BigTv News
September 17, 2024
Breaking News, ಬೆಂಗಳೂರು
ಬೆಂಗಳೂರು: ನೈರುತ್ಯ ಮುಂಗಾರು ಮಳೆಯು ಕಳೆದ ಎರಡು ವಾರಗಳಿಂದ ದುರ್ಬಲಗೊಂಡಿದ್ದು, ಮುಂಗಾರು ಹಂಗಾಮಿನ ಹಲವು ಬೆಳೆಗಳು ಒಣಗುತ್ತಿವೆ. ಕಳೆದ ಎರಡು ವಾರಗಳಲ್ಲಿ ಮಳೆ ಕೈಕೊಟ್ಟ ಪರಿಣಾಮವಾಗಿ ಬಿತ್ತಿರುವ ರಾಗಿ, ಶೇಂಗಾ, ಉದ್ದು, ಹೆಸರು, ಅಲಸಂದೆ, ತೊಗರಿ ಸೇರಿದಂತೆ ಹಲವು ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿದೆ. ಇದರಿಂದ ಬೆಳೆಗಳು ಒಣಗತೊಡಗಿವೆ. ಅಲ್ಲದೆ, ಭಾಗಶಃ ಮೋಡ ಕವಿದ ವಾತಾವರಣ ಇರುವುದರಿಂದ ಕೀಟ ಬಾಧೆಯೂ ಅಧಿಕವಾಗಿದೆ. ಕಳೆದ ವರ್ಷ ಕೈಕೊಟ್ಟಿದ ಮುಂಗಾರು ಈ ಬಾರಿ …
Read More »
BigTv News
September 17, 2024
Breaking News
ಭುವನೇಶ್ವರ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಒಡಿಶಾ ಸರ್ಕಾರದ ಸುಭದ್ರಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು. ಈ ಯೋಜನೆಯ ಸೌಲಭ್ಯ ಒಡಿಶಾದ ಸುಮಾರು 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ದೊರಕಲಿದೆ. ಈ ಯೊಜನೆಯಡಿ 21-60 ವರ್ಷ ಮಹಿಳೆಯರು ಐದು ವರ್ಷಗಳಲ್ಲಿ ₹ 50 ಸಾವಿರ ಪಡೆಯಲಿದ್ದಾರೆ. ಅಂದರೆ ಪ್ರತಿ ವರ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಎರಡು ಕಂತುಗಳಲ್ಲಿ ₹10 ಸಾವಿರ ಜಮಾ ಆಗಲಿದೆ. ಇದೇ ವೇಳೆ …
Read More »
BigTv News
September 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ-ಅಂಕೋಲಾ ನೂತನ ರೈಲು ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ನೇತೃತ್ವದ ನಿಯೋಗ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಬೆಳಗಾವಿಯಲ್ಲಿ ಮನವಿ ಸಲ್ಲಿಸಿತು. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 2000ನೇ ಇಸ್ವಿಯಲ್ಲಿ ಹುಬ್ಬಳ್ಳಿ-ಅಂಕೋಕಾ ರೈಲು ಮಾರ್ಗ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿತ್ತು. ಹುಬ್ಬಳ್ಳಿಯಿಂದ 47 ಕಿಮೀವರೆಗೆ ಭೂಮಿ ವಶಪಡಿಸಿಕೊಂಡು, …
Read More »
BigTv News
September 17, 2024
Breaking News, ಕಲಬುರಗಿ
ಕಲಬುರಗಿ: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ …
Read More »
BigTv News
September 17, 2024
Breaking News, ಆಂಧ್ರ ಪ್ರದೇಶ
ಅಮರಾವತಿ: ಮುಂಬೈ ಮೂಲದ ಮಾಡೆಲ್ ಕಮ್ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ ಪೆಕ್ಟರ್ ಜನರಲ್ ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪಿಎಸ್ ಆರ್ ಆಂಜನೇಯುಲು (ಡಿಜಿ ಶ್ರೇಣಿ), ಕಂಠಿ ರಾಣಾ ಟಾಟಾ (ಐಜಿ ಶ್ರೇಣಿ) ಮತ್ತು ವಿಶಾಲ್ ಗುನ್ನಿ (ಎಸ್‌ಪಿ ಶ್ರೇಣಿ) ಅಮಾನತುಗೊಂಡ ಮೂವರು ಹಿರಿಯ ಅಧಿಕಾರಿಗಳಾಗಿದ್ದಾರೆ. ವೈಎಸ್ …
Read More »
Shaikh BigTv
September 16, 2024
Breaking News, ಧಾರವಾಡ
ಅಣ್ಣಿಗೇರಿ: ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮಸ್ಥರ ಬಹುದಿನ ಬೇಡಿಕೆಯಾದ ಮಂಟೂರ – ಬಂಡಿವಾಡ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು ಸಾರ್ವಜನಿಕರು ಈ ರಸ್ತೆಯನ್ನು ಅಭಿವೃದ್ಧಿ ಮಾಡಿಸುವಂತೆ ಶಾಸಕರಾದ ಕೋನರಡ್ಡಿ ಅವರ ಹತ್ತಿರ ಮನವಿ ಮಾಡಿದ್ದು ಸಾರ್ವಜನಿಕರ ಮನವಿಯ ಮೆರೆಗೆ ಇಂದು ಮಂಟೂರ-ಬಂಡಿವಾಡ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಕೋನರಡ್ಡಿ ಅವರು ನೇರವೆರಿಸಿ ಚಾಲನೆ ನೀಡಿದ್ದರು.
