಿ ಹಾಗೂ ಬ್ಯಾಡಗಿ ತಾಲ್ಲೂಕಿನಲ್ಲಿ ಮುಂಗಾರು ಆರಂಭದಲ್ಲಿ ಬಿತ್ತನೆ ಮಾಡಲಾಗಿತ್ತು. ಆರಂಭದಲ್ಲಿ ಮಳೆ ಸಮರ್ಪಕವಾಗಿ ಬರದಿದ್ದರಿಂದ, ಕೆಲವು ಕಡೆಗಳಲ್ಲಿ ಬೆಳೆ ಮೊಳಕೆಯೊಡದಿರಲಿಲ್ಲ. …

Read More »

ಪಿಎಂ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ ಯೋಜನೆ ಮುಂದುವರೆಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ರೈತರಿಗೆ ಉತ್ತಮ ಬೆಲೆ ಒದಗಿಸಲು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸುವ ಸಲುವಾಗಿ 35,000 ಕೋಟಿ ರೂ. ವೆಚ್ಚದ ಪ್ರಧಾನ ಮಂತ್ರಿ ಅನ್ನದಾತ ಆಯ್‌ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಯನ್ನು ಮುಂದುವರೆಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ರೈತರು ಮತ್ತು ಗ್ರಾಹಕರಿಗೆ ಉಪಯೋಗವಾಗುವಂತೆ ಬೆಲೆ ಬೆಂಬಲ ಯೋಜನೆ (ಪಿಎಸ್‌ಎಸ್‌) ಮತ್ತು ಬೆಲೆ ಸ್ಥಿರೀಕರಣ ನಿಧಿ (ಪಿಎಸ್‌ಎಫ್‌)ಯನ್ನು ಒಗ್ಗೂಡಿಸಲಾಗಿದೆ. ಇದರಿಂದಾಗಿ ಪಿಎಂ-ಆಶಾ …

Read More »

ತುಂಗಭದ್ರಾ ಜಲಾಶಯಕ್ಕೆ ಸೆ.22 ರಂದು ಬಾಗಿನ ಅರ್ಪಣೆ: ಡಿಸಿಎಂ ಡಿಕೆಶಿ

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಸೆಪ್ಟಂಬರ್ 22 ರಂದು ಗಂಗೆ ಪೂಜೆ ನೆರವೇರಿಸಿ, ಬಾಗಿನ ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ತುಂಗಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ದುರಸ್ತಿ ಮಾಡಿ ನೀರನ್ನ ಉಳಿಸಿದ್ದೇವೆ. ಕೊಚ್ಚಿಹೋಗಿದ್ದ ಕ್ರಸ್ಟ್ ಗೇಟ್ ದುರಸ್ತಿಗಾಗಿ 108 ಜನ ಶ್ರಮಿಸಿದ್ದಾರೆ. ಹೀಗಾಗಿ ಗಂಗಾ ಪೂಜೆಯೊಂದಿಗೆ 108 ಜನರಿಗೆ ಸನ್ಮಾನ ಮಾಡಲಿದ್ದೇವೆ ಎಂದು ಮಾಹಿತಿ …

Read More »