Read More »
Shaikh BigTv
September 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕುಮಾರಸ್ವಾಮಿಯವರು ಬೇಕಾದಾಗ ಒಂದೊಂದು ಕಥೆ ಹೇಳ್ತಾರೆ. ಕಾಂಗ್ರೆಸ್ ಪಕ್ಷ ಯಾವತ್ತಿಗೂ ಪ್ರಜಾಪ್ರಭುತ್ವ, ಸಂವಿಧಾನ ಉಳಿಸುವ ಕಾರ್ಯವನ್ನು ಮಾಡುತ್ತಿದ್ದರೆ ಅದು ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಬಿಜೆಪಿ ಪಕ್ಷ ಬಂದಿದ್ದೇ ಸಂವಿಧಾನವನ್ನು ಬದಲಿ ಮಾಡಲಿಕ್ಕೆ. ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಬೆಳವಣಿಗೆಗಳನ್ನು ದಿನ ಬೆಳಗಾದ್ರೆ ನಾವು ನೋಡ್ತೀವಿ. ಸಂವಿಧಾನವನ್ನು ಅಸ್ಥಿರ ಗೊಳಿಸುವ ಕಾರ್ಯವನ್ನು ಮಾಡೋದಿದ್ರೆ ಅದು ಕೇವಲ ಬಿಜೆಪಿ ಸರ್ಕಾರ ನಿರ್ಮಾಣ ಮಾಡ್ತಿದೆ. ಕಾಂಗ್ರೆಸ್ …
Read More »
Shaikh BigTv
September 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ದುರ್ಗದಬೈಲ್ ದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಮೆರವಣಿಗೆಗೆ ಅಂಜುಮನ್ ಸಂಸ್ಥೆಯ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಇನ್ನೂ ಹುಬ್ಬಳ್ಳಿಯ ಹೃದಯ ಭಾಗದಲ್ಲಿರು ದುರ್ಗದ ಬೈಲ್ ನಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಮೂಲಕ ಹುಬ್ಬಳ್ಳಿಯ ವಿವಿಧ ಬೀದಿಗಳಲ್ಲಿ ಸಂಚರಿಸುವ ಮೂಲಕ ಆಚರಣೆ ಮಾಡಿದರು. ಇದೇ ವೇಳೆ ಹುಬ್ಬಳ್ಳಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ …
Read More »
Shaikh BigTv
September 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮೀಸಲಾತಿ ವಿಚಾರವಾಗಿ ಬೆಳಗಾವಿಯಲ್ಲಿ ಬೃಹತ್ ಸಭೆ ಮಾಡಳಿದ್ದೇವೆ .2ಎ ಮೀಸಲಾತಿ ಚಳುವಳಿ ಹರಿಯುವ ಗಂಗೋತ್ರಿ ಇದ್ದಂತೆ ಆದೇಶ ಸಿಗುವವರೆಗೂ ನಿರಂತರ ಹೋರಾಟ ಮಾಡ್ತೇವೆ .2ಎ ಮೀಸಲಾತಿಗಾಗಿ ಮತ್ತೊಂದು ಹೋರಾಟಕ್ಕೆ ಸಜ್ಜು ಆಗಲಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ರಾಜ್ಯ ಮಟ್ಟದ ವಕೀಲ ಸಮಾಜ ಸಂಘಟನೆ ಮಾಡ್ತಾ ಇದ್ದೇವೆ .7ನೇ ಹಂತದ ಹೋರಾಟ ಈಗಾಗಲೇ ಆರಂಭ ಮಾಡಿದ್ದೇವೆ. ಸರ್ಕಾರ ರಚನೆಯಾದ ಮೇಲೆ 20 ಜನ …
Read More »
BigTv News
September 16, 2024
Breaking News, ಕಲಬುರಗಿ
ಕಲಬುರಗಿ: ಹತ್ತು ವರ್ಷಗಳ ನಂತರ ಸೆ. 17 ರಂದು ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಪ್ರಮುಖ ಕಾರ್ಯಗಳಿಗೆ ಆದ್ಯತೆ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಸೋಮವಾರ (ಸೆ.16) ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಕ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಮುಖವಾಗಿ ಕಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ …
Read More »